The post ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ appeared first on Karnataka Kahale.
]]>
ನವದೆಹಲಿ, ಡಿ.26: ದೇಶದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ನಾಳೆ ಶುಕ್ರವಾರ ರಾಜ್ಯಾದ್ಯಂತ ಸಾರ್ವಜನಿಕ ಸರಕಾರಿಕಚೇರಿಗಳು, ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಒಂದು ವಾರಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.
ಗಣ್ಯರ ಸಂತಾಪ: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಮಾಜಕಲ್ಯಾಣ ಸಚಿವ ಡಾ. ಎಚ್. ಸಿ ಮಹೇದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾನೂನು ಸಚಿವ ಎಚ್.ಕೆ ಪಾಟೀಲ್ ಮತ್ತಿತರ ಗಣ್ಯರು ಕಂಬನಿ ಮಿಡಿದಿದ್ದಾರೆ.
The post ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ appeared first on Karnataka Kahale.
]]>The post ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ appeared first on Karnataka Kahale.
]]>
ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು. ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.
The post ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ appeared first on Karnataka Kahale.
]]>The post ನವದೆಹಲಿ: ಕರ್ನಾಟಕ ಭವನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ appeared first on Karnataka Kahale.
]]>
ನವದೆಹಲಿ ಆ. 15: ಇಲ್ಲಿನ ಸರ್ದಾರ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನ-2ರ ಶರಾವತಿಯಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.
ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತೆ ಶ್ರೀಮತಿ ಎಂ.ಇಮ್ ಕೊಂಗ್ಲ್ ಜಮೀರ್ ಅವರು ರಾಷ್ಡ್ರಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಭವನದ ಅಧಿಕಾರಿ :ಸಿಬ್ಬಂದಿ ಉಪಸ್ಥಿತರಿದ್ದರು.
The post ನವದೆಹಲಿ: ಕರ್ನಾಟಕ ಭವನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ appeared first on Karnataka Kahale.
]]>The post ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ appeared first on Karnataka Kahale.
]]>
ನವದೆಹಲಿ, ಆ.3: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಅವರಿಗೆ ಗಂಧದ ಅಂಬಾರಿಯನ್ನು ಉಡುಗೊರೆಯಾಗಿ ನೀಡಿದರು.
ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಸೌಹಾರ್ದಯುತ ಭೇಟಿ ಹಾಗೂ ಮಾತುಕತೆ ಸಂದರ್ಭದಲ್ಲಿ ರಾಜ್ಯದ ಅಭಿವೃದ್ದಿ ಯೋಜನೆಗಳು ಹಾಗೂ ಬೃಹತ್ ನೀರಾವರಿ ಯೋಜನೆಗಳಿಗೆ ಕೇಂದ್ರದ ಸಹಕಾರವನ್ನು ಸಿಎಂ ಕೋರಿದ್ದಾರೆ.

ಮೈಸೂರು ದಸರಾದಲ್ಲಿ ಏರ್‌ಶೋ ನಡೆಸಲು ಮನವಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಳಿಕ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿ ಮಾಡಿದರು. ಅ. 15 ರಂದು ಉದ್ಘಾಟನೆ ಆಗಲಿರುವ ಮೈಸೂರು ದಸರಾ ಹಬ್ಬಕ್ಕೆ ಏರ್ ಶೋ ನಡೆಸಲು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಧಿಕೃತವಾದ ಮನವಿ ಪತ್ರವನ್ನೂ ಅವರು ರಾಜನಾಥ್ ಸಿಂಗ್ ಅವರಿಗೆ ನೀಡಿದರು.
ಮೈಸೂರು ದಸರಾ ವಿಶ್ವವಿಖ್ಯಾತವಾಗಿದೆ. ದಸರಾ ಹಬ್ಬದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಏರ್ ಶೋ ನಡೆಸಿದರೆ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಕಣ್ತುಂಬಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಇದ್ದರು.
*****
The post ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ appeared first on Karnataka Kahale.
]]>The post ಸಿಎಮ್‌ಎಸ್ ಜಿಲ್ಲಾ ಪ್ರದಾನಕಾರ್ಯದರ್ಶಿ ಸಿ. ಶಿವಕುಮಾರ್ ಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪ್ರದಾನ appeared first on Karnataka Kahale.
]]>
ಬಳ್ಳಾರಿ: ಸಿಎಂಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೋರಾಟಗಾರ ಸಿ.ಶಿವಕುಮಾರ್ ಅವರಿಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಲಭಿಸಿದೆ.
ನವ ದೆಹಲಿಯ ಪಂಚಶೀಲ ಆಶ್ರಮದಲ್ಲಿ ಇತ್ತೀಚೆಗೆ
ಜರುಗಿದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಎಸ್. ಸುಮನಾಕ್ಷರ್ ಅವರು ಸಿ. ಶಿವಕುಮಾರ್ ಅವರಿಗೆ
ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಯ ಸುಮನಾಕ್ಷರ್, ಕರ್ನಾಟಕ ರಾಜ್ಯ ಬಿಡಿಎಸ್ಎ ಅಧ್ಯಕ್ಷ, ಹಿರಿಯ ಪತ್ರಕರ್ತ ಚೆಲುವರಾಜು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
*****
The post ಸಿಎಮ್‌ಎಸ್ ಜಿಲ್ಲಾ ಪ್ರದಾನಕಾರ್ಯದರ್ಶಿ ಸಿ. ಶಿವಕುಮಾರ್ ಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪ್ರದಾನ appeared first on Karnataka Kahale.
]]>The post ನವ ದೆಹಲಿಯಲ್ಲಿ ಹಿರಿಯ ಕವಯಿತ್ರಿ ಎನ್.ಡಿ ವೆಂಕಮ್ಮ ಅವರಿಗೆ ವಿಶ್ವಗುರು ಬಸವಣ್ಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ appeared first on Karnataka Kahale.
]]>The post ನವ ದೆಹಲಿಯಲ್ಲಿ ಹಿರಿಯ ಕವಯಿತ್ರಿ ಎನ್.ಡಿ ವೆಂಕಮ್ಮ ಅವರಿಗೆ ವಿಶ್ವಗುರು ಬಸವಣ್ಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ appeared first on Karnataka Kahale.
]]>