ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ವೇಳಾಪಟ್ಟಿ ಪ್ರಕಟ

ಕೊಪ್ಪಳ, ಅ. 16: ಭಾರತ ಚುನಾವಣಾ ಆಯೋಗದ ದಿನಾಂಕ: 09.08.2023 ರ ಪತ್ರದನ್ವಯ, ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ, ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ರಲ್ಲಿ ಹೊಸದಾಗಿ ಅರ್ಜಿಯನ್ನು…

ಕೊಪ್ಪಳ ವಿಶ್ವ ವಿದ್ಯಾಲಯದಿಂದ ವಿನೂತನ ಪ್ರಯೋಗ:  ದಸರಾ ಕಾವ್ಯ ಸಂಭ್ರಮ ಯಶಸ್ವಿ

ಕೊಪ್ಪಳ, ಅ. 15: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿರುವ ಸಂದರ್ಭದಲ್ಲಿಯೇ ಉತ್ತರ ಕರ್ನಾಟಕದ ಬಯಲನೆಲದ ಸಿರಿ ಕೊಪಣಾದ್ರಿಯಲ್ಲೂ ಜರುಗಿದ ದಸರಾ ಕಾವ್ಯ ಹಬ್ಬವು ಸಾಹಿತ್ಯ ಪ್ರಿಯರ ಮನ ತಣಿಸಿತು. ಸಾಹಿತ್ಯ ಅಕಾಡೆಮಿಗಳು ನಡೆಸುವ ಮಾದರಿಯಲ್ಲಿ ಕೊಪ್ಪಳ ವಿಶ್ವವಿದ್ಯಾಲಯವು…

ಬಳ್ಳಾರಿ: ಜಿಲ್ಲಾಡಳಿತದಿಂದ ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತೆ ನಂದಿನಿ ಅಗಸರ ಅವರಿಗೆ ಸನ್ಮಾನ

ಬಳ್ಳಾರಿ,ಅ.15: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022 ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ನಂದಿನಿ ಅಗಸರ ಅವರನ್ನು ಜಿಲ್ಲಾಡಳಿತದಿಂದ ಶನಿವಾರ ಹೃದಯಪೂರ್ವಕವಾಗಿ ಸನ್ಮಾನಿಸಲಾಯಿತು.           ನಂದಿನಿ ಅವರು, ಮೂಲತಃ…

ರಾಜ್ಯ ಗೌರವಾಧ್ಯಕ್ಷ ಡಾ.ಟಿ. ದುರುಗಪ್ಪ ನೇತೃತ್ವ: ಸೇವಾ ಭದ್ರತೆ ಸೇರಿ ಪ್ರಮುಖ ಐದು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಪ್ರತಿಭಟನೆ

ಬಳ್ಳಾರಿ, ಅ.12: ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸೇರಿದಂತೆ ಪ್ರಮುಖ ಐದು ಬೇಡಿಕೆಗಳನ್ನು ಈಡೇರಿಸ ಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಬಳ್ಳಾರಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಕೇಂದ್ರ ತಂಡ:  ಧೃತಿಗೆಡದಂತೆ ರೈತರಿಗೆ ಮನವರಿಕೆ

ಬಳ್ಳಾರಿ, ಅ.7: ಕೇಂದ್ರ ಕುಡಿಯುವ ನೀರು ಹಾಗು ನೈರ್ಮಲ್ಯ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾದ ಡಿ. ರಾಜಶೇಖರ್  ನೇತೃತ್ವದಲ್ಲಿ ಮೂವರು ಅಧಿಕಾರಿಗಳನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಿಲ್ಲೆಯ ಸಂಡೂರು ತಾಲ್ಲೂಕಿನ ಕೆಲ ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಗಳಿಗೆ ಭೇಟಿ ನೀಡಿ…

ಸೇಡಂ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ: 23ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ, ಅ. 3- ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 23 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2022 ಮತ್ತು 2023 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಳೆದ 22 ವರ್ಷಗಳಿಂದ ನಿರಂತರ ಸಾಹಿತ್ಯ…

ಬಳ್ಳಾರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ‌ಹಿರಿಯ ನಾಗರಿಕರ‌ ಪಾತ್ರ ಮಹತ್ವದ್ದು -ಡಿಸಿ‌ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಅ.1: ಭಾರತದ ಪ್ರಜಾಪ್ರಭುತ್ವದ ಹಬ್ಬ ಎನ್ನಲಾಗುವ ಚುನಾವಣೆಗಳಲ್ಲಿ ತಪ್ಪದೇ ಮತದಾನ ಮಾಡುತ್ತಿರುವ ಹಿರಿಯ ನಾಗರಿಕರ ಕೊಡುಗೆ ಅಪಾರ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.  ಭಾರತ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾಡಳಿತ ಹಾಗೂ…

ಬಳ್ಳಾರಿ ತಹಸೀಲ್ದಾರ್ ಕಚೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಹಿರಿಯ ಚೇತನಗಳಿಗೆ ಸನ್ಮಾನ

ಬಳ್ಳಾರಿ, ಅ.1: ನಗರದ ಡಾ. ರಾಜಕುಮಾರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಆವರಣದಲ್ಲಿರುವ  ತಾಲೂಕು ಕಛೇರಿಯಲ್ಲಿ ಸರಳ, ಅರ್ಥಪೂರ್ಣವಾಗಿ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ದಿನಾಚರಣೆ ಅಂಗವಾಗಿ ನಗರದ  ಹಿರಿಯ ಚೇತನಗಳನ್ನು  ಅಭಿನಂದನ ಪತ್ರಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ…

ಶಿಕ್ಷಕ ಸೋತರೆ ದೇಶವೂ ಸೋಲುತ್ತದೆ -ಚೋರುನೂರು ಕೊಟ್ರಪ್ಪ

ಬಳ್ಳಾರಿ, ಸೆ.30: ನಗರದ ವೀರಶೈವ ವಿದ್ಯಾವರ್ಧಕ ಸಂಘವು ಶಿಕ್ಷಕರ ದಿನಾಚರಣೆಯ ನಿಮಿತ್ತ ನಿವೃತ್ತ ಶಿಕ್ಷಕರಿಗೆ ಗೌರವ ಸನ್ಮಾನ ಸಮಾರಂಭವನ್ನು  ಸ್ಥಳೀಯ ಎ.ಎಸ್ ಎಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿತ್ತು.  ಸಮಾರಂಭದ ವಿಶೇಷ ಉಪನ್ಯಾಸಕರಾಗಿ ‌ಆಗಮಿಸಿದ್ದ ಸಂಘದ ಮಾಜಿ ಕಾರ್ಯದರ್ಶಿಗಳು ಹಾಗು ಕನ್ನಡ ಸಂಸ್ಕೃತಿ…

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ: ನೂತನ ಅಧ್ಯಕ್ಷರಾಗಿ  ಬಿ.ಮಹಾರುದ್ರಗೌಡ, ಗೌರವ ಕಾರ್ಯದರ್ಶಿಯಾಗಿ ಸಿ. ಸುರೇಶಬಾಬು ಅಧಿಕಾರ ಸ್ವೀಕಾರ

ಬಳ್ಳಾರಿ, ಸೆ. 29: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಿರಿಯ ಸದಸ್ಯ ಬಿ. ಮಹಾರುದ್ರಗೌಡ ಮತ್ತು ಗೌರವ ಕಾರ್ಯದರ್ಶಿಗಳಾಗಿ ಕೆ.ಸಿ. ಸುರೇಶಬಾಬು ಅವರು ಸರ್ವಾನುಮತದಿಂದ ಅವಿರೋಧ ಆಯ್ಕೆಯಾಗಿದ್ದು, ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ…