Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಹ ಬೊ ಹಳ್ಳಿ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕೆ ವೆಂಕಟೇಶ್ ಅಧಿಕಾರ ಸ್ವೀಕಾರ - Karnataka Kahale

ಹ ಬೊ ಹಳ್ಳಿ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕೆ ವೆಂಕಟೇಶ್ ಅಧಿಕಾರ ಸ್ವೀಕಾರ

ಹಗರಿಬೊಮ್ಮನಹಳ್ಳಿ, ಜೂ.14: ಪಟ್ಟಣದ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೆ. ವೆಂಕಟೇಶ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಈವರೆಗೆ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.‌ಸತೀಶ ಪಾಟೀಲ್ ಅವರು ಅಧಿಕಾರ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಉಪಸ್ಥಿತರಿದ್ದ
ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಹ ಬೊ ಹಳ್ಳಿ ರೈತರ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಡೇದ ಗುರುಬಸವರಾಜ, ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ತಾಲೂಕು ಅಧ್ಯಕ್ಷ ಸಿ.ಶಿವಾನಂದ, ಸಿಡಿಸಿ ಸದಸ್ಯ ಜೆ.ವಿನಾಯಕ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಚಿಂತ್ರಪಳ್ಳಿ ಶಿವಮೂರ್ತಿ‌ ಮತ್ತಿತರ ಗಣ್ಯರು ನೂತನ ಪ್ರಾಂಶುಪಾಲರನ್ನು ಅಭಿನಂದಿಸಿದರು.


*****