Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-includes/feed-rss2.php on line 8
ಕಲ್ಯಾಣ ಕರ್ನಾಟಕ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Fri, 17 Apr 2026 18:01:57 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ಕಲ್ಯಾಣ ಕರ್ನಾಟಕ – Karnataka Kahale https://www.karnatakakahale.com 32 32 ಬಳ್ಳಾರಿ ಮಹಾನಗರ ಪಾಲಿಕೆ‌ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ https://www.karnatakakahale.com/news/22799 Fri, 17 Apr 2026 17:51:23 +0000 https://www.karnatakakahale.com/?p=22799 ಬಳ್ಳಾರಿ, ಏ.17: ಬಳ್ಳಾರಿ ಮಹಾನಗರ ಪಾಲಿಕೆ‌ ಹಾಗೂ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ನಿವೃತ್ತ ಅಧಿಕಾರಿ ಸಿ. ಯಮನಪ್ಪ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷವಾಗಿತ್ತು. ಪತ್ನಿ ಜಾನಮ್ಮ, ಪುತ್ರರಾದ ಸಿ. ರವೀಂದ್ರ, ಡಾ. ವೈ. ವಿಶ್ವನಾಥ್, ಸಿ.ಗಂಗಾಧರ್, ಪುತ್ರಿಯರಾದ ಪ್ರೊ.…

The post ಬಳ್ಳಾರಿ ಮಹಾನಗರ ಪಾಲಿಕೆ‌ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ appeared first on Karnataka Kahale.

]]>
ಸಿ.ಯಮನಪ್ಪ

ಬಳ್ಳಾರಿ, ಏ.17: ಬಳ್ಳಾರಿ ಮಹಾನಗರ ಪಾಲಿಕೆ‌ ಹಾಗೂ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ನಿವೃತ್ತ ಅಧಿಕಾರಿ ಸಿ. ಯಮನಪ್ಪ ಅವರು ಗುರುವಾರ ನಿಧನರಾಗಿದ್ದಾರೆ.

ಅವರಿಗೆ 87 ವರ್ಷವಾಗಿತ್ತು. ಪತ್ನಿ ಜಾನಮ್ಮ, ಪುತ್ರರಾದ ಸಿ. ರವೀಂದ್ರ, ಡಾ. ವೈ. ವಿಶ್ವನಾಥ್, ಸಿ.ಗಂಗಾಧರ್, ಪುತ್ರಿಯರಾದ ಪ್ರೊ. ಸುಲೋಚನಾ ಮತ್ತು ಪ್ರೊ. ಶೋಭ ಸೇರಿದಂತೆ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.

ಗುರುವಾರ ಸಂಜೆ ಕೌಲಬಜಾರ್ ನ ಗುಗ್ಗರಹಟ್ಟಿ ರಸ್ತೆಯಲ್ಲಿರುವ ರುದ್ರ ಭೂಮಿಯಲ್ಲಿ ಅಪಾರ ಬಂಧು ಮಿತ್ರರ ಸಮ್ಮುಖದಲ್ಲಿ ಅಂತಿಮ‌ಸಂಸ್ಕಾರ‌ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಮ್ಮ ತಂದೆ ಸಿ.‌ಯಮನಪ್ಪ ಅವರು ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಆಡಳಿತದಲ್ಲಿ ಕನ್ನಡ ಗರಿಷ್ಟ ಬಳಕೆಗಾಗಿ ಅಂದಿನ ಜಿಲ್ಲಾ‌ಉಸ್ತುವಾರಿ ಸಚಿವ ಎಂ.ಪಿ. ಪ್ರಕಾಶ ಅವರು ಜಿಲ್ಲಾಡಳಿತದ ಪರವಾಗಿ ಪ್ರಶಸ್ತಿ ನೀಡಿ ಗೌರವಿಸಿದ್ದರು ಎಂದು ಬಳ್ಳಾರಿ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ವೈ.‌ವಿಶ್ವನಾಥ್ ಸ್ಮರಿಸಿದ್ದಾರೆ.

ಸಂತಾಪ: ಸಿ. ಯಮನಪ್ಪ ಅವರ  ನಿಧನಕ್ಕೆ ಹಿರಿಯ ಸಾಹಿತಿ ಡಾ.‌ವೆಂಕಟಯ್ಯ ಅಪ್ಪಗೆರೆ, ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ಬಳ್ಳಾರಿ ಐಜಿಪಿ ಕಚೇರಿಯ ನಿವೃತ್ತ ಆಡಳಿತಾಧಿಕಾರಿ ಕೆ.ಮಾರುತಿ, ನಿವೃತ್ತ ಪ್ರಾಚಾರ್ಯ ಡಾ. ಸಿ ಎಚ್ ಸೋಮನಾಥ, ತಹಸೀಲ್ದಾರರಾದ ಹೊನ್ನಮ್ಮ, ಬಳ್ಳಾರಿ ಮೆಡಿಕಲ್ ಕಾಲೇಜ್ ಪ್ರಾಧ್ಯಾಪಕ ಡಾ. ವಿಜಯ್ ಅಪ್ಪಗೆರೆ, ಎಸ್.ಪಿ ಕಚೇರಿಯ ಎಎಸ್ಐ ಸಿ. ಹನುಮಂತಪ್ಪ, ಕಾಡಾ ನಿವೃತ್ತ ಅಧಿಕಾರಿ ಗುರುಸ್ವಾಮಿ, ಸಿಎಂಎಸ್ ಮುಖಂಡ ಸಿ. ನರಸಪ್ಪ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು  ಪ್ರಾರ್ಥಿಸಿದ್ದಾರೆ.

The post ಬಳ್ಳಾರಿ ಮಹಾನಗರ ಪಾಲಿಕೆ‌ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ appeared first on Karnataka Kahale.

]]>
ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ https://www.karnatakakahale.com/news/22782 Thu, 16 Apr 2026 02:25:08 +0000 https://www.karnatakakahale.com/?p=22782 ಬಳ್ಳಾರಿ, ಏ.15: ರಾಯಚೂರಿನ ಮಹರ್ಷಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ. ವೆಂಕಟೇಶ್ (ಪಲ್ಲವ ವೆಂಕಟೇಶ್) ಅವರ ತಾಯಿ ಶ್ರೀಮತಿ ಕೆ. ಈರಮ್ಮ ಅವರು ಸಿರುಗುಪ್ಪ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಬುಧವಾರ ನಸುಕಿನ ಜಾವ ನಿಧನರಾಗಿದ್ದಾರೆ.…

The post ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ appeared first on Karnataka Kahale.

]]>
ಬಳ್ಳಾರಿ, ಏ.15: ರಾಯಚೂರಿನ ಮಹರ್ಷಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ. ವೆಂಕಟೇಶ್ (ಪಲ್ಲವ ವೆಂಕಟೇಶ್) ಅವರ ತಾಯಿ ಶ್ರೀಮತಿ ಕೆ. ಈರಮ್ಮ ಅವರು ಸಿರುಗುಪ್ಪ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಬುಧವಾರ ನಸುಕಿನ ಜಾವ ನಿಧನರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಈರಮ್ಮ ಅವರಿಗೆ 88 ವರ್ಷವಾಗಿತ್ತು. ಹಿರಿಯ ಪುತ್ರ ಕೆ. ತಿಪ್ಪೇಸ್ವಾಮಿ ಮತ್ತು ಪುತ್ರಿ ಸಿದ್ಧಲಿಂಗಮ್ಮ ಸೇರಿದಂತೆ ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹದಿನೈದು ವರ್ಷಗಳ ಹಿಂದೆ ಪತಿ, ಗ್ರಾಮದ ಹಿರಿಯ ಮುಖಂಡ ಕೆ. ಸಿದ್ಧಲಿಂಗಪ್ಪ ಅವರು ವಿಧಿವಶವಾಗಿದ್ದಾರೆ.
ಅಪಾರ ಬಂಧು ಬಳಗದ ಸಮ್ಮುಖದಲ್ಲಿ ಮಧ್ಯಾಹ್ನ ಚನ್ನಪಟ್ಟಣದ ರುದ್ರಭೂಮಿಯಲ್ಲಿ ಅಂತಿಮ‌ಸಂಸ್ಕಾರ ನೆರವೇರಿತು.
ಹೊಸಪೇಟೆಯ ಎಎಸ್ಐ ದಳವಾಯಿ ಕೆ. ಮಲ್ಲೇಶಪ್ಪ, ಪ್ರಾಚಾರ್ಯ ಡಾ. ಟಿ. ಎಚ್. ಬಸವರಾಜ್, ಸಹಾಯಕ ಪ್ರಾಧ್ಯಾಪಕರಾದ ಡಾ. ಮಹೇಶ್, ಡಾ.‌ಮಲ್ಲಿಕಾರ್ಜುನ್, ಜಿಂದಾಲ್ ಕೆ.‌ಬಸವರಾಜ್, ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಸಂತಾಪ: ಶ್ರೀಮತಿ ಈರಮ್ಮ ಅವರ ನಿಧನಕ್ಕೆ ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ಹಿರಿಯ ಸಾಹಿತಿಗಳಾದ ಡಾ. ವೆಂಕಟಯ್ಯ ಅಪ್ಪಗೆರೆ, ಟಿ.ಕೆ.ಗಂಗಾಧರ ಪತ್ತಾರ್, ರಾಯಚೂರಿನ ಪ್ರಗತಿಪರ ರೈತ ಕೆ.‌ಎಂ ಗೌಡ, ಕುರುಗೋಡಿನ ಕೂನಾ ರಾಘವೇಂದ್ರ, ಪತ್ರಕರ್ತ ಸಿ. ಶಿವಾನಂದ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

The post ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ appeared first on Karnataka Kahale.

]]>
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾನತೆಯ ಸಮಾಜ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ -ಪ್ರಾಚಾರ್ಯ ಡಾ. ಅಶ್ವ ರಾಮು ವಿಷಾಧ https://www.karnatakakahale.com/news/22748 Tue, 14 Apr 2026 10:47:14 +0000 https://www.karnatakakahale.com/?p=22748 ಬಳ್ಳಾರಿ: ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ವಿಶ್ವಜ್ಞಾನಿ  ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಮಹಾವಿದ್ಯಾಲಯದ ಕಾರ್ಯದರ್ಶಿಗಳಾದ ತಾಜುದ್ದೀನ್ ಪಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ…

The post ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾನತೆಯ ಸಮಾಜ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ -ಪ್ರಾಚಾರ್ಯ ಡಾ. ಅಶ್ವ ರಾಮು ವಿಷಾಧ appeared first on Karnataka Kahale.

]]>

ಬಳ್ಳಾರಿ: ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ವಿಶ್ವಜ್ಞಾನಿ  ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಮಹಾವಿದ್ಯಾಲಯದ ಕಾರ್ಯದರ್ಶಿಗಳಾದ ತಾಜುದ್ದೀನ್ ಪಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಅವರು ಭಾರತೀಯ ಸಂವಿಧಾನವನ್ನು ರಚಿಸದೆ ಹೋಗಿದ್ದರೆ, ಇಂದಿನ ಸಮಾಜದ ಸ್ಥಿತಿ ಹೇಗಿರುತ್ತಿತ್ತೋ ಎಂಬ ಆತಂಕವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಅಶ್ವ ರಾಮು ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರ ಆಶಯಗಳ ಪ್ರಸ್ತುತತೆಯನ್ನು ಹೃದಯಸ್ಪರ್ಶಿಯಾಗಿ ವಿವರಿಸಿದರು. ಬಾಬಾಸಾಹೇಬ ಅಂಬೇಡ್ಕರ್ ಅವರು ಕನಸು ಕಂಡ ಸಮಾನತೆಯ ಸಮಾಜ ಇನ್ನೂ ಸಂಪೂರ್ಣವಾಗಿ ನಿರ್ಮಾಣವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.                         ಜಾತಿ, ವರ್ಗ ಮತ್ತು ಲಿಂಗ ಅಸಮಾನತೆಗಳು ಇಂದಿಗೂ ಸಮಾಜದಲ್ಲಿ ಹಾಸುಹೊಕ್ಕಾಗಿರುವುದನ್ನು ಉಲ್ಲೇಖಿಸಿ, ಅವುಗಳನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದು ಹೇಳಿದರು.


“ಶಿಕ್ಷಣವೇ ವ್ಯಕ್ತಿಯ ನಿಜವಾದ ಶಕ್ತಿ” ಎಂದು ಒತ್ತಿ ಹೇಳಿದ ಅವರು, ಅಂಬೇಡ್ಕರ್ ಅವರು “ಶಿಕ್ಷಣ, ಸಂಘಟನೆ, ಮತ್ತು ಹೋರಾಟ” ಎಂಬ ಮಂತ್ರದ ಸಂದೇಶವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇನ್ನೂ ಅವರು ಸಂವಿಧಾನದ ಮಹತ್ವವನ್ನು ವಿವರಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ತಿಳಿಸಿದರು. ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಪುಸ್ತಕಗಳಲ್ಲಿ ಉಳಿಯದೆ, ನಮ್ಮ ದಿನನಿತ್ಯದ ಬದುಕಿನಲ್ಲಿ ಪ್ರತಿಫಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಎಚ್.ಎಂ. ಗಂಗಮ್ಮ, ವೀರೇಶ, ಗಂಗಾಧರ ಹಾಗೂ ತ್ರಿವೇದಿ ಅವರು ಅಂಬೇಡ್ಕರ್ ಅವರ ಜೀವನ ಮತ್ತು ಆದರ್ಶಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಉಪನ್ಯಾಸಕಿಯರಾದ ಗೌಸಿಯ ಬೇಗಂ, ಶಿವಗಂಗಾ ಮತ್ತು ನಾಗವೇಣಿ ಅವರು ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.      ಗೀತಾ ಅವರು ಪ್ರಾರ್ಥಿಸಿದರು. ಬಸವರಾಜ್ ಪಿ.ಎಂ. ಸ್ವಾಗತಿಸಿದರು. ಬೋಧಕ ರಾಮಕೃಷ್ಣಾರೆಡ್ಡಿ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಆನಂದ ವಂದಿಸಿದರು. ಪ್ರಶಿಕ್ಷಣಾರ್ಥಿ ಸಿದ್ದರೂಡ ಅವರು ನಿರೂಪಿಸಿದರು.ಸಹಾಯಕ ಪ್ರಾಧ್ಯಾಪಕ ಅಂಥೋನಿ ಮತ್ತು ಆಲಂಬಾಷಾ ಅವರು  ನಿರ್ವಹಿಸಿದರು.

The post ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾನತೆಯ ಸಮಾಜ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ -ಪ್ರಾಚಾರ್ಯ ಡಾ. ಅಶ್ವ ರಾಮು ವಿಷಾಧ appeared first on Karnataka Kahale.

]]>
ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ https://www.karnatakakahale.com/news/22720 Sat, 11 Apr 2026 20:39:27 +0000 https://www.karnatakakahale.com/?p=22720 ಬಳ್ಳಾರಿ, ಏ.12: ಅಂತರಾಷ್ಟ್ರೀಯ ಪ್ರಸಿದ್ಧ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಅಂತರಾಷ್ಟ್ರೀಯ ಜಾನಪದ ಗಾಯಕ, ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರು ಆಯ್ಕೆಯಾಗಿದ್ದಾರೆ. ನಗರದ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಕಳೆದ ವರ್ಷದಿಂದ…

The post ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ appeared first on Karnataka Kahale.

]]>

ಬಳ್ಳಾರಿ, ಏ.12: ಅಂತರಾಷ್ಟ್ರೀಯ ಪ್ರಸಿದ್ಧ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಅಂತರಾಷ್ಟ್ರೀಯ ಜಾನಪದ ಗಾಯಕ, ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರು ಆಯ್ಕೆಯಾಗಿದ್ದಾರೆ.
ನಗರದ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಕಳೆದ ವರ್ಷದಿಂದ ರಾಷ್ಟ್ರೀಯ ಪ್ರಶಸ್ತಿ ‌ನೀಡುತ್ತಿದ್ದು, ಏ.12 ರಂದು ಭಾನುವಾರ ಸಂಜೆ 5 ಗಂಟೆಗೆ ಸ್ಥಳೀಯ ಡಾ.‌ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯ ಈ. ತುಕಾರಾಂ ಅವರು ಪ್ರಶಸ್ತಿ ಪ್ರದಾನ‌ ಮಾಡುವರು ಎಂದು ಟ್ರಸ್ಟ್ ಹಾಗೂ ಕಾರ್ಯಕ್ರಮ ಸಂಚಾಲಕ ಬೆಳಗಲ್ಲು ಹನುಮಂತ ಅವರು ತಿಳಿಸಿದರು.
ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಅಕಾಡೆಮಿ ‌ಅಧ್ಯಕ್ಷ ಡಾ.‌ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಉದ್ಘಾಟಿಸುವರು. ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೆ.‌ನಾಗೇಂದ್ರ ಪ್ರಸಾದ್, ಜಿಲ್ಲಾ ಎಸ್ಪಿ ಡಾ.‌ಸುಮನ್ ಡಿ.‌ಪನ್ನೇಕರ್, ಮೈಸೂರಿನ ರಂಗಕರ್ಮಿ, ಶ್ರೀ ರಾಜೇಶ್ವರಿ ವಸ್ತ್ರಾಲಂಕಾರದ ಮಾಲೀಕ ಬಿ.‌ಎಂ. ರಾಮಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ‌ನಿರ್ದೇಶಕ ಬಿ.‌ನಾಗರಾಜ, ಕರ್ನಾಟಕ ಜಾನಪದ ಅಕಾಡೆಮಿ ‌ ಸದಸ್ಯ ಸಿ.‌ಎನ್ ಮಂಜೇಶ್ ಚನ್ನಾಪುರ, ನಗರದ ಶ್ರೀ ಕೊಟ್ಟೂರು ಸ್ವಾಮಿ ಬಿ.ಇಡಿ‌‌ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಹಿರೇಮಠ ಮತ್ತು ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಡಾ. ಬಾನಂದೂರು ಕೆಂಪಯ್ಯ

ಕಾರ್ಯಕ್ರಮಕ್ಕೆ ಮುನ್ನ ಮೋತಿ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಜಾನಪದ ಕಲಾ ತಂಡಗಳ ಆಕರ್ಷಕ ಮೆರವಣಿಗೆಯಲ್ಲಿ ಅತಿಥಿ ಗಣ್ಯರು, ನಾಡೋಜ ಬೆಳಗಲ್ಲು ವೀರಣ್ಣ ಅವರ ಒಡನಾಡಿಗಳು, ಹಿತೈಷಿ, ಅಭಿಮಾನಿಗಳು ರಂಗಮಂದಿರ ತಲುಪುವರು.
ಸಾಂಸ್ಕೃತಿಕ ಅಂಕಣ: ನೆರೆಯ ಆಂದ್ರಪ್ರದೇಶದ ಸತ್ಯಸಾಯಿ ಜಿಲ್ಲೆ ಧರ್ಮಾವರಂದ ನಿಮ್ಮಲಕುಂಟ ಶ್ರೀ ವನಾರ್ಚ ರಾಮಕೃಷ್ಣ ತೊಗಲುಗೊಂಬೆಯಾಟ ಕಲಾ ತಂಡದಿಂದ ಸುಂದರಕಾಂಡ (ಸೀತಾಪಹರಣ) ತೊಗಲು ಗೊಂಬೆಯಾಟ ಪ್ರದರ್ಶನ ಪ್ರಶಸ್ತಿ ಪ್ರದಾನದ ಬಳಿಕ ಜರುಗಲಿದೆ.

ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ

ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ ಡಾ. ಬಾನಂದೂರು ಕೆಂಪಯ್ಯ ಅವರ ಪರಿಚಯ: ಅಂತಾರಾಷ್ಟ್ರೀಯ ಜಾನಪದ ಗಾಯಕ, ಸಾಹಿತಿ, ಸಂಗೀತಗಾರ, ಸಂಶೋಧಕ, ಹಾಡುವ ಹಕ್ಕಿ
ಡಾ. ಬಾನಂದೂರು ಕೆಂಪಯ್ಯ ಅವರು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಾನಂದೂರಿನಲ್ಲಿ 1951 ಜೂನ್14ರಂದು ಜಾನಪದ‌ ಕುಟುಂಬದಲ್ಲಿ ಜನಿಸಿದರು. ಇವರ ತಾಯಿ ಹುಚ್ಚಮ್ಮ ಜನಪದ ಗಾಯಕಿ, ತಂದೆ ಚರ್ಮವಾದ್ಯ ನುಡಿಸುವುದರಲ್ಲಿ ಪರಿಣಿತ ಹೊಂದಿದ್ದ ವೆಂಕಟಯ್ಯ ಅವರು. ಸಾಂಸ್ಕೃತಿಕ ಶ್ರೀಮಂತಿಕೆಯ ದಂಪತಿಗಳ ನಾಲ್ಕು ಗಂಡು, ನಾಲ್ಕು ಹೆಣ್ಣು ಮಕ್ಕಳಲ್ಲಿ ಕೆಂಪಯ್ಯನವರೆ ಕಿರಿಯರು. ಇವರ ಅಣ್ಣ ಆರು ನಗಾರಿ ಬಾರಿಸುವ ಪರಿಣತಿ ಪಡೆದು ನಗಾರಿ ಸಿದ್ದಯ್ಯನೆಂದೇ ಪ್ರಸಿದ್ಧಿ ಹೊಂದಿದ‌ ಪ್ರತಿಭಾವಂತರು.
ಡಾ. ಬಾನಂದೂರು ಅವರ ಪ್ರಾಥಮಿಕ ಶಿಕ್ಷಣ ಬಾನಂದೂರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಬಿ.ಎ(ಆನರ್ಸ್) ಪದವಿ,
೧೯೮೪ರಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಸ್ನಾತಕೋತ್ತರ(ಎಂ.ಎ) ಪದವಿ ಪಡೆದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಕರ್ನಾಟಕ ದಲಿತ ಜಾನಪದ ಸಂಗೀತದಲ್ಲಿ ಡಿ.ಲಿಟ್. ಪದವಿ ಪಡೆದಿದ್ದಾರೆ.
ಡಾ. ಬಾನಂದೂರು ಕೆಂಪಯ್ಯನವರು ಆರಂಭದಲ್ಲಿ ಮಾಧ್ಯಮಿಕ ಶಾಲೆಯ ಶಿಕ್ಷಕರಾಗಿ, ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ೧೯೮೦ರಲ್ಲಿ ಮೈಸೂರು ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇರಿದ ಬಳಿಕ ಹಿಂತಿರುಗಿ ನೋಡಲಿಲ್ಲ . ಬೆಂಗಳೂರು,ಧಾರವಾಡ, ಗುಲ್ಬರ್ಗಾ ಆಕಾಶವಾಣಿ ಕೇಂದ್ರಗಳಲ್ಲಿ ಹಾಗೂ ಬೆಂಗಳೂರು ದೂರದರ್ಶನ ಕೇಂದ್ರದ ಉಪ ನಿರ್ದೇಶಕರಾಗಿ, ಕಾರ್ಯಕಾರಿ ನಿರ್ಮಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದರು.
ಸಾಹಿತ್ಯ ಸೇವೆ: ಡಾ. ಕೆಂಪಯ್ಯ ಅವರು ಬಯಲು ಸೀಮೆಯ ಜಾನಪದ ಕಥೆಗಳ ಸಂಕಲನ ಹೊರ ತಂದಿದ್ದಾರೆ. ‘ಚೆಂದುಳ್ಳಿ ಪದವ ಕಲಸವ್ವ’ ಹಾಗು ‘ಮೊಗ್ಗಾಗಿ ಬಾರೊ ತುರುಬಿಗೆ’ ಎಂಬ ಹೆಸರಿನ ಜನಪದ ಗೀತೆಗಳ ಸಂಗ್ರಹ, . ‘ನನ್ನ ಈ ನೆಲದಲ್ಲಿ’ ಎನ್ನುವ ಕವನ ಸಂಕಲನ ಪ್ರಕಟಿಸಿದ್ದಾರೆ. ಕನ್ನಡ ನಾಡಿನ ನೂರಕ್ಕೂ ಹೆಚ್ಚು ಜನಪದ ಕಲಾವಿದರನ್ನು ಹಾಗು ಅವರ ಜನಪದ ಸಾಹಿತ್ಯವನ್ನು ಪತ್ರಿಕೆಗಳ ಮೂಲಕ ನಾಡಿಗೆ ಪರಿಚಯಿಸಿರುವುದು‌ವಿಶೇಷ.
ಡಾ. ಬಾನಂದೂರು ಅವರು, ಹೈಸ್ಕೂಲಿನಲ್ಲಿದ್ದಾಗಲೆ ತಮ್ಮ ಜನಪದ ಹಾಡುಗಾರಿಕೆಗಾಗಿ ಬಹುಮಾನ ಪಡೆದು ‘ಬೆಳೆಯುವ ಸಿರಿ ಮೊಳಕೆಯಲಿ’ ಎಂಬಂತೆ ಗಮನ ಸೆಳೆದರು.
ಎರಡು ಬಾರಿ ಅಮೆರಿಕಾ, ಒಂದು ಬಾರಿ ಇಂಗ್ಲೆಂಡ್ ಪ್ರವಾಸ ಕೈಗೊಂಡು ತಮ್ಮ ಜಾನಪದ ಗಾಯನದ ಮೂಲಕ ನಾಡಿಗೆ, ದೇಶಕ್ಕೆ ಕೀರ್ತಿ ತಂದ ಡಾ. ಕೆಂಪಯ್ಯ ಅವರು ದೇಶದ ವಿವಿಧ ನಗರಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ ಮಾತ್ರವಲ್ಲ‌ ಅನೇಕ ಸಣ್ಣಾಟ, ದೊಡ್ಡಾಟ, ಗೊಂಬೆಯಾಟಗಳಿಗೆ ಸಂಗೀತ ಒದಗಿಸಿದ್ದಾರೆ. ಸುಪ್ರಸಿದ್ಧ ಹಿನ್ನೆಲೆ ಗಾಯಕರಾದ ಶ್ರೀಮತಿ ಮಂಜುಳಾ ಗುರುರಾಜ್ ಹಾಗು ಕಸ್ತೂರಿ ಶಂಕರ್ ಜೊತೆಗೆ ಹಾಡಿದ್ದಾರೆ. ಈ ಧ್ವನಿಸುರಳಿಗಳಲ್ಲಿ ‘ಬಣ್ಣದ ಬಳೆಗಾರ’ ವಿಶೇಷವಾಗಿ ಜನಪ್ರಿಯವಾಗಿದೆ. ಕೆಂಪಯ್ಯನವರು ಜನಪ್ರಿಯಗೊಳಿಸಿದ ಮತ್ತೊಂದು ಜನಪದ ಗೀತೆಯೆಂದರೆ ‘ಬಿದಿರು ನಾನಾರಿಗಲ್ಲದವಳು’.
ಸಿನಿಮಾ‌ ನಂಟು: ಡಾ. ಕೆಂಪಯ್ಯನವರು ಗುರುರಾಜ ಕಾಟೆ ನಿರ್ದೇಶನದ ‘ಬಂಗಾರದ ಗೂಳಿ’ ಚಲನಚಿತ್ರಕ್ಕೆ ಗುಣಸಿಂಗ ಅವರ ಜತೆ ಸಂಗೀತ ನಿರ್ದೇಶಿಸಿದ್ದಾರೆ. ಅಲ್ಲದೆ “ಜಿಪ್ಸಿಗಳು” ಎನ್ನುವ ರಶಿಯನ್ ನಾಟಕಕ್ಕೂ ಸಂಗೀತ ನೀಡಿದ ಹೆಗ್ಗಳಿಕೆ ಇವರದು.
ಅಕಾಡೆಮಿ ಅಧ್ಯಕ್ಷ ಸ್ಥಾನ: ಮೂರು ಬಾರಿ ಕರ್ನಾಟಕ‌ ಜಾನಪದ ಅಕಾಡೆಮಿ ಸದಸ್ಯರಾಗಿ ಒಂದು ಬಾರಿ ಅಧ್ಯಕ್ಷರಾಗಿ, ಕರ್ನಾಟಕ‌ ಜಾನಪದ ಪರಿಷತ್ತಿನ ಆಡಳಿತ ಮಂಡಳಿ ಸದಸ್ಯರಾಗಿಯೂ ಜಾನಪದ ಕ್ಷೇತ್ರಕ್ಕೆ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.
ಪ್ರಶಸ್ತಿಗಳು: ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಬೆಂಗಳೂರು ಕೆಂಪೇಗೌಡ ಪ್ರಶಸ್ತಿ, ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಕರವೇ ‘ಜಾನಪದ ಗಾಯನ ಸಾರ್ವಭೌಮ’ ಪ್ರಶಸ್ತಿ, ‘ಅರೋಹಣ ಕಲಾರೂಪ ಪ್ರಶಸ್ತಿ, ನೆಲದ ನುಡಿಕಾರ ಸೇರಿದಂತೆ ನೂರಾರು ಸಂಘ ಸಂಸ್ಥೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.
75ರ  ಹರೆಯದಲ್ಲೂ  ಡಾ. ಬಾನಂದೂರು ಕೆಂಪಯ್ಯ ಅವರು ಗಾಯನ, ಕಾವ್ಯ- ಕತೆ ರಚನೆಯಲ್ಲಿ ಖುಷಿ ನೆಮ್ಮದಿ ಕಾಣುತ್ತಿದ್ದಾರೆ.

-ಸಿ.ಮಂಜುನಾಥ, ಸಂಪಾದಕರು: ಕರ್ನಾಟಕ ಕಹಳೆ ಡಾಟ್ ಕಾಮ್, ಬಳ್ಳಾರಿ

 

The post ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ appeared first on Karnataka Kahale.

]]>
ಕೆಯುಡಬ್ಲ್ಯುಜೆ ಪ್ರಶಸ್ತಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ: ರವೀಂದ್ರ ತೆಳಗಡೆ https://www.karnatakakahale.com/news/22686 Sun, 05 Apr 2026 04:29:03 +0000 https://www.karnatakakahale.com/?p=22686 ಬಳ್ಳಾರಿ: ಕಳೆದ 19 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನನಗೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪ್ರಕಟಿಸಿರುವ ಈ ವರ್ಷದ ಪ್ರಜಾ ಪ್ರಗತಿ ಪ್ರಶಸ್ತಿ ಕ್ಷೇತ್ರದಲ್ಲಿನ ಸೇವೆಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರಶಸ್ತಿ ಪುರಸ್ಕೃತ ಬಳ್ಳಾರಿಯ  ವಿಜಯ ಕರ್ನಾಟಕ  ಪತ್ರಿಕಾ ಕಚೇರಿಯಲ್ಲಿ…

The post ಕೆಯುಡಬ್ಲ್ಯುಜೆ ಪ್ರಶಸ್ತಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ: ರವೀಂದ್ರ ತೆಳಗಡೆ appeared first on Karnataka Kahale.

]]>

ಬಳ್ಳಾರಿ: ಕಳೆದ 19 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನನಗೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪ್ರಕಟಿಸಿರುವ ಈ ವರ್ಷದ ಪ್ರಜಾ ಪ್ರಗತಿ ಪ್ರಶಸ್ತಿ ಕ್ಷೇತ್ರದಲ್ಲಿನ ಸೇವೆಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರಶಸ್ತಿ ಪುರಸ್ಕೃತ ಬಳ್ಳಾರಿಯ  ವಿಜಯ ಕರ್ನಾಟಕ  ಪತ್ರಿಕಾ ಕಚೇರಿಯಲ್ಲಿ ಮುಖ್ಯ ಉಪ ಸಂಪಾದಕ ರವೀಂದ್ರ ತೆಳಗಡೆ ಅವರು ಹೇಳಿದರು.
ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ  ಕಾರ್ಯಕ್ರಮದಲ್ಲಿ   ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು.                ಬೆಳಗಾವಿ ಜಿಲ್ಲೆ  ಅಥಣಿ ತಾಲೂಕಿನವರಾದ ತಾವು  ಕರ್ನಾಟಕ ವಿವಿಯಲ್ಲಿ ಅಭ್ಯಾಸಮಾಡಿ. 2007 ರಲ್ಲಿ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡೆ. ಇಲ್ಲಿನ ಸ್ಥಾನಿಕ ಸಂಪಾದಕರಾದ ಗಂಗಾಧರ ಬಂಡಿಹಾಳ್ ಹಾಗು ಸಿಬ್ಬಂದಿ ಸಹಕಾರದಿಂದ ಆಡಳಿತ, ಶಿಕ್ಷಣ ಮೊದಲಾದ ವಿಷಯಗಳ ಕುರಿತು  56 ಲೇಖನಗಳನ್ನು  ಬರೆದು ಪ್ರಕಟಿಸಿದೆ. ಮಾಧ್ಯಮದ  ಮೂಲಕ  ಸಮಾಜಕ್ಕೆ ಸಾಕಷ್ಟು ಕೊಡುಗೆ  ನೀಡುವ ಆಸೆ ನನ್ನದು. ಈ ಪ್ರಶಸ್ತಿ
ನನಗೆ ಮತ್ತಷ್ಟು ಬರೆಯಲು ಪ್ರೋತ್ಸಾಹ ನೀಡಿದೆ ಎಂದು ಹರ್ಷಿಸಿದರು.
ಮುಖ್ಯ ಅತಿಥಿಯಾಗಿದ್ದ ವಿಜಯಕರ್ನಾಟಕ ಬಳ್ಳಾರಿ ಕಚೇರಿಯ ಸ್ಥಾನಿಕ ಸಂಪಾದಕ ಗಂಗಾಧರ ಬಂಡಿಹಾಳ ಅವರು  ಮಾತನಾಡಿ,  ಸಾಮಾನ್ಯವಾಗಿ ಇಂತಹ ಪ್ರಶಸ್ತಿಗಳು ಹೆಚ್ಚಿನದಾಗಿ ವರದಿಗಾರರಿಗೆ ದೊರೆಯುತ್ತವೆ. ಆದರೆ ಕಾನಿಪ ಈಗ  ಸಂಪಾದಕೀಯದ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಗುರುತಿಸಿ ಪ್ರಶಸ್ತಿ  ನೀಡುತ್ತಿರುವುದಯ ಖುಷಿ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾ ಅಧ್ಯಕ್ಷ ಎನ್.ವೀರಭದ್ರಗೌಡ,  ಕಾನಿಪವು ಮಾಧ್ಯಮ ಕ್ಷೇತ್ರದಲ್ಲಿರುವವರಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ತಿಂಗಳ 11, 12 ರಂದು ಬೀದರ್ ನಲ್ಲಿ ನಡೆಯುವ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆಂದರು.
ಕನ್ನಡ ಪ್ರಭ ಹಿರಿಯ ವರದಿಗಾರ ಕೆ.ಎಂ.ಮಂಜುನಾಥ ಮಾತನಾಡಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ನರಸಿಂಹಮೂರ್ತಿ ಕುಲಕರ್ಣಿ ವೇದಿಕೆಯಲ್ಲಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಬಸವರಾಜ್  ಸ್ವಾಗತಿಸಿ,  ನಿರ್ವಹಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಮರೇಶ್ ಎಲ್.ಕೆ ವಂದಿಸಿದರು.

The post ಕೆಯುಡಬ್ಲ್ಯುಜೆ ಪ್ರಶಸ್ತಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ: ರವೀಂದ್ರ ತೆಳಗಡೆ appeared first on Karnataka Kahale.

]]>
ಅನುದಿನ ಕವನ-೧೯೧೭, ಕವಯತ್ರಿ:ಸಮುದ್ಯತಾ ಕಂಜರ್ಪಣೆ, ಬೆಂಗಳೂರು https://www.karnatakakahale.com/news/22659 Wed, 01 Apr 2026 02:17:53 +0000 https://www.karnatakakahale.com/?p=22659 ಒಮ್ಮೊಮ್ಮೆ ಬದುಕಿಗೂ ಅವಳ ಬಳಿ ಮೊಣಕಾಲೂರಿ ಕ್ಷಮೆ ಕೇಳಬೇಕೆನಿಸುತ್ತದೆ. ಅರ್ಧ ರಾತ್ರಿಯಲ್ಲಿ ಆಕೆ ಎದ್ದು ಬದುಕಿನ ಪರ್ಪಸ್‌ ಹುಡುಕುವಾಗ.. ಬಕೆಟಿಗೆ ಜೋರಾಗಿ ನೀರುಬಿಟ್ಟು ಹೃದಯ ನಿಂತೇ ‌ಹೋಗುವಷ್ಟು ತೀವ್ರವಾಗಿ ಅಳುವಾಗ.. ಇದ್ದ್ಕಕಿದ್ದಂತೆ ಸಂತೆಯಲ್ಲೂ ಉಸಿರುಕಟ್ಟಿ ಚಡಪಡಿಸುವಾಗ. ಒಡೆದುಹೋದ ತನ್ನದೇ ಬದುಕಿನ ಚೂರುಗಳನ್ನು…

The post ಅನುದಿನ ಕವನ-೧೯೧೭, ಕವಯತ್ರಿ:ಸಮುದ್ಯತಾ ಕಂಜರ್ಪಣೆ, ಬೆಂಗಳೂರು appeared first on Karnataka Kahale.

]]>
ಒಮ್ಮೊಮ್ಮೆ ಬದುಕಿಗೂ
ಅವಳ ಬಳಿ ಮೊಣಕಾಲೂರಿ
ಕ್ಷಮೆ ಕೇಳಬೇಕೆನಿಸುತ್ತದೆ.

ಅರ್ಧ ರಾತ್ರಿಯಲ್ಲಿ ಆಕೆ ಎದ್ದು
ಬದುಕಿನ ಪರ್ಪಸ್‌ ಹುಡುಕುವಾಗ..
ಬಕೆಟಿಗೆ ಜೋರಾಗಿ ನೀರುಬಿಟ್ಟು
ಹೃದಯ ನಿಂತೇ ‌ಹೋಗುವಷ್ಟು
ತೀವ್ರವಾಗಿ ಅಳುವಾಗ..

ಇದ್ದ್ಕಕಿದ್ದಂತೆ ಸಂತೆಯಲ್ಲೂ
ಉಸಿರುಕಟ್ಟಿ ಚಡಪಡಿಸುವಾಗ.
ಒಡೆದುಹೋದ ತನ್ನದೇ ಬದುಕಿನ
ಚೂರುಗಳನ್ನು ಆಯ್ದುಕೊಳ್ಳುವ
ಹೊತ್ತಲ್ಲಿ ಅವಳ ಬೆರಳುಗಳಿಗೆ
ಗಾಯವಾದಾಗ,

ಇರುವ ಒಂದೇ ಪ್ರಶ್ನೆಗೆ ಸರಿಯಾದ
ಉತ್ತರ ಕೊಟ್ಟುಬಿಡು ಎನ್ನುವಾಗ..
ಬದುಕಿಗೂ ಒಂದು ಸಣ್ಣ
ಗಿಲ್ಟ್‌ ಕಾಡುತ್ತದೆ..

ಕ್ಷಮೆ ಕೇಳುವ ಅಭ್ಯಾಸ ಬದುಕಿಗಿಲ್ಲ.
ಸರಿಪಡಿಸುವಂಥ ಸಣ್ಣ ತಪ್ಪುಗಳನ್ನು
ಬದುಕು ಮಾಡಿಯೇ ಇಲ್ಲ,

ಒಮ್ಮೆ ಗಹಗಹಿಸಿ ನಕ್ಕ ಬದುಕು
ಈಗ ಪಾಪಪ್ರಜ್ಞೆಯಲ್ಲಿ ಮೆತ್ತಗಾಗಿದೆ.

ಅವಳು ದ್ವೇಷಿಸುವುದೂ ಇಲ್ಲ,
ಕ್ಷಮಿಸುವುದೂ ಇಲ್ಲ.
ಮೌನವಾಗಿ ನೋಡುತ್ತಿರುತ್ತಾಳೆ.
ಅವಳ ಮೌನದ ಮೊರೆತ
ಬದುಕ ಇನ್ನಷ್ಟು ಕುಗ್ಗಿಸುತ್ತದೆ.

ಅವಳಿರುವವರೆಗೂ, ಬದುಕು
ಪಶ್ಚಾತ್ತಾಪದ ಭಾರ ಹೊರಬೇಕಿದೆ
.
ಅವಳಿಲ್ಲದಿದ್ದರೆ ಬದುಕಿಗೂ ಅಸ್ತಿತ್ವವಿಲ್ಲ
ಅನ್ನುವುದು ಬದುಕಿಗೂ ಗೊತ್ತು.

ಗಟ್ಟಿಯಾದ ಅವಳ ಜೊತೆ, ಒಂದೇ ಹೆಜ್ಜೆ
ಹಿಂದಿಟ್ಟು ಮೆತ್ತಗಾದ ಬದುಕೂ ಸಾಗುತ್ತದೆ.

ಒಮ್ಮೊಮ್ಮೆ…
ಬದುಕಿಗೆ ಭಾರ ಹೆಚ್ಚಾಗಿ ದಣಿದಾಗ,
ಅವಳೂ ಕೈ ಹಿಡಿದು
ಬದುಕ ನಡೆಸುತ್ತಾಳೆ.


-ಸಮುದ್ಯತಾ ಕಂಜರ್ಪಣೆ, ಬೆಂಗಳೂರು

The post ಅನುದಿನ ಕವನ-೧೯೧೭, ಕವಯತ್ರಿ:ಸಮುದ್ಯತಾ ಕಂಜರ್ಪಣೆ, ಬೆಂಗಳೂರು appeared first on Karnataka Kahale.

]]>
ಬೀದರ್‌ನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ, ಸಮಿತಿಗಳ ಪೂರ್ವ ಸಿದ್ದತಾ ಸಭೆ ಅರ್ಥಪೂರ್ಣ ಸಮ್ಮೇಳನಕ್ಕೆ ಸರ್ವರು ಕೈ ಜೋಡಿಸಲು ತಗಡೂರು ಕರೆ https://www.karnatakakahale.com/news/22647 Mon, 30 Mar 2026 18:25:30 +0000 https://www.karnatakakahale.com/?p=22647 ಬೀದರ್: ಬಸವಣ್ಣ ನಡೆದಾಡಿದ ನೆಲದಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿದೆ ಆಚರಣೆ ಮಾಡುವ ಮೂಲಕ ಇತಿಹಾಸ ಪುಟದಲ್ಲಿ ದಾಖಲೆಯಾಗುವ ಸಮ್ಮೇಳನವನ್ನು ಮಾಡಲು ಸಂಘಟಿತ ಪ್ರಯತ್ನ ನಡೆಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.…

The post ಬೀದರ್‌ನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ, ಸಮಿತಿಗಳ ಪೂರ್ವ ಸಿದ್ದತಾ ಸಭೆ ಅರ್ಥಪೂರ್ಣ ಸಮ್ಮೇಳನಕ್ಕೆ ಸರ್ವರು ಕೈ ಜೋಡಿಸಲು ತಗಡೂರು ಕರೆ appeared first on Karnataka Kahale.

]]>

ಬೀದರ್: ಬಸವಣ್ಣ ನಡೆದಾಡಿದ ನೆಲದಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿದೆ ಆಚರಣೆ ಮಾಡುವ ಮೂಲಕ ಇತಿಹಾಸ ಪುಟದಲ್ಲಿ ದಾಖಲೆಯಾಗುವ ಸಮ್ಮೇಳನವನ್ನು ಮಾಡಲು ಸಂಘಟಿತ ಪ್ರಯತ್ನ ನಡೆಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ವಿವಿಧ ಸಮಿತಿಗಳ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀದರ್ ಪತ್ರಕರ್ತರ ಕೋರಿಕೆ ಮೇರೆಗೆ ಇಲ್ಲಿಗೆ ಸಮ್ಮೇಳನ ನೀಡಲಾಗಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ವಿಧಾನ ಸಭೆ, ವಿಧಾನ ಪರಿಷತ್ ಸಭಾಪತಿಗಳನ್ನು ಹಾಗೂ ಹಿರಿಯ ಪತ್ರಕರ್ತರು ಸೇರಿದಂತೆ ರಾಜ್ಯ ಮಟ್ಟದ ಎಲ್ಲ ಪತ್ರಿಕೆಗಳ ಸಂಪಾದಕರನ್ನು ಸಮ್ಮೇಳನಕ್ಕೆ ಅಹ್ವಾನಿಸಲಾಗಿದೆ ಎಂದರು.
ಎರಡು ದಿನದ ಸಮ್ಮೇಳನದಲ್ಲಿ ಉದ್ಘಾಟನೆ ಮತ್ತು ಸಮಾರೋಪ ಹೊರತುಪಡಿಸಿ, ಇನ್ನುಳಿದಂತೆ ಗೋಷ್ಠಿಗಳು, ಚಿಂತನ-ಮಂಥನ, ಸಂವಾದ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ನಾಡಿನಾದ್ಯಂತೆ ಈಗಾಗಲೇ ಎರಡೂವರೆ ಸಾವಿರ ಪತ್ರಕರ್ತರು ಸಮ್ಮೇಳನಕ್ಕೆ ಬರಲು ನೋಂದಣಿ ಮಾಡಿಕೊಂಡಿದ್ದಾರೆ. ನಾಡಿನ ಪತ್ರಕರ್ತರು ಇಲ್ಲಿ ಬಂದು ಹೋಗುವ ತನಕ ಆತಿಥ್ಯ ನೀಡುವುದು ಸ್ವಾಗತ ಸಮಿತಿ ಜವಬ್ದಾರಿಯಾಗಿರುವ ಕಾರಣ ಎಲ್ಲರೂ ಒಟ್ಟಾಗಿ ಸಮ್ಮೇಳನ ಯಶಸ್ವಿಗೆ ದುಡಿಯಬೇಕು ಎಂದರು.
ಹೊಸ ಜಾಹಿರಾತು ನೀತಿಯಿಂದ ಪತ್ರಿಕೆಗಳ ಸಂಪಾದಕರಿಗೆ ಆಗುತ್ತಿರುವ ತೊಂದರೆ ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಈಗಾಗಲೆ ಮನವಿ ಸಲ್ಲಿಸಲಾಗಿದ್ದು, ಸಮ್ಮೇಳನ ಸಂದರ್ಭದಲ್ಲೂ ಸಿಎಂಗೆ ಈ ಕುರಿತು ಮನವಿ ಮಾಡುವುದಾಗಿ ಭರವಸೆ ನೀಡಿದರು.
ಸ್ಮರಣ ಸಂಚಿಕೆ ಹಾಗೂ ಕೈಪಿಡಿಗಳನ್ನು ಪ್ರತ್ಯೇಕವಾಗಿ ಹೊರ ತರಲು ನಿರ್ಣಯಿಸಲಾಯಿತು. ವಸತಿ ಸಮಿತಿ, ಸಾರಿಗೆ ಸಮಿತಿಗಳು ಸೇರಿದಂತೆ ಎಲ್ಲ ಸಮಿತಿಗಳ ನಡುವೆಯೂ ಸೌಹಾರ್ದತೆಯ ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದರು. ಛಾಯಾಚಿತ್ರ ಪ್ರದರ್ಶನ ಮತ್ತು ವ್ಯಂಗ್ಯಚಿತ್ರ ಪ್ರದರ್ಶನಗಳು ಅಚ್ಚುಕಟ್ಟಾಗಿ ನಡೆಯಬೇಕು. ಅದಕ್ಕಾಗಿ ಸಿದ್ಧತೆಗಳು ನಡೆಯಬೇಕು ಎಂದರು. ಹಿರಿಯರು ಹಾಗೂ ಮಾಜಿ ಜಿಲ್ಲಾಧ್ಯಕ್ಷರ ಸಲಹಾ ಸಮಿತಿ, ಪ್ರವಾಸ, ಆಹಾರ, ಮೆರವಣಿಗೆ, ವಸ್ತು ಪ್ರದರ್ಶನ ಮಾರಾಟ ಮಳಿಗೆ, ಪ್ರತಿನಿಧಿಗಳ ನೊಂದಣಿ ಹಾಗೂ ಕಿಟ್ ವಿತರಣಾ ಸಮಿತಿಗಳ ತಯಾರಿ ಕುರಿತು ಪೂರ್ವ ಸಿದ್ದತಾ ಸಭೆ ಜರುಗಿತು.
ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಬೀದರ್ ಪತ್ರಕರ್ತರು ತಮಗೆ ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು. ತಗಡೂರು ಅವರಂಥ ರಾಜ್ಯಾಧ್ಯಕ್ಷರು ನಮಗೆ ಸಿಕ್ಕಿದ್ದು ನಮ್ಮೆಲ್ಲರ ಸೌಭಾಗ್ಯ. ಜಿಲ್ಲೆಗೆ ದೊರಕಿರುವ 40ನೇ ರಾಜ್ಯ ಸಮ್ಮೇಳನ ಯಶಸ್ವಿಯಾಗಿಸಲು ವೈಮನಸ್ಸು ಬಿಟ್ಟು ಪ್ರತಿಯೊಬ್ಬರ ಸಹಭಾಗಿತ್ವ ಬಹಳ ಮುಖ್ಯ ಎಂದರು.
ನಮ್ಮ ಮನವಿಗೆ ಸ್ಪಂದಿಸಿ ಬೀದರ್‌ಗೆ ಸಮ್ಮೇಳನ ನೀಡಿದಕ್ಕೆ ಧನ್ಯವಾದ ತಿಳಿಸಿದ, ಸಂಘದ ಮಾಜಿ ಜಿಲ್ಲಾಧ್ಯಕ್ಷ ಬಾಬುವಾಲಿ ಮಾತನಾಡಿ, ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿ ಹಾಗೂ ಹೊಸ ಜಾಹಿರಾತು ನೀತಿ ಬಗೆಹರಿಸಲು ರಾಜ್ಯ ಸಂಘ ಮುಂದಾಗಬೇಕೆಂದರು.
ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅವರು ವಸತಿ, ಸಾರಿಗೆ, ಆರ್ಥಿಕತೆ ಸೇರಿದಂತೆ ವಿವಿಧ ಸಮಿತಿಗಳ ಹಾಗೂ ಕಾರ್ಯಕ್ರಮದ ತಯಾರಿ ಬಗ್ಗೆ ಸಭೆಗೆ ವಿವರಿಸಿ, ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಮ್ಮೇಳನದ ಯಶಸ್ವಿಯಾಗಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಮಾಜಿ ಅಧ್ಯಕ್ಷರುಗಳಾದ ಅಶೋಕ್ ಕಾರಂಜಿ, ಬಸವರಾಜ ಕಾಮಶೆಟ್ಟಿ, ಮಾಳಪ್ಪ ಅಡಸಾರೆ ತಿಳಿಸಿದರು.
ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಮಾಜಿ ಜಿಲ್ಲಾಧ್ಯಕ್ಷರಾದ ಸಿದ್ರಾಮಯ್ಯ ಸ್ವಾಮಿ, ಅಶೋಕಕುಮಾರ ಕರಂಜಿ, ಡಿ.ಕೆ ಗಣಪತಿ, ಪತ್ರಕರ್ತರಾದ ಅಪ್ಪಾರಾವ ಸೌದಿ, ಶಶಿ ಪಾಟೀಲ, ಪ್ರಥ್ವಿರಾಜ, ಶಶಿ ಶೆಂಬೆಳ್ಳಿ, ಶಶಿ ಬಂಬುಳಗಿ, ವಿಜಯಕುಮಾರ ಬೆಳ್ದೆ, ದೀಪಕ ಮನ್ನಳ್ಳಿ, ಗೋಪಿಚಂದ್ ತಾಂದಳೆ, ಮಾರೂತಿ ಬಾವಿದೊಡ್ಡಿ, ಶ್ರೀಕಾಂತ ಬಿರಾದಾರ, ನಂದಕುಮಾರ ಕರಂಜೆ, ವಿಜಯಕುಮಾರ ಅಷ್ಟುರೆ, ಅಜಯ ಭೋಸ್ಲೆ, ಬಸವರಾಜ ಪವಾರ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಶಿವಕುಮಾರ ಸ್ವಾಮಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

The post ಬೀದರ್‌ನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ, ಸಮಿತಿಗಳ ಪೂರ್ವ ಸಿದ್ದತಾ ಸಭೆ ಅರ್ಥಪೂರ್ಣ ಸಮ್ಮೇಳನಕ್ಕೆ ಸರ್ವರು ಕೈ ಜೋಡಿಸಲು ತಗಡೂರು ಕರೆ appeared first on Karnataka Kahale.

]]>
ರಾಷ್ಟ್ರೀಯ ಯುವ ಸಂಸತ್‌ ಉತ್ಸವಕ್ಕೆ ಚಾಲನೆ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣತೊಡಲು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಸಲಹೆ https://www.karnatakakahale.com/news/22567 Tue, 17 Mar 2026 07:09:15 +0000 https://www.karnatakakahale.com/?p=22567 ಬಳ್ಳಾರಿ: ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ತೆಕ್ಕಲಕೋಟೆ ಶ್ರೀಮತಿ ಹೊನ್ನುರಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಅವರು  ಹೇಳಿದರು. ಕೇಂದ್ರ ಸರಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯಡಿ ತೆಕ್ಕಲಕೋಟೆಯ…

The post ರಾಷ್ಟ್ರೀಯ ಯುವ ಸಂಸತ್‌ ಉತ್ಸವಕ್ಕೆ ಚಾಲನೆ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣತೊಡಲು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಸಲಹೆ appeared first on Karnataka Kahale.

]]>
ಬಳ್ಳಾರಿ: ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ತೆಕ್ಕಲಕೋಟೆ ಶ್ರೀಮತಿ ಹೊನ್ನುರಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಅವರು  ಹೇಳಿದರು.
ಕೇಂದ್ರ ಸರಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯಡಿ ತೆಕ್ಕಲಕೋಟೆಯ ಶ್ರೀಮತಿ ಹೊನ್ನುರಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೇತೃತ್ವದಲ್ಲಿ ಬಳ್ಳಾರಿಯ ಶ್ರೀಮೇಧಾ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಸಂಸತ್‌ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಇರಬೇಕು. ಅದರಲ್ಲೂ ಯುವ ಜನಾಂಗ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಸುಂದರ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿ ಜೀವನದಲ್ಲಿ ಸ್ಪರ್ಧಾ ಮನೋಭಾವ ಅಗತ್ಯ. ಹೀಗಾಗಿ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ಭಾಷಣ, ಚಿತ್ರಕಲೆ, ಕತೆ, ಕವಿತೆ, ಪ್ರಬಂಧ, ರಸಪ್ರಶ್ನೆ ಸ್ಪರ್ಧೆಗಳಲ್ಲಿಭಾಗವಹಿಸುವ ಮೂಲಕ ಜ್ಞಾನ ಹೆಚ್ಚಿಸಬೇಕು ಎಂದು ಹೇಳಿದರು.
ಎನ್‌ಎಸ್‌ಎಸ್‌ ಅಧಿಕಾರಿ ಬಸವರಾಜ ಎ.ಎಸ್‌ ಮಾತನಾಡಿ, ವಿಕಾಸಿತ ಭಾರತ ವಿಚಾರ ಮಂಡನೆ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದವರು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಲು ಅವಕಾಶ ವಿರುತ್ತದೆ. ಮೊದಲ ಹಂತದ ಈ ಚರ್ಚಾ ಸ್ಪರ್ಧೆ ಜಿಲ್ಲಾ ಮಟ್ಟದ್ದಾಗಿದ್ದು, ಇಲ್ಲಿಆಯ್ಕೆಯಾದ ವಿದ್ಯಾರ್ಥಿಗಳನ್ನು
ರಾಜ್ಯ ಮಟ್ಟಕ್ಕೆ ಕಳುಹಿಸಲಾಗುತ್ತದೆ ಎಂದು ವಿವರಿಸಿದರು.
ರಾಜ್ಯಮಟ್ಟಕ್ಕೆ ಆಯ್ಕೆ: ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯ ವ್ಯಾಪ್ತಿಯ ನಾನಾ ಕಾಲೇಜುಗಳಿಂದ 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅದರಲ್ಲಿ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸಹನಾ ಮಲ್ಲಿಕಾರ್ಜುನ ಮೋಕ, ಇಂಗ್ಲಿಷ್‌ ವಿಭಾಗದ ಮುಖ್ಯಸ್ಥೆ ಸುನಿತಾ ನಿರ್ಣಾಯಕರಾಗಿ ಭಾಗವಹಿಸಿದ್ದರು. ಶ್ರೀ ಮೇಧಾ ಕಾಲೇಜಿನ ಪ್ರಾಂಶುಪಾಲ ಡಾ.ರಾಮಕಿರಣ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎನ್‌ಎಸ್‌ಎಸ್‌ಕಾರ್ಯಕ್ರಮ ಅಧಿಕಾರಿ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
—–

The post ರಾಷ್ಟ್ರೀಯ ಯುವ ಸಂಸತ್‌ ಉತ್ಸವಕ್ಕೆ ಚಾಲನೆ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣತೊಡಲು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಸಲಹೆ appeared first on Karnataka Kahale.

]]>
ವಿದ್ಯಾರ್ಥಿ ಯುವಸಮೂಹ ಇಪ್ಪತ್ತರಲ್ಲಿ ಎಡವಟ್ಟು ಮಾಡಿಕೊಂಡರೆ ಎಪ್ಪತ್ತರಲ್ಲಿ ಕಷ್ಟ ಪಡಬೇಕಾಗುತ್ತದೆ – ಕಾಳಪ್ಪ ಪತ್ತಾರ್ https://www.karnatakakahale.com/news/22459 Mon, 02 Mar 2026 15:35:40 +0000 https://www.karnatakakahale.com/?p=22459 ಬಳ್ಳಾರಿ. ಮಾ. 2 : ಮಾನವನ ಜೀವನದ ಪ್ರಮುಖಘಟ್ಟ ವಿದ್ಯಾರ್ಥಿ ಜೀವನದಲ್ಲಿ ಸರಿಯಾದ ಮಾರ್ಗವನ್ನು ಕಂಡುಕೊಳ್ಳದಿದ್ದರೆ ಜೀವನದಲ್ಲಿ ತುಂಬಾ ಕಷ್ಟ ಪಡಬೇಕಾಗುತ್ತದೆ ಎಂದು ನಿವೃತ್ತ ಮುಖ್ಯ ಗುರು ಕಾಳಪ್ಪ ಪತ್ತಾರ್ ಅವರು ತಿಳಿಸಿದರು. ಅವರು ನಗರದ ಮಧಿಕೇರಿ ಭೀಮಯ್ಯ ಪ್ರೌಢಶಾಲೆಯಲ್ಲಿ ಹಳೆ…

The post ವಿದ್ಯಾರ್ಥಿ ಯುವಸಮೂಹ ಇಪ್ಪತ್ತರಲ್ಲಿ ಎಡವಟ್ಟು ಮಾಡಿಕೊಂಡರೆ ಎಪ್ಪತ್ತರಲ್ಲಿ ಕಷ್ಟ ಪಡಬೇಕಾಗುತ್ತದೆ – ಕಾಳಪ್ಪ ಪತ್ತಾರ್ appeared first on Karnataka Kahale.

]]>
ಬಳ್ಳಾರಿ. ಮಾ. 2 : ಮಾನವನ ಜೀವನದ ಪ್ರಮುಖಘಟ್ಟ ವಿದ್ಯಾರ್ಥಿ ಜೀವನದಲ್ಲಿ ಸರಿಯಾದ ಮಾರ್ಗವನ್ನು ಕಂಡುಕೊಳ್ಳದಿದ್ದರೆ ಜೀವನದಲ್ಲಿ ತುಂಬಾ ಕಷ್ಟ ಪಡಬೇಕಾಗುತ್ತದೆ ಎಂದು ನಿವೃತ್ತ ಮುಖ್ಯ ಗುರು ಕಾಳಪ್ಪ ಪತ್ತಾರ್ ಅವರು ತಿಳಿಸಿದರು.
ಅವರು ನಗರದ ಮಧಿಕೇರಿ ಭೀಮಯ್ಯ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಪುನರ್ಮಿಲನ ಮತ್ತು ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.         ಒಬ್ಬ ಯುವಕ ಅಥವಾ ಯುವತಿ 20ರಲ್ಲಿ ಎಡವಿದರೆ 70ನೇ ವಯಸ್ಸಿನಲ್ಲಿ ಬಹಳ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಉನ್ನತವಾದ ಶಿಕ್ಷಣವನ್ನು ಪಡೆದುಕೊಂಡು ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕು ಇದರಿಂದ ಸಮಾಜದಲ್ಲಿ ಮತ್ತು ಕುಟುಂಬದಲ್ಲಿ ಒಳ್ಳೆಯ ಹೆಸರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಅದು ಬಿಟ್ಟು ನಾನಾತರದ ಅಡ್ಡದಾರಿಗಳನ್ನು ಹಿಡಿದು ಸಮಯವನ್ನು ವ್ಯರ್ಥ ಮಾಡಿದಲ್ಲಿ ಜೀವನದ ಕೊನೆಯ ದಿನಗಳಲ್ಲಿ ಬಹಳ ಪಶ್ಚತಾಪ ಪಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳನ್ನು ಎಚ್ಚರಿಸಿದರು.
ತಮ್ಮ ಎಂದಿನ ಶೈಲಿಯಲ್ಲಿ ಹಾಸ್ಯ ಭರಿತವಾದ ಮಾತುಗಳನ್ನಾಡಿದ ಕಾಳಪ್ಪ ಪತ್ತಾರ್, ತಮ್ಮ ಭಾಷಣ ದುದ್ದಕ್ಕೂ ಹಾಸ್ಯ ಪ್ರಸಂಗಗಳನ್ನು ಹೇಳುತ್ತಾ ಹಳೆ ವಿದ್ಯಾರ್ಥಿಗಳನ್ನು ನಗೆಗಡಲಿನಲ್ಲಿ ತೇಲಿಸಿದರು. ಜೊತೆಗೆ ಜೀವನದ ಕುರಿತು ಗಂಭೀರವಾದ ವಿಷಯಗಳನ್ನು ತಿಳಿಸಿ ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಹಳೆ ನಾಗರಾಜರಾಯರು, ಆಶಾ ಬಾಯಿ, ಬೆಟ್ಟಪ್ಪ ಸೇರಿದಂತೆ ಅಂದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಬೋಧಕ ಬೋಧಕೇತರ ಸಿಬ್ಬಂದಿಗಳು ಮತ್ತು ಹಾಲಿ ಮುಖ್ಯ ಉಪಾಧ್ಯಯರಾದ ಶ್ರೀನಿವಾಸ್ ಹಾಗೂ ನೂರಾರು ಜನ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

The post ವಿದ್ಯಾರ್ಥಿ ಯುವಸಮೂಹ ಇಪ್ಪತ್ತರಲ್ಲಿ ಎಡವಟ್ಟು ಮಾಡಿಕೊಂಡರೆ ಎಪ್ಪತ್ತರಲ್ಲಿ ಕಷ್ಟ ಪಡಬೇಕಾಗುತ್ತದೆ – ಕಾಳಪ್ಪ ಪತ್ತಾರ್ appeared first on Karnataka Kahale.

]]>
ಗುತ್ತಿಗೆ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ -ರಾಜ್ಯಾಧ್ಯಕ್ಷ ಆರ್. ಮಂಜುನಾಥ್ https://www.karnatakakahale.com/news/22404 Mon, 23 Feb 2026 11:44:29 +0000 https://www.karnatakakahale.com/?p=22404 ಬಳ್ಳಾರಿ, ಫೆ.23: ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಗುತ್ತಿಗೆದಾರರಿಗೆ ಉಳಿಸಿಕೊಂಡ ಬಾಕಿ ಹಣ ರೂ.37,000 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡದಿದ್ದಲ್ಲಿ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲಾ ಗುತ್ತಿಗೆದಾರರಿಂದ ಬೃಹತ್ ಪ್ರತಿಭಟನೆಯನ್ನು…

The post ಗುತ್ತಿಗೆ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ -ರಾಜ್ಯಾಧ್ಯಕ್ಷ ಆರ್. ಮಂಜುನಾಥ್ appeared first on Karnataka Kahale.

]]>

ಬಳ್ಳಾರಿ, ಫೆ.23: ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಗುತ್ತಿಗೆದಾರರಿಗೆ ಉಳಿಸಿಕೊಂಡ ಬಾಕಿ ಹಣ ರೂ.37,000 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡದಿದ್ದಲ್ಲಿ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲಾ ಗುತ್ತಿಗೆದಾರರಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ತಿಳಿಸಿದರು.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ಗುತ್ತಿಗೆದಾರರು ತಮ್ಮ ಹೊಲ ಮನೆ ಆಸ್ತಿಗಳನ್ನು ಅಡವಿಟ್ಟು ಸಾಲ ಸೋಲ ಮಾಡಿ ಪಿಡಬ್ಲ್ಯೂಡಿ, ಆರ್ ಡಿ ಪಿ ಆರ್, ಜಲಸಂಪನ್ಮೂಲ ಸೇರಿದಂತೆ ಐದಾರು ಇಲಾಖೆಯ ಕೆಲಸಗಳನ್ನು ಮಾಡಿಕೊಟ್ಟಿದ್ದೇವೆ. ಆದರೆ ನಮಗೆ ಗುತ್ತಿಗೆ ಹಣವನ್ನು ಬಿಡುಗಡೆ ಮಾಡದೇ ಹಿಂದಿನ ಸರ್ಕಾರ ಮುಂದಿನ ಸರ್ಕಾರ ಎಂದು ಸಬೂಬುಗಳನ್ನು ಹೇಳುತ್ತಾ ಮುಂದೂಡುತ್ತಿದೆ ಇದರಿಂದ ನಮಗೆ ತುಂಬಾ ಆರ್ಥಿಕ ನಷ್ಟ ಉಂಟಾಗಿದೆ ಎಂದು‌ ಬೇಸರ ವ್ಯಕ್ತಪಡಿಸಿದರು.
ತಾವು ಕೆಲಸ ಮಾಡಿದ ಪಿಡಬ್ಲ್ಯೂಡಿ ಇಲಾಖೆಯ 8370, ಆರ್ ಡಿ ಪಿ ಆರ್ 3800, ಜಲಸಂಪನ್ಮೂಲ ಇಲಾಖೆಯ 13000, ಸಣ್ಣ ನೀರಾವರಿ ಇಲಾಖೆಯ 3000, ನಗರಾಭಿವೃದ್ಧಿ ಇಲಾಖೆಯ 2000 ವಸತಿ 2006, ಕಾರ್ಮಿಕ ಇಲಾಖೆಯ 2000 ಕೋಟಿ ಬಿಬಿಎಂಪಿ 2600 ಕೋಟಿ ಒಟ್ಟು 37,000 ಕೋಟಿ ಬಾಕಿ ಹಣವನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 100 ಪುಟಗಳ ಮನವಿ ಪತ್ರವನ್ನು ಸಲ್ಲಿಸಿದ್ದೇವೆ ಆದರೂ ಸಹ ಸರ್ಕಾರ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.
ನಮ್ಮ ಗುತ್ತಿಗೆ ಹಣ ಬಾಕಿ ಉಳಿಸಿಕೊಂಡು ಹತ್ತು ಜಿಲ್ಲೆಗಳ ಒಟ್ಟುಗೂಡಿಸಿ ಪ್ಯಾಕೇಜ್ ಆಗಿ ಹೊರ ರಾಜ್ಯದವರಿಗೆ ಗುತ್ತಿಗೆಯನ್ನು ನೀಡಲಾಗುತ್ತದೆ ಅವರು ನೀಡುವ ಉಪಗುತ್ತಿಗೆಯಿಂದ ನಾವು ಕೆಲಸ ಮಾಡುವ ಅನಿವಾರ್ಯತೆ ಎದುರಾಗಿದೆ ಕೂಡಲೇ ಸರ್ಕಾರ ನಮ್ಮ ಬಾಕಿ ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗಳನ್ನು ನೇರವಾಗಿ ನಮಗೆ ಗುತ್ತಿಗೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ನಮ್ಮ ಸಂಘದ 67 ಜನ ನಿರ್ದೇಶಕರು ಮತ್ತು ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಸಭೆ ಸೇರಿ ಒಂದು ದಿನ ಕಾಮಗಾರಿಯನ್ನು ನಿಲ್ಲಿಸಿ ಸಾಂಕೇತಿಕವಾಗಿ ಧರಣಿ ನಡೆಸಲಾಗುವುದು ನಂತರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲಾ ಗುತ್ತಿಗೆದಾರರು ಸೇರಿ ಪ್ರತಿಭಟನೆಯನ್ನು ನಡೆಸಲಾಗುವುದು ಅಷ್ಟರೊಳಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಬಂದು ನಮ್ಮ ಜೊತೆ ಮಾತನಾಡಿದಲ್ಲಿ ನಾವು ಪ್ರತಿಭಟನೆಯನ್ನು ಕೈ ಬಿಡಲು ಸಿದ್ದರಿದ್ದೇವೆ ಎಂದರು.
ನಮ್ಮ ಹೋರಾಟ ಅಥವಾ ಪ್ರತಿಭಟನೆ ಸರ್ಕಾರದೊಂದಿಗೆ ಸಂಘರ್ಷವಲ್ಲ ನಮ್ಮ ಹಣಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ ನಮ್ಮ ಸಮಸ್ಯೆಯನ್ನು ಸಿಎಂ ಗಮನಕ್ಕೆ ತಂದರು ಅವರು ಹಾರಿಕೆ ರೀತಿಯಲ್ಲಿ ಮಾತನಾಡಿ ಸಾಗ ಹಾಕುತ್ತಾರೆ ಇದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಹದಗೆಟ್ಟು ನಮ್ಮ ಕುಟುಂಬಗಳು ಬೀದಿಗೆ ಬೀಳುವ ಸಾಧ್ಯತೆ ಇದೆ. ಕಾರಣ ಸರ್ಕಾರ ಕೂಡಲೇ ನಮ್ಮ ಬಾಕಿ ಹಣವನ್ನು ಬಿಡುಗಡೆಗೊಳಿಸಬೇಕೆಂದು ಆರ್ ಮಂಜುನಾಥ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಅಧ್ಯಕ್ಷ ರಮಣ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಉಮಾಶಂಕರ್ ರೆಡ್ಡಿ, ನಾಗಪ್ಪ ನಾಗರಾಜ್ ರಾಜಶೇಖರ್, ಪ್ರದೀಪ್, ಸಿದ್ದೇಶ್ ಸೇರಿದಂತೆ ಇತರರಿದ್ದರು.

The post ಗುತ್ತಿಗೆ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ -ರಾಜ್ಯಾಧ್ಯಕ್ಷ ಆರ್. ಮಂಜುನಾಥ್ appeared first on Karnataka Kahale.

]]>