ಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ

ಬಳ್ಳಾರಿ,ಅ.5: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ಒಂದನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾನಂದ ಎಂ.ದೊಡ್ಡಮನಿ ಅವರು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ನಿಂದ ರಕ್ಷಿಸಿಕೊಳ್ಳಲು ಲಸಿಕೆಯೊಂದೇ ನಮಗಿರುವ ಪರಿಹಾರ. ಯಾವುದೇ ಕಾರಣಕ್ಕೂ ಉದಾಸೀನ ಮಾಡದೇ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ಯರ್ರೇಗೌಡ, ಕಾರ್ಯದರ್ಶಿ ಬಿ.ರವೀಂದ್ರನಾಥ್, ನ್ಯಾಯವಾದಿಗಳು ಇದ್ದರು.
*****

Leave a Reply

Your email address will not be published. Required fields are marked *