The post ಬೆಂಗಳೂರು ನಗರ ಘಟಕ ಚುನಾವಣೆ 358 ಪತ್ರಕರ್ತರಿಂದ ಮತ ಚಲಾವಣೆ appeared first on Karnataka Kahale.
]]>
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಬೆಂಗಳೂರು ನಗರ ಜಿಲ್ಲಾ ಘಟಕದ ಆಡಳಿತ ಮಂಡಳಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ 358 ಪತ್ರಕರ್ತ ಮತದಾರರು ಮತದಾನ ಮಾಡಿದರು.
ನ್ಯಾಯಲಯದ ಆದೇಶದ ಮೇರೆಗೆ ನಡೆದ ಚುನಾವಣೆಯಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3 ಗಂಟೆ ತನಕ ಕಂದಾಯ ಭವನದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಮತದಾನ ನಡೆಯಿತು. ಪತ್ರಕರ್ತ ಸದಸ್ಯರು ಉತ್ಸಾಹದಿಂದ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ರಾಜ್ಯ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ವಿಜಯವಾಣಿ ಸಂಪಾದಕರಾದ ಕೆ.ಎನ್.ಚನ್ನೇಗೌಡ, ಡೆಪ್ಯೂಟಿ ಎಡಿಟರ್ ರಾಘವೇಂದ್ರ ಗಣಪತಿ, ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ, ಸುದ್ದಿ ಸಂಪಾದಕ ಚೀ.ಜ.ರಾಜೀವ್, ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್, ಕೆಯುಡಬ್ಲೂೃಜೆ ಮಾಜಿ ಅಧ್ಯಕ್ಷರುಗಳಾದ ಬಿ.ವಿ.ಮಲ್ಲಿಕಾರ್ಜುನಯ್ಯ, ವಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಮಹಿಳಾ ಪತ್ರಕರ್ತೆಯರ ಸಂಘದ ಮಾಜಿ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಸಂಯುಕ್ತ ಕರ್ನಾಟಕ ಸುದ್ದಿ ಸಂಪಾದಕ ಕೆ.ವಿ.ಪರಮೇಶ್, ಟಿವಿ5 ಸಂಸ್ಥೆ ದಶರಥ್ ಅವರು ಸೇರಿದಂತೆ ಹಲವರು ಮತದಾನ ಮಾಡಿದರು.
ಅವಳಿ ಜವಳಿ ಮಕ್ಕಳ ತಾಯಿ ಅರುಣ ಅವರು ಎಳೆಮಕ್ಕಳ ಜೊತೆಗೆ ಬಂದು ಮತದಾನ ಮಾಡಿದರು.
ಕೆಯುಡಬ್ಲ್ಯೂಜೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾದ ಎನ್.ರವಿಕುಮಾರ್ ಅವರ ಉಸ್ತುವಾರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಂಜುಂಡಪ್ಪ.ವಿ ಅವರು ಮತದಾನ ಪ್ರಕ್ರಿಯೆ ನಡೆಸಿದರು. ಚುನಾವಣೆ ಶಾಂತಿಯುತವಾಗಿ ನಡೆಯಿತು
The post ಬೆಂಗಳೂರು ನಗರ ಘಟಕ ಚುನಾವಣೆ 358 ಪತ್ರಕರ್ತರಿಂದ ಮತ ಚಲಾವಣೆ appeared first on Karnataka Kahale.
]]>The post ಸಿದ್ಧರಾಮನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ appeared first on Karnataka Kahale.
]]>
ಮೈಸೂರು, ಏ.26: ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸಿದರು. ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಸಿದ್ದರಾಮನಹುಂಡಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

The post ಸಿದ್ಧರಾಮನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ appeared first on Karnataka Kahale.
]]>The post ಬಳ್ಳಾರಿ: ಕಾಂಗ್ರೆಸ್ ಪಕ್ಷದಿಂದ ಈ.ತುಕಾರಾಂ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಸಹಿತ ಮೊದಲ ದಿನ 4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ appeared first on Karnataka Kahale.
]]>
ಮೊದಲನೇ ದಿನವಾದ ಶುಕ್ರವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಂ ಅವರು 3 ನಾಮಪತ್ರ, ಬಿಜೆಪಿ ಅಭ್ಯರ್ಥಿ ಶ್ರೀರಾಮಲು ಅವರು 3 ನಾಮಪತ್ರ ಮತ್ತು ಪಕ್ಷೇತರ ಅಭ್ಯರ್ಥಿ ಭಾಗ್ಯಲಕ್ಷ್ಮಿ ಅವರು 2 ನಾಮಪತ್ರ,
ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್ ಅವರು 2 ನಾಮಪತ್ರ,
ಸೇರಿ ಒಟ್ಟು ನಾಲ್ವರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆಯಾಗಿವೆ.
ನಾಮಪತ್ರ ಸಲ್ಲಿಸಲು ಏ. 19 ಕೊನೆ ದಿನವಾಗಿದ್ದು, ಏ. 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 22 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
——–
The post ಬಳ್ಳಾರಿ: ಕಾಂಗ್ರೆಸ್ ಪಕ್ಷದಿಂದ ಈ.ತುಕಾರಾಂ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಸಹಿತ ಮೊದಲ ದಿನ 4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ appeared first on Karnataka Kahale.
]]>