Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-includes/feed-rss2.php on line 8
Health – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Tue, 25 Nov 2025 09:01:00 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg Health – Karnataka Kahale https://www.karnatakakahale.com 32 32 ಬಿಎಂಸಿಆರ್‌ಸಿಯಲ್ಲಿ ಬಾಲಕ ಸಾವು ಪ್ರಕರಣದ ತನಿಖೆಗೆ ಸಮಿತಿ ರಚನೆ: ಡಾ.‌ಗಂಗಾಧರ ಗೌಡ https://www.karnatakakahale.com/news/21390 Tue, 25 Nov 2025 08:56:52 +0000 https://www.karnatakakahale.com/?p=21390 ಬಳ್ಳಾರಿ: ಬಳ್ಳಾರಿಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಬೆಳಗಿನ ಜಾವ ಅಂದ್ರಾಳು ಗ್ರಾಮದ 8ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿಯಲು ತಜ್ಞ ವೈದ್ಯರ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಮ್ಸ್ ನಿರ್ದೇಶಕ…

The post ಬಿಎಂಸಿಆರ್‌ಸಿಯಲ್ಲಿ ಬಾಲಕ ಸಾವು ಪ್ರಕರಣದ ತನಿಖೆಗೆ ಸಮಿತಿ ರಚನೆ: ಡಾ.‌ಗಂಗಾಧರ ಗೌಡ appeared first on Karnataka Kahale.

]]>
ಬಳ್ಳಾರಿ: ಬಳ್ಳಾರಿಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಬೆಳಗಿನ ಜಾವ ಅಂದ್ರಾಳು ಗ್ರಾಮದ 8ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿಯಲು ತಜ್ಞ ವೈದ್ಯರ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ. ಗಂಗಾಧರಗೌಡ ತಿಳಿಸಿದ್ದಾರೆ.

ಬಿಎಂಸಿಆರ್‌ಸಿಯಲ್ಲಿ ಕೆಲ ದಿನಗಳ ಹಿಂದೆ ಈ ಬಾಲಕನಿಗೆ ಅಂಪೆಡಿಕ್ಸ್‌ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಇದಾದ ಬಳಿಕ ಪುನಃ ಆಸ್ಪತ್ರೆಗೆ ದಾಖಲಾದ ವೇಳೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬಿಎಂಸಿಆರ್‌ಸಿ ವೈದ್ಯರ ತಂಡ ಬಾಲಕನಿಗೆ ಅಗತ್ಯ ಚಿಕಿತ್ಸೆ ನೀಡಿ, ಬಾಲಕನನ್ನು ಉಳಿಸಿಕೊಳ್ಳಲು ನಾನಾ ಪ್ರಯತ್ನ ನಡೆಸಿದೆ. ಆದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂಬ ಆರೋಪದ ಹಿನ್ನೆಲೆ ಬಾಲಕನಿಗೆ ಒದಗಿಸಿದ ಚಿಕಿತ್ಸೆವಿಧಾನ, ಬಾಲಕನ ಸಾವಿಗೆ ಕಾರಣವನ್ನು ತಿಳಿಯಲು ಬಿಎಂಸಿಆರ್‌ಸಿಯ ತಜ್ಞ ವೈದ್ಯರ ತನಿಖಾ ತಂಡ ರಚಿಸಲಾಗುವುದು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

The post ಬಿಎಂಸಿಆರ್‌ಸಿಯಲ್ಲಿ ಬಾಲಕ ಸಾವು ಪ್ರಕರಣದ ತನಿಖೆಗೆ ಸಮಿತಿ ರಚನೆ: ಡಾ.‌ಗಂಗಾಧರ ಗೌಡ appeared first on Karnataka Kahale.

]]>
ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ: ಸಿಎಂ ಶ್ಲಾಘನೆ https://www.karnatakakahale.com/news/20979 Fri, 17 Oct 2025 14:43:48 +0000 https://www.karnatakakahale.com/?p=20979 ಬೆಂಗಳೂರು, ಅ.17: ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ…

The post ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ: ಸಿಎಂ ಶ್ಲಾಘನೆ appeared first on Karnataka Kahale.

]]>
ಬೆಂಗಳೂರು, ಅ.17: ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ.

ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ.
ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್‌ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ತಮ್ಮ ಗೃಹ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಮತ್ತಿತರ ಗಣ್ಯರು ಹಾಜರಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಅವರು, ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

The post ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ: ಸಿಎಂ ಶ್ಲಾಘನೆ appeared first on Karnataka Kahale.

]]>
ಚಿತ್ರದುರ್ಗ ಪತ್ರಕರ್ತನ ಚಿಕಿತ್ಸೆಗೆ 4ಲಕ್ಷ ರೂ ಪರಿಹಾರ ಮಂಜೂರು ಮಾಡಿದ‌ ಸಿಎಂ ಸಿದ್ಧರಾಮಯ್ಯ https://www.karnatakakahale.com/news/20564 Wed, 03 Sep 2025 10:45:17 +0000 https://www.karnatakakahale.com/?p=20564 ಬೆಂಗಳೂರು:  ಚಿತ್ರದುರ್ಗದ ಪತ್ರಕರ್ತ ಎನ್.ಎಸ್.ಸುನೀಲ್ ರೆಡ್ಡಿ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ದೊಡ್ಡಸಿದ್ದವ್ವನಹಳ್ಳಿಯ ಸುನಿಲ್ ರೆಡ್ಡಿ ಜನಶ್ರೀ, ಪವರ್ ಟಿವಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದು, ಇತ್ತೀಚೆಗೆ ತೀವ್ರ…

The post ಚಿತ್ರದುರ್ಗ ಪತ್ರಕರ್ತನ ಚಿಕಿತ್ಸೆಗೆ 4ಲಕ್ಷ ರೂ ಪರಿಹಾರ ಮಂಜೂರು ಮಾಡಿದ‌ ಸಿಎಂ ಸಿದ್ಧರಾಮಯ್ಯ appeared first on Karnataka Kahale.

]]>
ಬೆಂಗಳೂರು:  ಚಿತ್ರದುರ್ಗದ ಪತ್ರಕರ್ತ ಎನ್.ಎಸ್.ಸುನೀಲ್ ರೆಡ್ಡಿ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ದೊಡ್ಡಸಿದ್ದವ್ವನಹಳ್ಳಿಯ ಸುನಿಲ್ ರೆಡ್ಡಿ ಜನಶ್ರೀ, ಪವರ್ ಟಿವಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದು, ಇತ್ತೀಚೆಗೆ ತೀವ್ರ
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆರ್ಥಿಕವಾಗಿ ಸಂಷ್ಟದಲ್ಲಿದ್ದ ಪತ್ರಕರ್ತ ಸುನೀಲ್ ರೆಡ್ಡಿ ಅವರಿಗೆ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಮೇರೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಿದ್ದಾರೆ .

ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ
ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಧನ್ಯವಾದಗಳನ್ನು ಅರ್ಪಿಸಿದೆ.

The post ಚಿತ್ರದುರ್ಗ ಪತ್ರಕರ್ತನ ಚಿಕಿತ್ಸೆಗೆ 4ಲಕ್ಷ ರೂ ಪರಿಹಾರ ಮಂಜೂರು ಮಾಡಿದ‌ ಸಿಎಂ ಸಿದ್ಧರಾಮಯ್ಯ appeared first on Karnataka Kahale.

]]>
‘ನಮ್ಮ ಕ್ಲಿನಿಕ್‌’ ಗೆ ಬರುವ ರೋಗಿಗಳನ್ನು ಕುಟುಂಬದ ಸದಸ್ಯರೆಂದು ಭಾವಿಸಿ ವೈದ್ಯರು ಚಿಕಿತ್ಸೆ ನೀಡಬೇಕು -ಪಾಲಿಕೆ ಸದಸ್ಯ ಪಿ ಗಾದೆಪ್ಪ https://www.karnatakakahale.com/news/19995 Fri, 04 Jul 2025 11:34:49 +0000 https://www.karnatakakahale.com/?p=19995 ಬಳ್ಳಾರಿ : ನಗರದ 23ನೇ ವಾರ್ಡ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಹಾನಗರ ಪಾಲಿಕೆ ಸದಸ್ಯ ಪಿ.‌‌ ಗಾದೆಪ್ಪ ಅಧ್ಯಕ್ಷತೆಯಲ್ಲಿ ಜನ ಆರೋಗ್ಯ ಸಮಿತಿ ಮತ್ತು ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು. ಈ ಸಂದರ್ಭದಲ್ಲಿ…

The post ‘ನಮ್ಮ ಕ್ಲಿನಿಕ್‌’ ಗೆ ಬರುವ ರೋಗಿಗಳನ್ನು ಕುಟುಂಬದ ಸದಸ್ಯರೆಂದು ಭಾವಿಸಿ ವೈದ್ಯರು ಚಿಕಿತ್ಸೆ ನೀಡಬೇಕು -ಪಾಲಿಕೆ ಸದಸ್ಯ ಪಿ ಗಾದೆಪ್ಪ appeared first on Karnataka Kahale.

]]>

ಬಳ್ಳಾರಿ : ನಗರದ 23ನೇ ವಾರ್ಡ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಹಾನಗರ ಪಾಲಿಕೆ ಸದಸ್ಯ ಪಿ.‌‌ ಗಾದೆಪ್ಪ ಅಧ್ಯಕ್ಷತೆಯಲ್ಲಿ ಜನ ಆರೋಗ್ಯ ಸಮಿತಿ ಮತ್ತು ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಿ.ಗಾದೆಪ್ಪ ಅವರು ಆರೋಗ್ಯ ಕೇಂದ್ರದ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಅಗತ್ಯ ಸೌಕರ್ಯ ಕಲ್ಪಿಸುವ ದೃಷ್ಟಿಯಿಂದ ಪ್ರತಿ ತಿಂಗಳ ಕೊನೆ ದಿನ ಸಭೆ ನಡೆಸಲು ಜನ ಆರೋಗ್ಯ ಸಮಿತಿ ಮತ್ತು ಆರೋಗ್ಯ ರಕ್ಷಾ ಸಮಿತಿಗೆ ಸೂಚಿಸಿದರು.
ನಮ್ಮ ಕ್ಲಿನಿಕ್ ಗೆ ನಗರ ಪ್ರದೇಶದಿಂದ ಅತ್ಯಂತ ಕಡು ಬಡ ರೋಗಿಗಳು ಬರುತ್ತಾರೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ, ಗರ್ಭಿಣಿಯರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಗಮನಹರಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳನ್ನು ವೈದ್ಯರು ಹಾಗೂ ಸಿಬ್ಬಂದಿ ತಮ್ಮ ಮನೆಯವರೆಂದು ಭಾವಿಸಿ ಚಿಕಿತ್ಸೆ ನೀಡಬೇಕು ಎಂದು ಕಿವಿ ಮಾತು ಹೇಳಿದರು.
ಚಿಕಿತ್ಸೆ ನೀಡುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡುವಂತೆ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟರೋಗ ನಿಯಂತ್ರಣಧಿಕಾರಿಗಳಾದ ಡಾ. ವೀರೇಂದ್ರ ಕುಮಾರ್ , ಹಿರಿಯ ಸಾಹಿತಿ ಎನ್.ಡಿ ವೆಂಕಮ್ಮ , ಶಾಲಾ ಮುಖ್ಯ ಶಿಕ್ಷಕಿ ಎರ್ರೆಮ್ಮ .ಪಿ , ಸಹ ಶಿಕ್ಷಕರುಗಳಾದ ಹೆಚ್. ನಾಗರಾಜ್ , ಸಿದ್ದಲಿಂಗಮ್ಮ.ಎಲ್ , ಎಂ .ಪ್ರಮೀಳಾ ಬಾಯಿ , ಅನಿತಾ ಹೆಚ್.ವೈ , ನಗರ ಮುಖಂಡರುಗಳಾದ ಸಿಂಧೂರ ಲಕ್ಷ್ಮಣ್ , ಮೋಹನ್ ರಾಮ್ .ಕೆ , ಷಣ್ಮುಖ , ಲಕ್ಷ್ಮಣ. ಎಸ್ ಭಂಡಾರಿ , ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ಸಾತ್ವಿಕ್ , ನಮ್ಮ ಕ್ಲಿನಿಕ್ ಆಡಳಿತ ವೈದ್ಯಧಿಕಾರಿಗಳಾದ ಡಾ.ಎಂ. ಹನುಮೇಶ್ , ಸಿಪಿಎಂ ರುದ್ರಮ್ಮ , ಪಿಎಚ್‌ಸಿಒ ನಾಗಮಣಿ , ಎಂ ಎಲ್ ಡಬ್ಲ್ಯೂ ಎರಿಸ್ವಾಮಿ , ಶುಶ್ರೂಷಾಧಿಕಾರಿ ಉಮಾದೇವಿ , ಆರೋಗ್ಯ ನಿರೀಕ್ಷಣಾಧಿಕಾರಿ ಮಾಧವಿ.ಡಿ , ಸಹಾಯಕಿ ಪ್ರಿಯದರ್ಶಿನಿ.ಎಚ್ , ಅಂಗನವಾಡಿ ಕಾರ್ಯಕರ್ತರು , ಆಶಾ ಕಾರ್ಯಕರ್ತರು ಸೇರಿದಂತೆ ನಗರದ ಮಹಿಳೆಯರು ಉಪಸ್ಥಿತರಿದ್ದರು

The post ‘ನಮ್ಮ ಕ್ಲಿನಿಕ್‌’ ಗೆ ಬರುವ ರೋಗಿಗಳನ್ನು ಕುಟುಂಬದ ಸದಸ್ಯರೆಂದು ಭಾವಿಸಿ ವೈದ್ಯರು ಚಿಕಿತ್ಸೆ ನೀಡಬೇಕು -ಪಾಲಿಕೆ ಸದಸ್ಯ ಪಿ ಗಾದೆಪ್ಪ appeared first on Karnataka Kahale.

]]>
ಮೋಕಾ ಆರೋಗ್ಯ ಕೇಂದ್ರದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ: ಆರೋಗ್ಯ ವ್ಯಕ್ತಿಯಿಂದ ಆರೋಗ್ಯ ಸಮಾಜ -ಡಾ. ಭಾರತಿ https://www.karnatakakahale.com/news/19617 Mon, 02 Jun 2025 15:59:05 +0000 https://www.karnatakakahale.com/?p=19617 ಬಳ್ಳಾರಿ ಜೂ.೨: ಆರೋಗ್ಯ ವ್ಯಕ್ತಿಯಿಂದ ಆರೋಗ್ಯ ಸಮಾಜ ಸೃಷ್ಟಿಯಾಗುತ್ತದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.‌ ಸಿ. ಭಾರತಿ ಅವರು ಹೇಳಿದರು.                            ತಾಲೂಕಿನ…

The post ಮೋಕಾ ಆರೋಗ್ಯ ಕೇಂದ್ರದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ: ಆರೋಗ್ಯ ವ್ಯಕ್ತಿಯಿಂದ ಆರೋಗ್ಯ ಸಮಾಜ -ಡಾ. ಭಾರತಿ appeared first on Karnataka Kahale.

]]>
ಬಳ್ಳಾರಿ ಜೂ.೨: ಆರೋಗ್ಯ ವ್ಯಕ್ತಿಯಿಂದ ಆರೋಗ್ಯ ಸಮಾಜ ಸೃಷ್ಟಿಯಾಗುತ್ತದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.‌ ಸಿ. ಭಾರತಿ ಅವರು ಹೇಳಿದರು.                            ತಾಲೂಕಿನ ಮೋಕ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಬಳ್ಳಾರಿ, ಸಮುದಾಯ ಅರೋಗ್ಯ ಕೇಂದ್ರ ಮೋಕಾದಲ್ಲಿ  ವಿಶ್ವ ತಂಬಾಕು ರಹಿತ ದಿನ ಪ್ರಯುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.                                          ತಂಬಾಕು ಬಳಕೆಯಿಂದ ನಾನಾ ರೀತಿಯ ಕಾಯಿಲೆಗಳು ಬರುತ್ತವೆ. ಇಂದಿನ ಯುವಕರಲ್ಲಿ ಗುಟ್ಕಾ, ಸಿಗರೇಟ್ ಬಳಕೆಯಿಂದ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಕೆಟ್ಟ ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯುವಕರು ಮುಂದಾಗಬೇಕೆಂದು ಎಂದು ತಿಳಿಸಿದರು.

1987ರಿಂದ ವಿಶ್ವ ಸಂಸ್ಥೆ ತಂಬಾಕು ಬಳಕೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ತಂಬಾಕು‌ ಬಳಕೆಯಿಂದ  ಕ್ಯಾನ್ಸರ್ ಗೆ ತುತ್ತಾಗುತ್ತಾರೆ. ಅಗಿಯುವ ಹಾಗು ಸೇದುವ ತಂಬಾಕಿನಿಂದ ಕ್ಯಾನ್ಸರ್ ಖಚಿತವಾಗಿ ಬರುತ್ತದೆ ಎಂದು ಖುರ್ಷಿದ ಬೇಗಂ ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ ಹೇಳಿದರು.            ಹಿರಿಯ ದಂತ ವೈದ್ಯ ಡಾ ಅರ್ಜುಮುನ್ನಿಸ ಅವರು ಬಾಯಿ ಕ್ಯಾನ್ಸರ್‌ಗೆ ಕಾರಣ ಹಾಗು  ಆರೋಗ್ಯಕರ ಅಭ್ಯಾಸಗಳ ಬಗ್ಗೆ ಮಾಹಿತಿ ನೀಡಿದರು.                                      ತಂಬಾಕು ಜೊತೆಗೆ ನಶೆ ಪುಡಿಯನ್ನು ಹಳ್ಳಿ ಹೆಣ್ಣುಮಕ್ಕಳು ಬಳಸುತ್ತಾರೆ ಅದರಿಂದ ಸಹ ಬಾಯಿ ಕ್ಯಾನ್ಸರ್ ಬರುತ್ತದೆ ಎಂದರು.                                                ಬಾಯಿಯಲ್ಲಿ ತುಂಬಾ ಸಮಯದವರೆಗೆ ಏನಾದರು ಗಾಯಗಳಗಿದ್ದಲ್ಲಿ ತಕ್ಷಣ ವೈ ದ್ಯರ ಹತ್ತಿರ ತಪಾಸಣೆ ಮಾಡಿಸಿ, ಅರೋಗ್ಯ ಕಾಪಾಡಿ ಎಂದು ಸಂಪೂರ್ಣ ಮಾಹಿತಿ ನೀಡಿದರು,

ಕಾರ್ಯಕ್ರಮದಲ್ಲಿ ನರ್ಸಿಂಗ್ ಅಧಿಕಾರಿಗಳಾದ ಉಷಾ ರಾಣಿ, ಸಮುದಾಯ ಆರೋಗ್ಯ ಅಧಿಕಾರಿ ತ್ರಿಪುನ್ ಕುಮಾರ್, ಅಸಾಂಕ್ರಾಮಿಕ ಘಟಕದ ಜೈಕುಮಾರ್, ಪದ್ಮಾವತಿ, ಹನುಮ ಗೌಡ, ಯುವರಾಜ್, ಅರೋಗ್ಯ ನಿರೀಕ್ಷಣಾ ಅಧಿಕಾರಿ ಮಲ್ಲಿ ಗೌಡ ಸಾರ್ವಜನಿಕರು ಉಪಸ್ಥಿತರಿದ್ದರು.

The post ಮೋಕಾ ಆರೋಗ್ಯ ಕೇಂದ್ರದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ: ಆರೋಗ್ಯ ವ್ಯಕ್ತಿಯಿಂದ ಆರೋಗ್ಯ ಸಮಾಜ -ಡಾ. ಭಾರತಿ appeared first on Karnataka Kahale.

]]>
ಕೋವಿಡ್ ಪರಿಸ್ಥಿತಿ ಅವಲೋಕನ: ಆರೋಗ್ಯ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಸಭೆ https://www.karnatakakahale.com/news/19533 Mon, 26 May 2025 13:57:49 +0000 https://www.karnatakakahale.com/?p=19533 ಬೆಂಗಳೂರು, ಮೇ ೨೬: ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ…

The post ಕೋವಿಡ್ ಪರಿಸ್ಥಿತಿ ಅವಲೋಕನ: ಆರೋಗ್ಯ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಸಭೆ appeared first on Karnataka Kahale.

]]>

ಬೆಂಗಳೂರು, ಮೇ ೨೬: ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು…

*ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

*ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.

*ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

*ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

*ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

*ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿಗಳ ಸೂಚನೆ: ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು.

ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ

ರಾಜ್ಯದಲ್ಲಿ ಕೊರೊನಾ ಹರಡದಂತೆ
ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸದಂತೆ ಪೋಷಕರು ಕ್ರಮ ವಹಿಸಲು , ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ,
ಎಂತಹುದೇ ಪರಿಸ್ಥಿತಿ ಎದುರಿಸಲು. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ
ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ
ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು

ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯಾಧಿಕಾರಿ ಗಳಿಗೆ ಸೂಚಿಸಿದರು .

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸೂಚನೆ ನೀಡಿದರು .

ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ
ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲೆಗಳಲ್ಲೂ
ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರುವಂತೆ ಸೂಚಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು
ಸೂಚಿಸಿದರು .

ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ.
ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ
ವ್ಯಾಕ್ಸಿನ್ ಗಳನ್ನು ಸಿದ್ದವಾಗಿಟ್ಟು ಕೊಳ್ಳಲು ಸೂಚಿಸಿದರು

ಸಾಮಾಜಿಕ ಮಾಧ್ಯಮಗಳಲ ಮೂಲಕ ಕಾಲ ಕಾಲಕ್ಕೆ
ಸಾರ್ವಜನಿಕರಿಗೆ ಮಾಹಿತಿ ನೀಡಲು ಸೂಚಿಸಿದರು.

The post ಕೋವಿಡ್ ಪರಿಸ್ಥಿತಿ ಅವಲೋಕನ: ಆರೋಗ್ಯ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಸಭೆ appeared first on Karnataka Kahale.

]]>
ಗ್ರಾಮೀಣ ಪ್ರದೇಶದ ಜನಸಾಮಾನ್ಯರ ವೈದ್ಯ ಡಾ. ಎನ್.ಜೋಗೇಂದ್ರನಾಥ್ -ಡಾ.ಅಮ್ಮಸಂದ್ರ ಸುರೇಶ್, ಮೈಸೂರು https://www.karnatakakahale.com/news/19413 Fri, 16 May 2025 02:44:28 +0000 https://www.karnatakakahale.com/?p=19413 ಹಳ್ಳಿಗಳಲ್ಲಿ ಸೇವೆ ಸಲ್ಲಿಸಲು ವೈದ್ಯೆರು ಮೂಗು ಮುರಿಯುತ್ತಿದ್ದ ಸಂದರ್ಭದಲ್ಲಿ ಮೂವತ್ತು ವರ್ಷಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗಡಿ ಭಾಗದ ಗ್ರಾಮವಾದ ಹನಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರಾಗಿ ಕರ್ತವ್ಯಕ್ಕೆ ಸೇರಿದ ವೈದ್ಯರೊಬ್ಬರು ಮೂವತ್ತು ವರ್ಷಗಳ ಕಾಲ ಅದೇ ಹಳ್ಳಿಯಲ್ಲಿ…

The post ಗ್ರಾಮೀಣ ಪ್ರದೇಶದ ಜನಸಾಮಾನ್ಯರ ವೈದ್ಯ ಡಾ. ಎನ್.ಜೋಗೇಂದ್ರನಾಥ್ -ಡಾ.ಅಮ್ಮಸಂದ್ರ ಸುರೇಶ್, ಮೈಸೂರು appeared first on Karnataka Kahale.

]]>

ಹಳ್ಳಿಗಳಲ್ಲಿ ಸೇವೆ ಸಲ್ಲಿಸಲು ವೈದ್ಯೆರು ಮೂಗು ಮುರಿಯುತ್ತಿದ್ದ ಸಂದರ್ಭದಲ್ಲಿ ಮೂವತ್ತು ವರ್ಷಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗಡಿ ಭಾಗದ ಗ್ರಾಮವಾದ ಹನಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರಾಗಿ ಕರ್ತವ್ಯಕ್ಕೆ ಸೇರಿದ ವೈದ್ಯರೊಬ್ಬರು ಮೂವತ್ತು ವರ್ಷಗಳ ಕಾಲ ಅದೇ ಹಳ್ಳಿಯಲ್ಲಿ ಸತತವಾಗಿ ಸೇವೆ ಸಲ್ಲಿಸಿ ಜನರ ಅಪಾರ ಪ್ರೀತಿಯನ್ನು ಗಳಿಸಿ ಸೇವೆಗೆ ಸೇರಿದ ಆಸ್ಪತ್ರೆಯಲ್ಲಿಯೇ ಸೇವಾ ನಿವೃತ್ತಿ ಪಡೆದು ಅದೇ ಹಳ್ಳಿಯಲ್ಲಿ ತನ್ನ ಪ್ರೀತಿಯ ಜನರಿಗಾಗಿ ಸಕಲ ವ್ಯವಸ್ಥೆಯುಳ್ಳ ಆಸ್ಪತ್ರೆಯೊಂದನ್ನು ಕಟ್ಟಿಸಿರುವ ಯಶಸ್ವಿ ಕತೆಯಿದು.
ಈ ಕತೆಯ ನಾಯಕ ಡಾ. ಎನ್. ಜೋಗೇಂದ್ರನಾಥ್. 1993ರಲ್ಲಿ ಎಂಬಿಬಿಎಸ್ ವ್ಯಾಸಂಗ ಮುಗಿಸಿದ ಅವರು ಆರಂಭದಲ್ಲಿ ಒಂದು ವರ್ಷದ ಕಾಲ ಮೈಸೂರಿನ ಮಿಷನ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದರು. 1996ರಲ್ಲಿ ಹನಗೋಡಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸರ್ಕಾರಿ ವೈದ್ಯರಾಗಿ ನೇಮಕಾತಿ ಆದೇಶ ಬಂದಿತು. ಗ್ರಾಮೀಣ ಪ್ರದೇಶದ ಜನಸಾಮಾನ್ಯರ ಸೇವೆ ಮಾಡಬೇಕೆಂಬ ಉತ್ಕಟ ಮನೋಭಿಲಾಷೆಯನ್ನು ಹೊಂದಿದ್ದ ಅವರು ಹಿಂದೆ ಮುಂದೆ ಯೋಚಿಸದೆ, ನಗರದ ಸಕಲ ಸೌಲಭ್ಯವುಳ್ಳ ಖಾಸಗಿ ವೈದ್ಯ ವೃತ್ತಿಯನ್ನು ತ್ಯಜಿಸಿ, ಅಂದಿಗೆ ತೀರಾ ಹಿಂದುಳಿದ ಮತ್ತು ನಾಗರಹೊಳೆ ಅಭಯಾರಣ್ಯದ ಅಂಚಿನ ಗ್ರಾಮವಾದ ಹನಗೋಡಿಗೆ ಹೋಗಿ ಸೇವೆಗೆ ಸೇರಿದರು. ಹನಗೋಡನ್ನು ತಮ್ಮ ಕರ್ಮಭೂಮಿಯನ್ನಾಗಿ ಮಾಡಿಕೊಂಡ ಅವರು ಅಲ್ಲಿಂದ ಇಲ್ಲಿಯವರೆಗೂ ನಗರದ ಕಡೆಗೆ ಎಂದೂ ತಿರುಗಿ ನೋಡಲಿಲ್ಲ.
ಇಂದಿಗೂ ಹಳ್ಳಿಗಳಲ್ಲಿ ಸೇವೆ ಸಲ್ಲಿಸುವ ವೈದ್ಯರು ವಸತಿ ಸೌಕರ್ಯವಿದ್ದರೂ ಅವರು ಸೇವೆ ಸಲ್ಲಿಸುವ ಹಳ್ಳಿಗಳಲ್ಲಿ ವಾಸಿಸದೆ ಹತ್ತಿರದ ನಗರಗಳಲ್ಲಿ ಮನೆ ಮಾಡಿಕೊಂಡು ದಿನನಿತ್ಯ ಬಂದು ಹೋಗುವುದು ಸಾಮಾನ್ಯ. ಡಾ.ಜೋಗಿಂದ್ರನಾಥ್ ಸರ್ಕಾರಿ ಸೇವೆಗೆ ಸೇರಿದಾಗ ೩೦ರ ಅರೆಯದ ಯುವಕ. ಸಾಮಾನ್ಯವಾಗಿ ಆ ವಯಸ್ಸಿನ ಯುವಕರಿಗೆ ನಗರದ ಶೋಕಿ ಜೀವನ ಆಕರ್ಷಿಸುತ್ತದೆ. ಆದರೆ ಅವರು ಮೂಲಭೂತ ಸೌಕರ್ಯಗಳಿಂದ ವಂಚಿತವಾದ, ನಗರ ಪ್ರದೇಶದಿಂದ ದೂರದಲ್ಲಿ ಹುಣಸೂರು ತಾಲ್ಲೂಕಿನ ಕಟ್ಟಕಡೆಯ ಗ್ರಾಮವಾದ ಹನಗೋಡಿನಲ್ಲಿಯೇ ಮನೆ ಮಾಡಿಕೊಂಡು ಅಲ್ಲಿನ ಜನರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.
ಟಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಎಸ್. ನಂಜುಂಡಯ್ಯ ಮತ್ತು ಮುಲ್ಲಾಜಮ್ಮನವರ ಮೂರನೇ ಪುತ್ರನಾಗಿ 08.11.1963 ರಂದು ಜನಿಸಿದ ಡಾ. ಜೋಗಿಂದ್ರನಾಥ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ ಮುಗಿಸಿದರು. ಮೈಸೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ, ಮರಿಮಲ್ಲಪ್ಪ ಕಾಲೇಜಿನಲ್ಲಿ ಪಿಯುಸಿ ಹಾಗೂ ಮೈಸೂರು ಮೆಡಿಕಲ್ ಕಾಲೇಜಿನಿಂದ ಎಂಬಿಬಿಎಸ್ ಪದವಿ ಪಡೆದರು. ಓದಿನಲ್ಲಿ ಸದಾ ಮುಂದಿದ್ದ ಅವರು ಯುವಕನಾಗಿದ್ದಾಗಲೇ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಧ್ವನಿಯಾಗಬೇಕೆಂಬ ಹಂಬಲವನ್ನು ಹೊಂದಿದ್ದರು. ಈ ಹಂಬಲವೇ ಮುಂದೆ ಅವರು ಮೂವತ್ತು ವರ್ಷಗಳ ಕಾಲ ಒಂದೇ ಹಳ್ಳಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಕಾರಣವಾಯಿತು.
೨೦೨೩ರಲ್ಲಿ ಸೇವೆಯಿಂದ ನಿವೃತ್ತರಾದ ನಂತರವೂ ಅವರಿಗೆ ನಗರದಲ್ಲಿ ನಿವೃತ್ತಿ ಜೀನವ ನಡೆಸಬೇಕೆಂಬ ಕಿಂಚಿತ್ತು ಆಸೆ ಕೂಡ ಬರಲಿಲ್ಲ. ಮೂವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಗ್ರಾಮವನ್ನು ಬಿಡಲು ಅವರಿಗೆ ಮನಸ್ಸಾಗಲಿಲ್ಲ. ಅವರು ಜನರ ಪ್ರೀತಿ ಮತ್ತು ಸೇವೆಯ ಹಂಬಲದಿಂದ ಗೌರವ ಸಂಭಾವನೆಯ ಮೇಲೆ ಅದೇ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಸರ್ಕಾರ ಕೂಡ ಅವರ ಸೇವೆಗೆ ಮನ್ನಣೆ ನೀಡಿದೆ. ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವ ಇಂದಿನ ದಿನಗಳಲ್ಲಿಯೂ ರೋಗಿಗಳು ಮತ್ತು ಗರ್ಭಿಣಿ ಮಹಿಳೆಯರು ಡಾ. ಜೋಗಿಂದ್ರನಾಥ್ ಅವರ ಕೈಗುಣ ಒಳ್ಳೆಯದೆಂದು ಅಭಿಮಾನದಿಂದ ಅವರು ಸೇವೆ ಸಲ್ಲಿಸುವ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲಗಿ ತಮ್ಮ ಸರದಿಗಾಗಿ ಕಾಯುವುದನ್ನು ನೋಡಬಹುದು.
ಜನರಿಗೆ ಕಷ್ಟವಾಗಬಾರದೆಂಬ ಕಾರಣಕ್ಕೆ ಇವರದು ನಿರಂತರ ಸೇವೆ. ಹೆರಿಗೆ ನೋವಿವ ಗರ್ಭಿಣಿಯರನ್ನು, ಬೆಳೆಗಳಿಗೆ ಸಿಂಪಡಿಸುವ ಕಿಟನಾಶಕ ಔಷಧಿಗಳನ್ನು ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದವರನ್ನು ಕರೆದುಕೊಂಡು ಬಂದವರು ಅವರ ವಸತಿ ಗೃಹದ ಬಾಗಿಲು ಬಡಿದರೆ ತಕ್ಷಣ ಸ್ಪಂದಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ಮುಂದಾಗುವ ಅವರು ತಿಂಗಳಲ್ಲಿ ಐದರು ರಾತ್ರಿಗಳನ್ನಾದರೂ ಅವರು ನಿದ್ದೆ ಇಲ್ಲದೆ ಕಳೆಯುತ್ತಾರೆ.
ಹನಗೋಡು ಗ್ರಾಮದ ಸುತ್ತಲಿನ ಕಾಮೇಗೌಡನಹಳ್ಳಿ, ಗೌಡಿಕೆರೆ, ಮಾದಿಹಳ್ಳಿ ಸೇರಿದಂತೆ ೩೪ ಹಳ್ಳಿಗಳ ಜನರನ್ನು ಅಪಾರವಾಗಿ ಪ್ರೀತಿಸುವ ಅವರು ತಮ್ಮ ಜನರಿಗೆ ಉತ್ತಮ ವೈದ್ಯಕೀಯ ಸೇವೆ ನೀಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಅದೇ ಗ್ರಾಮದಲ್ಲಿ ೩೦ ಹಾಸಿಗೆಗಳ ‘ಎನ್‌ಜೆಎಂ ಡಾ. ಎನ್. ಜೋಗೇಂದ್ರನಾಥ್ ಆಸ್ಪತ್ರೆ’ಯನ್ನು ಕಟ್ಟಿಸಿದ್ದಾರೆ. ಚಿಕ್ಕ ಪುಟ್ಟ ರಕ್ತ ಪರೀಕ್ಷೆ ಅಥವಾ ಮೂತ್ರ ಪರೀಕ್ಷೆಗಾಗಿ ತಾಲ್ಲೂಕು ಕೇಂದ್ರ ಹುಣಸೂರು ಅಥವಾ ದೂರದ ಮೈಸೂರಿಗೆ ತೆರಳಬೇಕಾಗಿದ್ದ ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳ ಮತ್ತು ಆದಿವಾಸಿಗಳು ವಾಸಿಸುವ ಹಾಡಿಯ ಜನರಿಗೆ ಅನೂಕೂಲವಾಗುವಂತೆ ಎಲ್ಲಾ ರೀತಿಯ ರಕ್ತಪರೀಕ್ಷೆ, ಎಕ್ಸ್ರೇ, ಅಲ್ಟ್ರಾ ಸೌಂಡ್,  ಸ್ಕ್ಯಾನಿಂಗ್, ತುರ್ತು ಚಿಕಿತ್ಸೆ ವಿಭಾಗ, ಆಪರೇಷನ್ ಥಿಯೇಟರ್, ಸಕಲ ಸೌಲಭ್ಯಗಳನ್ನು ಹೊಂದಿರುವ ಹೆರಿಗೆ ಕೊಠಡಿ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿರುವ ಆಸ್ಪತ್ರೆಯನ್ನು ನಿರ್ಮಾಣ ಮಾಡಿದ್ದಾರೆ.
ವ್ಯೆದ್ಯ ವೃತ್ತಿ ವಾಣೀಜ್ಯೀಕರಣ ಮತ್ತು ನಗರೀಕರಣವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಗ್ರಾಮೀಣ ಜನರಿಗಾಗಿ ಸೇವೆ ಸಲ್ಲಿಸುವ ಉದ್ದೇಶದಿಂದ ಹೋಬಳಿ ಕೇಂದ್ರವೊಂದರಲ್ಲಿ ಅತ್ಯಾಧುನಿಕ ಆಸ್ಪತ್ರೆಯನ್ನು ಕಟ್ಟಿಸುವ ಮೂಲಕ ಸದ್ದಿಲ್ಲದೆ, ಪ್ರಚಾರದ ಬೆನ್ನು ಹತ್ತದೆ, ಎಲೆಮರೆಯಲ್ಲಿಯೇ ಸೇವೆ ಸಲ್ಲಿಸುತ್ತಿರುವ ಡಾ. ಜೋಗಿಂದ್ರನಾಥ್ ನಿಜಕ್ಕೂ ಅಭಿನಂದನಾರ್ಹರು.
ಇದೇ ಮೇ 18ರಂದು ನಾದಬ್ರಹ್ಮ ಡಾ. ಹಂಸಲೇಖ, ಗಾವಡಗೆರೆಯ ಗುರುಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಜನರ ಹಾಜರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪನವರು ಸದುದ್ದೇಶದ ಆಸ್ಪತ್ರೆಯನ್ನು ಜನತೆಗೆ ಅರ್ಪಿಸಲಿದ್ದಾರೆ.

-ಡಾ. ಅಮ್ಮಸಂದ್ರ ಸುರೇಶ್, ಮೈಸೂರು
—–

The post ಗ್ರಾಮೀಣ ಪ್ರದೇಶದ ಜನಸಾಮಾನ್ಯರ ವೈದ್ಯ ಡಾ. ಎನ್.ಜೋಗೇಂದ್ರನಾಥ್ -ಡಾ.ಅಮ್ಮಸಂದ್ರ ಸುರೇಶ್, ಮೈಸೂರು appeared first on Karnataka Kahale.

]]>
ಹುಬ್ಬಳ್ಳಿ: ಸ್ಪೋಟದಿಂದ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ.‌ಜಿ. ಪರಮೇಶ್ವರ್ https://www.karnatakakahale.com/news/18198 Tue, 24 Dec 2024 14:25:22 +0000 https://www.karnatakakahale.com/?p=18198 ಹುಬ್ಬಳ್ಳಿ, ಡಿ.24:ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಲ್ಲಿನ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಪೋಟದಿಂದ ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದರು.         …

The post ಹುಬ್ಬಳ್ಳಿ: ಸ್ಪೋಟದಿಂದ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ.‌ಜಿ. ಪರಮೇಶ್ವರ್ appeared first on Karnataka Kahale.

]]>

ಹುಬ್ಬಳ್ಳಿ, ಡಿ.24:ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಲ್ಲಿನ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಪೋಟದಿಂದ ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದರು.                                     ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ, ತಜ್ಞ ವೈದ್ಯರ ತಂಡದಿಂದ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.             ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಬಳಿ ಮನವಿ ಮಾಡಲಾಗುವುದು ಎಂದು ಡಾ. ಪರಮೇಶ್ವರ್ ಅವರು ತಿಳಿಸಿದರು.                              ಈ ಸಂದರ್ಭದಲ್ಲಿ ಸಚಿವರಾದ ಸಂತೋಷ್ ಲಾಡ್, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು, ಕೆಎಂಸಿಆರ್‌ಐ ನಿರ್ದೇಶಕ ಡಾ. ಎಸ್.ಎಫ್.ಕಮ್ಮಾರ, ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಇದ್ದರು.

 

The post ಹುಬ್ಬಳ್ಳಿ: ಸ್ಪೋಟದಿಂದ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ.‌ಜಿ. ಪರಮೇಶ್ವರ್ appeared first on Karnataka Kahale.

]]>
ಬಳ್ಳಾರಿ ಮೃತ ಬಾಣಂತಿಯರ ಕುಟುಂಬಗಳಿಗೆ ಪರಿಹಾರ: ಸಿಎಂಗೆ ಅಭಿನಂದಿಸಿದ ಶಾಸಕ ನಾರಾ ಭರತ್ ರೆಡ್ಡಿ https://www.karnatakakahale.com/news/18116 Fri, 13 Dec 2024 08:54:23 +0000 https://www.karnatakakahale.com/?p=18116 ಬೆಳಗಾವಿ/ಬಳ್ಳಾರಿ, ಡಿ.13: ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ತದನಂತರ ಬಿಮ್ಸ್’ನಲ್ಲಿ ಮೃತಪಟ್ಟಿದ್ದ ಬಳ್ಳಾರಿ ಜಿಲ್ಲೆಯ 4 ಜನ ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳ್ಳಾರಿ ನಗರ ಶಾಸಕ…

The post ಬಳ್ಳಾರಿ ಮೃತ ಬಾಣಂತಿಯರ ಕುಟುಂಬಗಳಿಗೆ ಪರಿಹಾರ: ಸಿಎಂಗೆ ಅಭಿನಂದಿಸಿದ ಶಾಸಕ ನಾರಾ ಭರತ್ ರೆಡ್ಡಿ appeared first on Karnataka Kahale.

]]>

ಬೆಳಗಾವಿ/ಬಳ್ಳಾರಿ, ಡಿ.13: ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ತದನಂತರ ಬಿಮ್ಸ್’ನಲ್ಲಿ ಮೃತಪಟ್ಟಿದ್ದ ಬಳ್ಳಾರಿ ಜಿಲ್ಲೆಯ 4 ಜನ ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಧನ್ಯವಾದ ತಿಳಿಸಿದ್ದಾರೆ.

 

ಈ ಕುರಿತು ಶುಕ್ರವಾರ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.                                                        ಕಳೆದ ಒಂದು ತಿಂಗಳ ಅವಧಿಯಲ್ಲಿ ಬಳ್ಳಾರಿಯ ಬಿಮ್ಸ್’ನಲ್ಲಿ ಸರಣಿ ರೂಪದಲ್ಲಿ ಬಾಣಂತಿಯರು ಮೃತಪಟ್ಟಿದ್ದರು. ಈ ಬಗ್ಗೆ ವಸ್ತು ಸ್ಥಿತಿಯ ಪರಿಶೀಲನೆಗಾಗಿ ಶಾಸಕ ನಾರಾ ಭರತ್ ರೆಡ್ಡಿ ಬಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಮಾಹಿತಿ ಪಡೆದಿದ್ದರು.

 

ನಂತರ ನ.27 ರಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು  ಮುಖ್ಯಮಂತ್ರಿಗಳು ಭೇಟಿ ನೀಡಿದ ಸಂದರ್ಭ ಶಾಸಕ ನಾರಾ ಭರತ್ ರೆಡ್ಡಿ ಬಾಣಂತಿಯರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಸಿಎಂ ಪರಿಹಾರ ಘೋಷಿಸಿದ್ದರು. ಸದ್ಯ ಜಿಲ್ಲೆಯ 4 ಜನ ಬಾಣಂತಿಯರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ.

The post ಬಳ್ಳಾರಿ ಮೃತ ಬಾಣಂತಿಯರ ಕುಟುಂಬಗಳಿಗೆ ಪರಿಹಾರ: ಸಿಎಂಗೆ ಅಭಿನಂದಿಸಿದ ಶಾಸಕ ನಾರಾ ಭರತ್ ರೆಡ್ಡಿ appeared first on Karnataka Kahale.

]]>
ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ: ಪರಿಶೀಲನೆ https://www.karnatakakahale.com/news/18106 Thu, 12 Dec 2024 09:12:13 +0000 https://www.karnatakakahale.com/?p=18106 ಬಳ್ಳಾರಿ,ಡಿ.12: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಐವರು ಬಾಣಂತಿಯರ ಸಾವು ಪ್ರಕರಣ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಅವರು, ಗುರುವಾರ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ…

The post ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ: ಪರಿಶೀಲನೆ appeared first on Karnataka Kahale.

]]>

ಬಳ್ಳಾರಿ,ಡಿ.12: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಐವರು ಬಾಣಂತಿಯರ ಸಾವು ಪ್ರಕರಣ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಅವರು, ಗುರುವಾರ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ ಸಮುಚ್ಚಯ, ಶಸ್ತ್ರ ಚಿಕಿತ್ಸೆ ಕೊಠಡಿ, ಬಾಣಂತಿಯರಿಗೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಮತ್ತು ಆರೈಕೆ ಕ್ರಮಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಈ ತರಹದ ಘಟನೆ ಸಂಭವಿಸಲಿರಲಿಲ್ಲ, ಬಾಣಂತಿಯರ ಸಾವಿಗೆ ಐವಿ ರಿಂಗರ್ ದ್ರಾವಣ ಕೂಡ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಆಗ ಸರಬರಾಜು ಆದ ಎಲ್ಲಾ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬ್ಯಾಚ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಐವಿ ದ್ರಾವಣ ಔಷಧ ಸರಬರಾಜು ಸ್ಥಗಿತಗೊಳಿಸಿದ್ದಾರೆ ಎಂದು ತಿಳಿಸಿದರು.


ಸರ್ಕಾರವು ಮೃತ ಹೊಂದಿದ ಬಾಣಂತಿಯರಿಗೆ ಘೋಷಿಸಿದ ಪರಿಹಾರದಲ್ಲಿ 2 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಮಕ್ಕಳ ಬೆಳವಣಿಗೆಗೆ ಹಾಗೂ ಅವರ ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿ ಸರ್ಕಾರ ವಹಿಸಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.
ಜನಸಾಮಾನ್ಯರ ಆರೋಗ್ಯದ ಕಾಳಜಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಗುಣಮಟ್ಟದ ಔಷಧಿ ಸರಬರಾಜು ಮಾಡಬೇಕು. ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಶಸ್ತ್ರ ಚಿಕಿತ್ಸಾ ಕೇಂದ್ರಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಬಳ್ಳಾರಿ ತಾಲ್ಲೂಕು ತಹಶೀಲ್ದಾರ ಗುರುರಾಜ ಸೇರಿದಂತೆ ಜಿಲ್ಲಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಶುಶೂಶ್ರಕರು ಹಾಗೂ ಇತರರು ಇದ್ದರು.
———–

The post ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ: ಪರಿಶೀಲನೆ appeared first on Karnataka Kahale.

]]>