ಎಫ್‌ಕೆಸಿಸಿಐ ವಿಶೇಷ ಆಹ್ವಾನಿತರಾಗಿ ಯಶವಂತ ರಾಜ್ ಆಯ್ಕೆ

ಬಳ್ಳಾರಿ,ಅ.18: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಗೌರವ ಕಾರ್ಯದರ್ಶಿ ಯಶ್‌ವಂತ್ ರಾಜ್ ನಾಗಿರೆಡ್ಡಿ
ಅವರು ಬೆಂಗಳೂರಿನ‌‌ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ)ಯ ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.
೨೦೨೦-೨೩ ನೇ ಸಾಲಿನ ಸರ್ವಸದಸ್ಯರ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯಶವಂತ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ
ಸಂಸ್ಥೆಯ ಅಧ್ಯಕ್ಷ ಸಿ.ಶ್ರೀನಿವಾಸ್ ರಾವ್ ಅವರು ಯಶವಂತರಾಜ್ ಅವರ ಆಯ್ಕೆಯನ್ನು ಸ್ವಾಗತಿಸಿ ಅಭಿನಂದಿಸಿದ್ದಾರೆ.
ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಯಶವಂತ ರಾಜ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
*****

Leave a Reply

Your email address will not be published. Required fields are marked *