Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-includes/feed-rss2.php on line 8
ವಿದ್ಯಾರ್ಥಿ ಕಹಳೆ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Fri, 26 Jan 2024 11:10:12 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ವಿದ್ಯಾರ್ಥಿ ಕಹಳೆ – Karnataka Kahale https://www.karnatakakahale.com 32 32 ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ -ಪ್ರಾಂಶುಪಾಲ ಡಾ. ಹೆಚ್.ಕೆ ಮಂಜುನಾಥ್ ರೆಡ್ಡಿ https://www.karnatakakahale.com/news/15292 Fri, 26 Jan 2024 11:09:07 +0000 https://www.karnatakakahale.com/?p=15292 ಬಳ್ಳಾರಿ, ಜ.26: ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಟ ಸಂವಿಧಾನವಾಗಿದೆ ಎಂದು ಎಸ್.ಎಸ್.ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಕೆ. ಮಂಜುನಾಥ್ ಅವರು ಹೇಳಿದರು. ನಗರದ ಎಸ್.ಎಸ್.ಎ(ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್) ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ…

The post ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ -ಪ್ರಾಂಶುಪಾಲ ಡಾ. ಹೆಚ್.ಕೆ ಮಂಜುನಾಥ್ ರೆಡ್ಡಿ appeared first on Karnataka Kahale.

]]>

ಬಳ್ಳಾರಿ, ಜ.26: ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಟ ಸಂವಿಧಾನವಾಗಿದೆ ಎಂದು ಎಸ್.ಎಸ್.ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಕೆ. ಮಂಜುನಾಥ್ ಅವರು ಹೇಳಿದರು.
ನಗರದ ಎಸ್.ಎಸ್.ಎ(ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್) ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ
75ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂವಿಧಾನ ರಚನೆಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ,ಡಾ.‌ಬಿ. ಆರ್. ಅಂಬೇಡ್ಕರ್ ಅವರ ಪರಿಶ್ರಮ, ಕೊಡುಗೆ ಅನನ್ಯ ಎಂದು ಕೊಂಡಾಡಿದರು.
ಇತಿಹಾಸ ವಿಭಾಗದ ಸಹ ಪ್ರಾಧ್ಯಪಕ ಪ್ರೊ. ರಾಮಾಂಜನೇಯ ಅವರು ಮಾತನಾಡಿ ಡಾ. ಬಿ ಆರ್ ಅಂಬೇಡ್ಕರ್ ರಚನೆಯ ಸಂವಿಧಾನ ದೇಶದ ಎಲ್ಲಾ ಪ್ರಜೆಗಳಿಗೆ ನ್ಯಾಯ, ಸಮಾನತೆ ಕಲ್ಪಿಸಿದೆ ಎಂದರು.
ಅತ್ಯಂತ ಸ್ವಾಭಿಮಾನಿಗಳಾಗಿದ್ದ ವಿಶ್ವಜ್ಞಾನಿ ಡಾ. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿ ಕೊಳ್ಳಬೇಕು ಎಂದು ತಿಳಿಸಿದರು.
ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ
ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಎನ್.ಸಿ.ಸಿ, ಎನ್.ಎಸ್.ಎಸ್, ರೋವರ್‌ ಮತ್ತು ರೇಂಜರ್‌, ರೆಡ್ ಕ್ರಾಸ್, ನಾಟಕ ವಿಭಾಗ, ಸಾಂಸ್ಕೃತಿಕ ಸಮಿತಿಯ ವಿದ್ಯಾರ್ಥಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಭೋದಕೇತರ ಸಿಬ್ಬಂದಿಗಳು ಇದ್ದರು.

(ವರದಿ :ಮಹೇಶ ಡಿ ಎನ್, 5ನೇ ಸೆಮಿಸ್ಟರ್, ಪತ್ರಿಕೋದ್ಯಮ ವಿಭಾಗ, ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮದರ್ಜೆ ಕಾಲೇಜು (ಸ್ವಾಯುತ), ಬಳ್ಳಾರಿ
—–

The post ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ -ಪ್ರಾಂಶುಪಾಲ ಡಾ. ಹೆಚ್.ಕೆ ಮಂಜುನಾಥ್ ರೆಡ್ಡಿ appeared first on Karnataka Kahale.

]]>
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ https://www.karnatakakahale.com/news/14864 Fri, 15 Dec 2023 11:33:05 +0000 https://www.karnatakakahale.com/?p=14864 ಬಳ್ಳಾರಿ, ಡಿ.15: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹಾರಕ್ಕೆ ಆಗ್ರಹಿಸಿ ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ  ಗುರುವಾರ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ವಿದ್ಯಾರ್ಥಿಗಳು…

The post ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ appeared first on Karnataka Kahale.

]]>
ಬಳ್ಳಾರಿ, ಡಿ.15: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹಾರಕ್ಕೆ ಆಗ್ರಹಿಸಿ
ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ  ಗುರುವಾರ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.


ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬಿ.ಜೆ ಅವರು ಮಾತನಾಡಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಮೂರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ ಎಂದರು.
ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕೂಡಲೇ  ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷ ರವಿಕಿರಣ್.ಜೆ.ಪಿ, ಉಪಾಧ್ಯಕ್ಷರು ಕೆ. ಈರಣ್ಣ, ಖಜಾಂಚಿ ಎಂ.ಶಾಂತಿ, ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರು ನಿಹಾರಿಕ, ಪ್ರಮೋದ್ ಮತ್ತು ಸದಸ್ಯರು ಸತೀಶ್, ರಾಮಾಂಜಿನಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
—–

The post ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ appeared first on Karnataka Kahale.

]]>
ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಹತ್ತಿರ ಬೀದಿ ದೀಪಗಳ ಬೆಳಕಿಲ್ಲ! -ಸುನೀಲ್ ಕುಮಾರ್, ಪತ್ರಿಕೋದ್ಯಮ‌ ವಿದ್ಯಾರ್ಥಿ, ಬಳ್ಳಾರಿ https://www.karnatakakahale.com/news/14281 Thu, 02 Nov 2023 11:17:55 +0000 https://www.karnatakakahale.com/?p=14281 ಬಳ್ಳಾರಿ: ನಗರದ  ಜಿಲ್ಲಾ ಕ್ರೀಡಾಂಗಣದ ಸಮೀಪ  ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಇರುವುದು ಸರಿಯಷ್ಟೇ. ಪುನೀತ್ ರಾಜ್ ಕುಮಾರ್ ಪುತ್ಥಳಿ ವೀಕ್ಷಿಸಲು ಪ್ರತಿದಿನವೂ ಸಾವಿರಾರು ಜನರು ಆಗಮಿಸುವರು. ಈ ಪ್ರೇಕ್ಷಣೀಯ ಸ್ಥಳದಲ್ಲಿ ಬೀದಿ ದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ.  ಪ್ರತಿದಿನ ಸಂಜೆ…

The post ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಹತ್ತಿರ ಬೀದಿ ದೀಪಗಳ ಬೆಳಕಿಲ್ಲ! -ಸುನೀಲ್ ಕುಮಾರ್, ಪತ್ರಿಕೋದ್ಯಮ‌ ವಿದ್ಯಾರ್ಥಿ, ಬಳ್ಳಾರಿ appeared first on Karnataka Kahale.

]]>

ಬಳ್ಳಾರಿ: ನಗರದ  ಜಿಲ್ಲಾ ಕ್ರೀಡಾಂಗಣದ ಸಮೀಪ  ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಇರುವುದು ಸರಿಯಷ್ಟೇ. ಪುನೀತ್ ರಾಜ್ ಕುಮಾರ್ ಪುತ್ಥಳಿ ವೀಕ್ಷಿಸಲು ಪ್ರತಿದಿನವೂ ಸಾವಿರಾರು ಜನರು ಆಗಮಿಸುವರು. ಈ ಪ್ರೇಕ್ಷಣೀಯ ಸ್ಥಳದಲ್ಲಿ ಬೀದಿ ದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ.  ಪ್ರತಿದಿನ ಸಂಜೆ ನಗರದ ನಾಗರಿಕರು ಇಲ್ಲಿಗೆ ವಾಕಿಂಗ್, ಗಾಳಿಸೇವನೆಗೆ  ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ,  ಬೀದಿ ದೀಪಗಳು ಕಾರ್ಯನಿರ್ವಹಿಸದೇ ಇರುವುದರಿಂದ   ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದೇ  ಜ. 21ರಂದು  ಅಂದಿನ ಸಚಿವರಾದ ಬಿ. ಶ್ರೀರಾಮುಲು, ಆರ್ ಅಶೋಕ್ ಹಾಗೂ ನಗರದ ಮೇಯರ್ ಎಂ. ರಾಜೇಶ್ವರಿ ಅವರು  ಡಾ. ರಾಜಕುಮಾರ್ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ಪುನೀತ್ ಅವರ ಪುತ್ಥಳಿ ಯನ್ನು ಅದ್ದೂರಿಯಾಗಿ ಉದ್ಘಾಟಿಸಿದ್ದರು., ಕರ್ನಾಟಕದಲ್ಲೇ ಅತಿ ಎತ್ತರದ ಡಾ. ಪುನೀತ್ ರಾಜಕುಮಾರ್ ಅವರ ಪುತ್ಥಳಿ ಎಂಬ  ಖ್ಯಾತಿ ಪಡೆದು ನಗರದ ಪ್ರೇಕ್ಷಣಿಯವಾದ ಈ  ಸ್ಥಳದಲ್ಲಿ ಸಂಜೆಯಾಗುತ್ತಲೇ ಕತ್ತಲು ಕವಿಯುವುದು ನೋವಿನ ವಿಚಾರ . ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸಬೇಕು.

-ಸಿ. ಸುನಿಲ್ ಕುಮಾರ್
ಪ್ರಥಮ ವರ್ಷ ಪತ್ರಿಕೋದ್ಯಮ ವಿದ್ಯಾರ್ಥಿ
ಶ್ರೀಮತಿ ಸರಳಾದೇವಿ ಸತೀಶ್ಚಂದ್ರಚ ಅಗರ್ ವಾಲ್ ಸರ್ಕಾರಿ ಪ್ರಥಮದರ್ಜೆ ಕಾಲೇಜು ( ಸ್ವಾಯತ್ತ ) ಬಳ್ಳಾರಿ.
—–

The post ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಹತ್ತಿರ ಬೀದಿ ದೀಪಗಳ ಬೆಳಕಿಲ್ಲ! -ಸುನೀಲ್ ಕುಮಾರ್, ಪತ್ರಿಕೋದ್ಯಮ‌ ವಿದ್ಯಾರ್ಥಿ, ಬಳ್ಳಾರಿ appeared first on Karnataka Kahale.

]]>