ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ, ಜ.4: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳವಾರ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಆಯೋಜಿಸಿರುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕಕ್ಕೆ ಅನುದಾನ ಒದಗಿಸಿ ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು‌ ಎಂದರು.
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳಾಗಲಿ ಅವುಗಳ ನಿರ್ಣಯಗಳ ಕರಡನ್ನು ಸರಕಾರಕ್ಕೆ ಕಳುಹಿಸಿಕೊಡಿ ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.


*****

Leave a Reply

Your email address will not be published. Required fields are marked *