The post ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಹಾವೇರಿ, ಏ. 19: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಅವರು ಭಾನುವಾರ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73, 74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.
ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಹೇಳಿದರು.
ಪ್ರಧಾನಮಂತ್ರಿಗಳಿಂದ ರಾಜಕೀಯ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ: 450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮೇಲ್ಮನವಿಗೆ ಅವಕಾಶ: ಜನಪ್ರತಿನಿಧಿಗಳು ಜೈಲು ಸೇರುತ್ತಿರುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.
ಮಟ್ಕಾ ದಂಧೆ ನಿಯಂತ್ರಣದಲ್ಲಿದೆ: ರಾಣೆಬೆನ್ನೂರು ಸುತ್ತ ಮುತ್ತ ಮಟ್ಕಾ ದಂಧೆ ವ್ಯಾಪಕವಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸ್ಥಳೀಯ ಶಾಸಕರು ಕ್ರಮ ಕೈಗೊಂಡಿದ್ದಾರೆ ಎಂದ ಮುಖ್ಯಮಂತ್ರಿಗಳು ಪ್ರಸ್ತುತ ಮಟ್ಕಾ ದಂಧೆ ನಿಯಂತ್ರಣದಲ್ಲಿದೆ ಎಂದರು.
The post ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ -ಸಿಎಂ ಸಿದ್ಧರಾಮಯ್ಯ appeared first on Karnataka Kahale.
]]>ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ 52000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ 1,31,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಬದ್ಧ ಅನುದಾನ ದೊರೆತಿಲ್ಲ: ಸಾಲದ ರಾಮಯ್ಯ ಎಂದು ತಮ್ಮನ್ನು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ. ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ಗ್ಯಾರಂಟಿಗಳಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ: ಮಾಜಿ ಸಿಎಂ ಬೊಮ್ಮಾಯಿಯವರು ರಾಜ್ಯದ ಸಾಲದ ದಾಖಲೆಗಳನ್ನು ಸರ್ಕಾರ ನೀಡಲೆಂದು ಹೇಳಿರುವ ಬಗ್ಗೆ ಉತ್ತರಿಸಿ, ಆರ್ಥಿಕತೆಯ ಸ್ಥಿತಿಗತಿಗಳ ಎಲ್ಲ ಅಂಶಗಳ ದಾಖಲೆಗಳನ್ನು ಬಜೆಟ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯವರ ಅವಧಿಯಲ್ಲಿ 530000 ಕೋಟಿ ಸಾಲ ಮಾಡಲಾಗಿದೆ. ಗ್ಯಾರಂಟಿ ಯೋಜನೆಯು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿ , ಇದರಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ ಎಂದರು.
ಗುತ್ತಿಗೆದಾರರಿಗೆ ಬಾಕಿ ಪಾವತಿ ಆಗದಿರುವ ಬಗ್ಗೆ ಪ್ರತಿಕ್ರಿಯೆಗಳು ಎದ್ದಿರುವ ಬಗ್ಗೆ ಉತ್ತರಿಸಿ, ಬಿಜೆಪಿಯವರ ಅವಧಿಯಲ್ಲಿ ಗುತ್ತಿಗೆದಾರರ 29ಸಾವಿರ ಕೋಟಿಯಷ್ಟು ಬಾಕಿ ಉಳಿಸಲಾಗಿತ್ತು. ಅದರಲ್ಲಿ 24 ಸಾವಿರ ಕೋಟಿ ಬಾಕಿ ಬಿಲ್ಲು ಪಾವತಿಸಲಾಗಿದೆ. ಈ ಬಗ್ಗೆ ದಾಖಲಾತಿಯ ಆಧಾರದಲ್ಲಿ ಸ್ಪಷ್ಟ ಉತ್ತರವನ್ನು ಅಧಿವೇಶನದಲ್ಲಿ ನೀಡಲಾಗಿದೆ ಎಂದರು.
ಬೆಲೆಏರಿಕೆ ನಿಯಂತ್ರಿಸುವುದು ಕೇಂದ್ರದ ಹೊಣೆಗಾರಿಕೆ:
ಇರಾನ್ ಯುದ್ಧ ಪರಿಣಾಮ ಬೆಲೆಏರಿಕೆಗೆ ರಾಜ್ಯಸರ್ಕಾರದ ಸಿದ್ದತೆಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬೆಲೆ ಏರಿಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು. ಕೇಂದ್ರ ಪೂರೈಸುವ ಗ್ಯಾಸ್ ಪೆಟ್ರೋಲ್ ಡೀಸೆಲ್ಗಳನ್ನು ವಿತರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆಗಳು ಕಡಿಮೆಯಿದೆ ಎಂದರು.
ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧ:
ಒಳಮೀಸಲಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ರಾಜ್ಯದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅಹಿಂದ ಮತಗಳು ಬಿಜೆಪಿಗೆ ಬರಲಿವೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಯಿಸಿ, ಬಿಜೆಪಿಯವರಿಗೆ ಅಹಿಂದ ವರ್ಗಗಳ ಮೇಲೆ ಕಾಳಜಿಯಿಲ್ಲ. ಬಿಜೆಪಿಯವರು ಎಂದಿಗೂ ಶ್ರೀಮಂತರ ಪರ. ನಮ್ಮ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಂತೆ ನಡೆದು, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ನಮ್ಮ ಸರ್ಕಾರ ಬಿಜೆಪಿ ಬೆಂಬಲಿಗ ಮತದಾರರನ್ನು ಸೇರಿಸಿ, ಸರ್ವರಿಗೂ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನ ಜನರನ್ನು ಸಬಲೀಕರಣಗೊಳಿಸಲು ಇವುಗಳು ನೆರವಾಗುತ್ತವೆ ಎಂದರು.
ಹಂತಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಖಾಲಿ ಹುದ್ದೆಗಳ ನೇಮಕಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ಈ ವರ್ಷ 56432 ಹುದ್ದೆಗಳ ನೇಮಕಾತಿ ಮಾಡಲಿದ್ದು, ಹೀಗೆ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಹೇಳಿದರು.
The post ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ -ಸಿಎಂ ಸಿದ್ಧರಾಮಯ್ಯ appeared first on Karnataka Kahale.
]]>The post ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ ಮೀಸಲಿಡಿ: ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಆಗ್ರಹ appeared first on Karnataka Kahale.
]]>
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಒತ್ತಾಯಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಜಿಲ್ಲಾ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ಧಿ ನಿಧಿಗೆ ತಲಾ 25 ಲಕ್ಷ ರೂ ಅನುದಾನ ಹಾಗೂ ತಾಲೂಕು ಪತ್ರಿಕಾ ಭವನಗಳಿಗೆ ತಲಾ 10 ಲಕ್ಷ ರೂ. ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರವನ್ನು ಸರ್ಕಾರದಿಂದ ಸಂತ್ರಸ್ತ ಕುಟುಂಬಗಳಿಗೆ ಕೊಡಿಸಲಾಗಿತ್ತು. ಅದೇ ರೀತಿಯಲ್ಲಿ ವೃತ್ತಿನಿರತ ಪತ್ರಕರ್ತರು ಮೃತಪಟ್ಟಲ್ಲಿ ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡುವ ಯೋಜನೆಯನ್ನು ಜಾರಿ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಪತ್ರಕರ್ತರಿಗೆ ಸೌಲಭ್ಯವಾಗಿ ನಿವೇಶನ/ಮನೆ ನೀಡುವ ಪ್ರಾಧಿಕಾರದಲ್ಲಿ ಬೋರ್ಡ್ ಮತ್ತು ಇತರ ಸಂಘಗಳಲ್ಲಿ ಪತ್ರಕರ್ತರಿಗೆ ಶೇ.5ರಷ್ಟು ಮೀಸಲಿಡಬೇಕು ಎಂದು ವಿನಂತಿಸಿದ್ದಾರೆ.
ಮಂಕುತಿಮ್ಮನ ಕಗ್ಗದ ಖ್ಯಾತಿಯ ಡಿವಿಜಿ ಅವರ ನಾಲ್ವಡಿ ಕೃಷ್ಣರಾಜ ಒಡೆಯರ್ ದೇಣಿಗೆಯಿಂದ ಸಂಸ್ಥಾಪಿತ ಕಾರ್ಯನಿರತ ಪತ್ರಕರ್ತರ ಸಂಘ ಶತಮಾನೋತ್ಸವ ಹೊಸ್ತಿಲಿಗೆ ಕಾಲಿಡುತ್ತಿದೆ. ಅದಕ್ಕಾಗಿ ಡಿವಿಜಿ ಶತಮಾನ ಸಂಭ್ರಮ ಕಾರ್ಯಕ್ರಮವನ್ನು ಪ್ರತಿ ಜಿಲ್ಲೆಯಲ್ಲಿ ಸರ್ಕಾರದಿಂದ ಆಚರಣೆ ಮಾಡಬೇಕು ಎಂದು ವಿನಂತಿಸಿದ್ದಾರೆ.

ಪತ್ರಕರ್ತರ ಸ್ನೇಹಿ ಆಗಿರುವ ತಾವುಗಳು ಕಳೆದ ಎರಡು ಬಜೆಟ್‌ನಲ್ಲಿ ಪತ್ರಕರ್ತರ ಸಂಘದ ಬೇಡಿಕೆಗಳಿಗೆ ಸ್ಪಂದಿಸಿದ್ದೀರಿ. ಈ ಬಾರಿಯೂ ಬಜೆಟ್‌ನಲ್ಲಿ ಸಂಘದ ಬೇಡಿಕೆಗಳನ್ನು ಈಡೇರಿಸಲು ಪತ್ರಕರ್ತರ ಪರವಾಗಿ ಮನವಿ ಮಾಡುತ್ತಿದ್ದೇವೆ. ಈ ಬಗ್ಗೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಒದಗಿಸಬೇಕು ಎಂದು ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳನ್ಮು ಕೋರಿದ್ದಾರೆ.
The post ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ ಮೀಸಲಿಡಿ: ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಆಗ್ರಹ appeared first on Karnataka Kahale.
]]>The post ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಬೆಂಗಳೂರು, ಫೆ. 21: ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಶನಿವಾರ ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ ತಂಡಗಳು ಐವತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಅತ್ಯಂತ ಸೂಕ್ತವಾಗಿದೆ ಎಂದರು.
ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ನಟನೆ ಎಲ್ಲರಿಗೂ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಸಂದೇಶಗಳುಳ್ಳ ಸಿನಿಮಾಗಳು ವಿರಳ: ಹಿಂದಿನ ಕಾಲದ ಸಿನಿಮಾಗಳಲ್ಲಿ ಸಂದೇಶಗಳಿರುತ್ತಿತ್ತು. ಇಂದಿನ ಸಿನಿಮಾಗಳಲ್ಲಿ ಸಮಾಜಕ್ಕೆ ಸಂದೇಶಗಳುಳ್ಳ ಸಿನಿಮಾಗಳು ವಿರಳ ಅಥವಾ ಇಲ್ಲವೇ ಇಲ್ಲ ಎಂಬಂತಾಗಿದೆ ಎಂದರು.
ರಂಗಭೂಮಿ ಹಿನ್ನೆಲೆಯ ಕಲಾವಿದರು ಹೆಚ್ಚು ಪಳಗಿರುತ್ತಾರಲ್ಲದೆ ಜನಪ್ರಿಯರೂ ಆಗಿರುತ್ತಾರೆ ಎಂದರು.
ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ಕಲಾವಿದೆ ಉಮಾಶ್ರೀ, ಚಿತ್ರನಟರಾದ ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಜ್, ಹಿರಿಯ ಕಲಾವಿದರಾದ ದತ್ತಣ್ಣ, ಗಿರಿಜಾ ಲೋಕೇಶ್, ನಟ, ನಿರ್ದೇಶಕ ಟಿ. ಎಸ್ ನಾಗಾಭರಣ, ಹೊನ್ನಾರು ರಂಗೋತ್ಸವ ಸಂಚಾಲಕರಾದ ಶ್ರೀನಿವಾಸ ಜಿ. ಕಪ್ಪಣ್ಣ ಮೊದಲಾದವರು ಉಪಸ್ಥಿತರಿದ್ದರು.
The post ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಮೈಸೂರು, ಜ. 13:ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಂಗಳವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.
ಅಧಿಕಾರ ಹಂಚಿಕೆಯ ಗೊಂದಲವಿಲ್ಲ: ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.
ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.
ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದರು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಬಜೆಟ್: ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನಿಗೆ ಉತ್ತರಿಸಿದರು.
ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ: ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆ. 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಎಚ್. ಡಿ.ಕುಮಾರಸ್ವಾಮಿ ವರ್ತನೆಯನ್ನು ಗಮನಿಸುವುದಿಲ್ಲ:
ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ನಾವು ಗಮನಿಸುವುದಿಲ್ಲ ಎಂದರು.
The post ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ:ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಮೈಸೂರು, ಜ. 6: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮಂಗಳವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ: ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.
ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ ಎಂದ ಅವರು, ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.
ರಾಜಕಾರಣ ತೃಪ್ತಿ ತಂದಿದೆ: ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು.
ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.
ಬಜೆಟ್ ನಲ್ಲಿ ವಿಶೇಷ ಘೋಷಣೆ ಕಾದು ನೋಡಿ:
ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಜೆಟ್ ಆಗುವವರೆಗೂ ಕಾದು ನೋಡಿ ಎಂದರು.
ಬಳ್ಳಾರಿ ಘಟನೆ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ:
ಬಳ್ಳಾರಿ ಘಟನೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದರು.
ಎಚ್. ಡಿ ಕುಮಾರಸ್ವಾಮಿ ರಾಜಕೀಯವಾಗಿ ಮಾತನಾಡುತ್ತಾರೆ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ಮಾಡಿರುವ ಆರೋಪಗಳ ಪ್ರತಿಕ್ರಿಯೆ ನೀಡಿ ಜೆಡಿಎಸ್ ಹಾಗೂ ಬಿಜೆಪಿ ಕಾನೂನಿನ ರೀತಿ ಮಾತನಾಡದೆ ರಾಜಕೀಯವಾಗಿ ಮಾತನಾಡುತ್ತಾರೆ ಎಂದರು.
ಸೌಹಾರ್ದ ಭೇಟಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆದ ಮಾತುಕತೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಯನಾಡಿನಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದ ಅವರೊಂದಿಗೆ ಸೌಹಾರ್ದಯುತವಾಗಿ ಮೈಸೂರಿನಲ್ಲಿ ಭೇಟಿ ಮಾಡಲಾಯಿತು ಎಂದರು.
ಸಂಪುಟ ಪುನರ್ ರಚನೆಯ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.
The post ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ:ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಬೆಂಗಳೂರು, ಜ.4: ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ .ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23 ನೇ ಚಿತ್ರ ಸಂತೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿಯಾಗಿ 8ನೇ ಬಾರಿ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23 ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು ನಾಲ್ಕು ಕೇಂದ್ರಾಡಳಿತ ಪ್ರದೇಶಗಳು ಕಾರ್ಯಕ್ರಮದಲ್ಲಿ ಭಾಗವಹಿಸಿವೆ ಎಂದರು.

ಪರಿಸರದ ರಕ್ಷಣೆ ಇಂದಿನ ಅಗತ್ಯ:
ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ ಎಂದರು. ಈ ಬಾರಿಯ ಚಿತ್ರ ಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದರು.
ಅರಣ್ಯೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು:
ಪ್ರತಿ ವರ್ಷ ಮೂರರಿಂದ ಐದು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ. 30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಸಾಲು ಮರದ ತಿಮ್ಮಕ್ಕ ನವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು ಎಂದರು.

ಗಿಡ ನಿಡಲು ಮನಸ್ಸು ಮಾಡಬೇಕು:
ಪರಿಸರ ರಕ್ಷಣೆಗಾಗಿ ಹೋರಾಟವನ್ನೇ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೆ. ಸರ್ಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಮೊದಲಾದವರು ಉಪಸ್ಥಿತರಿದ್ದರು.
The post ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ಬಳ್ಳಾರಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>ಅವರು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.
The post ಬಳ್ಳಾರಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ಕೆಯುಡಬ್ಲೂಜೆ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ appeared first on Karnataka Kahale.
]]>
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಹೊರ ತಂದಿರುವ ವಾರ್ಷಿಕ ಕ್ಯಾಲೆಂಡರ್‌ನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿ, ಶುಭ ಹಾರೈಸಿದರು.
ವರ್ಷದ ಮೊದಲ ಕ್ಯಾಲೆಂಡರ್‌ನ್ನು ಮುಖ್ಯಮಂತ್ರಿಗಳಿಗೆ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರತಿ ವರ್ಷವೂ ಕ್ಯಾಲೆಂಡರ್‌ಗಳನ್ನು ಹೊರತರಲಾಗುತ್ತಿದ್ದು, ಕಳೆದ ವರ್ಷವೂ ತಾವೇ ಬಿಡುಗಡೆ ಮಾಡಿದ್ದೀರಿ ಎಂದು ನೆನಪಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲೂೃಜೆ ವತಿಯಿಂದ ಹೂಗುಚ್ಛ ನೀಡಿ ಹೊಸ ವರ್ಷದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಎನ್.ರವಿಕುಮಾರ್ ಟೆಲೆಕ್ಸ್ ಮತ್ತಿತರರು ಹಾಜರಿದ್ದರು.

ಶುಭ ಹಾರೈಸಿದ ಕೆ.ವಿ.ಪ್ರಭಾಕರ್:
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲೂಜೆ ಹೊರ ತಂದಿರುವ ವಾರ್ಷಿಕ ಕ್ಯಾಲೆಂಡರ್‌ನ್ನು ಪತ್ರಕರ್ತರ ಸಮ್ಮುಖದಲ್ಲಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಅವರು ಶುಭ ಹಾರೈಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಎನ್.ರವಿಕುಮಾರ್ ಟೆಲೆಕ್ಸ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ, ಹಿರಿಯ ಪತ್ರಕರ್ತರಾದ ಚಿದಾನಂದ ಪಟೇಲ್, ಮಾರುತಿ ಪಾವಗಡ, ದೇವರಾಜು, ಅಪ್ಪಣ್ಣ ಮತ್ತಿತರರು ಇದ್ದರು.
The post ಕೆಯುಡಬ್ಲೂಜೆ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ appeared first on Karnataka Kahale.
]]>The post ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಶಿಕ್ಷಣ ಅಗತ್ಯ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಮೈಸೂರು, ನ.21: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶುಕ್ರವಾರ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಯೋಜಿಸಿದ್ದ ಸಂಘದ ಪ್ರಥಮ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ದೇವರಾಜು ಅರಸು ಮತ್ತು ಹಾವನೂರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಬಿಸಿಎಂ ಹಾಸ್ಟೆಲ್ಗಳಲ್ಲಿ ಓದಿರುವವರಿಗೆ ಉಚಿತ ಶಿಕ್ಷಣ, ಆಹಾರ, ವಸತಿಗಳು ದೊರೆತಿದ್ದು, ಸರ್ಕಾರ ಹಿಂದುಳಿದ ವರ್ಗದ ಮಕ್ಕಳು, ಬಡವರ ಮಕ್ಕಳು ವಿದ್ಯಾವಂತರಾಬೇಕೆಂಬ ಉದ್ದೇಶದಿಂದ ಹಾಸ್ಟೆಲ್ ಗಳನ್ನು ತೆರೆದು, ಪ್ರವೇಶ ನೀಡಿ ಓದಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇಲ್ಲಿ ಓದಿದವರು ಉನ್ನತ ಹುದ್ದೆಗೆ ಏರಿದ್ದಾರೆ, ಕೆಲವರು ಇತರೆ ಉದ್ಯೋಗ ಮಾಡುತ್ತಿದ್ದಾರೆ. ಶಿಕ್ಷಣ ಬಹಳ ಮುಖ್ಯ. ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಶಿಕ್ಷಣದ ಪ್ರಮಾಣ ಶೇ 10-12% ಮಾತ್ರವಿತ್ತು ಇಂದು ಶೇ 78% ರಷ್ಟು ಏರಿದೆ ಎಂದರು. ಶಿಕ್ಷಣದ ಪ್ರಮಾಣ ಶೇ 100 ರಷ್ಟು ಆಗಬೇಕಿದೆ ಎಂದರು.
ಎಲ್ಲರನ್ನೂ ಸಮಾನರಾಗಿ ಕಾಣಬೇಕು: ಜಾತಿ, ವರ್ಗ ರಹಿತ ವ್ಯವಸ್ಥೆ ನಿರ್ಮಾಣ, ಮೂಢನಂಬಿಕೆ ತೊಲಗಬೇಕು ಎಂದು 850 ವರ್ಷಗಳ ಹಿಂದೆಯೇ ಬಸವಣ್ಣ ಹೇಳಿದ್ದರು. ನಾವು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದು ಬಹಳ ಮುಖ್ಯ. ನಮ್ಮ ದೇಶದಲ್ಲಿ ಅನೇಕ ಧರ್ಮ ಮತ್ತು ಜಾತಿಗಳಿವೆ. ಎಲ್ಲ ಧರ್ಮಗಳೂ ಪರಸ್ಪರರನ್ನು ಪ್ರೀತಿಸಬೇಕು ಎಂದು ಹೇಳುತ್ತದೆಯೇ ಹೊರತು ಪರಸ್ಪರರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ. ಎಲ್ಲರನ್ನೂ ಸಮಾನರಾಗಿ ಕಾಣಬೇಕು. ಕನಿಷ್ಠ ಪಕ್ಷ ವಿದ್ಯಾವಂತರಾದರೂ ಇದನ್ನು ಪಾಲಿಸಬೇಕು ಎಂದರು.
ಸಹಬಾಳ್ವೆ, ಪರಧರ್ಮ ಸಹಿಷ್ಣುತೆ ರಬೇಕು ಎಂದು ಸಂವಿಧಾನ ಹೇಳುತ್ತದೆ. ಇದು ಇದ್ದರೆ ದ್ವೇಷಿಸುವ ಪ್ರಮೇಯ ಇರುವುದಿಲ್ಲ. ಸತ್ಯ ತಿಳಿದೂ ಅಸತ್ಯವನ್ನೇ ಅಭ್ಯಾಸ ಮಾಡಿಕೊಳ್ಳಬಾರದು. ಹಿಂದೆ ಒಮ್ಮೆ ನನ್ನ ಕಾರಿನ ಮೇಲೆ ಕಾಗೆ ಕೂತಿದ್ದಕ್ಕೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ. ಈ ಬಾರಿ ಬಜೆಟ್ ಮಂಡಿಸುವುದಿಲ್ಲ ಎಂದೆಲ್ಲಾ ಟಿವಿ ವಾಹಿನಿಗಳಲ್ಲಿ ಹೇಳಿದ್ದರು. ಕಾಗೆ ಕೂತಿದ್ದು ಅನಿಷ್ಟ ಎಂದರು. ಇದಾದ ನಂತರ ಬಜೆಟ್ ಮಂಡಿಸಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದೇನೆ. ಈ ಬಾರಿ ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷಗಳಾಯಿತು ಎಂದರು.

ಪ್ರೊ. ರವಿವರ್ಮಕುಮಾರ್ ಮದುವೆಯಾಗಿದ್ದು ರಾಹು ಕಾಲದಲ್ಲಿ. ಅವರು ಉತ್ತಮ ವಕೀಲರಾಗಿ ಎತ್ತರಕ್ಕೆ ಬೆಳೆದಿದ್ದಾರೆ. ದೇವರಾಜ ಅರಸು ಹಾಗೂ ಹಾವನೂರು ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದ್ದೇವೆ ಎಂದರು. ಸಮಾಜದ ಋಣ ತೀರಿಸಿದಾಗ ಮಾತ್ರ ಸರ್ವತೋಮುಖವಾಗಿ ಅಭಿವೃದ್ಧಿ ಸಾಧ್ಯ: ಸರ್ಕಾರ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದ್ದು, ಕೆಲಸಕ್ಕೆ ಸೇರಿದ ಮೇಲೆ ಸಮಾಜಕ್ಕೆ ಹಿಂತಿರುಗಿ ಏನಾದರೂ ಕೊಡಬೇಕು. ಸಮಾಜದ ಋಣವನ್ನು ತೀರಿಸಬೇಕು . ನಾನು ಕಾನೂನು ಪದವಿ ಓದಿದ್ದರಲ್ಲಿ ಸಮಾಜದ ಋಣವೂ ಇದೆ. ಅದನ್ನು ತೀರಿಸಿದಾಗ ಮಾತ್ರ ಸಮಾಜ ಸರ್ವತೋಮುಖವಾಗಿ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು. ಗುಲಾಮಗಿರಿಯಿಂದ ಹೊರಬಂದು ಸ್ವಾಭಿಮಾನ ಬೆಳೆಸಿಕೊಳ್ಳಬೇಕು: ರಾಜ್ಯದಲ್ಲಿ 3,88,000 ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ವಿದ್ಯೆ ಪಡೆಯುತ್ತಿದ್ದಾರೆ. ಈಗ ಮೈಸೂರು ನಗರದಲ್ಲಿ 6500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರುಹಿಂದುಳಿದ ವರ್ಗಗಳಿಗೆ ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಶಕ್ತಿ ತುಂಬಿದರು. ಆದ್ದರಿಂದ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಖ್ಯಾತರಾಗಿದ್ದರು. 2013 ರ ನಮ್ಮ ಅವಧಿಯಲ್ಲಿಯೂ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಈ ಬಾರಿಯೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಸಮಾಜದಲ್ಲಿನ ಅಸಮಾನತೆಯನ್ನು ತೊಡೆದುಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದ ಹಿಂದುಳಿದವರು ಗುಲಾಮಗಿರಿ ಮನಸ್ಥಿತಿಯಿಂದ ಹೊರಬಂದು ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬಲ: ಗ್ಯಾರಂಟಿ ಯೋಜನೆಗಳಿಂದ ದುರ್ಬಲವರ್ಗದವರಿಗೆ ಆರ್ಥಿಕ ಬಲ ಹೆಚ್ಚುವ ಜೊತೆಗೆ ಸಮಾಜದಲ್ಲಿ ಸಮಾನತೆ ತರಲು ಸಾಧ್ಯವಾಗುತ್ತದೆ. ಹಿಂದುಳಿದ ವರ್ಗಗಳ ಇಲಾಖೆಗೆ ಪ್ರಸ್ತುತ 3,500 ಕೋಟಿ ನೀಡಲಾಗುತ್ತಿದೆ. ಈ ಹಿಂದೆ ಅಕ್ಷರ ಸಂಸ್ಕೃತಿಯಿಂದ ಜನರನ್ನು ವಂಚಿಸಲಾಗುತ್ತಿದ್ದು, ಸಮಾನ ಅವಕಾಶಗಳನ್ನು ನೀಡಲಾಗುತ್ತಿರಲಿಲ್ಲ. ಆದ್ದರಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಾರ್ಥಕವಾಗಿ ಬದುಕಿ,ಸಮಾಜದ ಋಣವನ್ನು ತೀರಿಸಬೇಕು ಎಂದರು.
ರಾಜ್ಯದಲ್ಲಿ ಕನ್ನಡದ ವಾತಾವರಣ ಸೃಷ್ಟಿಯಾಗಲಿ: ಇಂದು ಕನ್ನಡ ರಾಜ್ಯೋತ್ಸವವನ್ನೂ ಆಚರಿಸಲಾಗಿದೆ. ನಾವೆಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುತ್ತೇವೆ ಎಂಬ ಶಪಥ ಕೈಗೊಳ್ಳಬೇಕು. ಬೆಂಗಳೂರಿನಲ್ಲಿ ಕನ್ನಡ ಮಾತನಾಡುವುದು ವಿರಳವಾಗುತ್ತಿದೆ. ಆದ್ದರಿಂದ ಕನ್ನಡದ ವಾತಾವರಣ ಸೃಷ್ಟಿಸಿ, ಕನ್ನಡ ಕಲಿಕೆ ಎಂಬುದು ಅನಿವಾರ್ಯವಾಗುತ್ತದೆ. ಬ್ಯಾಂಕುಗಳೂ ಸೇರಿದಂತ ಸಾರ್ವಜನಿಕ ಸಂಸ್ಥೆಗಳು, ಜನರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಕರ್ನಾಟಕದ ಏಕೀಕರಣಕ್ಕಾಗಿ ಅನೇಕ ಮಹನೀಯರು ಕೊಡುಗೆ ನೀಡಿದ್ದು, ಕನ್ನಡ ರಾಜ್ಯೋತ್ಸವದಂದು ಅವರನ್ನು ಸ್ಮರಿಸಿಕೊಳ್ಳಬೇಕು. ಕನ್ನಡವನ್ನು ಮಾತನಾಡುವ ಜೊತೆಗೆ ಬೇರೆ ಭಾಷೆಯನ್ನು ಕಲಿಯಬಹುದಾದರೂ, ನಾವೆಲ್ಲರೂ ಕನ್ನಡಿಗರಾಗಿರಬೇಕು ಎಂದರು.
The post ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಶಿಕ್ಷಣ ಅಗತ್ಯ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>