Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ ಸರಳಾದೇವಿ ಸರಕಾರಿ ಪ್ರಥಮದರ್ಜೆ ಕಾಲೇಜ್ ನೂತನ ಪ್ರಾಚಾರ್ಯರಾಗಿ ಡಾ.ಮಂಜುನಾಥ ರೆಡ್ಡಿ ನೇಮಕ - Karnataka Kahale

ಬಳ್ಳಾರಿ ಸರಳಾದೇವಿ ಸರಕಾರಿ ಪ್ರಥಮದರ್ಜೆ ಕಾಲೇಜ್ ನೂತನ ಪ್ರಾಚಾರ್ಯರಾಗಿ ಡಾ.ಮಂಜುನಾಥ ರೆಡ್ಡಿ ನೇಮಕ

ಬಳ್ಳಾರಿ, ಅ.3: ನಗರದ ಎಸ್.ಎಸ್.ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜ್ ನೂತನ ಪ್ರಭಾರಿ ಪ್ರಾಂಶುಪಾಲರಾಗಿ ಕಲಬುರ್ಗಿ ಸರಕಾರಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.‌ಮಂಜುನಾಥರೆಡ್ಡಿ ಹೆಚ್.ಕೆ ಅವರನ್ನು ಕಾಲೇಜು ಶಿಕ್ಷಣ ಇಲಾಖೆ ನೇಮಿಸಿ ಆದೇಶಿಸಿದೆ.
ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಅವರು ಈ ಕುರಿತು ಡಾ.ಮಂಜುನಾಥರೆಡ್ಡಿ ಹೆಚ್.ಕೆ ಅವರನ್ನು ನೇಮಿಸಿ ಆದೇಶಿಸಿದ್ದಾರೆ.
ಮಂಜುನಾಥರೆಡ್ಡಿ ಅವರು ಮೂಲತಃ ಬಳ್ಳಾರಿಯವರಾಗಿದ್ದು, ಕಲಬುರ್ಗಿ ಸರಕಾರಿ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರಳಾದೇವಿ ಕಾಲೇಜಿನ ಪ್ರಭಾರಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಡಾ. ಮಂಜುನಾಥರೆಡ್ಡಿ ಅವರು ಬುಧವಾರ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸುವರು ಎಂದು ಮೂಲಗಳು ಕರ್ನಾಟಕ ಕಹಳೆ ಡಾಟ್ ಕಾಮ್ ಗೆ ತಿಳಿಸಿವೆ.
*****