ರಚನಾತ್ಮಕ ಜೀವನಕ್ಕೆ ಸಂವಿಧಾನದ ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯ        -ಡಾ. ಹೊನ್ನೂರಾಲಿ ಐ

ಬಳ್ಳಾರಿ,ಮಾ .6: ನಾಗರಿಕರ ಹಕ್ಕುಗಳು , ಕರ್ತವ್ಯಗಳು ಸರ್ಕಾರದ ರಚನೆ ಮತ್ತು ಜನಪ್ರತಿನಿಧಿಗಳ ಕಾರ್ಯಕ್ಷಮತೆ ಅರ್ಥ ಮಾಡಿಕೊಳ್ಳಲು ಸಂವಿಧಾನದ ಜ್ಞಾನ ಮುಖ್ಯ ಎಂದು  ಸರಳಾದೇವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ  ಡಾ. ಹೊನ್ನೂರಾಲಿ ಐ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್…

ಬಳ್ಳಾರಿ ವಿ ಎಸ್ ಕೆ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ. ಕೆ ಎಂ ಮೇತ್ರಿ ಅಧಿಕಾರ ಸ್ವೀಕಾರ

ಬಳ್ಳಾರಿ, ಮಾ.6: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನದ ವಿಭಾಗದ ಪ್ರಾಧ್ಯಾಪಕ ಪ್ರೊ ಕೆ ಎಂ ಮೇತ್ರಿ ಅವರು ಅಧಿಕಾರ ವಹಿಸಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…

ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ. ಕೆ.ಎಂ ಮೇತ್ರಿ ನೇಮಕ

ಬಳ್ಳಾರಿ, ಮಾ.5: ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ(ವಿ.ಎಸ್.ಕೆ.ವಿವಿ) ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್…

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ.ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ

ಬಳ್ಳಾರಿ: ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.          ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅಧಿಕಾರವನ್ನು ಹಸ್ತಾಂತರಿಸಿದರು.   …

ಕನಕಗಿರಿ ಉತ್ಸವಕ್ಕೆ ಚಾಲನೆ: ನಮ್ಮ ಜನ ಸಂಸ್ಕೃತಿಗಳನ್ನು ಚೆನ್ನಾಗಿ ಅರಿತರೆ ಮಾತ್ರ ದೇಶದ ಭವಿಷ್ಯ, ಸಂಸ್ಕೃತಿ ರೂಪಿಸಲು ಸಾಧ್ಯ -ಸಿ.ಎಂ.ಸಿದ್ದರಾಮಯ್ಯ

ಕನಕಗಿರಿ(ಕೊಪ್ಪಳ ಜಿ.), ಮಾ 2: ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಕೊಪ್ಪಳ ಜಿಲ್ಲೆಯ…

ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ, ಮಾ. 2: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್‍ಡಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ…

ಬಳ್ಳಾರಿ: ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಚೂಡಾಮಣಿ.ಕೆ ಅವರಿಗೆ ಪಿಹೆಚ್‍ಡಿ ಪದವಿ

ಬಳ್ಳಾರಿ,ಮಾ.1: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚೂಡಾಮಣಿ.ಕೆ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‍ಡಿ ಪದವಿಯನ್ನು ಘೋಷಿಸಿದೆ. ಚೂಡಾಮಣಿ.ಕೆ ಅವರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ…

ಅಭಿನಯ ಮನುಷ್ಯ ಕಂಡುಕೊಂಡ ಜೀವಂತ ಕಲೆ -ಡಾ.ವಿಜಯಾ ಸುಬ್ಬರಾಜು

ಬಳ್ಳಾರಿ , ಫೆ 24: ಅಭಿನಯ ಮನುಷ್ಯ ಕಂಡುಕೊಂಡ ಜೀವಂತ ಕಲೆ ಎಂದು ಹಿರಿಯ ನಾಟಕಕಾರರಾದ ಬೆಂಗಳೂರಿನ ಡಾ.ವಿಜಯಾ ಸುಬ್ಬರಾಜು ಹೇಳಿದರು.  ನಗರದ ಸರಳಾದೇವಿ  ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜು ಸಭಾಂಗಣದಲ್ಲಿ  ಶನಿವಾರ ಕಾರಂತ ರಂಗಲೋಕ ಆಯೋಜಿಸಿದ್ದ…

ಅಳವಂಡಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ: ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ -ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ

ಅಳವಂಡಿ: ಗ್ರಾಮೀಣ ಭಾಗದಲ್ಲಿನ ಕಾಲೇಜು ಬಿಟ್ಟು ನಗರ ಭಾಗದಲ್ಲಿನ ಕಾಲೇಜಿಗೆ ಹೋಗುವ ಅವಶ್ಯಕತೆ ಇಲ್ಲ. ನಗರದಲ್ಲಿರುವ ಕಾಲೇಜುಗಳಲ್ಲಿನ ಸೌಲಭ್ಯಗಳೆಲ್ಲ ಗ್ರಾಮೀಣ ಕಾಲೇಜುಗಳಲ್ಲಿ ದೊರೆಯುತ್ತಿದೆ ಎಂದು ಚಿಂತಕರಾದ ಅಲ್ಲಮಪ್ರಭು ಬೆಟ್ಟದೂರ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶ್ರೀ ಶಿವಮೂರ್ತಿ ಸ್ವಾಮಿ ಇನಾಮದಾರ್  ಕಟ್ಟಿಮನಿ ಹಿರೇಮಠ…

ಸಂತ ಶ್ರೀಸೇವಾಲಾಲರ ಆದರ್ಶಗಳನ್ನು ಪಾಲಿಸಿ -ಡಾ. ಗವಿಸಿದ್ದಪ್ಪ ಮುತ್ತಾಳ್

ಅಳವಂಡಿ ಫೆ,15: ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು ಮೂಡ ನಂಬಿಕೆಗಳಿಗೆ ಬಲಿಯಾಗಬಾರದು ಎಂದು ಜನರಲ್ಲಿ ಜಾಗೃತಿಯನ್ನು ಮೂಡಿಸಿದವರು ಶ್ರೀ ಸಂತ ಸೇವಾಲಾಲರು ಎಂದು ಪ್ರಾಚಾರ್ಯ ಡಾ. ಗವಿಸಿದ್ದಪ್ಪ ಮುತ್ತಾಳ್ ಅವರು ಹೇಳಿದರು.                 …