ಬಳ್ಳಾರಿ,ಜ.11: ರಾಯಚೂರು,ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಕೆನೆಭರಿತ ನಂದಿನಿ ಸಮೃದ್ಧಿ ಹಾಲು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಎಲ್.ಬಿ.ಪಿ.ಭೀಮಾನಾಯ್ಕ ಅವರು ತಿಳಿಸಿದರು. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.…
Category: ಕಲ್ಯಾಣ ಕರ್ನಾಟಕ
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಅವರಿಗೆ ಬೀಳ್ಕೊಡುಗೆ
ಬಳ್ಳಾರಿ,ಜ.10: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಳೆದ ಮೂರುವರ್ಷಗಳಿಂದ ಸೇವೆ ಸಲ್ಲಿಸಿ ಬೆಂಗಳೂರಿನ ರಾಜ್ಯಗುಪ್ತಚರ ಇಲಾಖೆಗೆ ವರ್ಗಾವಣೆಯಾಗಿರುವ ಬಿ.ಎನ್.ಲಾವಣ್ಯ ಅವರಿಗೆ ಸೋಮವಾರ ಬಳ್ಳಾರಿ ಪೊಲೀಸ್ ವತಿಯಿಂದ ಸನ್ಮಾನಿಸಿ ಹೃತ್ಪೂರ್ವಕವಾಗಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಎಎಸ್ಪಿ ಬಿ.ಎನ್.ಲಾವಣ್ಯ…
ಅನಾಥ ಒಂಟಿ ಮಹಿಳೆಗೆ ನೆರವಾದ ವೈ.ಎಸ್.ಎಸ್ ಮತ್ತು ಶಂಕರ್ ಗೆಳೆಯರ ಬಳಗ: ಸಾರ್ವಜನಿಕರಿಂದ ಮೆಚ್ಚುಗೆ
ಹೊಸಪೇಟೆ(ವಿಜಯನಗರ ಜಿಲ್ಲೆ): ಹಲವು ದಿನಗಳಿಂದ ನಗರದಲ್ಲಿ ಅನಾಥವಾಗಿ, ಅನಾರೋಗ್ಯ ಸ್ಥಿತಿಯಲ್ಲಿ ಅಲೆಯುತ್ತಿದ್ದ ಮಹಿಳೆಯನ್ನು ಇಲ್ಲಿನ ವೈ.ಎಸ್.ಎಸ್ ಮತ್ತು ಶಂಕರ್ ಗೆಳೆಯರ ಬಳಗ ರಕ್ಷಿಸಿ ವೃದ್ಧಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಅನಾಥೆ ಉರಕುಂದಮ್ಮ (70) ಎನ್ನುವ ಮಹಿಳೆ ಹಲವಾರು ದಿನಗಳಿಂದ ಒಂಟಿಯಾಗಿ ಯಾರ…
ಮೇ ನಲ್ಲಿ ತುಂಗಭದ್ರಾ ಹೂಳಿನ ಜಾತ್ರೆ: ಮಾ.31ರ ವರೆಗೆ ಎಚ್ಎಲ್ʼಸಿ ಕಾಲುವೆಗೆ ನೀರು ಹರಿಸಲು ತುಂಗಭದ್ರಾ ರೈತ ಸಂಘ ಒತ್ತಾಯ
ಬಳ್ಳಾರಿ, ಜ.6: ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಚ್ ಎಲ್ ಸಿ ಕಾಲುವೆಗೆ ಮಾ.31ರವರೆಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘ ಒತ್ತಾಯಿಸಿದೆ. ನಗರದಲ್ಲಿ ಗುರುವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಂಗಭದ್ರಾ…
ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಮುಂಜಾಗ್ರತ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‍ಸಿಂಗ್ ಸೂಚನೆ
ಬಳ್ಳಾರಿ,ಜ.5: ಕೊರೊನಾ ಎರಡನೆಯ ಅಲೆಯ ಸಂದರ್ಭದಲ್ಲಿ ಆದ ಲೋಪದೋಷಗಳು ಮರುಕಳಿಸದಂತೆ ಬಳ್ಳಾರಿ-ವಿಜಯನಗರ ಅವಳಿ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಹೇಳಿದರು. ನಗರದದ ಬಿಡಿಎಎ ಫುಟ್‍ಬಾಲ್ ಮೈದಾನದ…
ಸೇವಾ ಭದ್ರತೆ ಕಲ್ಪಿಸಲು ಆಗ್ರಹಿಸಿ ಗಂಗಾವತಿಯಲ್ಲಿ ಅತಿಥಿ ಉಪನ್ಯಾಸಕರಿಂದ ಬೈಕ್ ರ್ಯಾಲಿ
ಗಂಗಾವತಿ, ಜ.5: ತಮ್ಮನ್ಯಾಯಯುತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಎಸ್.ಕೆ.ಎನ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸುದರು. ಅತಿಥಿ ಉಪನ್ಯಾಸಕರ ಒಕ್ಕೂಟದ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಕಾಲೇಜ್ ಆವರಣದಿಂದ …
ಸೃಷ್ಟಿ ಮಹಿಳಾ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕವಯತ್ರಿ ಸರೋಜಾ ಬ್ಯಾತನಾಳ್ ನೇಮಕ
ಬಳ್ಳಾರಿ, ಜ.4: ಸೃಷ್ಟಿ ಮಹಿಳಾ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಸಮಿತಿ ನೂತನ ಅಧ್ಯಕ್ಷರಾಗಿ ಕವಯತ್ರಿ ಸರೋಜಾ ಬ್ಯಾತನಾಳ್ ನೇಮಕವಾಗಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಸೃಷ್ಟಿ ಮೀಡಿಯಾ ಟ್ರಸ್ಟ್ ಅಧ್ಯಕ್ಷ ವಾಗೀಶ್ ಸಿ ಕೋಟೆಹಾಳ್ ಅವರು, ಜಿಲ್ಲಾ ಸಮಿತಿ…
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಲಬುರಗಿ, ಜ.4: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳವಾರ…
ಕಲಬುರಗಿಯಲ್ಲಿ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಜಾಗೃತ ಪತ್ರಿಕೆ, ಪತ್ರಕರ್ತರ ಕ್ರಿಯಾಶೀಲತೆಯಿಂದ ಸರ್ಕಾರ,ಸಮಾಜ ಸದಾ ಎಚ್ಚರ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಮತ
ಕಲಬುರಗಿ, ಜ.04: ಪತ್ರಿಕೋದ್ಯಮಿ ಸದಾ ಜಾಗೃತವಾಗಿ ಕೆಲಸ ಮಾಡಿದರೆ ಸರ್ಕಾರ,ಸಮಾಜ ಎಚ್ಚರವಾಗಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳವಾರ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಆಯೋಜಿಸಿರುವ 36 ನೇ ರಾಜ್ಯ ಪತ್ರಕರ್ತರ…
ಆಲಾಪ್ ಸಂಗೀತ ಕಲಾ ಟ್ರಸ್ಟ್ ಆಯೋಜನೆ: ಜನಮನರಂಜಿಸಿದ ದನಕಾಯುವರ ದೊಡ್ಡಾಟ, ಜಾನಪದ ಹಾಡುಗಳು
ಬಳ್ಳಾರಿ: ನಗರದ ಆಲಾಪ ಸಂಗೀತ ಕಲಾ ಟ್ರಸ್ಟ್ ಸಂಸ್ಥೆ ಹೊಸ ವರ್ಷದ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಗೀತೆಗಳ ಗಾಯನ ಹಾಗೂ ಹಾಸ್ಯ ನಾಟಕ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮವನ್ನು ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವಾಧ್ಯಕ್ಷ…