ನೇಗಿಲಯೋಗಿ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Mon, 09 Feb 2026 14:27:33 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ನೇಗಿಲಯೋಗಿ – Karnataka Kahale https://www.karnatakakahale.com 32 32 ರೈತರ ಹೆಚ್ಚಿನ ಅನುಕೂಲಕ್ಕಾಗಿ ಹಾಲೆಂಡ್ ಕಂಪನಿಯ ವರ್ಕ್ ಮಾಸ್ಟರ್ 105 ಟ್ರ್ಯಾಕ್ಟರ್ ಬಿಡುಗಡೆ https://www.karnatakakahale.com/news/22271 Mon, 09 Feb 2026 14:24:56 +0000 https://www.karnatakakahale.com/?p=22271 ಬಳ್ಳಾರಿ, ಫೆ.9: ಸಿಎನ್‍ಎಚ್ ಕಂಪನಿಯ ಬ್ರ್ಯಾಂಡ್ ಆದ ನ್ಯೂ ಹಾಲೆಂಡ್ ಕಂಪನಿಯು ಕರ್ನಾಟಕದಲ್ಲಿ ತನ್ನ ಹೆಚ್ಚಿನ ಹಾರ್ಸ್ ಪವರ್ ಟ್ರ್ಯಾಕ್ಟರ್ ಸರಣಿಯ ಎಚ್‍ವಿಎಸಿ ಕ್ಯಾಬಿನ್ ಹೊಂದಿರುವ ವರ್ಕ್ ಮಾಸ್ಟರ್ 105 ಟ್ರ್ಯಾಕ್ಟರ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಮಾದರಿಯು ನ್ಯೂ…

The post ರೈತರ ಹೆಚ್ಚಿನ ಅನುಕೂಲಕ್ಕಾಗಿ ಹಾಲೆಂಡ್ ಕಂಪನಿಯ ವರ್ಕ್ ಮಾಸ್ಟರ್ 105 ಟ್ರ್ಯಾಕ್ಟರ್ ಬಿಡುಗಡೆ appeared first on Karnataka Kahale.

]]>
ಬಳ್ಳಾರಿ, ಫೆ.9: ಸಿಎನ್‍ಎಚ್ ಕಂಪನಿಯ ಬ್ರ್ಯಾಂಡ್ ಆದ ನ್ಯೂ ಹಾಲೆಂಡ್ ಕಂಪನಿಯು ಕರ್ನಾಟಕದಲ್ಲಿ ತನ್ನ ಹೆಚ್ಚಿನ ಹಾರ್ಸ್ ಪವರ್ ಟ್ರ್ಯಾಕ್ಟರ್ ಸರಣಿಯ ಎಚ್‍ವಿಎಸಿ ಕ್ಯಾಬಿನ್ ಹೊಂದಿರುವ ವರ್ಕ್ ಮಾಸ್ಟರ್ 105 ಟ್ರ್ಯಾಕ್ಟರ್ ಅನ್ನು ಬಿಡುಗಡೆ ಮಾಡಿದೆ.
ಈ ಹೊಸ ಮಾದರಿಯು ನ್ಯೂ ಹಾಲೆಂಡ್‍ನ 106 ಎಚ್ ಪಿ ಟ್ರ್ಯಾಕ್ಟರ್ ಶ್ರೇಣಿಗೆ ಎಲ್ಲಾ ಹವಾಮಾನಗಳಲ್ಲೂ ಚಾಲಕರಿಗೆ ಆರಾಮದಾಯಕ ಅನುಭವ ಮತ್ತು ಸುಧಾರಿತ ಕಾರ್ಯಕ್ಷಮತೆ ಒದಗಿಸುವ ಸಾಮರ್ಥ್ಯವನ್ನು ಪರಿಚಯಿಸಿದೆ.
ಈ ಹೊಸ ಟ್ರ್ಯಾಕ್ಟರ್ ಕಠಿಣ ಕೃಷಿ ಪರಿಸ್ಥಿತಿಗಳಲ್ಲಿ ಅನುಕೂಲತೆ, ಬಾಳಿಕೆ ಮತ್ತು ಉತ್ಪಾದಕತೆ ಒದಗಿಸಲಿದ್ದು, ಈ ವಿಭಾಗದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲಿದೆ.
ಈ ಕುರಿತು ಮಾಹಿತಿ ನೀಡಿದ ಸಿಎನ್ ಎಚ್ ಇಂಡಿಯಾದ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ನಾರೀಂದರ್ ಮಿತ್ತಲ್, ಕರ್ನಾಟಕವು ಕ್ರಿಯಾತ್ಮಕ ಮತ್ತು ವೇಗವಾಗಿ ಬೆಳೆಯುತ್ತಿರುವ ಕೃಷಿ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ವಿವಿಧ ಬೆಳೆಗಳು ಮತ್ತು ಕೃಷಿ ಪದ್ಧತಿಗಳಲ್ಲಿ ಸುಧಾರಿತ ಯಾಂತ್ರೀಕರಣದ ಬಳಕೆ ಹೆಚ್ಚುತ್ತಿದೆ. ಕರ್ನಾಟಕ ದೇಶದ ಬೆಳವಣಿಗೆಯ ಕಾರ್ಯತಂತ್ರದ ಪ್ರಮುಖ ಮಾರುಕಟ್ಟೆಯೂ ಹೌದು. ಎಂದರು.  ಈ ಮಾರುಕಟ್ಟೆಗೆ ಎಚ್‍ವಿಎಸಿ ಕ್ಯಾಬಿನ್ ಹೊಂದಿರುವ ವರ್ಕ್ ಮಾಸ್ಟರ್ 105 ಅನ್ನು ಪರಿಚಯಿಸಲಾಗುತ್ತಿದೆ . ರಾಜ್ಯದಲ್ಲಿ ಹೆಚ್ಚುತ್ತಿರುವ ಉತ್ಪಾದಕತೆ ಮತ್ತು ಚಾಲಕರ ಸೌಕರ್ಯದ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ನ್ಯೂ ಹಾಲೆಂಡ್ ಜಾಗತಿಕವಾಗಿ ಸಾಬೀತಾದ ತಂತ್ರಜ್ಞಾನವನ್ನು ಭಾರತೀಯ ಅಗತ್ಯಗಳಿಗೆ ಅನುಗುಣವಾಗಿ ಒದಗಿಸುತ್ತಿದೆ. ಇದರಿಂದ ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ
ದಕ್ಷತೆಯನ್ನು ಸುಧಾರಿಸಿಕೊಳ್ಳಲು ಮತ್ತು ಹೆಚ್ಚು ಆರಾಮದಾಯಕ ಹಾಗೂ ಸುಸ್ಥಿರವಾಗಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
—–

The post ರೈತರ ಹೆಚ್ಚಿನ ಅನುಕೂಲಕ್ಕಾಗಿ ಹಾಲೆಂಡ್ ಕಂಪನಿಯ ವರ್ಕ್ ಮಾಸ್ಟರ್ 105 ಟ್ರ್ಯಾಕ್ಟರ್ ಬಿಡುಗಡೆ appeared first on Karnataka Kahale.

]]>
ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ: ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ https://www.karnatakakahale.com/news/13285 Tue, 22 Aug 2023 16:38:50 +0000 https://www.karnatakakahale.com/?p=13285   ಬೆಂಗಳೂರು, ಆ. 22: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (ಒನ್ ಟೈಮ್ ಸೆಟ್ಲ್ ಮೆಂಟ್) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌…

The post ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ: ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ appeared first on Karnataka Kahale.

]]>
 

ಬೆಂಗಳೂರು, ಆ. 22: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (ಒನ್ ಟೈಮ್ ಸೆಟ್ಲ್ ಮೆಂಟ್) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.                                          ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರೈತ ಮುಖಂಡರ ನಿಯೋಗದೊಂದಿಗೆ ಈ ಸಮಸ್ಯೆ ಕುರಿತು ಚರ್ಚೆ ನಡೆಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ ದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ನೋಟೀಸು, ಲೀಗಲ್‌ ನೋಟೀಸುಗಳನ್ನು ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ. ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಪ್ರತಿಭಟಿಸಿ, 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಓ.ಟಿ.ಎಸ್. ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಹಲವು ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಈ ಅನುಕೂಲ ಕಲ್ಪಿಸಿವೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್‌ ಅಧಿಕಾರಿಗಳು, ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕಿನಲ್ಲಿ 6500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಬ್ಯಾಂಕಿನ ಅಧ್ಯಕ್ಷರು ಗೈರು ಹಾಜರಾದ ಕುರಿತು ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಕುರಿತು ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕರುಗಳ ಸಭೆ ನಡೆಸಿದ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ತಜ್ಞ ಡಾ. ಪ್ರಕಾಶ್‌ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಭಾಗವಹಿಸಿದ್ದರು.

The post ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ: ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ appeared first on Karnataka Kahale.

]]>