ಪದ್ಮಶ್ರೀ ಮಂಜಮ್ಮ ಜೋಗತಿ ಅವರಿಗೆ ಸನ್ಮಾನ

ಬೆಂಗಳೂರು, ಜ.4: ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಶಿಗ್ಗಾವಿಯ ಶ್ರೀ ರಾಮಚಂದ್ರಪ್ಪ ನೇಪಥ್ಯ ವೇಷಭೂಷಣ ಕಲಾಸಂಸ್ಥೆ ಸನ್ಮಾನಿಸಿ ಗೌರವಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಅರ್ಕಸಾಲಿ ಅವರು ಸತ್ಕರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಚಲವಾದಿ, ಅಕಾಡೆಮಿಯ ಸರ್ವ ಸದಸ್ಯರು ಮತ್ತು ರಿಜಿಸ್ಟ್ರಾರ್, ಸಿಬ್ಬಂದಿ ಉಪಸ್ಥಿತರಿದ್ದರು.
*****

Leave a Reply

Your email address will not be published. Required fields are marked *