The post ಬಳ್ಳಾರಿ ಜಿಲ್ಲಾಡಳಿತದಿಂದ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಆತ್ಮೀಯ ಬೀಳ್ಕೊಡುಗೆ: ನಿರಂತರ ಪ್ರಯತ್ನದಿಂದ ಗೆಲ್ಲಬಹುದು -ಪ್ರಶಾಂತ್ ಕುಮಾರ್ ಮಿಶ್ರಾ appeared first on Karnataka Kahale.
]]>
ಬಳ್ಳಾರಿ,ಸೆ.18: ಸರ್ಕಾರ ನನಗೆ ನೀಡಿದ್ದ ಅವಕಾಶದಲ್ಲಿ ಬಳ್ಳಾರಿಯಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಜಿಲ್ಲಾಧಿಕಾರಿ ಹುದ್ದೆ ಸುಲಭದ ಕೆಲಸವಲ್ಲ, ಸಾಕಷ್ಟು ಸವಾಲುಗಳನ್ನು ನಿತ್ಯ ಎದುರಿಸಬೇಕಾಗುತ್ತದೆ. ಆ ಎಲ್ಲಾ ಸವಾಲುಗಳನ್ನು ನಿಭಾಯಿಸಿರುವೆ, ನಿರಂತರ ಪ್ರಯತ್ನದಿಂದ ಗೆಲ್ಲಬಹುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾಡಳಿತ ವತಿಯಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಬಿಳ್ಕೋಡುಗೆ ಮತ್ತು ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ ಎರಡು ವರ್ಷದ ಹಿಂದೆ ಬಳ್ಳಾರಿ ಜಿಲ್ಲೆಗೆ ಬಂದಾಗ ನೂರೆಂಟು ಸವಾಲುಗಳನ್ನು ಎದುರಿಸಲು ಸಿದ್ದನಾಗಿ ಬಂದಿದ್ದೆ. ಎಲ್ಲವನ್ನೂ ಸಾಧ್ಯವಾದ ಮಟ್ಟಿಗೆ ನಿಭಾಯಿಸಿರುವೆ. ಜಿಲ್ಲೆಯಲ್ಲಿ ಕೈಗೊಂಡ ಲೋಕಸಭೆ ಚುನಾವಣೆ ಹೊಸ ಅನುಭವವನ್ನು ನೀಡಿದೆ. ಜಿಲ್ಲಾಡಳಿತದ ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದ ಸಹಾಯ, ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಕೆಲವು ಸಂದರ್ಭಗಳಲ್ಲಿ ಕೆಲ ನಿರ್ಧಾರಗಳನ್ನು ಮಾಡುವಾಗ ಗೊಂದಲಕ್ಕೆ ಸಿಲುಕುತ್ತೇವೆ. ಅದೆಲ್ಲವೂ ನಿಭಾಯಿಸುವುದು ಅಷ್ಟು ಸುಲಭದ ಮಾತಲ್ಲ ಎಂದು ಅಭಿಪ್ರಾಯಪಟ್ಟರು.

ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆ ಉತ್ತಮ ಆಡಳಿತಕ್ಕೆ ಹೆಸರುವಾಸಿ, ಹಾಗೇಯೇ ಅನೇಕ ಸವಾಲುಗಳಿಂದ ಕೂಡಿದ ಜಿಲ್ಲೆಯಾಗಿದ್ದು, ಅಭಿವೃದ್ಧಿ ಕಾರ್ಯಗಳ ನಿರೀಕ್ಷೆಯಲ್ಲಿದೆ. ಪ್ರಶಾಂತ್ ಕುಮಾರ್ ಮಿಶ್ರಾ ಅವರ ಕಾಲಾವಧಿಯಲ್ಲಿ ಜಿಲ್ಲೆಯು ಕಂದಾಯ ಆಡಳಿತ ಕಾರ್ಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿತ್ತು ಎಂದು ಹರ್ಷ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾಡಿರುವ ಅಭಿವೃದ್ದಿ ಹಾಗೂ ಪ್ರಗತಿಪರ ಕೆಲಸಗಳು ಮುಂದುವರಿಯಲಿವೆ. ಅಧಿಕಾರಿ ವರ್ಗವು ನನಗೂ ಸಹಕಾರ ನೀಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತನಾಡಿ, ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ ಅವರೊಂದಿಗಿನ ಬಾಂಧವ್ಯ, ಅವರ ಜೊತೆಯಲ್ಲಿ ನಿರ್ವಹಿಸಿದ ಕರ್ತವ್ಯಕ್ಕೆ ಹೆಮ್ಮೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಹಲವು ಹೊಸ ವಿಚಾರಗಳು ಕಲಿಯಲು ಅವಕಾಶ ದೊರೆಯಿತು. ಅವರೊಬ್ಬ ಶಿಸ್ತಿನ ಸಿಪಾಯಿಯಂತಿದ್ದರು ಎಂದು ಅಭಿಮತ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಜಿಲ್ಲಾಡಳಿತದಿಂದ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು. ಬಳಿಕ ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಜಿಲ್ಲಾ ಆಸ್ಪತ್ರೆಯ ಮುಖ್ಯಸ್ಥ ಡಾ. ಬಸರೆಡ್ಡಿ ಮತ್ತಿತರರು ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಇತರರು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿನಾಗರಾಜ್ ಸ್ವಾಗತಿಸಿದರು. ಬಸವರಾಜ್ ಅಮಾತಿ ನಿರೂಪಿಸಿದರು.
—————-
The post ಬಳ್ಳಾರಿ ಜಿಲ್ಲಾಡಳಿತದಿಂದ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಆತ್ಮೀಯ ಬೀಳ್ಕೊಡುಗೆ: ನಿರಂತರ ಪ್ರಯತ್ನದಿಂದ ಗೆಲ್ಲಬಹುದು -ಪ್ರಶಾಂತ್ ಕುಮಾರ್ ಮಿಶ್ರಾ appeared first on Karnataka Kahale.
]]>The post ಬಳ್ಳಾರಿ: ಭೂ ದಾಖಲೆಗಳ ಇ-ಖಜಾನೆ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ appeared first on Karnataka Kahale.
]]>
ಬಳ್ಳಾರಿ, ಜ.9: ರಾಜ್ಯ ಕಂದಾಯ ಇಲಾಖೆಯ ವತಿಯಿಂದ ಆರಂಭಿಸಲಾಗಿರುವ ಭೂ ಸುರಕ್ಷಾ ಕಾರ್ಯಕ್ರಮದ ಅಡಿಯಲ್ಲಿ ನೂತನ ಭೂ ದಾಖಲೆಗಳ ಇ- ಖಜಾನೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಉದ್ಘಾಟಿಸಿದರು.
ಗುರುವಾರ ನಗರದ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ತಹಶೀಲ್ದಾರ್ ಸಿ. ಗುರುರಾಜ ಅವರು ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಭೂ ಸುರಕ್ಷಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ತಾಲ್ಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಟಲೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಕಾರ್ಯಕ್ರಮ ಆರಂಭಿಸಿದೆ. ಹಳೆಯ ದುಃಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತಿಸುವುದು, ರೆಕಾರ್ಡ್ ರೂಂಗಳಿಂದ ದಾಖಲೆ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವು- ತಿದ್ದುಪಡಿ ನಿಯಂತ್ರಣ ಮಾಡುವುದು ಸೇರಿದಂತೆ ಹಲವು ಪ್ರಯೋಜನಗಳನ್ನು ಇನ್ನು ಮುಂದೆ ಸಾರ್ವಜನಿಕರು ಪಡೆಯಬಹುದಾಗಿದೆ.
—–
The post ಬಳ್ಳಾರಿ: ಭೂ ದಾಖಲೆಗಳ ಇ-ಖಜಾನೆ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ appeared first on Karnataka Kahale.
]]>The post ಬಳ್ಳಾರಿ ಹಳೇ ತಾಲೂಕು ಕಚೇರಿ ಆವರಣಕ್ಕೆ ಶಾಶ್ವತ ಪರಿಷ್ಕಾರ ಯಾವಾಗ? -ಬಳ್ಳಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಸಾಮಾಜಿಕ ಕಾರ್ಯಕರ್ತ ಮೇಕಲ ಈಶ್ವರ ರೆಡ್ಡಿ ಬಹಿರಂಗ ಪತ್ರ! appeared first on Karnataka Kahale.
]]>
ನಗರದ ಹೃದಯ ಭಾಗದಲ್ಲಿರುವ ಹಳೇ ತಾಲೂಕ ಕಚೇರಿ ಆವರಣದಲ್ಲಿ ಸುಮಾರು 11 ಸರ್ಕಾರಿ ಕಚೇರಿಗಳಿವೆ. ಇವುಗಳಲ್ಲಿ ಜನ ಸಂಪರ್ಕವಿರುವ ಕೃಷಿ, ತೋಟಗಾರಿಕೆ, ಉದ್ಯೋಗ ವಿನಿಮಯ ಕಚೇರಿ, ಧಾರ್ಮಿಕ ದತ್ತಿ ಇಲಾಖೆ ಗ್ರಾಮಾಂತರ ಹಾಗೂ ಬ್ರೂಸ್ ಪೇಟೆ ಪೋಲಿಸ್ ಠಾಣೆ ಇನ್ನು ಮುಂತಾದ ಕಚೇರಿಗಳಿವೆ ಕಂದಾಯ ಇಲಾಖೆಯ ತಾಲೂಕು ಕಚೇರಿಯ ಸ್ವಲ್ಪ ಭಾಗ ವರ್ಗಾವಣೆಯಾಗಿ ಇನ್ನು ಕೆಲವು ವಿಭಾಗಗಳು ಹಳೆ ತಾಲೂಕ ಕಚೇರಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿವೆ.
ದಿನನಿತ್ಯ ಸಾವಿರಾರು ಜನ ಮುಖ್ಯವಾಗಿ ರೈತರು ಬರುವಂತ ಈ ಕಚೇರಿಗಳಿಗೆ ಮಳೆ ಬಂದಾಗ ಹೋಗಿ ಬರಬೇಕಾದರೆ ಕಷ್ಟವಾಗುತ್ತಿದೆ. ಇಷ್ಟೊಂದು ಕಚೇರಿಗಳಿರುವ ಆವರಣದಲ್ಲಿ ಉನ್ನತ ಅಧಿಕಾರಿಗಳು ಈ ಅವ್ಯವಸ್ಥೆ ಬಗ್ಗೆ ಸರ್ಕಾರ ಗಮನಕ್ಕೆ ತಂದಿದ್ದಾರೋ ಇಲ್ಲವೊ ಗೊತ್ತಿಲ್ಲ! ಮತ್ತು ಹಲವಾರು ವರ್ಷಗಳಿಂದ ಈ ಅವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಯಾವ ಉನ್ನತ ಅಧಿಕಾರಿಗಳು ಗಮನ ಹರಿಸದೇ ಇರುವುದು ಶೋಚನೀಯ.

ಪ್ರತಿ ವರ್ಷ ಮಳೆ ಬಂದಾಗ ಈ ವ್ಯವಸ್ಥೆ ಬಗ್ಗೆ ಯಾವ ಪಕ್ಷದ ಆಡಳಿತ ನಾಯಕರು ಕೂಡ ಸರಿಪಡಿಸಲು ಮುಂದೆ ಬಂದಿಲ್ಲ ಆವರಣ ದಲ್ಲಿರುವ ಪ್ರತಿಯೊಂದು ಕಚೇರಿಗಳನ್ನು ಸಂಪರ್ಕಿಸುವ ಮಣ್ಣಿನ ರಸ್ತೆಗಳನ್ನು ಸಿಮೆಂಟ್ ರಸ್ತೆಗಳಾಗಿ ಪರಿವರ್ತಿಸ ಬೇಕೆಂದು ಕೋರಿ ಕೊಳ್ಳುತ್ತೇನೆ.
ಜತೆಗೆ ಕುಡಿಯುವ ನೀರು, ಮುಖ್ಯವಾಗಿ ಶೌಚಾಲಯ ವ್ಯವಸ್ಥೆ ಮಾಡಬೇಕೆಂದು ಒಬ್ಬ ಸಾಮಾಜಿಕ ಕಾರ್ಯಕರ್ತರಾಗಿ ತಮ್ಮಲ್ಲಿ ಬೇಡಿಕೊಳ್ಳುತ್ತಿದ್ದೇನೆ. ಮಹಾನಗರ ಪಾಲಿಕೆ ಆವರಣದ ಮಾದರಿಯಲ್ಲಿ ಎಷ್ಟೇ ಮಳೆಯಾದರು ಕೂಡ ಒಂದು ಹನಿ ನೀರು ನಿಲ್ಲದ ಹಾಗೆ ಒಳ ಚರಂಡಿ ವ್ಯವಸ್ಥೆ ಮಾಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

-ಮೇಕಲ ಈಶ್ವರ ರೆಡ್ಡಿ,
ಸಾಮಾಜಿಕ ಕಾರ್ಯಕರ್ತ, ಬಳ್ಳಾರಿ
—–
The post ಬಳ್ಳಾರಿ ಹಳೇ ತಾಲೂಕು ಕಚೇರಿ ಆವರಣಕ್ಕೆ ಶಾಶ್ವತ ಪರಿಷ್ಕಾರ ಯಾವಾಗ? -ಬಳ್ಳಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಸಾಮಾಜಿಕ ಕಾರ್ಯಕರ್ತ ಮೇಕಲ ಈಶ್ವರ ರೆಡ್ಡಿ ಬಹಿರಂಗ ಪತ್ರ! appeared first on Karnataka Kahale.
]]>The post ಕಾರವಾರ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ appeared first on Karnataka Kahale.
]]>
ಕಾರವಾರ, ಜು.4: ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟ್ಟಿದ್ದು ಶುಕ್ರವಾರ ಈ ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಈ ಎನ್.ಡಿ.ಆರ್.ಎಫ್ ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮುಟಾ ಮತ್ತು ಅಂಕೋಲ ಭಾಗದಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಹೊನ್ನಾವರದಲ್ಲಿ 4 , ಕುಮಟಾ ದಲ್ಲಿ 2 ಮತ್ತು ಅಂಕೋಲದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೆಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ 230 ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂದಪಟ್ಟ ತಾಲೂಕುಗಳ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.
ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು 24×7 ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ,ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಘನಾಶಿನಿ ಮತ್ತು ಶರಾವತಿ ನದಿಗಳು ತುಂಬಿ ಹರಿಯುತ್ತಿದ್ದು ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದು , ಈ ಪ್ರದೇಶಗಳ ಮೇಲೆ ನಿರಂತರ ನಿಗಾವಹಿಸಲಾಗಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ಸರ‍್ಷಕಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಲಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತ ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 9483511015 ಕರೆ , ಮೆಸೆಜ್, ವಾಟ್ಪಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
—–
The post ಕಾರವಾರ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ appeared first on Karnataka Kahale.
]]>The post ಕೂಡ್ಲಿಗಿ ತಾಲೂಕು ಕಚೇರಿಗೆ ಕಂದಾಯ ಸಚಿವರ ದಿಢೀರ್ ಭೇಟಿ-ತಹಶೀಲ್ದಾರ್ ತಬ್ಬಿಬ್ಬು! appeared first on Karnataka Kahale.
]]>
ಆದರೆ, ಸಚಿವರು ಕಚೇರಿಗೆ ಆಗಮಿಸುವ ವಿಚಾರ ತಿಳಿಯದ ಕಿರಿಯ ಅಧಿಕಾರಿಗಳು, ಸಿಬ್ಬಂದಿ ಎಂದಿನಂತೆ 10.45 ಆದರೂ ಕಚೇರಿಗೆ ಹಾಜರಾಗಿರಲಿಲ್ಲ.
ಸ್ವತಃ ತಹಶೀಲ್ದಾರ್ ಸಹ ಕಚೇರಿಗೆ ಆಗಮಿಸಿರಲಿಲ್ಲ. ಹೀಗಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಹಾಜರಾತಿ ಪುಸ್ತಕ ಪರಿಶೀಲಿಸಿ ಎಲ್ಲಾ ಅಧಿಕಾರಿಗಳನ್ನೂ ತರಾಟೆಗೆ ತೆಗೆದುಕೊಂಡರು.

ಈ ವೇಳೆ ದಡಬಡಿಸಿ ಕಚೇರಿಗೆ ದೌಡಾಯಿಸಿದ ತಹಶೀಲ್ದಾರರನ್ನೂ ಸಹ ಸಚಿವರು ತರಾಟೆಗೆ ತೆಗೆದುಕೊಂಡರು. ಒಂದು ಸರ್ಕಾರಿ ಕಚೇರಿಯನ್ನು ನಡೆಸುವುದು ಹೀಗಾ? ಬಡವರ ಕೆಲಸ ಅಂದ್ರೆ ಏಕಿಷ್ಟು ತಾತ್ಸಾರ? ಎಂದು ಕಿಡಿಕಾರಿದರು.
*****
The post ಕೂಡ್ಲಿಗಿ ತಾಲೂಕು ಕಚೇರಿಗೆ ಕಂದಾಯ ಸಚಿವರ ದಿಢೀರ್ ಭೇಟಿ-ತಹಶೀಲ್ದಾರ್ ತಬ್ಬಿಬ್ಬು! appeared first on Karnataka Kahale.
]]>The post ಬಳ್ಳಾರಿ ನೂತನ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರ appeared first on Karnataka Kahale.
]]>
ಮಾಲಪಾಟಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವರು.
—–
The post ಬಳ್ಳಾರಿ ನೂತನ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರ appeared first on Karnataka Kahale.
]]>The post ಕುರುಗೋಡು ನೂತನ ತಹಶೀಲ್ದಾರ್ ಎಂ. ಗುರುರಾಜ appeared first on Karnataka Kahale.
]]>
ಬಳ್ಳಾರಿ, ಜ.31: ಕುಷ್ಟಗಿ ತಹಶೀಲ್ದಾರರಾಗಿದ್ದ ಎಂ. ಗುರುರಾಜ್ ಅವರನ್ನು ರಾಜ್ಯ ಸರಕಾರ ಜಿಲ್ಲೆಯ ಕುರುಗೋಡು ತಹಶೀಲ್ದಾರನ್ನಾಗಿ ವರ್ಗಾಯಿಸಿದೆ.
2023 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ
ಕುಷ್ಟಗಿ ಸೇರಿದಂತೆ 70ಕ್ಕೂ ಹೆಚ್ಚು ತಹಶೀಲ್ದಾರರನ್ನು ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಜಿ ಎನ್ ಸುಶೀಲ ಅವರು ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ.

ಈವರೆಗೆ ಕುರುಗೋಡು ತಹಶಿಲ್ದಾರರಾಗಿದ್ದ ಆರ್. ರಾಘವೇಂದ್ರ ರಾವ್ ಅವರು ಕುಷ್ಟಗಿಗೆ ವರ್ಗವಾಗಿದ್ದಾರೆ.
*****
The post ಕುರುಗೋಡು ನೂತನ ತಹಶೀಲ್ದಾರ್ ಎಂ. ಗುರುರಾಜ appeared first on Karnataka Kahale.
]]>