The post ಚಿತ್ರದುರ್ಗದ ನೆಲ್ಲಿಕಟ್ಟೆಯಲ್ಲಿ ಕನ್ನಡರಾಜ್ಯೋತ್ಸವ appeared first on Karnataka Kahale.
]]>
ಚಿತ್ರದುರ್ಗ, ನ.2: ಕನ್ನಡ ನಾಡುನುಡಿಗೆ ಅಪೂರ್ವವಾದ ಇತಿಹಾಸ ಮತ್ತು ಪರಂಪರೆಯಿದೆ. ಕನ್ನಡನಾಡಿನ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನೆಲ್ಲ ಸ್ಮರಿಸುತ್ತಾ, ಕನ್ನಡನಾಡುನುಡಿಯ ಪ್ರಗತಿಗಾಗಿ ನಮ್ಮದೇ ಆದ ಕಾಣ್ಕೆ ಕೊಡುವಂತಹ ಸೇವೆ ಮಾಡೋಣ ಎಂದು ಖ್ಯಾತ ಸಾಹಿತಿ ಯುಗಧರ್ಮರಾಮಣ್ಣ ಅವರು ಹೇಳಿದರು. ಅವರು ಜಿಲ್ಲೆಯ ನೆಲ್ಲಿಕಟ್ಟೆನವಗ್ರಾಮದಲ್ಲಿ ಮಾರಕ್ಕಮಾತೆ ಸಂಸ್ಥೆ ಏರ್ಪಡಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡನಾಡುನುಡಿ ಕುರಿತು ಉಪನ್ಯಾಸ ನೀಡಿದ ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರು ಕನ್ನಡಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಸಾಮರಸ್ಯದ ನೆಲೆಯಿದೆ. ಸಾತ್ವಿಕತೆಯಸೆಲೆಯಿದೆ. ಕನ್ನಡ ನಾಡುನುಡಿಯ ಸಂವರ್ಧನೆಗೆ ಸರ್ವರ ಶ್ರಮಿಸಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬಿದರಕೆರೆ ಶಕುಂತಲ ತಿಪ್ಪೇಸ್ವಾಮಿ ಅವರಿಗೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರು ಬೌರಿಂಗ್ ಆಸ್ಪತ್ರೆಯ ನವೀನ್ ಎಸ್.ಟಿ. ಅವರು ಭಾಗವಹಿಸಿದ್ದರು.
The post ಚಿತ್ರದುರ್ಗದ ನೆಲ್ಲಿಕಟ್ಟೆಯಲ್ಲಿ ಕನ್ನಡರಾಜ್ಯೋತ್ಸವ appeared first on Karnataka Kahale.
]]>The post ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ appeared first on Karnataka Kahale.
]]>
ಬೆಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರ್ರವಾರ ಸಂಜೆ ಉದ್ಘಾಟಿಸಿದರು. ವಿಧಾನಸೌಧದ ಭವ್ಯ ಮೆಟ್ಡಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವ ಡಾ. ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
The post ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ appeared first on Karnataka Kahale.
]]>The post ಬಳ್ಳಾರಿಯ ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ ಅವರಿಗೆ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ appeared first on Karnataka Kahale.
]]>
ಬೆಂಗಳೂರು, ನ.1: ವಿಧಾನ ಸೌಧ ಮುಂಭಾಗದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಹಗಲು ವೇಷ ಹಿರಿಯ ಕಲಾವಿದ ದರೋಜಿ ಅಶ್ವ ರಾಮಣ್ಣ ಅವರಿಗೆ 2024 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಮಂತ್ರಿ ಡಾ ಜಿ ಪರಮೇಶ್ವರ್, ವಿಧಾನಪರಿಷತ್ತು ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಭೈರತಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
The post ಬಳ್ಳಾರಿಯ ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ ಅವರಿಗೆ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ appeared first on Karnataka Kahale.
]]>The post ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ. -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಬೆಂಗಳೂರು, ನ.1: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. 100 ಕನ್ನಡ ಸಾಧಕರಿಗೆ ಪ್ರಶಸ್ತಿ: 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.. ಈ ಸುವರ್ಣ ಸಂಭ್ರಮವನ್ನು 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು. ಕನ್ನಡ ನಾಡಿನ ಏಕೀಕರಣಕ್ಕೆ, ಏಳಿಗೆಗೆ 100 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ಕನ್ನಡ ಭಾಷೆಯ ಬಗ್ಗೆ ಅಭಿಮಾನವಿರಲಿ:
ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ. 1983ರ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಇಂದಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ವಿಷಯದಲ್ಲಿ ಉದಾರತನವಿರಬೇಕೇ ಹೊರತು ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನವಿರಬೇಕು. ಬೇರೆ ಭಾಷೆ ಕಲಿತರೂ, ಕನ್ನಡ ತಾಯಿಭಾಷೆಯನ್ನು ಮರೆಯಬಾರದು. ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಎಂಬ ಸ್ಥಾನಮಾನ ದೊರೆತಿದೆ. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸಧ್ಯದಲ್ಲಿಯೇ ಸ್ಥಾಪಿಸಲಾಗುವುದು ಎಂದರು.

ವಾಟಾಳ್ ನಾಗರಾಜ್ ರವರು ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ: ಪ್ರತಿ ವರ್ಷದ ನ. 1 ಕನ್ನಡ ಹಬ್ಬದ ದಿನ. ವಾಟಾಳ್ ನಾಗರಾಜ್ ಅವರು ಇದೇ ರೀತಿ 100 ರಾಜ್ಯೋತ್ಸವಗಳನ್ನು ಆಚರಿಸುವಂತಾಗಲಿ ಎಂದು ಶುಭ ಕೋರಿದರು. ಕನ್ನಡಪರ ಹೋರಾಟಗಾರರಾದ ಇವರು ದೀರ್ಘ ಕಾಲದಿಂದ ಕನ್ನಡ ನಾಡು, ನುಡಿ, ನೆಲ,ಜಲಗಳ ಸಂರಕ್ಷಣೆಗೆ ಶ್ರಮಿಸಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ, ಕನ್ನಡ ಚಳವಳಿ ಪಕ್ಷ ಬಿಟ್ಟು ಬೇರೆಡೆಗೆ ಅವರು ಮುಖ ಮಾಡಲಿಲ್ಲ. ನನ್ನನ್ನೂ ಸೇರಿದಂತೆ, ಕೆಂಗಲ್ ಹನುಮಂತಯ್ಯ , ವೀರೇಂದ್ರ ಪಾಟೀಲ್, ದೇವರಾಜ ಅರಸು , ಗುಂಡೂರಾಯರು ಸೇರಿದಂತೆ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ, ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ. ಮಾತೃಭಾಷೆ, ನೆಲ ಜಲದ ಬಗ್ಗೆ ಬದ್ಧತೆಯಿರುವ ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವಾದರವಿದೆ. ನನ್ನ ವಿದ್ಯಾರ್ಥಿದೆಸೆಯಿಂದಲೂ ಅವರ ಭಾಷಣವನ್ನು ಕೇಳುತ್ತಾ ಬಂದಿದ್ದೇನೆ ಎಂದು ಸ್ಮರಿಸಿದರು. ವಾಟಾಳ್ ನಾಗರಾಜ್ ಅವರನ್ನು ‘ನಾಯಕರು’ ಎಂದು ತಾನು ಸಂಭೋದಿಸುತ್ತಿದ್ದು, ಜನ ಅವರನ್ನು ನಾಯಕರಾಗಿ ಕಂಡಿದ್ದಾರೆ ಎಂದರು.
The post ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ. -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ಕನ್ನಡದ ನಂದಾದೀಪ ಸದಾ ಬೆಳಗಲಿ -ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ appeared first on Karnataka Kahale.
]]>ಕನ್ನಡ ವಿಭಾಗದ ಉಪನ್ಯಾಸಕ ಪ್ರವೀಣ ಪೊಲೀಸ ಪಾಟೀಲ ಮಾತನಾಡಿ ದಿನನಿತ್ಯ ಜೀವನದಲ್ಲಿ ಕನ್ನಡ ಬಳಕೆ ಮಾಡುವ ಮೂಲಕ ಪ್ರತಿದಿನವೂ ರಾಜ್ಯೋತ್ಸವವನ್ನು ಆಚರಣೆ ಮಾಡೋಣ ಎಂದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅಯ್ಯಪ್ಪ, ಪಾರ್ವತಿ, ಸಂತೋಷಕುಮಾರ ಹೆಚ್ ಕೆ, ಶ್ರೀಕಾಂತ್, ವಿರುಪಾಕ್ಷಿ, ದೇವರಾಜ್ ಬಡಿಗೇರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
The post ಕನ್ನಡದ ನಂದಾದೀಪ ಸದಾ ಬೆಳಗಲಿ -ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ appeared first on Karnataka Kahale.
]]>The post ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ಕನ್ನಡ ಭವನ ನಿರ್ಮಾಣ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ appeared first on Karnataka Kahale.
]]>
ಬೆಂಗಳೂರು, ನ.2 : ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಅವರು ಬುಧವಾರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
1956ರ ನವೆಂಬರ್ 1 ರಂದು ಕನ್ನಡ ಭಾಷಿಕ ಪ್ರದೇಶಗಳು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ 1973ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಯಿತು ಎಂದರು.
ಕನ್ನಡದ ಹಿರಿಮೆ ಬಿಂಬಿಸುವ ಕರ್ನಾಟಕ ಸಂಭ್ರಮ – 50: ಕರ್ನಾಟಕಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಸಂಭ್ರಮಾಚರಣೆ ಮಾಡಬೇಕಿತ್ತು. ಆದರೆ ಅವರು ಆಚರಿಸಲಿಲ್ಲ. ನಮ್ಮ ಸರ್ಕಾರ ಈ ಸಂಭ್ರಮಾಚರಣೆಯನ್ನು ಆಚರಿಸುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಇಡೀ ವರ್ಷಕನ್ನಡ ನೆಲ, ಜಲ ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ ‘ಕರ್ನಾಟಕ ಸಂಭ್ರಮ- 50’ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮ ಉಸಿರು ಕನ್ನಡವಾಗಬೇಕು. ಇಡೀ ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು ಎಂದು ತಿಳಿಸಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಬೇಕು:
ವಚನಗಳು ಭಾರತಕ್ಕೆ ಮಾತ್ರವಲ್ಲ. ಇಡೀ ವಿಶ್ವಕ್ಕೆ ಅಗತ್ಯ. ಜಾತಿ ವ್ಯವಸ್ಥೆ ಕಾರಣಕ್ಕಾಗಿ, ಸಾಮಾಜಿಕ, ಆರ್ಥಿಕ, ರಾಜಕೀಯ ಅಸಮಾನತೆ ನಿರ್ಮಾಣವಾಗಿದೆ. ಶತಮಾನಗಳಿಂದ ಶೂದ್ರರು ಹಾಗೂ ಮಹಿಳೆಯರು ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು.ಸಮ ಸಮಾಜ ನಿರ್ಮಾಣವಾಗಬೇಕಾದರೆ ಅವಕಾಶವಂಚಿತರು, ದುರ್ಬಲರು ಮುಖ್ಯವಾಹಿನಿಗೆ ಬರಬೇಕು. ಅಂತಹ ಜನರನ್ನು ಗುರುತಿಸಿ, ಸಾಮಾಜಿಕ, ಆರ್ಥಿಕ ನ್ಯಾಯ ಕೊಡುವ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ ಎಂದರು.
ವಚನ ಸಂಸ್ಕೃತಿ ಅಭಿಯಾನ : ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಇಂತಹ ಆಶಯಗಳನ್ನೇ ಬಸವಣ್ಣನವರು, ಅಂಬೇಡ್ಕರ್ ರವರು ತಿಳಿಸಿದರು. ಶ್ರೀ ನಿಜಗುಣ ಸ್ವಾಮೀಜಿ ಅವರು ಹೇಳಿದಂತೆ ವಚನ ಸಂಸ್ಕೃತಿ ಅಭಿಯಾನ ಸರ್ಕಾರ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.
ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವ ಯೋಜನೆಗಳು :
ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 86 ಕೋಟಿ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ಇರುವವರಿಗೆ ಶಕ್ತಿ ಕೊಡುವುದಲ್ಲ. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬ ಬೇಕೆನ್ನುವುದೇ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಎಂದರು.

ಸಮಾಜಸೇವೆಯ ಮೂಲಕ ಋಣ ತೀರಿಸಲು ಸಾಧ್ಯ :
ಪ್ರೀತಿ, ವಿಶ್ವಾಸ, ಮನುಷ್ಯತ್ವ ಬಹಳ ಮುಖ್ಯ. ಮನುಷ್ಯತ್ವ ಇಲ್ಲದಿದ್ದರೆ ಅದು ಸಮಾಜವೇ ಅಲ್ಲ. ನಾವೆಲ್ಲರೂ ಕೂಡ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟರೆ ಮಾತ್ರ ಬದುಕು ಸಾರ್ಥಕವಾಗುತ್ತದೆ. ನಾವು ಹುಟ್ಟಿದ ಮೇಲೆ ಸಮಾಜದಿಂದ ಎಲ್ಲವನ್ನೂ ಪಡೆದಿದ್ದೇವೆ ಎಂದ ಮೇಲೆ , ಸಮಾಜದ ಪರ ಕೆಲಸ ಮಾಡುವ ಮೂಲಕ ಸಮಾಜದ ಋಣ ತೀರಿಸಲು ಸಾಧ್ಯ. ಇಂತಹ ಕೆಲಸವೇ ಸಮಾಜ ಸೇವೆ ಎಂದರು.
ಅರ್ಹತೆಯುಳ್ಳವರಿಗೆ ಪ್ರಶಸ್ತಿ : ಕರ್ನಾಟಕ ಸಂಭ್ರಮದ ಶುಭಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ 68 ಪ್ರಶಸ್ತಿ ಪುರಸ್ಕೃತರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ 10 ಸಂಘ- ಸಂಸ್ಥೆಗಳಿಗೆ ಈ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚು ಅರ್ಹತೆ ಇದ್ದವರನ್ನು ಆಯ್ಕೆ ಮಾಡಬೇಕೆಂಬ ಸೂಚನೆಯನ್ನು ನೀಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಒಂದು ಹೆಸರನ್ನು ಬಿಟ್ಟು ಬೇರೆ ಯಾರ ಹೆಸರನ್ನು ನಾನು ಸೂಚಿಸಿಲ್ಲ. ಬಹುತೇಕವಾಗಿ ಆಯ್ಕೆ ಸಮಿತಿ ಶಿಫಾರಸ್ಸು ಮಾಡಿದವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಮಾತನಾಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಭೈರತಿ ಸುರೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. *****
The post ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ಕನ್ನಡ ಭವನ ನಿರ್ಮಾಣ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ appeared first on Karnataka Kahale.
]]>The post ಇಂದಿನಿಂದ(ನ.1) ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಸರಬರಾಜು -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ appeared first on Karnataka Kahale.
]]>
ಬೆಂಗಳೂರು, ನ.1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು. ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ ಎಂದರು.
ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
*****
The post ಇಂದಿನಿಂದ(ನ.1) ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಸರಬರಾಜು -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ appeared first on Karnataka Kahale.
]]>The post ಬಳ್ಳಾರಿಯಲ್ಲಿ ಸಂಭ್ರಮದ ೬೮ನೇ ಕನ್ನಡ ರಾಜ್ಯೋತ್ಸವ: ಪ್ರಮುಖ ರಸ್ತೆಗಳಿಗೆ ಏಕೀಕರಣಕ್ಕೆ ಶ್ರಮಿಸಿದ ಮಹನೀಯರ ಹೆಸರು ನಾಮಕರಣ – ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ appeared first on Karnataka Kahale.
]]>
ಬಳ್ಳಾರಿ,ನ.1: ಕರ್ನಾಟಕ ಏಕೀಕರಣದ ಸಮಯದಲ್ಲಿ ಹೋರಾಡಿದ ಮಹನೀಯರ ಹೆಸರನ್ನು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ನಾಮಕರಣ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ ವತಿಯಿಂದ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯವನ್ನು ಒಗ್ಗೂಡಿಸಲು ಮತ್ತು ಏಕೀಕರಣಕ್ಕೆ ಶ್ರಮಿಸಿದ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಅವರ ಹೆಸರನ್ನು ರಸ್ತೆಗಳಿಗೆ, ವೃತ್ತಗಳಿಗೆ ನಾಮಕರಣಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಹುತಾತ್ಮ ರಂಜಾನ್ ಸಾಬ್: ಕರುನಾಡ ಏಕೀಕರಣಕ್ಕೆ ಬಲಿದಾನಗೈದ ಮಹಾವೀರ ಪಿಂಜಾರ್ ಪೈಲ್ವಾನ್ ರಂಜಾನ್ ಸಾಬ್ ಅವರು ಬಳ್ಳಾರಿಯವರು, ಅಂದಿಗೆ ರಾಜ್ಯಾದ್ಯಂತ ನಡೆಯುತ್ತಿದ್ದ ಕರ್ನಾಟಕ ಏಕೀಕರಣಕ್ಕೆ ಮೊದಲ ಜಯ ಸಿಕ್ಕಿದ್ದು ಬಳ್ಳಾರಿಯಲ್ಲೇ. ಕನ್ನಡಿಗರ ಸತತ ಹೋರಾಟದ ಫಲವಾಗಿ ಬಳ್ಳಾರಿಯನ್ನು 1953ರ ಅಕ್ಟೋಬರ್ 1 ರಂದು, ಅಂದಿನ ಮೈಸೂರು ರಾಜ್ಯದಲ್ಲಿ ವಿಲೀನಗೊಳಿಸುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇದರೊಂದಿಗೆ ಏಕೀಕರಣದ ಪ್ರಕ್ರಿಯೆ ಬಳ್ಳಾರಿಯಿಂದಲೇ ಆರಂಭ ಆಗಿತ್ತು ಎಂದು ತಿಳಿಸಿದರು.

ದೇಶದಲ್ಲಿಯೇ ಅತೀ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಗಳು ನಮ್ಮ ಕನ್ನಡ ಸಾಹಿತ್ಯಕ್ಕೆ ಲಭಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ವರ್ಷವಿಡೀ ಕರ್ನಾಟಕ ಸಂಭ್ರಮಾಚರಣೆ: ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 1ನೇ ನವಂಬರ್ 2023ಕ್ಕೆ 50 ವರ್ಷ ಪೂರ್ಣಗೊಂಡ ಈ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರವು “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಭವ್ಯ ಪರಂಪರೆ ಹಾಗೂ ಇತಿಹಾಸ ಹೊಂದಿರುವ ಈ ನಮ್ಮ ನಾಡಿಗೆ ನಮ್ಮ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು ಖನಿಜ ನಿಕ್ಷೇಪಗಳನ್ನು ಹೊಂದಿರುವ ಜಿಲ್ಲೆಯಾಗಿದ್ದು, ಭೌತಿಕ, ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲವನ್ನು ಬಳಸಿಕೊಂಡು ಸರ್ವಾಂಗೀಣ ಅಭಿವೃದ್ದಿಗೆ ನಾವೆಲ್ಲರೂ ಶ್ರಮಿಸಲು ಕಂಕಣ ಬದ್ದರಾಗಿ ಈ ನಾಡನ್ನು ಶ್ರೀಮಂತಗೊಳಿಸೋಣ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ, ಕರ್ನಾಟಕದಲ್ಲಿ ಜನಿಸಿದ ನಾವೆಲ್ಲರೂ ಧನ್ಯರು. ಕೊನೆ ಉಸಿರುವವ ತನಕ ಕನ್ನಡಿಗರಾಗಿಯೇ ಇರೋಣ ಮತ್ತು ಬಾಳೋಣ ಎಂದರು.
ಮುಂಬರುವ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ನಗರದ ಕೋಟೆ ಮೇಲೆ ಅಚ್ಚುಕಟ್ಟಾಗಿ ಧ್ವಜಾರೋಹಣ ನೆರವೇರಿಸಲು ಧ್ವಜಸ್ತಂಭ ಹಾಗೂ ಇತರೆ ವ್ಯವಸ್ಥೆಯನ್ನು ಶಾಸಕರ ಅನುದಾನದಲ್ಲಿ ನಿರ್ಮಿಸಿಕೊಡಲಾಗುವುದು ಎಂದು ಶಾಸಕರು ಹೇಳಿದರು.
ಕಾರ್ಯಕ್ರಮದಲ್ಲಿ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಬಂಧ ಸ್ಪರ್ಧೆ: ಅಭಿಷೇಕ್ ನಾಯರ್ (ಪ್ರಥಮ), ನಯನ (ದ್ವಿತೀಯ), ಎಂ.ಡಿ.ಸಾಧಿಕ್ (ತೃತೀಯ).
ಭಾಷಣ ಸ್ಪರ್ಧೆ: ರಶ್ಮಿ (ಪ್ರಥಮ), ಶಿವರಾಜ್ (ದ್ವಿತೀಯ), ವೀಣಾ (ತೃತೀಯ).
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳು ಪಿಯುಸಿ ವಿಭಾಗದಲ್ಲಿ ಅತ್ಯಂತ ಹೆಚ್ಚು ಅಂಕ ಪಡೆದ ಯಶ್ವಂತ್, ಗೌರಿ, ಅನುಷಾ, ಪದ್ಮಾವತಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಮಾಡಲಾಯಿತು.

ಆಕರ್ಷಕ ಸ್ತಬ್ಧ ಚಿತ್ರಗಳ ಮೆರವಣಿಗೆ: ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ನೋಡುಗರನ್ನು ಆಕರ್ಷಿಸಿದವು.
ಸಚಿವ ಬಿ.ನಾಗೇಂದ್ರ ಅವರು ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿದರು.
ಕೆಕೆಆರ್‍ಟಿಸಿ ನಿಗಮ ವತಿಯಿಂದ ಶಕ್ತಿ ಯೋಜನೆಯ ಕುರಿತ ನಾರಿಮಣಿಯರ ಸ್ತಬ್ಧ ಚಿತ್ರ, ಮಹಾನಗರ ಪಾಲಿಕೆ ವತಿಯಿಂದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಕುರಿತ ಜಾಗೃತಿ ಫಲಕ, ಆರೋಗ್ಯ ಇಲಾಖೆಯಿಂದ ಆಯುಷ್ಮಾನ್ ಯೋಜನೆಯ ಲಸಿಕೆ ಜಾಗೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗೃಹಲಕ್ಷ್ಮೀ ಯೋಜನೆ ಕುರಿತ ಸ್ತಬ್ಧ ಚಿತ್ರ, ಜೆಸ್ಕಾಂ ಇಲಾಖೆಯಿಂದ ಗೃಹಜ್ಯೋತಿ ಕುರಿತ ಸ್ತಬ್ಧ ಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಒಟ್ಟು 15 ಸ್ತಬ್ಧ ಚಿತ್ರಗಳು ಗಮನ ಸೆಳೆದವು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳು, ವಿವಿಧ ಕನ್ನಡ ಪರ ಸಂಘಟನೆಗಳು ಉಪಸ್ಥಿತರಿದ್ದರು.
——–
The post ಬಳ್ಳಾರಿಯಲ್ಲಿ ಸಂಭ್ರಮದ ೬೮ನೇ ಕನ್ನಡ ರಾಜ್ಯೋತ್ಸವ: ಪ್ರಮುಖ ರಸ್ತೆಗಳಿಗೆ ಏಕೀಕರಣಕ್ಕೆ ಶ್ರಮಿಸಿದ ಮಹನೀಯರ ಹೆಸರು ನಾಮಕರಣ – ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ appeared first on Karnataka Kahale.
]]>The post ಕರ್ನಾಟಕ ರಾಜ್ಯೋತ್ಸವ ಏಕೆ ಮತ್ತು ಹೇಗೆ? -ಎಂ.ವಿ.ಶಶಿಭೂಷಣ ರಾಜು, ಪೆನ್ಸಿಲ್ವೇನಿಯ, ಅಮೇರಿಕ appeared first on Karnataka Kahale.
]]>
ಎಲ್ಲಾದರು ಇರು, ಎಂತಾದರು ಇರು
ಎದೆಂದಿಗೂ ನೀ ಕನ್ನಡವಾಗಿರು
ರಾಷ್ಟ್ರಕವಿ ಕುವೆಂಪು ಅವರ ಈ ಕಳಕಳಿಗೆ ನಿಜವಾಗಲೂ ಸ್ಪಂದಿಸುತ್ತಿರುವವರು ಹೊರನಾಡ ಕನ್ನಡಿಗರು. ನಮ್ಮ ನೆಲ,ಜಲ ಭಾಷೆ ಬಿಟ್ಟು ಜೀವನ ನಡೆಸುವ ಅನಿವಾರ್ಯತೆಯಿಂದ ಹೊರಗೆಲ್ಲೂ ನೆಲೆಸಿರುವವರಿಗೆ, ತಮ್ಮೆದೆಲ್ಲವ ಬಿಟ್ಟ ನೋವಿನಿಂದಲೋ, ತಪ್ಪಿತಸ್ಥ ಭಾವನೆಯಿಂದಲೋ, ತಾವೇನೋ ಕಳೆದುಕೊಳ್ಳೋತ್ತಿದ್ದೇವೆ ಎನ್ನುವ ಅನುಮಾನದಿಂದಲೋ ದೇಶ, ಭಾಷೆಗಳನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾರೆ. ತಮ್ಮ ಜಾಗಗಳಲ್ಲಿಯೇ ಕನ್ನಡ ಸಂಘಗಳನ್ನು ಸ್ಥಾಪಿಸಿಕೊಂಡು ಕನ್ನಡಿಗರನ್ನು ಒಟ್ಟು ಗೂಡಿಸಿ ಕನ್ನಡವನ್ನು ಜಾಗೃತಗೊಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ತಮಗೆ ತಿಳಿದಿರುವ ಸರಳ ಭಾಷೆಯಲ್ಲಿಯೇ ಕಥೆ ಕವನ ಬರೆಯಲು ಪ್ರಯತ್ನಿಸುತ್ತಾರೆ, ಅದನ್ನು ಬೇರೆಯವರಿಗೆ ತೂರಿಸಿ ಹೆಮ್ಮೆ ಪಡುತ್ತಾರೆ. ಹೊರನಾಡಿನಲ್ಲಿಯೇ ಇದ್ದುಕೊಂಡು ಅದ್ಭುತವಾಗಿ ಬರೆದ ಬರಹಗಾರರು ಕನ್ನಡದಲ್ಲಿ ಇದ್ದಾರೆ. ಇಥೋಪಿಯಾದಲ್ಲಿ ಹದಿನೈದು ವರ್ಷಗಳಿದ್ದು ಬರೆದ ಕೆ.ಟಿ.ಗಟ್ಟಿ ಯಂಥ ಅದ್ಬುತ ಕಾದಂಬರಿಕಾರರು ನಮ್ಮಲಿದ್ದಾರೆ ಎನ್ನುವುದು ಒಂದು ಹೆಮ್ಮೆ.
ಆದರೆ ನಮ್ಮದೇ ರಾಜ್ಯ ಕರ್ನಾಟಕದಲ್ಲಿ ಏನಾಗುತ್ತಿದೆ. ಬರಹಗಾರರು ಹೆಚ್ಚಾಗುತ್ತಿದ್ದಾರೆ, ಹೆಚ್ಚು ಪುಸ್ತಕಗಳು ಪ್ರಕಟಣೆಯಾಗುತ್ತಿವೆ, ಆದರೆ ಓದುವವರೇ ಇಲ್ಲವಾಗುತ್ತಿದ್ದಾರೆ. ಪುಸ್ತಕ ಕೊಂಡು ಓದುವವರಂತೋ ಅತೀ ಕಡಿಮೆ. ಅನೇಕರು ಇನ್ನು ಹಳೇ ಬರಹಗಾರರ ಪುಸ್ತಕಗಳನ್ನು ಕೊಂಡು ಓದುತ್ತಾರೆ. ಬರೆಯುವವರೇ ಇನ್ನೊಬ್ಬರ ಪುಸ್ತಕ ಓದುವ ಸ್ಥಿತಿ. ಓದುಗ ಬಳಗ ಸೃಷ್ಟಿಸಲು ನಾವು ವಿಫಲರಾಗುತ್ತಿದ್ದೇವೆ. ಇಲ್ಲಾ ಜನಕ್ಕೆ ಓದುವ ಆಸಕ್ತಿ ಕಡಿಮೆ ಆಗಿರಬೇಕು, ಇಲ್ಲ ಇಂದಿನ ಬರಹಗಾರರಲ್ಲಿ ಗಟ್ಟಿಸಾಹಿತ್ಯ ಸೃಷ್ಟಿಸುವ ಶಕ್ತಿ ಇಲ್ಲದಿರಬೇಕು. ಕನ್ನಡದಲ್ಲಿ ಅನೇಕ ಸುದ್ದಿ ಸಮಾಚಾರ ಪತ್ರಿಕೆಗಳು, ಮ್ಯಾಗಜಿನ್ ಗಳು ಪ್ರಕಟವಾಗುತ್ತಿವೆ, ಅವುಗಳ ಉತ್ತಮ ಪ್ರಸರಣವೂ ಇದೆ, ಅಂದರೆ ಜನ ಓದುತ್ತಿರಬೇಕಲ್ಲವೇ. ಆದರೆ ಅವರು ಓದುತ್ತಿರುವುದು ಏನನ್ನು?. ಜನ ಹೆಚ್ಚು ಓದುತ್ತಿರುವುದು ರಾಜಕೀಯ ಸಮಾಚಾರಗಳನ್ನು, ರಾಜಕಾರಣಿಗಳು ಕೊಡುವ ಹೇಳಿಕೆ, ಪ್ರತಿ ಹೇಳಿಕೆಗಳನ್ನು. ರಾಜಕೀಯ ಸುದ್ದಿಗಳಿಗೆ ಜನರ ಸ್ಪಂದನೆ ಹೆಚ್ಚಾಗಿರುವುದು, ಸಾಮಾಜಿಕ ಮಾಧ್ಯಮಗಳಲ್ಲಿ ಜನ ಜಗಳವಾಡುವುದು ನೋಡುತ್ತಿದ್ದೇವೆ. ಯಾವುದೋ ವಿಷಯ ಜನ ಕನ್ನಡ ಓದುತ್ತಾರಲ್ಲ ಎಂದು ಆನಂದಿಸೋಣವೇ?
ಎಲ್ಲಾ ತರಹದ ಪತ್ರಿಕೆಗಳಲ್ಲಿ ಸಾಹಿತ್ಯಕ್ಕೆ ಜಾಗ ಕಡಿಮೆಯಾಗುತ್ತಿದೆ. ಹಿಂದೆ ಕ್ರೀಡಾಲೋಕದ ಜಾಗವನ್ನು (ಅಂದರೆ ಕೊನೆಯ ಪುಟ) ಈಗ ಸಾಹಿತ್ಯ ಆಕ್ರಮಿಸಿಕೊಳ್ಳುತ್ತಿದೆ, ಅಂದರೆ ಸಾಹಿತ್ಯ ಕೊನೆಗೆ ನೂಕಲ್ಪಟ್ಟ್ಟಿದೆ. ಎಲ್ಲಾ ಓದಿ, ಓದುಗ ಕೊನೆಯ ಪುಟಕ್ಕೆ ಬರುವಹೊತ್ತಿಗೆ, ಬೇಸರದಿಂದಲೋ, ಸಮಯದ ಅಭಾವದಿಂದಲೋ, ದಣಿವಿನಿಂದಲೋ ಕೊನೆಯಪುಟದ ಮೇಲೆ ಹಾಗೆ ಕಣ್ಣಾಡಿಸಿ ಪತ್ರಿಕೆ ಎಸೆಯುತ್ತಾನೆ, ಅಷ್ಟರಲ್ಲೇ ಕನ್ನಡ ಸಾಹಿತ್ಯ ತೃಪ್ತಿಹೊಂದಬೇಕು. ಎಷ್ಟೋ ಪತ್ರಿಕೆಗಳು ಕವನಗಳನ್ನು ಪ್ರಿಂಟ್ ಮೀಡಿಯಾದಲ್ಲಿ ಪ್ರಕಟಿಸುವುದನ್ನು ನಿಲ್ಲಿಸಿಬಿಟ್ಟೆವೆ, ಇಲ್ಲಾ ಅಂತರ್ಜಾಲದಲ್ಲಿ ಪ್ರಕಟಿಸುತ್ತಿವೆ. ಪ್ರಖ್ಯಾತ ಪತ್ರಿಕೆಗಳು ಕೂಡ ಕವನ, ಕಥೆ ಪ್ರಕಟಿಸುವುದಿಲ್ಲ. ಮಕ್ಕಳಿಗೆ ಕನ್ನಡ ಓದುವ ಅಭ್ಯಾಸ ಬರಬೇಕೆಂದರೆ ಅದು ಕವನ, ಕಥೆಗಳ ಮೂಲಕವೇ ಆಗಬೇಕು, ಮಕ್ಕಳು ರಾಜಕೀಯ ಓದಿ ಓದುವ ಅಭ್ಯಾಸ ಬೆಳೆಸಿಕೊಳ್ಳಲು ಸಾಧ್ಯವೇ.

ಇನ್ನು ಬರೆಯುವವರ ವಿಷಯಕ್ಕೆ ಬಂದರೆ, ಏನನ್ನೂ ಓದದೇ ಭಾಷೆಯಮೇಲೆ ಹಿಡಿತವಿಲ್ಲದೆ ಬರೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬರೆಯುವುದೆಲ್ಲಾ ಕವನವಾಗುತ್ತಿದೆ, ಬರಹಗಾರರ ಹತ್ತಿರದವರು ಅನಿವಾರ್ಯತೆಯಿಂದ ಆಹಾ ಒಹೋ ಎನ್ನುತ್ತಾರೆ, ಅಲ್ಲಿಂದ ಆಚೆಗೆ ಬರಹ ಹೋಗುವುದಿಲ್ಲ. ಬರೆಯುವುದನ್ನು ಗಂಭೀರವಾಗಿ ತೆಗೆದುಕೊಳ್ಳಬಯಸುವುದಾದರೆ ತುಂಬಾ ಓದಬೇಕು, ಪ್ರಖ್ಯಾತ ಸಮಕಾಲೀನ ಕವಿ/ಕವಿಯತ್ರಿಗಳ ಕವನಗಳನ್ನು ಅಭ್ಯಸಿಸಬೇಕು. ಒಳ್ಳೆಯ ಶೈಲಿ ರೂಡಿಸಿಕೊಳ್ಳಬೇಕು. ಕವನಗಳು ತುಂಬಾ ಸರಳವಾದರೆ ಹಿಡಿತ ವಿರುವುದಿಲ್ಲ. ಭಿನ್ನವಾಗಿ ಬರೆಯಬೇಕು. ಕಾವ್ಯ ವೆಂಬುದು ಭಾವನೆಗಳ ಆಗರ, ಭಾವನೆಗಳ ಪ್ರಸರಣ, ಭಾವನೆಗಳ ಮನನ. ಭಾವನೆಗಳನ್ನು ಯಾವುದೇ ರೂಪದಲ್ಲಿ ವ್ಯಕ್ತಪಡಿಸಬಹದು. ಕವಿತೆ, ಕತೆ, ಕಾದಂಬರಿ, ಲೇಖನ ಇತ್ಯಾದಿ, ಆದರೆ ಕಾವ್ಯಕ್ಕೆ ಪ್ರತ್ಯೇಕತೆ ಇದೆ, ಭಾವನೆಗಳನ್ನು ಮನದಾಳಕ್ಕೆ ಇಳಿಸಿ ಚಿಂತಿಸುವಂತೆ ಮಾಡುವ ಶಕ್ತಿ ಕಾವ್ಯಕ್ಕೆ ಇದೆ. ಅಂತಹ ಶಕ್ತಿ ಕಾವ್ಯಕ್ಕೆ ತರುವುದು ಕವಿ ಅಥವಾ ಕವಿಯತ್ರಿಯ ಶಕ್ತಿ ಕೂಡ. ಕಾವ್ಯ ಬರೀ ಶಬ್ದಾಡಂಬರವಾಗದೆ, ಹಿಂದೆ ಯಾರೋ ಆಡಿದ ಮಾತಿನ ಪುನರಾವರ್ತನೆ ಆಗದೆ, ಕ್ಲೀಷೆಗಳಿಂದ ತುಂಬದೇ ಮನತುಂಬಬೇಕು.
ಬರಹಗಾರರಿಗೆ ಸಾಮಾಜಿಕ ಬಾಧ್ಯತೆ ಇರಬೇಕು. ಬರಹ ಯಾವರೂಪದಲ್ಲಾದರೂ ಓದುಗರನ್ನು ಚಿಂತಿಸುವಂತೆ ಮಾಡಬೇಕು. ಬರಹ ಕಾವ್ಯ ಎದೆಯಾಳದಿಂದ ಉಕ್ಕಬೇಕು. ಜೀವನ, ದೈವ ಭಕ್ತಿ, ದೇಶಭಕ್ತಿ, ಪ್ರೀತಿ-ಪೇಮದ ಕವನಗಳು ಬಂದಿವೆ, ಬರುತ್ತಿವೆ, ಮುಂದೆ ಬರುತ್ತವೆ, ಆದರೆ ಪ್ರತಿಸಲ ಬರೆದಾಗಲೂ ಹೊಸತೆಂಬಂತೆ ಬರೆಯಬೇಕು, ಓದುಗನಿಗೆ ಹೊಸ ಅನುಭವ ನೀಡಬೇಕು. ಕಾವ್ಯ ಭಾವವುಕ್ಕಿ ಮನದಲಿ ಉಳಿಯಲಾಗದೆ ಹೊರಹೊಮ್ಮಬೇಕು. ಕಾವ್ಯ ಪ್ರಸವ ವೇದನೆಯ ನಂತರ ಹುಟ್ಟುವ ಮಗುವಾಗಬೇಕು. ಪ್ರೀತಿಯೊಂದು ಮಗುವು ಹೊಸತು, ಅನನ್ಯ ಮತ್ತು ವಿಭಿನ್ನ. ಬರಹ ಗಂಭೀರವಾಗಿರಬೇಕು, ಕಾಲಹರಣಕೆ ಕಾವ್ಯ ಬರೆಯಬಾರದು.
ಕನ್ನಡ ರಾಜ್ಯೋತ್ಸವ ಏಕೆ ಮಾಡಬೇಕು, ಇಂಗ್ಲಿಷಿನ ಪ್ರಭಾವ ಮತ್ತು ಮೋಹದಿಂದ, ,ಹಿಂದಿಯ ಹೇರಿಕೆಯಿಂದ ಕನ್ನಡದ ಉಸಿರುಕಟ್ಟುತ್ತಿದೆ. ಕನ್ನಡದ ಉಸಿರಾಟ ಸರಾಗ ಮಾಡಲು ಕನ್ನಡ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಹಮ್ಮಿಕೊಳ್ಳಬೇಕು. ಕನ್ನಡ ಜಾತ್ರೆ ನಡೆಯನೇಕು, ಅಲ್ಲಿ ಜನರ ಸೇರಿಸಬೇಕು, ಮಕ್ಕಳನ್ನು ಕರೆದೊಯ್ಯಬೇಕು. ಕನ್ನಡ ಸಾಹಿತ್ಯದ ಬಗ್ಗೆ ಮಾತನಾಡಬೇಕು. ಕನ್ನಡದ ಶಕ್ತಿ, ಸೌಂದರ್ಯ ಮಕ್ಕಳಿಗೆ ತಿಳಿಸಬೇಕು. ಕರ್ನಾಟಕದ ನೆಲ, ಜಲ, ಭಾಷೆಯೆಂದರೆ ಒಂದು ತಿಂಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಿ ಮರೆಯುವುದಲ್ಲ, ವರ್ಷವಿಡೀ ಸರ್ಕಾರದ ಕನ್ನಡ ಜಾತ್ರೆಗಳನ್ನು ಮಾಡಬೇಕು. ಜನರಿಗೆ ಕನ್ನಡ ಪುಸ್ತಕ ಕೊಂಡು ಓದುವ ಅಭ್ಯಾಸ ಬೆಳೆಸಬೇಕು. ಸಿನಮಾ ನೋಡುವ ಸಮಯದ ಹತ್ತು ಪ್ರತಿಶತ ಸಮಯ ವ್ಯಯಸಿದರೂ ಸಾಕು, ಅನೇಕ ಪುಸ್ತಕಗಳನ್ನು ಓದಬಹುದು. ಕನ್ನಡ ಸಾಹಿತ್ಯಕ್ಕೆ ಹಣದ ಮೌಲ್ಯ ಇಲ್ಲವಾದ್ದರಿಂದಲೇ ಇಂತಹ ಸಮಸ್ಸೆಯೇನೋ, ಎಲ್ಲವನ್ನೂ ಹಣದ ರೂಪದಲ್ಲಿ ನೋಡುವ ಇಂದಿನ ದಿನಗಳ್ಲಲಿ ಸಾಹಿತಿಗಳಿಗೆ ಸಿನಮಾ ನಾಯಕರಿಗೆ ಸಿಗುವ ಹಣ ಸಿಗುವುದಾದರೆ, ಕವಿ, ಕಥೆಗಾರ, ಕಾದಂಬರಿಕಾರ ಕೂಡ ಸೆಲೆಬ್ರಿಟಿ ಆಗಬಹದು, ಸ್ಟಾರ್ ಆಗಬಹುದೇನೋ. ಶಿವರಾಮ ಕಾರಂತರ ಬಗ್ಗೆ ಜಯಂತ ಕಾಯ್ಕಿಣಿಯರು ಗೂಗಲ್ ಮೀಟ್ನಲ್ಲಿ ಮಾತನಾಡಿದರು,ಮನೆಯಲ್ಲೇ ಕುಳಿತು ಕೇಳಬಹುದಾದ ಆ ಕಾರ್ಯಕ್ರಮದಲ್ಲಿ ಮೊದಲಿಗೆ ಇಪ್ಪತ್ತು ಜನವಿದ್ದು, ಕೊನೆಗೆ ಹದಿನಾಲ್ಕು ಜನಗಳಾದರು. ಇದು ಸಾಹಿತಿಗಳೇ ಸಾಹಿತ್ಯಾಕ್ಕೆ ಕೊಡುವ ಪ್ರೀತಿ, ಇನ್ನು ಬೇರೆ ಜನಕ್ಕೆ ಏನು ಹೇಳುವುದು.
ಕನ್ನಡ ಬೆಳೆದಿದೆ, ಉಳಿಯುತ್ತದೆಯೇ, ಕಾಲವೇ ಹೇಳಬೇಕು. ಕನ್ನಡ ಮಾತನಾಡುವದು, ಕನ್ನಡ ಓದುವುದು, ಕನ್ನಡವನ್ನು ಪ್ರೀತಿಸುವುದು, ಗೌರವಿಸುವುದು, ಇದೇ ನಿಜವಾದ ಕನ್ನಡ ರಾಜ್ಯೋತ್ಸವ ಅಲ್ಲವೇ?

-ಎಂ.ವಿ.ಶಶಿಭೂಷಣ ರಾಜು
ಪೆನ್ಸಿಲ್ವೇನಿಯ, ಅಮೇರಿಕ
—–
The post ಕರ್ನಾಟಕ ರಾಜ್ಯೋತ್ಸವ ಏಕೆ ಮತ್ತು ಹೇಗೆ? -ಎಂ.ವಿ.ಶಶಿಭೂಷಣ ರಾಜು, ಪೆನ್ಸಿಲ್ವೇನಿಯ, ಅಮೇರಿಕ appeared first on Karnataka Kahale.
]]>