The post ಬಸವಣ್ಣನ ನಾಡು ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ appeared first on Karnataka Kahale.
]]>ಬೀದರ್ ಪತ್ರಕರ್ತರ ಭವನದಲ್ಲಿ ರಾಜ್ಯ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಜಿಲ್ಲಾ ಕಾರ್ಯನಿರತ ಸಂಘದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯ ಸಮ್ಮೇಳನದ ಜವಾಬ್ದಾರಿ ಹೊತ್ತ ಬೀದರ್ ಜಿಲ್ಲಾ ಸಂಘಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಅಭಿನಂದನೆಗಳನ್ನು ಸಲ್ಲಿಸಿದೆ.
ಫೆಬ್ರವರಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಸಮ್ಮೇಳನ ಆಯೋಜನೆ ಮಾಡಲಾಗುವುದು ಎಂದು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ ಅವರು ತಿಳಿಸಿದ್ದಾರೆ.
The post ಬಸವಣ್ಣನ ನಾಡು ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ appeared first on Karnataka Kahale.
]]>The post ಬಳ್ಳಾರಿಯಲ್ಲಿ ಡಿಸೆಂಬರ್ ನಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ: ಮೊದಲ ಡಿಸಿ ಥಾಮಸ್ ಮನ್ರೋ ಕುಟುಂಬಸ್ಥರಿಗೆ ಆಹ್ವಾನ -ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ appeared first on Karnataka Kahale.
]]>
ಬಳ್ಳಾರಿ,ಏ.15: ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಮತ್ತಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರು ಹೇಳಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಕುರಿತು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡಿಗರಿಗೆ ಮತ್ತು ಸಾಹಿತ್ಯ ಪ್ರೇಮಿಗಳಿಗೆ ಹಬ್ಬ. ಕನ್ನಡದ ಇತಿಹಾಸವನ್ನು ಪ್ರಚುರಪಡಿಸುವುದು ಮತ್ತು ಭಾಷೆಯನ್ನು ಬೆಳೆಸುವುದು ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ. ಮುಖ್ಯವಾಗಿ ಸಮ್ಮೇಳನಗಳಲ್ಲಿ ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ, ಭಾಷೆ ಬೆಳವಣಿಗೆ, ಗಡಿ ಭಾಗದ ಶಾಲಾ ವಿಚಾರಗಳ ಸಂಬಂಧಿಸಿದಂತೆ ಹಲವು ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರದ ಮುಂದಿಡಲಾಗುತ್ತದೆ ಎಂದು ಅವರು ತಿಳಿಸಿದರು.
ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 5 ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಈ ಹಿಂದೆ 1920 ರಲ್ಲಿ ಮೊದಲ ಬಾರಿಗೆ ಅಖಂಡ ಜಿಲ್ಲೆಯ ಹೊಸಪೇಟೆಯಲ್ಲಿ ರೊದ್ದ ಶ್ರೀನಿವಾಸ ರಾವ್ ಅವರ ಅಧ್ಯಕ್ಷತೆಯಲ್ಲಿ 6 ನೇ ಸಮ್ಮೇಳನ ನಡೆಯಿತು. ಎರಡನೇ ಬಾರಿಗೆ ಬಾರಿಗೆ 1926 ರ ಮೇ 22 ರಿಂದ 24 ರ ವರೆಗೆ ಮೂರು ದಿನಗಳ ಕಾಲ 12 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿ ನಗರದಲ್ಲಿ ನಡೆದಿತ್ತು. ಇದರ ಅಧ್ಯಕ್ಷತೆಯನ್ನು ವಚನ ಪಿತಾಮಹ ಫಕೀರಪ್ಪ ಗುರುಬಸಪ್ಪ ಹಳಕಟ್ಡಿ (ಫ.ಗು.ಹಳಕಟ್ಟಿ) ಅವರು ವಹಿಸಿದ್ದರು.
ನಂತರದ 12 ವರ್ಷಗಳ ನಂತರ ಮೂರನೇ ಬಾರಿಗೆ 1938 ರ ಡಿ.29 ರಿಂದ 31 ರ ವರೆಗೆ 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ರಂಗನಾಥ್ ದಿವಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ನಾಲ್ಕನೇ ಬಾರಿಗೆ ಹರಪನಹಳ್ಳಿಯಲ್ಲಿ 1947 ರಲ್ಲಿ ಸಿ.ಕೆ.ವೆಂಕಟರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ 11 ವರ್ಷಗಳ ನಂತರ 1958 ರ ಜ. 18 ರಿಂದ 20 ರ ವರೆಗೆ ವಿನಾಯಕ್ ಕೃಷ್ಣ ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ 5 ನೇ ಬಾರಿಗೆ ನಡೆಯಿತು. ಈಗ 67 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿದೆ. 2025 ರ ಡಿಸೆಂಬರ್ ಮಾಹೆಯಲ್ಲಿ ಆಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಅವರು ತಿಳಿಸಿದರು.
ಇಂದಿನ ಪೀಳಿಗೆಗೆ ಮತ್ತು ಯುವಸಮುದಾಯಕ್ಕೆ ಕನ್ನಡ ಸಾಹಿತ್ಯ ಬಗೆಗಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಬಳ್ಳಾರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು.
ಡಿಸೆಂಬರ್ ತಿಂಗಳಲ್ಲಿ ವಾತಾವರಣ ಮತ್ತು ಹವಮಾನವು ಚೆನ್ನಾಗಿರುವುದರಿಂದ ಆಯೋಜನೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ವಿಶ್ವ-ವಿದ್ಯಾಲಯಗಳ ವಿದ್ಯಾರ್ಥಿಗಳು, ಶಾಲಾ-ಕಾಲೇಜು, ವಸತಿ ನಿಲಯಗಳ ಮಕ್ಕಳು ಸೇರಿದಂತೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡುತ್ತಿರುವ ಪರಿಷತ್ತಿನ ಪದಾಧಿಕಾರಿಗಳು, ವಿದ್ಯಾರ್ಥಿಗಳಿಗೆ ಸಮ್ಮೇಳನ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಸಮ್ಮೇಳನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಬಳ್ಳಾರಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳ್ಳಾರಿ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸರ್ ಥಾಮಸ್ ಮುನ್ರೋ ಅವರ ಕುಟುಂಬಸ್ಥರನ್ನು ವಿಶೇಷ ಆಹ್ವಾನಿತರನ್ನಾಗಿ ಆಹ್ವಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಾ.ಮಹೇಶ್ ಜೋಶಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಮತ್ತು ಅಚ್ಚು-ಕಟ್ಟಾಗಿ ಆಯೋಜಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ ಶೋಭಾರಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಟೇಲ್ ಪಾಂಡು, ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಸೇರಿದಂತೆ ಇತರರು ಇದ್ದರು.
—–
The post ಬಳ್ಳಾರಿಯಲ್ಲಿ ಡಿಸೆಂಬರ್ ನಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ: ಮೊದಲ ಡಿಸಿ ಥಾಮಸ್ ಮನ್ರೋ ಕುಟುಂಬಸ್ಥರಿಗೆ ಆಹ್ವಾನ -ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ appeared first on Karnataka Kahale.
]]>The post ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ, ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ ಸಿದ್ಧರಾಮಯ್ಯ appeared first on Karnataka Kahale.
]]>
ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಹೇಳಿದರು.
ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ತಿಳಿಸಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ: ಇದೀಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದು ಸಲಹೆನೀಡಿದರು. ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು. ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಚರಕೆ ಸದಾ ಇರಲಿ ಎಂದು ಹೇಳಿದರು.
ಕೆಲವೇ ದಿನದಲ್ಲಿ ಬಸ್ ಪಾಸ್: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂಧಿಸಿದ ಸಮ್ಮೇಳನ: ಇದೇ ಸಂದರ್ಭದಲ್ಲಿ ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.
ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು. —–
The post ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ, ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ ಸಿದ್ಧರಾಮಯ್ಯ appeared first on Karnataka Kahale.
]]>The post ಗದಗಿನಲ್ಲಿ ನ.23, 24 ರಂದು ‘ದಲಿತ ಚಳವಳಿಗೆ-50 ರಾಷ್ಟ್ರೀಯ ಸಮಾವೇಶ’ -ಬಸವರಾಜ ಸೂಳಿಬಾವಿ appeared first on Karnataka Kahale.
]]>ದಲಿತ ಚಳವಳಿಯ ಸ್ಥಾಪಕ ಕೃಷ್ಣಪ್ಪ ಅವರು ಗದಗ ನಗರದಲ್ಲಿ ಕೊನೆಯುಸಿರೆಳೆದಿದ್ದ ಜಾಗದಲ್ಲಿಯೇ ಸಮಾವೇಶ ನಡೆಯಲಿದೆ. ಶೋಷಿತರ ಪರವಾಗಿ ಧ್ವನಿ ಎತ್ತುವ ಸಲುವಾಗಿ ಹಾಗೂ ಎಲ್ಲರೂ ಸಮಾನರು ಎಂದು ದಲಿತ ಚಳವಳಿ ನಡೆದಿದ್ದು ಡಾ.ಬಿ.ಆರ್. ಅಂಬೇಡ್ಕರ ಕಾಲದಿಂದಲೂ ಚಳುವಳಿ ನಡೆದಿದೆ. ಆ ಕಾಲದಲ್ಲಿ ಅವರು ಚಳವಳಿಗೆ ದೊಡ್ಡ ಶಕ್ತಿ ತುಂಬಿದ್ದಾರೆ ಎಂದರು. ಭಾರತದಲ್ಲಿ ಹಲವು ಭಾರತಗಳಿವೆ. ಭಾರತದಲ್ಲಿ ಏಕತೆಯ ಭಾವನೆಯ ಭಾರತ ಇಲ್ಲ. ಶ್ರೇಷ್ಠತೆಯ ಭಾರತ ಒಂದು ಕಡೆಯಾದರೆ ಕನಿಷ್ಠತೆಯ ಭಾರತ ಇನ್ನೊಂದು ಕಡೆ ಇದೆ. ಹೀಗಾಗಿ ಭಾರತದಲ್ಲಿ ಸಮಾನತೆ ಬರುತ್ತಿಲ್ಲ. ಇನ್ನೂ ಅಸಮಾನತೆ ಜೀವಂತಿಕೆಯಾಗಿದೆ. ಇದನ್ನು ಹೋಗಲಾಡಿಸಲು ಸರ್ಕಾರದ ಇಚ್ಛಾಶಕ್ತಿ ಬೇಕಾಗಿದೆ. ಸರ್ಕಾರವನ್ನು ಎಚ್ಚರಿಸಲು ಸಹ ಸಮಾವೇಶದಲ್ಲಿ ದೊಡ್ಡಮಟ್ಟದ ಚರ್ಚೆ ನಡೆಸಲಾಗುವುದು ಎಂದು ಹೇಳಿದರು .
ಸ್ವಾತಂತ್ರ್ಯ ಸಿಕ್ಕು 80 ವರ್ಷವಾದರೂ ಏಕತೆಯ ಭಾರತ ಆಗಿಲ್ಲ, ನಮ್ಮ ದೇಶದಲ್ಲಿ ಸಮಾನತೆಯನ್ನು ಹೊಂದದಿರುವುದು ಬೇಸರದ ಸಂಗತಿಯಾಗಿದೆ. ಈಗಲೂ ಶ್ರೇಷ್ಠ ಕನಿಷ್ಟ ಎಂಬ ಮನೋಭಾವ ಇರುವ ದುಸ್ಥಿತಿಯ ಭಾರತ ಇದೆ ಎಂದರು. ದಲಿತ ಚಳವಳಿಗೆ ಐತಿಹಾಸಿಕ ಪರಂಪರೆಯಿದೆ. ದಲಿತರನ್ನು ಒಗ್ಗೂಡಿಸಲು ಹಾಗೂ ಸಮಾನತೆಯನ್ನು ತರಲು ಕಾರ್ಯಕ್ರಮ ನಡೆಯಲಿದೆ. ಬಸವಣ್ಣನ ನಾಡಿನಲ್ಲಿರುವ ನಾವೆಲ್ಲರೂ ಸಮಾನರು ಎಂದು ಹೇಳುವ ಸಂಘಟನೆಗಳು ಸಮಾನತೆಯ ಜೀವನ ನಡೆಸಲಾಗುತ್ತಿದೆಯೇ, ಹೀಗೆ ಹತ್ತು ಹಲವು ವಿಚಾರಗಳನ್ನು ಇಟ್ಟುಕೊಂಡು ರಾಷ್ಟ್ರೀಯ ಸಮಾವೇಶದಲ್ಲಿ ಚರ್ಚಿಸಲಾಗುವದು ಎಂದರು. ಟಿ.ರತ್ನಾಕರ, ಶರೀಫ ಬಿಳಿಯಲೆ,ಅನೀಲ ಹೊಸಮನಿ, ಶ್ರೀಶೈಲ ಅಂಟಿನ, ಸುಖರಾಜ ತಾಳಗೇರಿ, ಸಿದ್ಧಾರ್ಥ ಸಿಂಗೆ ಪತ್ರಿಕಾಗೋಷ್ಠಿಯಲ್ಲಿದ್ದರು.
ಸಭೆ: ನಂತರ ವಿದ್ಯಾಗಿರಿಯಲ್ಲಿ ಇರುವ ನೂತನ ಪ್ರವಾಸಿ ಮಂದಿರದಲ್ಲಿ ವಿವಿಧ ಜಿಲ್ಲೆಗಳಿಂದ ಬಂದಿದ್ದ ಮುಖಂಡರಗಳ ಸಭೆ ಜರುಗಿತು. ಸಮಾವೇಶದ ಸಿದ್ದತೆ ಬಗ್ಗೆ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಕರ್ನಾಟಕದಲ್ಲಿ ಬಾಬಾಸಾಹೇಬರು ಭೇಟಿ ನೀಡಿರುವ ಪ್ರದೇಶಗಳ ವಿವರಗಳ ಸಂಗ್ರಹವನ್ನು ಮಾಡಿ ಅದನ್ನು ಪುಸ್ತಕ ರೂಪದಲ್ಲಿ ತರಲು ತೀರ್ಮಾನಿಸಲಾಯಿತು. ಹಾಗೆಯೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದಲಿತ ಚಳುವಳಿ ನಡೆದು ಬಂದ ದಾರಿಗಳ ಕುರಿತು ವಿವರವಾದ ಸಂಗ್ರಹದ ಜವಾಬ್ದಾರಿಯನ್ನು ಪ್ರತಿ ಜಿಲ್ಲೆಗಳಲ್ಲಿ ಇಬ್ಬರು ಮುಖಂಡರಿಗೆ ಈ ಎರಡು ಉದ್ದೇಶಗಳನ್ನು ನೇರವೇರಿಸುವ ಜವಾಬ್ದಾರಿ ಹೊರಿಸಲಾಯಿತು. ಬಸವರಾಜ ಸೂಳಿಭಾವಿ, ಅನೀಲ ಹೊಸಮನಿ, ಶರೀಫ್, ಮೈನೂದ್ದೀನ್ ರೇವಡಿಗಾರ,ಸದಾಶಿವ ಕೆಂಭಾವಿ, ಬಸವರಾಜ ಹಳ್ಳದಮನಿ,ಮುಂತಾದವರು ಮಾತನಾಡಿದರು. ಸಭೆಯಲ್ಲಿ ವಿವಿಧ ಜಿಲ್ಲೆಗಳ ಮುಖಂಡರು ಸೇರಿದಂತೆ ಬಾಗಲಕೋಟೆಯ ಮುಖಂಡರಾದ ಶ್ತೀಶೈಲ ಅಂಟೀನ, ಜೈ ಭೀಮ, ಸಿದ್ದರಾಜ ಸೊನ್ನದ ಮೊದಲಾದವರು ಇದ್ದರು.
The post ಗದಗಿನಲ್ಲಿ ನ.23, 24 ರಂದು ‘ದಲಿತ ಚಳವಳಿಗೆ-50 ರಾಷ್ಟ್ರೀಯ ಸಮಾವೇಶ’ -ಬಸವರಾಜ ಸೂಳಿಬಾವಿ appeared first on Karnataka Kahale.
]]>The post ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ದಾವಣಗೆರೆ ಫೆ. 3: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.
ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು.

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ , ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದು ವಿನಂತಿಸಿದರು.
ಸ್ವಾತಂತ್ರ್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದು ವಿವರಿಸಿದರು.

ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು.
ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದು ಆಶಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು ಕೆಯುಡಬ್ಲ್ಯುಜೆ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು.
ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ , ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇ.ಎಂ.ಮಂಜುನಾಥ್ ಸಮ್ಮೇಳನದ ಆಶಯಗಳನ್ನು ಆಡಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
*****
The post ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ಡಾ. ಬಿ. ಆರ್ ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು -10ನೇ ಅಖಿಲಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಎಚ್ ಟಿ ಪೋತೆ ಒತ್ತಾಯ appeared first on Karnataka Kahale.
]]>
ವಿಜಯಪುರ, ಜು.29:ರಾಜ್ಯದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು ಎಂದು ಸಾಹಿತಿ , ಸಂಶೋದಕ, ಜಾನಪದ ವಿದ್ವಾಂಸ ಡಾ. ಎಚ್.ಟಿ. ಪೋತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಗದಗಿನ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರ ದಲ್ಲಿ ಆಯೋಜಿಸಿರುವ ಬೆಳ್ಳಿ ಹಬ್ಬದ ಸಂಭ್ರಮ ಹಾಗೂ 10 ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನವ ಬೌದ್ಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕು, ದಲಿತ ಚಳವಳಿ ಹೋರಾಟಗಾರರ ಹಾಗೂ ಚಿಂತಕರ ಜೀವನ ಕಥನ ಗ್ರಂಥಗಳ ಪ್ರಕಟಣೆಗೆ ಅನುದಾನ ನೀಡಬೇಕು ಹಾಗೂ ಸಫಾಯಿ ಕರ್ಮಚಾರಿ ಕೆಲಸದಲ್ಲಿ ಮಾನಬ ಬಳಕೆ ಬದಲು ಯಂತ್ರೋಪಕರಣಗಳನ್ನು ಬಳಸುವುದಾಗ ಬೇಕು ಹಾಗೂ ಸಫಾಯಿ ಕರ್ಮಚಾರಿ ಉದ್ಯೋಗದಲ್ಲಿದ್ದಾರೋ ಅವರಿಗೆ ಪರ್ಯಾಯ ಉದ್ಯೋಗಗಳನ್ನು ನೀಡಬೇಕು ಎಂದು ರಾಜ್ಯ ಸರಕಾರಕ್ಕೆ ತಮ್ಮ ಹಕ್ಕೋತ್ತಾಯವನ್ನು ಅಧ್ಯಕ್ಷೀಯ ಭಾಷಣದಲ್ಲಿ ಪ್ರಬಲವಾಗಿ ಮಂಡಿಸಿದರು.
ಕನ್ನಡದ ದಲಿತ ಸಾಹಿತ್ಯವು ರೂಪು ಪಡೆದಿರುವುದು ಸಾಹಿತ್ಯಿಕ ಭಾಷೆಯ ಆವರಣದಲ್ಲಿ ಎಂದು ಹೇಳಿದರು.
ಕನ್ನಡದ ದಲಿತ ಸಾಹಿತ್ಯವು ಭಾರತೀಯ ಸಂದರ್ಭದಲ್ಲಿ ಸಮೃದ್ಧ ನೆಲೆಯನ್ನು ಪಡೆದಿದೆ. ಕಾವ್ಯ, ಕಥೆ, ಕಾದಂಬರಿ, ಆತ್ಮಕಥೆ, ನಾಟಕ ಪ್ರಕಾರಗಳು ಸೃಜನಶೀಲತೆಯ ಉತ್ಕೃಷ್ಟತೆಯನ್ನು ಪಡೆದಿವೆ ಎಂದು ತಿಳಿಸಿದರು.
ಬಿ.ಶಾಮಸುಂದರ್, ಕುಮಾರ ಕಕ್ಕಯ್ಯ ಪೋಳ,
ಜಿ. ವೆಂಕಟಯ್ಯ, ಸೋಸಲೆ ಸಿದ್ದಪ್ಪ, ಬೀದರಿನ ಗವಾಯಿಗಳು, ಎನ್.ನರಸಿಂಹಯ್ಯ ಅವರು ಮೊದಲ ತಲೆಮಾರಿನ ದಲಿತ ಲೇಖಕರಾಗಿ ಕನ್ನಡ ದಲಿತ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾದುದು ಎಂದು ಡಾ.ಪೋತೆ ಹೇಳಿದರು.

ದಲಿತರಲ್ಲಿ ಜಾಗೃತಿಯ ಪ್ರಜ್ಞೆಯನ್ನು ಮೂಡಿಸುವಲ್ಲಿ ನಾಡಿನ ದಲಿತ ಚಳವಳಿಗಳ ಪಾತ್ರ ಅನನ್ಯ. ಆರಂಭದ ದಿನಗಳಲ್ಲಿ ಚಳವಳಿಗಳು ತುಂಬಿದ ಉತ್ಸಾಹವೇ ಪ್ರಸ್ತುತ ದಲಿತ ಪ್ರಜ್ಞೆ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಕಾರಣವಾಗಿದೆ ಎಂದು ಅಭಿಪ್ರಾಯ ಪಟ್ಟರು.
ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳಾದರೂ ಬಡತನ ಎಲ್ಲಾ ಸಮುದಾಯಗಳಲ್ಲೂ ಹಾಗೆಯೇ ಇದೆ. ಸಹಸ್ರಾರು ದಲಿತ ಸಮುದಾಯಗಳು ಬಡತನದ ಕೆಳ ರೇಖೆಗಿಂತ ಮೇಲೆಳಲು ಸಾಧ್ಯವಾಗಿಲ್ಲ ಎಂದು ವಿಷಾಧಿಸಿದರು.
ಸಂವಿಧಾನದ ಸೌಲಭ್ಯಗಳು ತಳ ವರ್ಗದವರಿಗೆ ಸಿಗುವುದಕ್ಕಿಂತ ದಲ್ಲಾಳಿಗಳ ಹಾಗೂ ಮಧ್ಯವರ್ತಿ ಗೂಂಡಾಗಳ ಹಾಗೂ ಜಾತಿ ರಾಜಕಾರಣದವರ ಕೈಚಳಕಕ್ಕೆ ಒಳಗಾಗಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಮೀಸಲಾತಿ ದಕ್ಕುತ್ತಿದೆ ಎಂದು ಡಾ.ಪೋತೆ ದೂರಿದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಯೋಜನೆಗಳಲ್ಲಿ ಸಾಮಾಜಿಕ ಬಡತನವನ್ನು ಉತ್ತಮೀಕರಿಸಲು ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರಯತ್ನಿಸ ಬೇಕು ಆದರೆ ಅಂಥ ಪ್ರಯತ್ನಗಳು ಸಾಕಾಗೋಲ್ಲ ಎನ್ನುವುದಕ್ಕೆ ಮಾದ್ಯಮಗಳಲ್ಲಿ ಹಲವಾರು ಅನ್ವೇಷಿತ ವರದಿಗಳು ಸಾಬೀತು ಪಡಿಸಿವೆ ಎಂದರು.
ದಲಿತ ಸಮುದಾಯದ ಸಾಮಾಜಿಕ ಜೀವನ ಮಟ್ಟ ಸುಧಾರಿಸುವಲ್ಲಿ ಆರ್ಥಿಕ ಸಬಲೀಕರಣ ಮತ್ತು ಇತರೆ ಸಮುದಾಯದವರ ಮಾನವೀಕರಣದ ಪೋಷಣೆ ಮತ್ತು ಆಂತರಿಕ ವಪ್ರೀತಿಯೂ ಅಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದಲಿತ ಶೋಷಿತ, ಮಹಿಳಾ ಸಮುದಾಯದಲ್ಲಿ ಶಕ್ತಿ ತುಂಬಲು ಬುದ್ಧ, ಬಸವ, ಅಂಬೇಡ್ಕರ್ ವಿಚಾರಗಳನ್ನು ಸರಕಾರ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹೆಚ್ಚೆಚ್ಚು ಪ್ರಚಾರ ಮಾಡಬೇಕು ಎಂದು ಡಾ.ಪೋತೆ ಒತ್ತಾಯಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಕೈಗಾರಿಕಾ ಸಚಿವರಾದ ಎಂ. ಬಿ ಪಾಟೀಲ್ ಸಮ್ಮೇಳನಕ್ಕೆ ಚಾಲನೆ ನೀಡಿದರು. ದಸಾಪ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ, ವಿಜಯಪುರದ ಬುದ್ಧ ವಿಹಾರದ ಸಂಘಪಾಲ ಭಂತೇಜಿ ಅವರು ನೇತೃತ್ವವಹಿಸಿದ್ದರು. ವಿದ್ವಾಂಸರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಅಲ್ಲಾಗಿರಿರಾಜ, ಹೋರಾಟಗಾರ ಡಾ. ಡಿ ಜಿ ಸಾಗರ್, ವಿಧಾನಪರಿಷತ್ತಿನ ಮಾಜಿ ಸದಸ್ಯ ಡಿ.ಎಸ್. ವೀರಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

—–
The post ಡಾ. ಬಿ. ಆರ್ ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು -10ನೇ ಅಖಿಲಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಎಚ್ ಟಿ ಪೋತೆ ಒತ್ತಾಯ appeared first on Karnataka Kahale.
]]>The post ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಯಿತ್ರಿ ಶೋಭ ಮಲ್ಕಿಒಡೆಯರ್ ಅವರ ‘ದೃಶ್ಯ ಕಾವ್ಯ’ ಕೃತಿ ಬಿಡುಗಡೆ appeared first on Karnataka Kahale.
]]>
ಕುಷ್ಟಗಿ , ಮಾ.5: ತಾಲೂಕಿನ ಹನುಮಸಾಗರದಲ್ಲಿ ಭಾನುವಾರ ಆರಂಭಗೊಂಡ ಎರಡು ದಿನಗಳ ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೂವಿನ ಹಡಗಲಿಯ ಕವಯತ್ರಿ ಶೋಭ ಮಲ್ಕಿಒಡೆಯರ್ ಅವರ “ದೃಶ್ಯ ಕಾವ್ಯ” ಚಿತ್ರ ಕವನ ಸಂಕಲನ ಲೋಕಾರ್ಪಣೆಗೊಂಡಿತು.
ಕೇಂದ್ರ ಕಸಾಪ ಗೌರವ ಕಾರ್ಯದರ್ಶಿ ನೇ. ಬ. ರಾಮಲಿಂಗಶೆಟ್ಟಿ ಅವರು ಕೃತಿ ಬಿಡುಗಡೆ ಮಾಡಿದರು.

ಬೆಳಗಾವಿ ವಿಟಿ ವಿವಿ ಪ್ರೆ. ಕುಲಸಚಿವ ಬಿ. ಇ. ರಂಗಸ್ವಾಮಿ ಅವರು ಸಮ್ಮೇಳನಕ್ಕೆ ಚಾಲನೆ ನೀಡಿದರು.
ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ, ಸಾಹಿತಿ ಪ್ರಕಾಶ್ ಮಲ್ಕಿಒಡೆಯರ್, ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಸ್ಥಳೀಯ, ನಾಡಿನ ಗಣ್ಯರು ಸಾಹಿತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕುಷ್ಟಗಿ ಪಟ್ಟಣ ಕವಿಯಿತ್ರಿ ಶೋಭ ಮಲ್ಕಿಒಡೆಯರ್ ಅವರ ತವರೂರು ಹೌದು.

ಇದೇ ಸಂದರ್ಭದಲ್ಲಿ ಕುಷ್ಟಗಿ ತಾಲೂಕಿನ ಹಿರೇ ಮನ್ನಾಪೂರ ಹೋಬಳಿ ಘಟಕದ ಅಧ್ಯಕ್ಷ ವಿ ಎಸ್ ಕಾಡಗಿ ಮಠ ದಂಪತಿಗೆ ಶೋಭಾ ದಂಪತಿ ಸನ್ಮಾನಿಸಿ ಗೌರವಿಸಿದರು.

ಶ್ರೀ ಮಾರುತಿ ಬಿನ್ನಾಳ ಮತ್ತು ಸಂಗಡಿಗರಿಂದ ನಾಡಗೀತೆ ಮತ್ತು ರೈತ ಗೀತೆ ಪ್ರಸ್ತುತ ಪಡಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೋಲಿಸ್ ಪಾಟೀಲ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೊಪ್ಪಳ ಜಿಲ್ಲಾ ಕ ಸಾ ಪ ಗೌರವ ಕಾರ್ಯದರ್ಶಿ
ಶೇಖರಗೌಡ ಪೋಲಿಸ್ ಪಾಟೀಲ್ ಇದ್ದರು.

*****
The post ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಯಿತ್ರಿ ಶೋಭ ಮಲ್ಕಿಒಡೆಯರ್ ಅವರ ‘ದೃಶ್ಯ ಕಾವ್ಯ’ ಕೃತಿ ಬಿಡುಗಡೆ appeared first on Karnataka Kahale.
]]>The post ಕಸಾಪ ಸಮ್ಮೇಳನದಲ್ಲಿ ಮುದ ನೀಡಿದ ‘ದನ ಕಾಯೋರ ದೊಡ್ಡಾಟ’ appeared first on Karnataka Kahale.
]]>
ಸಾರಥಿ ಪಾತ್ರದಲ್ಲಿ ಪುರುಷೋತ್ತಮ ಹಂದ್ಯಾಳು, ಗೌಡನಾಗಿ ಪತ್ರಕರ್ತ ಎನ್. ವೀರಭದ್ರಗೌಡ ,ಗಣೇಶನಾಗಿ ಚಂದ್ರಶೇಖರ ಆಚಾರ್, ದುರ್ಯೋಧನನಾಗಿ ಅಮರೇಶ್, ದುಶ್ಯಾಸನನಾಗಿ ಪಾರ್ವತೀಶ್ ಗೆಣಕೆಹಾಳ್, ಭೀಮ ಮತ್ತು ಕುಡುಕನ ಪಾತ್ರದಲ್ಲಿ ಜಡೇಶ್ ಎಮ್ಮಿಗನೂರು ಮಿಂಚಿದರು.

ಕೃಷ್ಣನ ಪಾತ್ರದಲ್ಲಿ ಎರ್ರಿಸ್ವಾಮಿ, , ದ್ರೌಪದಿ ಪಾತ್ರದಲ್ಲಿಮೌನೇಶ್ ಕಲ್ಲಳ್ಳಿ, ಅಗಸನ ಪಾತ್ರದಲ್ಲಿ ಕುಮಾರ್ ಗೌಡ ಅಮರಾಪುರ,
ನಕುಲ ತಳವಾರ್ ಹೊನ್ನೂರ್ ಸ್ವಾಮಿ, ಸಹದೇವ ಪಾತ್ರದಲ್ಲಿ
ವಿಶೇಷ ಪಾತ್ರದಲ್ಲಿ ಭೀಮಣ್ಣಬದನೇಹಾಳು ಭೀಮಿನೇನಿ ಪ್ರಸಾದ್ ಹಾಗೂ ಎಲ್ಲನಗೌಡ ಶಂಕರ ಬಂಡೆ ಕರೆಂಟ್ ಹನುಮಂತ ಗಮನ ಸೆಳೆದರು. ಹಾರ್ಮೋನಿಯಂ ಸಣ್ಣಹೊನ್ನೂರುಸ್ವಾಮಿ ಶಂಕರ ಬಂಡೆ, ಡೋಲಾಕ್ ಗಾದಿಲಿಂಗಪ್ಪ ಅಮರಾಪುರ ನಿರ್ವಹಿಸಿದರು.
ಶ್ರೀ ಮಹಾದೇವತಾತ ಕಲಾಸಂಘದ ಅಧ್ಯಕ್ಷ ಪುರುಷೋತ್ತಮ ಹಂದ್ಯಾಳು ಅವರ ನಿರ್ದೇಶನದಲ್ಲಿ ಪ್ರದರ್ಶನಗೊಂಡಿತು.
The post ಕಸಾಪ ಸಮ್ಮೇಳನದಲ್ಲಿ ಮುದ ನೀಡಿದ ‘ದನ ಕಾಯೋರ ದೊಡ್ಡಾಟ’ appeared first on Karnataka Kahale.
]]>The post ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಬಜೆಟ್ ನಲ್ಲಿ ಅನುದಾನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Karnataka Kahale.
]]>
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಗರದಲ್ಲಿ ಆಯೋಜಿಸಿರುವ 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿವೃತ್ತ ಪತ್ರಕರ್ತರ ಮಾಸಾಶಾಸನದಲ್ಲಿ ಹೆಚ್ಚಳ ಹಾಗೂ ಪತ್ರಕರ್ತರ ಭವನ ಪತ್ರಕರ್ತರಿಂದಲೇ ನಿರ್ವಹಣೆ ಇತ್ಯಾದಿ ಸಂಘದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.
ಕೃಷ್ಣಾ ನದಿ ನೀರು ಇಡೀ ಬಿಜಾಪುರದ ಕೃಷಿ ಭೂಮಿಗೆ ನೀರಾವರಿ ಒದಗಿಸಿದಾಗ ಈ ಭಾಗ ಇಡೀ ದೇಶದ ಪಾಲಿಗೆ ಅನ್ನದಾತ ಅನಿಸಲಿದೆ. ಈ ನೀರಾವರಿ ಯೋಜನೆಗೆ ಸುದೀರ್ಘ ಹೋರಾಟದ ಹಿನ್ನೆಲೆ ಇದೆ. ಹಲವರ ಸುದೀರ್ಘ ಕನಸಿನ ಫಲ ಎಂದರು.
ನನ್ನನ್ನು ಎಲ್ಲೆಡೆ ನಾಡಿನ ದೊರೆ ಎಂದು ಕರೆಯುವುದರಿಂದ ನನಗೆ ಕಸಿವಿಸಿಯಾಗುತ್ತದೆ. ಇದು ಪ್ರಜಾಪ್ರಭುತ್ವದ ಕಾಲ, ಈಗ ಪ್ರಜೆಯೇ ಪ್ರಭು. ಹೀಗಾಗಿ ನಾಡಿನ ದೊರೆಯನ್ನು ಹುಟ್ಟು ಹಾಕುವುದು ಸಮಂಜಸವಲ್ಲ ಎಂದು ಹೇಳಿದರು.

ಸಮ್ಮೇಳನದ ಸಂಚಿಕೆ ಬಿಡುಗಡೆಮಾಡಿದ ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ, ವಸ್ತು ಪ್ರದರ್ಶನ ಉದ್ಘಾಟಿಸಿದ ಶಾಸಕ ಬಸವಗೌಡ ಯತ್ನಾಳ್, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರಭಟ್ ಐನಕೈ ಮತ್ತಿತರರು ಮಾತನಾಡಿದರು.
ಕಾರ್ಯ ಕ್ರಮದಲ್ಲಿ ಸಚಿವರಾದ ಮುಗೇಶ ನಿರಾಣಿ, ಸಿ.ಸಿ ಪಾಟೀಲ್, ಸಂಸದ ರಮೇಶ ಜಿಗಜಿಗಣಿ ಜಿಲ್ಲೆಯ ಶಾಸಕರು ಗಣ್ಯರು ಭಾಗವಹಿಸಿದ್ದರು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೋಶ, ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಜಿಲ್ಲಾ ಪಂಚಾಯ್ತಿ ಸಿಇಒ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.
*****
The post ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಬಜೆಟ್ ನಲ್ಲಿ ಅನುದಾನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Karnataka Kahale.
]]>The post ವಿಜಯಪುರ: 37ನೇ ಪತ್ರಕರ್ತರ ಸಮ್ಮೇಳನದ ಮೆರವಣಿಗೆಗೆ ಶಿವಾನಂದ ತಗಡೂರು ಚಾಲನೆ appeared first on Karnataka Kahale.
]]>ಮೆರವಣಿಗೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಅನೇಕ ವೇಷ ಭೂಷಣ ತೊಟ್ಟ ತಂಡ, ಡೊಳ್ಳು ಕುಣಿತ ತಂಡ, ಸ್ಕೌಟ್ ಮತ್ತು ಗೈಟ್ಸ್ ವಿದ್ಯಾರ್ಥಿಗಳ ತಂಡದ ಮೆರವಣಿಗೆಯೂ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿಚೌಕ್, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಕಂದಗಲ್ ಹಣಮಂತರಾಯ ರಂಗಮಂದಿರ ತಲುಪಿತು.

ಮೇರವಣಿಗೆಯಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಪ್ರಾಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಫಲಾಜ್ ಕಲಾದಗಿ, ಶರಣು ಸಬರದ ಮತ್ತಿತರರು ಇದ್ದರು.
*****
The post ವಿಜಯಪುರ: 37ನೇ ಪತ್ರಕರ್ತರ ಸಮ್ಮೇಳನದ ಮೆರವಣಿಗೆಗೆ ಶಿವಾನಂದ ತಗಡೂರು ಚಾಲನೆ appeared first on Karnataka Kahale.
]]>