ಡಾ.ಗೋವಿಂದರಿಗೆ ಡಾ.ಎ ಪಿ ಜೆ ಅಬ್ದುಲ್ ಕಲಾಂ ರಾಷ್ಟೀಯ ಪ್ರಶಸ್ತಿ

ಹೊಸಪೇಟೆ,ವಾ.18: ಪ್ರಸಕ್ತ( 2021 ನೇ) ಸಾಲಿನ ಪ್ರತಿಷ್ಟಿತ ಡಾ.ಎ ಪಿ ಜೆ ಅಬ್ದುಲ್ ಕಲಾಂ ರಾಷ್ಟೀಯ ಪ್ರಶಸ್ತಿಗೆ ಕನ್ನಡ ವಿಶ್ವ ವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಡಾ.ಗೋವಿಂದ ಅವರು ಭಾಜನರಾಗಿದ್ದಾರೆ.
ಡಾ.ಎ ಪಿ ಜೆ ಅಬ್ದುಲ್ ಕಲಾಂ ಅವರ ಜಯಂತಿಯ ಅಂಗವಾಗಿ ಪ್ರತಿವರ್ಷ ಪ್ರತಿಭಾವಂತರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಘಟನೆಯ ಸಂಚಾಲಕರಾದ ಸುನಿಲ್ ಕುಮಾರ್ ಆವರು ತಿಳಿಸಿದ್ದಾರೆ.
ಬೆಂಗಳೂರಿನ ಬಾಬಾ ವಿಜ್ಞಾನ ಕ್ಲಬ್ ಹಾಗೂ ವಿಜ್ಞಾನ ಪ್ರಸಾರ ಸಂಘಟನೆಯ ಸಹಯೋಗದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.
ಅಭಿನಂದನೆ: ಡಾ.ಎ ಪಿ ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಡಾ.ಗೋವಿಂದ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿ.ಮಂಜುನಾಥ್ ಅಭಿನಂದಿಸಿದ್ದಾರೆ.
*****

Leave a Reply

Your email address will not be published. Required fields are marked *