The post ಬಳ್ಳಾರಿ ಮಹಾನಗರ ಪಾಲಿಕೆ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ appeared first on Karnataka Kahale.
]]>
ಬಳ್ಳಾರಿ, ಏ.17: ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ನಿವೃತ್ತ ಅಧಿಕಾರಿ ಸಿ. ಯಮನಪ್ಪ ಅವರು ಗುರುವಾರ ನಿಧನರಾಗಿದ್ದಾರೆ.
ಅವರಿಗೆ 87 ವರ್ಷವಾಗಿತ್ತು. ಪತ್ನಿ ಜಾನಮ್ಮ, ಪುತ್ರರಾದ ಸಿ. ರವೀಂದ್ರ, ಡಾ. ವೈ. ವಿಶ್ವನಾಥ್, ಸಿ.ಗಂಗಾಧರ್, ಪುತ್ರಿಯರಾದ ಪ್ರೊ. ಸುಲೋಚನಾ ಮತ್ತು ಪ್ರೊ. ಶೋಭ ಸೇರಿದಂತೆ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಗುರುವಾರ ಸಂಜೆ ಕೌಲಬಜಾರ್ ನ ಗುಗ್ಗರಹಟ್ಟಿ ರಸ್ತೆಯಲ್ಲಿರುವ ರುದ್ರ ಭೂಮಿಯಲ್ಲಿ ಅಪಾರ ಬಂಧು ಮಿತ್ರರ ಸಮ್ಮುಖದಲ್ಲಿ ಅಂತಿಮಸಂಸ್ಕಾರ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಮ್ಮ ತಂದೆ ಸಿ.ಯಮನಪ್ಪ ಅವರು ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಆಡಳಿತದಲ್ಲಿ ಕನ್ನಡ ಗರಿಷ್ಟ ಬಳಕೆಗಾಗಿ ಅಂದಿನ ಜಿಲ್ಲಾಉಸ್ತುವಾರಿ ಸಚಿವ ಎಂ.ಪಿ. ಪ್ರಕಾಶ ಅವರು ಜಿಲ್ಲಾಡಳಿತದ ಪರವಾಗಿ ಪ್ರಶಸ್ತಿ ನೀಡಿ ಗೌರವಿಸಿದ್ದರು ಎಂದು ಬಳ್ಳಾರಿ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ವೈ.ವಿಶ್ವನಾಥ್ ಸ್ಮರಿಸಿದ್ದಾರೆ.
ಸಂತಾಪ: ಸಿ. ಯಮನಪ್ಪ ಅವರ ನಿಧನಕ್ಕೆ ಹಿರಿಯ ಸಾಹಿತಿ ಡಾ.ವೆಂಕಟಯ್ಯ ಅಪ್ಪಗೆರೆ, ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ಬಳ್ಳಾರಿ ಐಜಿಪಿ ಕಚೇರಿಯ ನಿವೃತ್ತ ಆಡಳಿತಾಧಿಕಾರಿ ಕೆ.ಮಾರುತಿ, ನಿವೃತ್ತ ಪ್ರಾಚಾರ್ಯ ಡಾ. ಸಿ ಎಚ್ ಸೋಮನಾಥ, ತಹಸೀಲ್ದಾರರಾದ ಹೊನ್ನಮ್ಮ, ಬಳ್ಳಾರಿ ಮೆಡಿಕಲ್ ಕಾಲೇಜ್ ಪ್ರಾಧ್ಯಾಪಕ ಡಾ. ವಿಜಯ್ ಅಪ್ಪಗೆರೆ, ಎಸ್.ಪಿ ಕಚೇರಿಯ ಎಎಸ್ಐ ಸಿ. ಹನುಮಂತಪ್ಪ, ಕಾಡಾ ನಿವೃತ್ತ ಅಧಿಕಾರಿ ಗುರುಸ್ವಾಮಿ, ಸಿಎಂಎಸ್ ಮುಖಂಡ ಸಿ. ನರಸಪ್ಪ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
The post ಬಳ್ಳಾರಿ ಮಹಾನಗರ ಪಾಲಿಕೆ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ appeared first on Karnataka Kahale.
]]>The post ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ appeared first on Karnataka Kahale.
]]>The post ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ appeared first on Karnataka Kahale.
]]>The post ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾನತೆಯ ಸಮಾಜ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ -ಪ್ರಾಚಾರ್ಯ ಡಾ. ಅಶ್ವ ರಾಮು ವಿಷಾಧ appeared first on Karnataka Kahale.
]]>
ಬಳ್ಳಾರಿ: ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ವಿಶ್ವಜ್ಞಾನಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಮಹಾವಿದ್ಯಾಲಯದ ಕಾರ್ಯದರ್ಶಿಗಳಾದ ತಾಜುದ್ದೀನ್ ಪಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಅವರು ಭಾರತೀಯ ಸಂವಿಧಾನವನ್ನು ರಚಿಸದೆ ಹೋಗಿದ್ದರೆ, ಇಂದಿನ ಸಮಾಜದ ಸ್ಥಿತಿ ಹೇಗಿರುತ್ತಿತ್ತೋ ಎಂಬ ಆತಂಕವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಅಶ್ವ ರಾಮು ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರ ಆಶಯಗಳ ಪ್ರಸ್ತುತತೆಯನ್ನು ಹೃದಯಸ್ಪರ್ಶಿಯಾಗಿ ವಿವರಿಸಿದರು. ಬಾಬಾಸಾಹೇಬ ಅಂಬೇಡ್ಕರ್ ಅವರು ಕನಸು ಕಂಡ ಸಮಾನತೆಯ ಸಮಾಜ ಇನ್ನೂ ಸಂಪೂರ್ಣವಾಗಿ ನಿರ್ಮಾಣವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಜಾತಿ, ವರ್ಗ ಮತ್ತು ಲಿಂಗ ಅಸಮಾನತೆಗಳು ಇಂದಿಗೂ ಸಮಾಜದಲ್ಲಿ ಹಾಸುಹೊಕ್ಕಾಗಿರುವುದನ್ನು ಉಲ್ಲೇಖಿಸಿ, ಅವುಗಳನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದು ಹೇಳಿದರು.

“ಶಿಕ್ಷಣವೇ ವ್ಯಕ್ತಿಯ ನಿಜವಾದ ಶಕ್ತಿ” ಎಂದು ಒತ್ತಿ ಹೇಳಿದ ಅವರು, ಅಂಬೇಡ್ಕರ್ ಅವರು “ಶಿಕ್ಷಣ, ಸಂಘಟನೆ, ಮತ್ತು ಹೋರಾಟ” ಎಂಬ ಮಂತ್ರದ ಸಂದೇಶವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇನ್ನೂ ಅವರು ಸಂವಿಧಾನದ ಮಹತ್ವವನ್ನು ವಿವರಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ತಿಳಿಸಿದರು. ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಪುಸ್ತಕಗಳಲ್ಲಿ ಉಳಿಯದೆ, ನಮ್ಮ ದಿನನಿತ್ಯದ ಬದುಕಿನಲ್ಲಿ ಪ್ರತಿಫಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಎಚ್.ಎಂ. ಗಂಗಮ್ಮ, ವೀರೇಶ, ಗಂಗಾಧರ ಹಾಗೂ ತ್ರಿವೇದಿ ಅವರು ಅಂಬೇಡ್ಕರ್ ಅವರ ಜೀವನ ಮತ್ತು ಆದರ್ಶಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಉಪನ್ಯಾಸಕಿಯರಾದ ಗೌಸಿಯ ಬೇಗಂ, ಶಿವಗಂಗಾ ಮತ್ತು ನಾಗವೇಣಿ ಅವರು ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಗೀತಾ ಅವರು ಪ್ರಾರ್ಥಿಸಿದರು. ಬಸವರಾಜ್ ಪಿ.ಎಂ. ಸ್ವಾಗತಿಸಿದರು. ಬೋಧಕ ರಾಮಕೃಷ್ಣಾರೆಡ್ಡಿ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಆನಂದ ವಂದಿಸಿದರು. ಪ್ರಶಿಕ್ಷಣಾರ್ಥಿ ಸಿದ್ದರೂಡ ಅವರು ನಿರೂಪಿಸಿದರು.ಸಹಾಯಕ ಪ್ರಾಧ್ಯಾಪಕ ಅಂಥೋನಿ ಮತ್ತು ಆಲಂಬಾಷಾ ಅವರು ನಿರ್ವಹಿಸಿದರು.
The post ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾನತೆಯ ಸಮಾಜ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ -ಪ್ರಾಚಾರ್ಯ ಡಾ. ಅಶ್ವ ರಾಮು ವಿಷಾಧ appeared first on Karnataka Kahale.
]]>The post ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ appeared first on Karnataka Kahale.
]]>
ಬಳ್ಳಾರಿ, ಏ.12: ಅಂತರಾಷ್ಟ್ರೀಯ ಪ್ರಸಿದ್ಧ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಅಂತರಾಷ್ಟ್ರೀಯ ಜಾನಪದ ಗಾಯಕ, ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರು ಆಯ್ಕೆಯಾಗಿದ್ದಾರೆ.
ನಗರದ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಕಳೆದ ವರ್ಷದಿಂದ ರಾಷ್ಟ್ರೀಯ ಪ್ರಶಸ್ತಿ ನೀಡುತ್ತಿದ್ದು, ಏ.12 ರಂದು ಭಾನುವಾರ ಸಂಜೆ 5 ಗಂಟೆಗೆ ಸ್ಥಳೀಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯ ಈ. ತುಕಾರಾಂ ಅವರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಟ್ರಸ್ಟ್ ಹಾಗೂ ಕಾರ್ಯಕ್ರಮ ಸಂಚಾಲಕ ಬೆಳಗಲ್ಲು ಹನುಮಂತ ಅವರು ತಿಳಿಸಿದರು.
ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಉದ್ಘಾಟಿಸುವರು. ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್, ಜಿಲ್ಲಾ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್, ಮೈಸೂರಿನ ರಂಗಕರ್ಮಿ, ಶ್ರೀ ರಾಜೇಶ್ವರಿ ವಸ್ತ್ರಾಲಂಕಾರದ ಮಾಲೀಕ ಬಿ.ಎಂ. ರಾಮಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಸಿ.ಎನ್ ಮಂಜೇಶ್ ಚನ್ನಾಪುರ, ನಗರದ ಶ್ರೀ ಕೊಟ್ಟೂರು ಸ್ವಾಮಿ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಹಿರೇಮಠ ಮತ್ತು ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಕಾರ್ಯಕ್ರಮಕ್ಕೆ ಮುನ್ನ ಮೋತಿ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಜಾನಪದ ಕಲಾ ತಂಡಗಳ ಆಕರ್ಷಕ ಮೆರವಣಿಗೆಯಲ್ಲಿ ಅತಿಥಿ ಗಣ್ಯರು, ನಾಡೋಜ ಬೆಳಗಲ್ಲು ವೀರಣ್ಣ ಅವರ ಒಡನಾಡಿಗಳು, ಹಿತೈಷಿ, ಅಭಿಮಾನಿಗಳು ರಂಗಮಂದಿರ ತಲುಪುವರು.
ಸಾಂಸ್ಕೃತಿಕ ಅಂಕಣ: ನೆರೆಯ ಆಂದ್ರಪ್ರದೇಶದ ಸತ್ಯಸಾಯಿ ಜಿಲ್ಲೆ ಧರ್ಮಾವರಂದ ನಿಮ್ಮಲಕುಂಟ ಶ್ರೀ ವನಾರ್ಚ ರಾಮಕೃಷ್ಣ ತೊಗಲುಗೊಂಬೆಯಾಟ ಕಲಾ ತಂಡದಿಂದ ಸುಂದರಕಾಂಡ (ಸೀತಾಪಹರಣ) ತೊಗಲು ಗೊಂಬೆಯಾಟ ಪ್ರದರ್ಶನ ಪ್ರಶಸ್ತಿ ಪ್ರದಾನದ ಬಳಿಕ ಜರುಗಲಿದೆ.

ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ ಡಾ. ಬಾನಂದೂರು ಕೆಂಪಯ್ಯ ಅವರ ಪರಿಚಯ: ಅಂತಾರಾಷ್ಟ್ರೀಯ ಜಾನಪದ ಗಾಯಕ, ಸಾಹಿತಿ, ಸಂಗೀತಗಾರ, ಸಂಶೋಧಕ, ಹಾಡುವ ಹಕ್ಕಿ
ಡಾ. ಬಾನಂದೂರು ಕೆಂಪಯ್ಯ ಅವರು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಾನಂದೂರಿನಲ್ಲಿ 1951 ಜೂನ್14ರಂದು ಜಾನಪದ ಕುಟುಂಬದಲ್ಲಿ ಜನಿಸಿದರು. ಇವರ ತಾಯಿ ಹುಚ್ಚಮ್ಮ ಜನಪದ ಗಾಯಕಿ, ತಂದೆ ಚರ್ಮವಾದ್ಯ ನುಡಿಸುವುದರಲ್ಲಿ ಪರಿಣಿತ ಹೊಂದಿದ್ದ ವೆಂಕಟಯ್ಯ ಅವರು. ಸಾಂಸ್ಕೃತಿಕ ಶ್ರೀಮಂತಿಕೆಯ ದಂಪತಿಗಳ ನಾಲ್ಕು ಗಂಡು, ನಾಲ್ಕು ಹೆಣ್ಣು ಮಕ್ಕಳಲ್ಲಿ ಕೆಂಪಯ್ಯನವರೆ ಕಿರಿಯರು. ಇವರ ಅಣ್ಣ ಆರು ನಗಾರಿ ಬಾರಿಸುವ ಪರಿಣತಿ ಪಡೆದು ನಗಾರಿ ಸಿದ್ದಯ್ಯನೆಂದೇ ಪ್ರಸಿದ್ಧಿ ಹೊಂದಿದ ಪ್ರತಿಭಾವಂತರು.
ಡಾ. ಬಾನಂದೂರು ಅವರ ಪ್ರಾಥಮಿಕ ಶಿಕ್ಷಣ ಬಾನಂದೂರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಬಿ.ಎ(ಆನರ್ಸ್) ಪದವಿ,
೧೯೮೪ರಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಸ್ನಾತಕೋತ್ತರ(ಎಂ.ಎ) ಪದವಿ ಪಡೆದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಕರ್ನಾಟಕ ದಲಿತ ಜಾನಪದ ಸಂಗೀತದಲ್ಲಿ ಡಿ.ಲಿಟ್. ಪದವಿ ಪಡೆದಿದ್ದಾರೆ.
ಡಾ. ಬಾನಂದೂರು ಕೆಂಪಯ್ಯನವರು ಆರಂಭದಲ್ಲಿ ಮಾಧ್ಯಮಿಕ ಶಾಲೆಯ ಶಿಕ್ಷಕರಾಗಿ, ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ೧೯೮೦ರಲ್ಲಿ ಮೈಸೂರು ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇರಿದ ಬಳಿಕ ಹಿಂತಿರುಗಿ ನೋಡಲಿಲ್ಲ . ಬೆಂಗಳೂರು,ಧಾರವಾಡ, ಗುಲ್ಬರ್ಗಾ ಆಕಾಶವಾಣಿ ಕೇಂದ್ರಗಳಲ್ಲಿ ಹಾಗೂ ಬೆಂಗಳೂರು ದೂರದರ್ಶನ ಕೇಂದ್ರದ ಉಪ ನಿರ್ದೇಶಕರಾಗಿ, ಕಾರ್ಯಕಾರಿ ನಿರ್ಮಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದರು.
ಸಾಹಿತ್ಯ ಸೇವೆ: ಡಾ. ಕೆಂಪಯ್ಯ ಅವರು ಬಯಲು ಸೀಮೆಯ ಜಾನಪದ ಕಥೆಗಳ ಸಂಕಲನ ಹೊರ ತಂದಿದ್ದಾರೆ. ‘ಚೆಂದುಳ್ಳಿ ಪದವ ಕಲಸವ್ವ’ ಹಾಗು ‘ಮೊಗ್ಗಾಗಿ ಬಾರೊ ತುರುಬಿಗೆ’ ಎಂಬ ಹೆಸರಿನ ಜನಪದ ಗೀತೆಗಳ ಸಂಗ್ರಹ, . ‘ನನ್ನ ಈ ನೆಲದಲ್ಲಿ’ ಎನ್ನುವ ಕವನ ಸಂಕಲನ ಪ್ರಕಟಿಸಿದ್ದಾರೆ. ಕನ್ನಡ ನಾಡಿನ ನೂರಕ್ಕೂ ಹೆಚ್ಚು ಜನಪದ ಕಲಾವಿದರನ್ನು ಹಾಗು ಅವರ ಜನಪದ ಸಾಹಿತ್ಯವನ್ನು ಪತ್ರಿಕೆಗಳ ಮೂಲಕ ನಾಡಿಗೆ ಪರಿಚಯಿಸಿರುವುದುವಿಶೇಷ.
ಡಾ. ಬಾನಂದೂರು ಅವರು, ಹೈಸ್ಕೂಲಿನಲ್ಲಿದ್ದಾಗಲೆ ತಮ್ಮ ಜನಪದ ಹಾಡುಗಾರಿಕೆಗಾಗಿ ಬಹುಮಾನ ಪಡೆದು ‘ಬೆಳೆಯುವ ಸಿರಿ ಮೊಳಕೆಯಲಿ’ ಎಂಬಂತೆ ಗಮನ ಸೆಳೆದರು.
ಎರಡು ಬಾರಿ ಅಮೆರಿಕಾ, ಒಂದು ಬಾರಿ ಇಂಗ್ಲೆಂಡ್ ಪ್ರವಾಸ ಕೈಗೊಂಡು ತಮ್ಮ ಜಾನಪದ ಗಾಯನದ ಮೂಲಕ ನಾಡಿಗೆ, ದೇಶಕ್ಕೆ ಕೀರ್ತಿ ತಂದ ಡಾ. ಕೆಂಪಯ್ಯ ಅವರು ದೇಶದ ವಿವಿಧ ನಗರಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ ಮಾತ್ರವಲ್ಲ ಅನೇಕ ಸಣ್ಣಾಟ, ದೊಡ್ಡಾಟ, ಗೊಂಬೆಯಾಟಗಳಿಗೆ ಸಂಗೀತ ಒದಗಿಸಿದ್ದಾರೆ. ಸುಪ್ರಸಿದ್ಧ ಹಿನ್ನೆಲೆ ಗಾಯಕರಾದ ಶ್ರೀಮತಿ ಮಂಜುಳಾ ಗುರುರಾಜ್ ಹಾಗು ಕಸ್ತೂರಿ ಶಂಕರ್ ಜೊತೆಗೆ ಹಾಡಿದ್ದಾರೆ. ಈ ಧ್ವನಿಸುರಳಿಗಳಲ್ಲಿ ‘ಬಣ್ಣದ ಬಳೆಗಾರ’ ವಿಶೇಷವಾಗಿ ಜನಪ್ರಿಯವಾಗಿದೆ. ಕೆಂಪಯ್ಯನವರು ಜನಪ್ರಿಯಗೊಳಿಸಿದ ಮತ್ತೊಂದು ಜನಪದ ಗೀತೆಯೆಂದರೆ ‘ಬಿದಿರು ನಾನಾರಿಗಲ್ಲದವಳು’.
ಸಿನಿಮಾ ನಂಟು: ಡಾ. ಕೆಂಪಯ್ಯನವರು ಗುರುರಾಜ ಕಾಟೆ ನಿರ್ದೇಶನದ ‘ಬಂಗಾರದ ಗೂಳಿ’ ಚಲನಚಿತ್ರಕ್ಕೆ ಗುಣಸಿಂಗ ಅವರ ಜತೆ ಸಂಗೀತ ನಿರ್ದೇಶಿಸಿದ್ದಾರೆ. ಅಲ್ಲದೆ “ಜಿಪ್ಸಿಗಳು” ಎನ್ನುವ ರಶಿಯನ್ ನಾಟಕಕ್ಕೂ ಸಂಗೀತ ನೀಡಿದ ಹೆಗ್ಗಳಿಕೆ ಇವರದು.
ಅಕಾಡೆಮಿ ಅಧ್ಯಕ್ಷ ಸ್ಥಾನ: ಮೂರು ಬಾರಿ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾಗಿ ಒಂದು ಬಾರಿ ಅಧ್ಯಕ್ಷರಾಗಿ, ಕರ್ನಾಟಕ ಜಾನಪದ ಪರಿಷತ್ತಿನ ಆಡಳಿತ ಮಂಡಳಿ ಸದಸ್ಯರಾಗಿಯೂ ಜಾನಪದ ಕ್ಷೇತ್ರಕ್ಕೆ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.
ಪ್ರಶಸ್ತಿಗಳು: ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಬೆಂಗಳೂರು ಕೆಂಪೇಗೌಡ ಪ್ರಶಸ್ತಿ, ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಕರವೇ ‘ಜಾನಪದ ಗಾಯನ ಸಾರ್ವಭೌಮ’ ಪ್ರಶಸ್ತಿ, ‘ಅರೋಹಣ ಕಲಾರೂಪ ಪ್ರಶಸ್ತಿ, ನೆಲದ ನುಡಿಕಾರ ಸೇರಿದಂತೆ ನೂರಾರು ಸಂಘ ಸಂಸ್ಥೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.
75ರ ಹರೆಯದಲ್ಲೂ ಡಾ. ಬಾನಂದೂರು ಕೆಂಪಯ್ಯ ಅವರು ಗಾಯನ, ಕಾವ್ಯ- ಕತೆ ರಚನೆಯಲ್ಲಿ ಖುಷಿ ನೆಮ್ಮದಿ ಕಾಣುತ್ತಿದ್ದಾರೆ.

-ಸಿ.ಮಂಜುನಾಥ, ಸಂಪಾದಕರು: ಕರ್ನಾಟಕ ಕಹಳೆ ಡಾಟ್ ಕಾಮ್, ಬಳ್ಳಾರಿ
The post ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ appeared first on Karnataka Kahale.
]]>The post ಕೆಯುಡಬ್ಲ್ಯುಜೆ ಪ್ರಶಸ್ತಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ: ರವೀಂದ್ರ ತೆಳಗಡೆ appeared first on Karnataka Kahale.
]]>
ಬಳ್ಳಾರಿ: ಕಳೆದ 19 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನನಗೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪ್ರಕಟಿಸಿರುವ ಈ ವರ್ಷದ ಪ್ರಜಾ ಪ್ರಗತಿ ಪ್ರಶಸ್ತಿ ಕ್ಷೇತ್ರದಲ್ಲಿನ ಸೇವೆಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರಶಸ್ತಿ ಪುರಸ್ಕೃತ ಬಳ್ಳಾರಿಯ ವಿಜಯ ಕರ್ನಾಟಕ ಪತ್ರಿಕಾ ಕಚೇರಿಯಲ್ಲಿ ಮುಖ್ಯ ಉಪ ಸಂಪಾದಕ ರವೀಂದ್ರ ತೆಳಗಡೆ ಅವರು ಹೇಳಿದರು.
ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನವರಾದ ತಾವು ಕರ್ನಾಟಕ ವಿವಿಯಲ್ಲಿ ಅಭ್ಯಾಸಮಾಡಿ. 2007 ರಲ್ಲಿ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡೆ. ಇಲ್ಲಿನ ಸ್ಥಾನಿಕ ಸಂಪಾದಕರಾದ ಗಂಗಾಧರ ಬಂಡಿಹಾಳ್ ಹಾಗು ಸಿಬ್ಬಂದಿ ಸಹಕಾರದಿಂದ ಆಡಳಿತ, ಶಿಕ್ಷಣ ಮೊದಲಾದ ವಿಷಯಗಳ ಕುರಿತು 56 ಲೇಖನಗಳನ್ನು ಬರೆದು ಪ್ರಕಟಿಸಿದೆ. ಮಾಧ್ಯಮದ ಮೂಲಕ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡುವ ಆಸೆ ನನ್ನದು. ಈ ಪ್ರಶಸ್ತಿ
ನನಗೆ ಮತ್ತಷ್ಟು ಬರೆಯಲು ಪ್ರೋತ್ಸಾಹ ನೀಡಿದೆ ಎಂದು ಹರ್ಷಿಸಿದರು.
ಮುಖ್ಯ ಅತಿಥಿಯಾಗಿದ್ದ ವಿಜಯಕರ್ನಾಟಕ ಬಳ್ಳಾರಿ ಕಚೇರಿಯ ಸ್ಥಾನಿಕ ಸಂಪಾದಕ ಗಂಗಾಧರ ಬಂಡಿಹಾಳ ಅವರು ಮಾತನಾಡಿ, ಸಾಮಾನ್ಯವಾಗಿ ಇಂತಹ ಪ್ರಶಸ್ತಿಗಳು ಹೆಚ್ಚಿನದಾಗಿ ವರದಿಗಾರರಿಗೆ ದೊರೆಯುತ್ತವೆ. ಆದರೆ ಕಾನಿಪ ಈಗ ಸಂಪಾದಕೀಯದ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದಯ ಖುಷಿ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾ ಅಧ್ಯಕ್ಷ ಎನ್.ವೀರಭದ್ರಗೌಡ, ಕಾನಿಪವು ಮಾಧ್ಯಮ ಕ್ಷೇತ್ರದಲ್ಲಿರುವವರಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ತಿಂಗಳ 11, 12 ರಂದು ಬೀದರ್ ನಲ್ಲಿ ನಡೆಯುವ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆಂದರು.
ಕನ್ನಡ ಪ್ರಭ ಹಿರಿಯ ವರದಿಗಾರ ಕೆ.ಎಂ.ಮಂಜುನಾಥ ಮಾತನಾಡಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಕುಲಕರ್ಣಿ ವೇದಿಕೆಯಲ್ಲಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಬಸವರಾಜ್ ಸ್ವಾಗತಿಸಿ, ನಿರ್ವಹಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಮರೇಶ್ ಎಲ್.ಕೆ ವಂದಿಸಿದರು.
The post ಕೆಯುಡಬ್ಲ್ಯುಜೆ ಪ್ರಶಸ್ತಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ: ರವೀಂದ್ರ ತೆಳಗಡೆ appeared first on Karnataka Kahale.
]]>The post ರಾಷ್ಟ್ರೀಯ ಯುವ ಸಂಸತ್ ಉತ್ಸವಕ್ಕೆ ಚಾಲನೆ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣತೊಡಲು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಸಲಹೆ appeared first on Karnataka Kahale.
]]>The post ರಾಷ್ಟ್ರೀಯ ಯುವ ಸಂಸತ್ ಉತ್ಸವಕ್ಕೆ ಚಾಲನೆ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣತೊಡಲು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಸಲಹೆ appeared first on Karnataka Kahale.
]]>The post ವಿದ್ಯಾರ್ಥಿ ಯುವಸಮೂಹ ಇಪ್ಪತ್ತರಲ್ಲಿ ಎಡವಟ್ಟು ಮಾಡಿಕೊಂಡರೆ ಎಪ್ಪತ್ತರಲ್ಲಿ ಕಷ್ಟ ಪಡಬೇಕಾಗುತ್ತದೆ – ಕಾಳಪ್ಪ ಪತ್ತಾರ್ appeared first on Karnataka Kahale.
]]>The post ವಿದ್ಯಾರ್ಥಿ ಯುವಸಮೂಹ ಇಪ್ಪತ್ತರಲ್ಲಿ ಎಡವಟ್ಟು ಮಾಡಿಕೊಂಡರೆ ಎಪ್ಪತ್ತರಲ್ಲಿ ಕಷ್ಟ ಪಡಬೇಕಾಗುತ್ತದೆ – ಕಾಳಪ್ಪ ಪತ್ತಾರ್ appeared first on Karnataka Kahale.
]]>The post ಗುತ್ತಿಗೆ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ -ರಾಜ್ಯಾಧ್ಯಕ್ಷ ಆರ್. ಮಂಜುನಾಥ್ appeared first on Karnataka Kahale.
]]>
ಬಳ್ಳಾರಿ, ಫೆ.23: ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಗುತ್ತಿಗೆದಾರರಿಗೆ ಉಳಿಸಿಕೊಂಡ ಬಾಕಿ ಹಣ ರೂ.37,000 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡದಿದ್ದಲ್ಲಿ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲಾ ಗುತ್ತಿಗೆದಾರರಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ತಿಳಿಸಿದರು.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ಗುತ್ತಿಗೆದಾರರು ತಮ್ಮ ಹೊಲ ಮನೆ ಆಸ್ತಿಗಳನ್ನು ಅಡವಿಟ್ಟು ಸಾಲ ಸೋಲ ಮಾಡಿ ಪಿಡಬ್ಲ್ಯೂಡಿ, ಆರ್ ಡಿ ಪಿ ಆರ್, ಜಲಸಂಪನ್ಮೂಲ ಸೇರಿದಂತೆ ಐದಾರು ಇಲಾಖೆಯ ಕೆಲಸಗಳನ್ನು ಮಾಡಿಕೊಟ್ಟಿದ್ದೇವೆ. ಆದರೆ ನಮಗೆ ಗುತ್ತಿಗೆ ಹಣವನ್ನು ಬಿಡುಗಡೆ ಮಾಡದೇ ಹಿಂದಿನ ಸರ್ಕಾರ ಮುಂದಿನ ಸರ್ಕಾರ ಎಂದು ಸಬೂಬುಗಳನ್ನು ಹೇಳುತ್ತಾ ಮುಂದೂಡುತ್ತಿದೆ ಇದರಿಂದ ನಮಗೆ ತುಂಬಾ ಆರ್ಥಿಕ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಾವು ಕೆಲಸ ಮಾಡಿದ ಪಿಡಬ್ಲ್ಯೂಡಿ ಇಲಾಖೆಯ 8370, ಆರ್ ಡಿ ಪಿ ಆರ್ 3800, ಜಲಸಂಪನ್ಮೂಲ ಇಲಾಖೆಯ 13000, ಸಣ್ಣ ನೀರಾವರಿ ಇಲಾಖೆಯ 3000, ನಗರಾಭಿವೃದ್ಧಿ ಇಲಾಖೆಯ 2000 ವಸತಿ 2006, ಕಾರ್ಮಿಕ ಇಲಾಖೆಯ 2000 ಕೋಟಿ ಬಿಬಿಎಂಪಿ 2600 ಕೋಟಿ ಒಟ್ಟು 37,000 ಕೋಟಿ ಬಾಕಿ ಹಣವನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 100 ಪುಟಗಳ ಮನವಿ ಪತ್ರವನ್ನು ಸಲ್ಲಿಸಿದ್ದೇವೆ ಆದರೂ ಸಹ ಸರ್ಕಾರ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.
ನಮ್ಮ ಗುತ್ತಿಗೆ ಹಣ ಬಾಕಿ ಉಳಿಸಿಕೊಂಡು ಹತ್ತು ಜಿಲ್ಲೆಗಳ ಒಟ್ಟುಗೂಡಿಸಿ ಪ್ಯಾಕೇಜ್ ಆಗಿ ಹೊರ ರಾಜ್ಯದವರಿಗೆ ಗುತ್ತಿಗೆಯನ್ನು ನೀಡಲಾಗುತ್ತದೆ ಅವರು ನೀಡುವ ಉಪಗುತ್ತಿಗೆಯಿಂದ ನಾವು ಕೆಲಸ ಮಾಡುವ ಅನಿವಾರ್ಯತೆ ಎದುರಾಗಿದೆ ಕೂಡಲೇ ಸರ್ಕಾರ ನಮ್ಮ ಬಾಕಿ ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗಳನ್ನು ನೇರವಾಗಿ ನಮಗೆ ಗುತ್ತಿಗೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ನಮ್ಮ ಸಂಘದ 67 ಜನ ನಿರ್ದೇಶಕರು ಮತ್ತು ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಸಭೆ ಸೇರಿ ಒಂದು ದಿನ ಕಾಮಗಾರಿಯನ್ನು ನಿಲ್ಲಿಸಿ ಸಾಂಕೇತಿಕವಾಗಿ ಧರಣಿ ನಡೆಸಲಾಗುವುದು ನಂತರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲಾ ಗುತ್ತಿಗೆದಾರರು ಸೇರಿ ಪ್ರತಿಭಟನೆಯನ್ನು ನಡೆಸಲಾಗುವುದು ಅಷ್ಟರೊಳಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಬಂದು ನಮ್ಮ ಜೊತೆ ಮಾತನಾಡಿದಲ್ಲಿ ನಾವು ಪ್ರತಿಭಟನೆಯನ್ನು ಕೈ ಬಿಡಲು ಸಿದ್ದರಿದ್ದೇವೆ ಎಂದರು.
ನಮ್ಮ ಹೋರಾಟ ಅಥವಾ ಪ್ರತಿಭಟನೆ ಸರ್ಕಾರದೊಂದಿಗೆ ಸಂಘರ್ಷವಲ್ಲ ನಮ್ಮ ಹಣಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ ನಮ್ಮ ಸಮಸ್ಯೆಯನ್ನು ಸಿಎಂ ಗಮನಕ್ಕೆ ತಂದರು ಅವರು ಹಾರಿಕೆ ರೀತಿಯಲ್ಲಿ ಮಾತನಾಡಿ ಸಾಗ ಹಾಕುತ್ತಾರೆ ಇದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಹದಗೆಟ್ಟು ನಮ್ಮ ಕುಟುಂಬಗಳು ಬೀದಿಗೆ ಬೀಳುವ ಸಾಧ್ಯತೆ ಇದೆ. ಕಾರಣ ಸರ್ಕಾರ ಕೂಡಲೇ ನಮ್ಮ ಬಾಕಿ ಹಣವನ್ನು ಬಿಡುಗಡೆಗೊಳಿಸಬೇಕೆಂದು ಆರ್ ಮಂಜುನಾಥ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಅಧ್ಯಕ್ಷ ರಮಣ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಉಮಾಶಂಕರ್ ರೆಡ್ಡಿ, ನಾಗಪ್ಪ ನಾಗರಾಜ್ ರಾಜಶೇಖರ್, ಪ್ರದೀಪ್, ಸಿದ್ದೇಶ್ ಸೇರಿದಂತೆ ಇತರರಿದ್ದರು.
The post ಗುತ್ತಿಗೆ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ -ರಾಜ್ಯಾಧ್ಯಕ್ಷ ಆರ್. ಮಂಜುನಾಥ್ appeared first on Karnataka Kahale.
]]>The post ಸೋಶಿಯಲ್ ಮೀಡಿಯಾ ವ್ಯಾಮೋಹಕ್ಕೆ ಬಲಿಯಾಗಬೇಡಿ: ಶಾಸಕ ನಾರಾ ಭರತ್ ರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು appeared first on Karnataka Kahale.
]]>
ಬಳ್ಳಾರಿ, ಫೆ.18: ವಿದ್ಯಾರ್ಥಿ ಯುವಜನರು ಸೋಶಿಯಲ್ ಮೀಡಿಯಾದ ವ್ಯಾಮೋಹಕ್ಕೆ ಬಲಿಯಾಗದೇ ಓದಿನತ್ತ ಗಮನ ಹರಿಸಿ ಪೋಷಕರ ಕನಸುಗಳನ್ನು ಈಡೇರಿಸಬೇಕು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯದು ಕೆಟ್ಟದ್ದೂ ಎರಡೂ ಇವೆ, ಜ್ಞಾನ ಸಂಪಾದನೆಗೆ ಬಳಸಿಕೊಳ್ಳಿ, ಆದರೆ ಓದುವ, ಒಂದು ನಿರ್ದಿಷ್ಟ ಗುರಿ ತಲುಪುವ ಈ ವಯಸ್ಸಿನಲ್ಲಿ ಶಿಕ್ಷಕರ, ಗುರು ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ ಎಂದು ಕಿವಿಮಾತು ಹೇಳಿದರು.
ನೀವು ಹೊರ ಜಿಲ್ಲೆಗಳಿಗೆ ವ್ಯಾಸಂಗಕ್ಕೆ ಹೋದಾಗ ನಮ್ಮ ಬಳ್ಳಾರಿಯ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಆ ರೀತಿ ನಗರವನ್ನು ಅಭಿವೃದ್ಧಿಪಡಿಸುವೆ ಎಂದ ಶಾಸಕರು, ನಿಮ್ಮ ಪ್ರೀತಿ ಆಶೀರ್ವಾದದಿಂದ ನಾನು ಶಾಸಕನಾಗಿರುವೆ, ನಿಮ್ಮ ಪ್ರೀತಿ ಆಶೀರ್ವಾದ ಇದ್ದರೆ ಮುಂಬರುವ 40 ವರ್ಷಗಳ ಕಾಲ ನಾನು ಶಾಸಕನಾಗಿ ನಿಮ್ಮ ಸೇವೆ ಮಾಡುವೆ ಎಂದರು.
ಬಳ್ಳಾರಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗಾಗಿ 1200 ಕೋಟಿ ರೂ.ಗಳ ಯೋಜನೆ ರೂಪಿಸಿರುವೆ, ನಗರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾದರೆ ಇಲ್ಲಿಗೆ ಐಟಿ-ಬಿಟಿ ಕಂಪೆನಿಗಳನ್ನು ಆಕರ್ಷಿಸಬಹುದು, ಆಗ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಸುಲಭ ಎಂದು ತಿಳಿಸಿದರು.

ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ನಾನು ಕಂಕಣ ಬದ್ಧನಾಗಿರುವೆ, ನಮ್ಮ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಐಎಎಸ್-ಐಪಿಎಸ್’ನಂತಹ ಉನ್ನತ ಹುದ್ದೆಗಳನ್ನು ಪಡೆಯುವ ಮೂಲಕ ಬಳ್ಳಾರಿಯ ವಿದ್ಯಾರ್ಥಿಗಳೆಂದರೆ ಬುದ್ಧಿವಂತರು ಎಂಬ ಹೆಸರು ತರಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ 1.24 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ 7 ಕೊಠಡಿಗಳು, 2 ಲ್ಯಾಬೊರೇಟರಿಗಳನ್ನು ಉದ್ಘಾಟಿಸಿದರು. ಶುದ್ಧ ಕುಡಿಯುವ ನೀರಿನ ಘಟಕ (ಆರ್.ಓ ಪ್ಲಾಂಟ್) ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ರಾಮಾಂಜನೇಯ, ಮಿಂಚು ಶ್ರೀನಿವಾಸ, ಜಬ್ಬಾರ್, ಕುಬೇರಾ, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಸುಬ್ಬರಾಯುಡು, ಮೊಹಮ್ಮದ ಭಾಯ್, ಭಂಭಂ ದಾದಾಭಾಯ್, ಬಿಆರೆಲ್ ಸೀನಾ, ಶಿವರಾಜ್, ವೀರಶೈವ ಲಿಂಗಾಯತ ಮಹಾಸಭಾದ ಚಾನಾಳ್ ಶೇಖರ್, ಪ್ರಾಂಶುಪಾಲೆ ಸುಲೇಖಾ, ಕಾಲೇಜು ಅಭಿವೃದ್ಧಿ ಸಮಿತಿಯ ಶಮೀಮ್ ಜೊಹರಾ, ಅಭಿನಯ ಅಭಿಲಾಶ್, ತ್ರಿವೇಣಿ, ಭೋದಕ-ಭೋದಕೇತರ ಸಿಬ್ಬಂದಿ ಮತ್ತಿತರರು ಇದ್ದರು.
The post ಸೋಶಿಯಲ್ ಮೀಡಿಯಾ ವ್ಯಾಮೋಹಕ್ಕೆ ಬಲಿಯಾಗಬೇಡಿ: ಶಾಸಕ ನಾರಾ ಭರತ್ ರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು appeared first on Karnataka Kahale.
]]>The post ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ: ನೌಕರರ ಪ್ರಾಮಾಣಿಕ ಕರ್ತವ್ಯದಿಂದ ಸರ್ಕಾರಕ್ಕೆ ಗೌರವ -ಶಾಸಕ ನಾರಾ ಭರತ್ ರೆಡ್ಡಿ appeared first on Karnataka Kahale.
]]>
ಬಳ್ಳಾರಿ,ಫೆ.17: ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯದಿಂದ ರಾಜ್ಯ ಸರ್ಕಾರಕ್ಕೆ ಗೌರವ ಸಂದಾಯವಾಗುತ್ತದೆ. ನೌಕರರು ‘ಸರ್ಕಾರಿ ಸೇವೆ-ದೇವರ ಸೇವೆ” ಎಂದು ಭಾವಿಸಿ ನಿಸ್ವಾರ್ಥ ಸೇವೆ ನೀಡುವ ಮೂಲಕ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ಸೇವೆ ಒದಗಿಸಬೇಕು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸರ್ಕಾರಿ ಭವನಕ್ಕೆ ಸರ್ಕಾರದ ಭೂಮಿ ಇಲ್ಲ ಎಂಬ ಬೇಡಿಕೆಗೆ ಸ್ಪಂದಿಸಿದ ಅವರು, ನಗರ ವ್ಯಾಪ್ತಿಯಲ್ಲಿ ಜಾಗ ಪಡೆಯಬೇಕೆಂದರೆ ಈ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ. ಹಾಗಾಗಿ ನಗರದಲ್ಲಿ ಸರ್ಕಾರಿ ಭೂಮಿ ಗುರುತಿಸಿ ರೂಪುರೇಷೆ ಸಿದ್ದಪಡಿಸಿ ನೀಡಿದರೆ, ಮುಂದಿನ ಕ್ರಮಕ್ಕಾಗಿ ಅಗತ್ಯ ಸಹಕಾರ ಒದಗಿಸಲಾಗುವುದು ಎಂದರು.
ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ (ಎನ್‌ಪಿಎಸ್) ಹಳೆ ಪಿಂಚಣಿ ಯೋಜನೆಗೆ (ಒಪಿಎಸ್) ಮರಳಿ ಜಾರಿಗೊಳಸಬೇಕೆಂಬ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಬೇಡಿಕೆಯಾಗಿದ್ದು, ಈಗಾಗಲೇ ಮುಖ್ಯಮಂತ್ರಿಯವರು ದೇಶದಲ್ಲಿ ಜಾರಿಗೊಳಿಸಿರುವ 4 ರಾಜ್ಯಗಳಿಗೆ ಅಧ್ಯಯನ ತಂಡವು ಕಳುಹಿಸಿದ್ದು, ಅವರು ನೀಡುವ ವರದಿಯನ್ನಾಧಾರಿಸಿ ಕಾನೂನು ಚೌಕಟ್ಟಿನಲ್ಲಿ ಜಾರಿಗೊಳಿಸಲು ಮಾತುಕತೆ ನಡೆದಿದೆ ಎಂದು ತಿಳಿಸಿದ ಅವರು, ರಾಜ್ಯ ಸರ್ಕಾರವು ಮಹಿಳಾ ನೌಕರರಿಗೆ ವರ್ಷದ 12 ದಿನ ಋತುಚಕ್ರ ರಜೆ ಘೋಷಿಸಿದ್ದು, ಸರ್ಕಾರಕ್ಕೆ ಭರಪೂರ ಅಭಿನಂದನೆ ಸಲ್ಲಿದೆ ಎಂದು ಹೇಳಿದರು.

ಸರ್ಕಾರಿ ನೌಕರರು ತಮ್ಮ ಒತ್ತಡ ಜೀವನದಲ್ಲಿಯೂ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು. ತಮ್ಮ ಕುಟುಂಬಗಳಿಗೆ ಸಮಯದ ಆದ್ಯತೆ ನೀಡಬೇಕು. ಕ್ರೀಡೆಗಳಲ್ಲಿ ಭಾಗವಹಿಸಬೇಕು. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಬಳ್ಳಾರಿಯಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.
ಮೇನಲ್ಲಿ ಕಸಾಪ ಸಮ್ಮೇಳನ ಆಯೋಜನೆಗೆ ಚಿಂತನೆ:
ಬಳ್ಳಾರಿಯಲ್ಲಿ ಇದೇ ಮೇ ತಿಂಗಳಿನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಆಯೋಜನೆ ಒಳಗೊಂಡು ಕಾರ್ಯಕ್ರಮ ಯಶಸ್ವಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕೈಜೋಡಿಸಬೇಕು ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆ ಜಿಲ್ಲಾಧ್ಯಕ್ಷ (ಪ್ರಭಾರಿ) ಡಾ.ಸದಾನಂದ ನೆಲ್ಕುದ್ರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ- ಮಾನಸಿಕ ಬಲವರ್ಧನೆಗೆ ದೇಹ ಸಂಯಮಿಸುತ್ತದೆ. ಇದರ ಜೊತೆಗೆ ಶಿಸ್ತು- ಸಂಯಮ ಕಲಿಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ನೌಕರರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ದಿನನಿತ್ಯದ ಒತ್ತಡದ ಬದುಕಿನಲ್ಲಿ ವಿರಮಿತರಾಗಲು ಎರಡು ದಿನಗಳ ಕಾಲ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರೀಡಾ ಮನೋಭಾವನೆಯಿಂದ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಸನ್ಮಾನ: ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಡಾ. ಶಿವಲಿಂಗಪ್ಪ ಹಂದ್ಯಾಳ್, ಶಾಂತಮ್ಮ ಛಲವಾದಿ, ಶೇಕ್ಷಾವಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ. ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್. ಬಸರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಡಾ. ಎಂ.ಟಿ. ಮಲ್ಲೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ, ಅಬಕಾರಿ ಇಲಾಖೆಯ ಅಧೀಕ್ಷಕ ಅನೀಲ್ ಕುಮಾರ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಶಾಖೆಯ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸರ್ಕಾರಿ ನೌಕರರು ಭಾಗವಹಿಸಿದ್ದರು.
ಇದಕ್ಕೂ ಮುನ್ನ ಕಂಪ್ಲಿ, ಕುರುಗೋಡು, ಸಂಡೂರು, ಸಿರುಗುಪ್ಪ ಮತ್ತು ಬಳ್ಳಾರಿ ತಾಲ್ಲೂಕುಗಳಿಂದ ಭಾಗವಹಿಸಲು ಆಗಮಿಸಿದ್ದ ಸರ್ಕಾರಿ ನೌಕರರಿಂದ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ಕ್ರೀಡಾಜ್ಯೋತಿ ಸ್ವೀಕರಿಸಿ, ಕ್ರೀಡಾ ಧ್ವಜಾರೋಹಣ ನೆರವೇರಿಸಲಾಯಿತು.
ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಹೊರಾಂಗಣ, ಒಳಾಂಗಣದಲ್ಲಿ ವಿವಿಧ ವಿಭಾಗದ ಕ್ರೀಡೆಗಳು ನಡೆದರೆ, ಮಹರ್ಷಿ ವಾಲ್ಮೀಕಿ ಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳು ನಡೆದವು.
—–
The post ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ: ನೌಕರರ ಪ್ರಾಮಾಣಿಕ ಕರ್ತವ್ಯದಿಂದ ಸರ್ಕಾರಕ್ಕೆ ಗೌರವ -ಶಾಸಕ ನಾರಾ ಭರತ್ ರೆಡ್ಡಿ appeared first on Karnataka Kahale.
]]>