ಬೆಂಗಳೂರು, ಜೂ.20: ರಾಜ್ಯದ ನೂತನ ಗೃಹ ಸಚಿವರೂ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಮಂಗಳವಾರ ಸಂಘಪಾಲ ಬಂತೆಜಿ ಅವರು ಭೇಟಿ ಮಾಡಿ ಆಶೀರ್ವದಿಸಿದರು. ನಗರದ ನಿವಾಸದಲ್ಲಿ ಪೂಜ್ಯ ಸಂಘಪಾಲ ಬಂತೆಜಿ ಅವರು ಭೇಟಿಮಾಡಿದರು. ಈ ಸಂದರ್ಭದಲ್ಲಿ ಉಪಾಸಕರಾದ…
Category: ಬೆಂಗಳೂರು
6 ಜನರ ಪ್ರಾಣ ಉಳಿಸಿದ ಪಬ್ಲಿಕ್ ಟಿವಿಯ ವಿಜಯ್ ಮತ್ತು ನಾಗೇಶ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ
ಬೆಂಗಳೂರು, ಮೇ 24:ನಗರದ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿಕೊಂಡಿದ್ದ ಆರು ಜನರನ್ನು ಮಳೆಯ ನಡುವೆಯೂ ಪಾರು ಮಾಡಲು ಅವಿರತವಾಗಿ ಶ್ರಮಿಸಿದ್ದ ಪಬ್ಲಿಕ್ ಟಿವಿಯ ವಿಜಯಕುಮಾರ್ ಮತ್ತು ನಾಗೇಶ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸನ್ಮಾನಿಸಿ ಗೌರವಿಸಿತು.…
ನೂತನ ವಿಧಾನಸಭಾಧ್ಯಕ್ಷ (ಸ್ಪೀಕರ್)ರಾಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ
ಬೆಂಗಳೂರು, ಮೇ 24: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಮಂಗಳೂರು ಶಾಸಕ ಯು.ಟಿ ಖಾದರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿನ್ನೆ ನಾಮಪತ್ರ ಸಲ್ಲಿಸಿದ್ದ ಯು.ಟಿ ಖಾದರ್ ಅವರ ಹೆಸರನ್ನು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಉಪಮುಖ್ಯಮಂತ್ರಿ ಡಿ.ಕೆ…
ಶಾಂತಿ ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳೇ ಹೊಣೆ -ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು, ಮೇ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನ…
ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಅಧಿಕಾರಿಗಳ ನೇಮಕ: ಸಿಎಂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ್
ಬೆಂಗಳೂರು, ಮೇ ೨೨ : ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಸಿದ್ದರಾಮಯ್ಯ ಅವರು ತಮ್ಮ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಮನ್ವಕಾರಿಯಾಗಿದ್ದ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ್ ಅವರನ್ನು…
ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ ನೇಮಕ
ಬೆಂಗಳೂರು, ಮೇ 22: ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಹಿರಿಯ ಶ್ರೇಣಿ ಕೆ ಎ ಎಸ್ ಅಧಿಕಾರಿ ಡಾ. ವೆಂಕಟೇಶಯ್ಯ(ಡಾ.ನೆಲ್ಲುಕುಂಟೆ ವೆಂಕಟೇಶ್), ಅವರು ನೇಮಕಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ನೆಲ್ಲುಕುಂಟೆ ಗ್ರಾಮದ ಡಾ. ವೆಂಕಟೇಶಯ್ಯ ಅವರು ಸೂಕ್ಷ್ಮ ಸಂವೇದನೆಯ ಅಧಿಕಾರಿ…
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ 7: ಎಸ್ ಎಸ್ ಎಲ್‌ಸಿ ಫಲಿತಾಂಶ ನಾಳೆ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ಮಂಡಳಿ ತಿಳಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ನಾಳೆ (ಮೇ8) ಮುಂಜಾನೆ 11…
ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಳ್ಳಾರಿ ನೂತನ ಮೇಯರ್ ಡಿ. ತ್ರಿವೇಣಿ
ಬಳ್ಳಾರಿ/ಬೆಂಗಳೂರು, ಏ.7: ಬಳ್ಳಾರಿ ಮಹಾನಗರ ಪಾಲಿಕೆ ನೂತನ ಮೇಯರ್ ಡಿ. ತ್ರಿವೇಣಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ, ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮೇಯರ್ ಆಗಿ ಆಯ್ಕೆಯಾದ ಬಳಿಕ ತಮ್ಮ ಪಕ್ಷದ…
‘ಮಾಳವ ದೊರೆ’ಗೆ ಶುಭ ಕೋರಿದ ಹಂಪಾಪಟ್ಟಣ ‘ಮನಂ ಹುಡುಗ್ರು’
ಬೆಂಗಳೂರು/ಹಗರಿಬೊಮ್ಮನಹಳ್ಳಿ, ಮಾ.31: ಸಾಹಿತಿ, ಸಂಶೋಧಕರೂ ಆಗಿರುವ ಎಡಿಜಿಪಿ ಎಂ. ನಂಜುಂಡಸ್ವಾಮಿ(ಮನಂ) ಅವರ 53ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕಿನ ಹಂಪಾಪಟ್ಟಣ ಗ್ರಾಮದ ಯೋಗೀಶ್ ಮನಂ ನೇತೃತ್ವದ ಯುವಕರ ತಂಡ ಬೆಂಗಳೂರಿಗೆ ಹೋಗಿ ಶುಭ ಕೋರಿದೆ. ಮಾ.28ರಂದು ಬೆಂಗಳೂರಿನಲ್ಲಿ ಕೇಕ್ ಕತ್ತರಿಸಿ, ಮನಂ ಅವರನ್ನು…
ಕರ್ನಾಟಕ ಜಾನಪದ ಪರಿಷತ್ತು ‘ಲೋಕ ಸರಸ್ವತಿ’ ಗ್ರಂಥ ಪ್ರಶಸ್ತಿಗಾಗಿ- ಪುಸ್ತಕ ಆಹ್ವಾನ
ಬಳ್ಳಾರಿ, ಫೆ.1: ಕರ್ನಾಟಕ ಜಾನಪದ ಪರಿಷತ್ತು, “ಲೋಕ ಸರಸ್ವತಿ ಗ್ರಂಥ ಪ್ರಶಸ್ತಿ”ಗಾಗಿ ೨೦೨೨ನೇ ಸಾಲಿನಲ್ಲಿ ಪ್ರಕಟವಾದ ಜನಪದ ಗೀತೆ/ಕಥೆ/ಗಾದೆ/ಒಗಟು ಇತ್ಯಾದಿ ಜನಪದ ಪ್ರಕಾರಗಳ ಸಂಗ್ರಹ ಕೃತಿಗಳನ್ನು ಆಹ್ವಾನಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕರ್ನಾಟಕ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷ ಪ್ರೊ. ಹಿ.ಶಿ.…