ಮುಖ್ಯಮಂತ್ರಿ ಅಧ್ಯಕ್ಷತೆ: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಸಭೆ

ಬೆಂಗಳೂರು, ಜ.2: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಂಗಳೂರಿನ ಶಾಸಕರು, ಸಚಿವರ ಸಭೆ ಭಾನುವಾರ ನಗರದ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಿತು.
ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಸೇರಿದಂತೆ ಸಚಿವರಾದ ಅರ್. ಆಶೋಕ, ವಿ ಸೋಮಣ್ಣ, ಎಸ್.ಟಿ. ಸೋಮಶೇಖರ್, ಡಾ ಸಿ.ಎನ್.ಅಶ್ವಥ್ ನಾರಾಯಣ, ಕೆ.ಗೋಪಾಲಯ್ಯ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಸಭೆಯಲ್ಲಿ ಉಪಸ್ಥಿತರಿದ್ದರು.
*****

Leave a Reply

Your email address will not be published. Required fields are marked *