ರಾಷ್ಟ್ರೀಯ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Sat, 11 Apr 2026 20:39:27 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ರಾಷ್ಟ್ರೀಯ – Karnataka Kahale https://www.karnatakakahale.com 32 32 ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ https://www.karnatakakahale.com/news/22720 Sat, 11 Apr 2026 20:39:27 +0000 https://www.karnatakakahale.com/?p=22720 ಬಳ್ಳಾರಿ, ಏ.12: ಅಂತರಾಷ್ಟ್ರೀಯ ಪ್ರಸಿದ್ಧ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಅಂತರಾಷ್ಟ್ರೀಯ ಜಾನಪದ ಗಾಯಕ, ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರು ಆಯ್ಕೆಯಾಗಿದ್ದಾರೆ. ನಗರದ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಕಳೆದ ವರ್ಷದಿಂದ…

The post ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ appeared first on Karnataka Kahale.

]]>

ಬಳ್ಳಾರಿ, ಏ.12: ಅಂತರಾಷ್ಟ್ರೀಯ ಪ್ರಸಿದ್ಧ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಅಂತರಾಷ್ಟ್ರೀಯ ಜಾನಪದ ಗಾಯಕ, ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರು ಆಯ್ಕೆಯಾಗಿದ್ದಾರೆ.
ನಗರದ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಕಳೆದ ವರ್ಷದಿಂದ ರಾಷ್ಟ್ರೀಯ ಪ್ರಶಸ್ತಿ ‌ನೀಡುತ್ತಿದ್ದು, ಏ.12 ರಂದು ಭಾನುವಾರ ಸಂಜೆ 5 ಗಂಟೆಗೆ ಸ್ಥಳೀಯ ಡಾ.‌ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯ ಈ. ತುಕಾರಾಂ ಅವರು ಪ್ರಶಸ್ತಿ ಪ್ರದಾನ‌ ಮಾಡುವರು ಎಂದು ಟ್ರಸ್ಟ್ ಹಾಗೂ ಕಾರ್ಯಕ್ರಮ ಸಂಚಾಲಕ ಬೆಳಗಲ್ಲು ಹನುಮಂತ ಅವರು ತಿಳಿಸಿದರು.
ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಅಕಾಡೆಮಿ ‌ಅಧ್ಯಕ್ಷ ಡಾ.‌ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಉದ್ಘಾಟಿಸುವರು. ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೆ.‌ನಾಗೇಂದ್ರ ಪ್ರಸಾದ್, ಜಿಲ್ಲಾ ಎಸ್ಪಿ ಡಾ.‌ಸುಮನ್ ಡಿ.‌ಪನ್ನೇಕರ್, ಮೈಸೂರಿನ ರಂಗಕರ್ಮಿ, ಶ್ರೀ ರಾಜೇಶ್ವರಿ ವಸ್ತ್ರಾಲಂಕಾರದ ಮಾಲೀಕ ಬಿ.‌ಎಂ. ರಾಮಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ‌ನಿರ್ದೇಶಕ ಬಿ.‌ನಾಗರಾಜ, ಕರ್ನಾಟಕ ಜಾನಪದ ಅಕಾಡೆಮಿ ‌ ಸದಸ್ಯ ಸಿ.‌ಎನ್ ಮಂಜೇಶ್ ಚನ್ನಾಪುರ, ನಗರದ ಶ್ರೀ ಕೊಟ್ಟೂರು ಸ್ವಾಮಿ ಬಿ.ಇಡಿ‌‌ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಹಿರೇಮಠ ಮತ್ತು ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಡಾ. ಬಾನಂದೂರು ಕೆಂಪಯ್ಯ

ಕಾರ್ಯಕ್ರಮಕ್ಕೆ ಮುನ್ನ ಮೋತಿ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಜಾನಪದ ಕಲಾ ತಂಡಗಳ ಆಕರ್ಷಕ ಮೆರವಣಿಗೆಯಲ್ಲಿ ಅತಿಥಿ ಗಣ್ಯರು, ನಾಡೋಜ ಬೆಳಗಲ್ಲು ವೀರಣ್ಣ ಅವರ ಒಡನಾಡಿಗಳು, ಹಿತೈಷಿ, ಅಭಿಮಾನಿಗಳು ರಂಗಮಂದಿರ ತಲುಪುವರು.
ಸಾಂಸ್ಕೃತಿಕ ಅಂಕಣ: ನೆರೆಯ ಆಂದ್ರಪ್ರದೇಶದ ಸತ್ಯಸಾಯಿ ಜಿಲ್ಲೆ ಧರ್ಮಾವರಂದ ನಿಮ್ಮಲಕುಂಟ ಶ್ರೀ ವನಾರ್ಚ ರಾಮಕೃಷ್ಣ ತೊಗಲುಗೊಂಬೆಯಾಟ ಕಲಾ ತಂಡದಿಂದ ಸುಂದರಕಾಂಡ (ಸೀತಾಪಹರಣ) ತೊಗಲು ಗೊಂಬೆಯಾಟ ಪ್ರದರ್ಶನ ಪ್ರಶಸ್ತಿ ಪ್ರದಾನದ ಬಳಿಕ ಜರುಗಲಿದೆ.

ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ

ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ ಡಾ. ಬಾನಂದೂರು ಕೆಂಪಯ್ಯ ಅವರ ಪರಿಚಯ: ಅಂತಾರಾಷ್ಟ್ರೀಯ ಜಾನಪದ ಗಾಯಕ, ಸಾಹಿತಿ, ಸಂಗೀತಗಾರ, ಸಂಶೋಧಕ, ಹಾಡುವ ಹಕ್ಕಿ
ಡಾ. ಬಾನಂದೂರು ಕೆಂಪಯ್ಯ ಅವರು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಾನಂದೂರಿನಲ್ಲಿ 1951 ಜೂನ್14ರಂದು ಜಾನಪದ‌ ಕುಟುಂಬದಲ್ಲಿ ಜನಿಸಿದರು. ಇವರ ತಾಯಿ ಹುಚ್ಚಮ್ಮ ಜನಪದ ಗಾಯಕಿ, ತಂದೆ ಚರ್ಮವಾದ್ಯ ನುಡಿಸುವುದರಲ್ಲಿ ಪರಿಣಿತ ಹೊಂದಿದ್ದ ವೆಂಕಟಯ್ಯ ಅವರು. ಸಾಂಸ್ಕೃತಿಕ ಶ್ರೀಮಂತಿಕೆಯ ದಂಪತಿಗಳ ನಾಲ್ಕು ಗಂಡು, ನಾಲ್ಕು ಹೆಣ್ಣು ಮಕ್ಕಳಲ್ಲಿ ಕೆಂಪಯ್ಯನವರೆ ಕಿರಿಯರು. ಇವರ ಅಣ್ಣ ಆರು ನಗಾರಿ ಬಾರಿಸುವ ಪರಿಣತಿ ಪಡೆದು ನಗಾರಿ ಸಿದ್ದಯ್ಯನೆಂದೇ ಪ್ರಸಿದ್ಧಿ ಹೊಂದಿದ‌ ಪ್ರತಿಭಾವಂತರು.
ಡಾ. ಬಾನಂದೂರು ಅವರ ಪ್ರಾಥಮಿಕ ಶಿಕ್ಷಣ ಬಾನಂದೂರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಬಿ.ಎ(ಆನರ್ಸ್) ಪದವಿ,
೧೯೮೪ರಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಸ್ನಾತಕೋತ್ತರ(ಎಂ.ಎ) ಪದವಿ ಪಡೆದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಕರ್ನಾಟಕ ದಲಿತ ಜಾನಪದ ಸಂಗೀತದಲ್ಲಿ ಡಿ.ಲಿಟ್. ಪದವಿ ಪಡೆದಿದ್ದಾರೆ.
ಡಾ. ಬಾನಂದೂರು ಕೆಂಪಯ್ಯನವರು ಆರಂಭದಲ್ಲಿ ಮಾಧ್ಯಮಿಕ ಶಾಲೆಯ ಶಿಕ್ಷಕರಾಗಿ, ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ೧೯೮೦ರಲ್ಲಿ ಮೈಸೂರು ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇರಿದ ಬಳಿಕ ಹಿಂತಿರುಗಿ ನೋಡಲಿಲ್ಲ . ಬೆಂಗಳೂರು,ಧಾರವಾಡ, ಗುಲ್ಬರ್ಗಾ ಆಕಾಶವಾಣಿ ಕೇಂದ್ರಗಳಲ್ಲಿ ಹಾಗೂ ಬೆಂಗಳೂರು ದೂರದರ್ಶನ ಕೇಂದ್ರದ ಉಪ ನಿರ್ದೇಶಕರಾಗಿ, ಕಾರ್ಯಕಾರಿ ನಿರ್ಮಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದರು.
ಸಾಹಿತ್ಯ ಸೇವೆ: ಡಾ. ಕೆಂಪಯ್ಯ ಅವರು ಬಯಲು ಸೀಮೆಯ ಜಾನಪದ ಕಥೆಗಳ ಸಂಕಲನ ಹೊರ ತಂದಿದ್ದಾರೆ. ‘ಚೆಂದುಳ್ಳಿ ಪದವ ಕಲಸವ್ವ’ ಹಾಗು ‘ಮೊಗ್ಗಾಗಿ ಬಾರೊ ತುರುಬಿಗೆ’ ಎಂಬ ಹೆಸರಿನ ಜನಪದ ಗೀತೆಗಳ ಸಂಗ್ರಹ, . ‘ನನ್ನ ಈ ನೆಲದಲ್ಲಿ’ ಎನ್ನುವ ಕವನ ಸಂಕಲನ ಪ್ರಕಟಿಸಿದ್ದಾರೆ. ಕನ್ನಡ ನಾಡಿನ ನೂರಕ್ಕೂ ಹೆಚ್ಚು ಜನಪದ ಕಲಾವಿದರನ್ನು ಹಾಗು ಅವರ ಜನಪದ ಸಾಹಿತ್ಯವನ್ನು ಪತ್ರಿಕೆಗಳ ಮೂಲಕ ನಾಡಿಗೆ ಪರಿಚಯಿಸಿರುವುದು‌ವಿಶೇಷ.
ಡಾ. ಬಾನಂದೂರು ಅವರು, ಹೈಸ್ಕೂಲಿನಲ್ಲಿದ್ದಾಗಲೆ ತಮ್ಮ ಜನಪದ ಹಾಡುಗಾರಿಕೆಗಾಗಿ ಬಹುಮಾನ ಪಡೆದು ‘ಬೆಳೆಯುವ ಸಿರಿ ಮೊಳಕೆಯಲಿ’ ಎಂಬಂತೆ ಗಮನ ಸೆಳೆದರು.
ಎರಡು ಬಾರಿ ಅಮೆರಿಕಾ, ಒಂದು ಬಾರಿ ಇಂಗ್ಲೆಂಡ್ ಪ್ರವಾಸ ಕೈಗೊಂಡು ತಮ್ಮ ಜಾನಪದ ಗಾಯನದ ಮೂಲಕ ನಾಡಿಗೆ, ದೇಶಕ್ಕೆ ಕೀರ್ತಿ ತಂದ ಡಾ. ಕೆಂಪಯ್ಯ ಅವರು ದೇಶದ ವಿವಿಧ ನಗರಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ ಮಾತ್ರವಲ್ಲ‌ ಅನೇಕ ಸಣ್ಣಾಟ, ದೊಡ್ಡಾಟ, ಗೊಂಬೆಯಾಟಗಳಿಗೆ ಸಂಗೀತ ಒದಗಿಸಿದ್ದಾರೆ. ಸುಪ್ರಸಿದ್ಧ ಹಿನ್ನೆಲೆ ಗಾಯಕರಾದ ಶ್ರೀಮತಿ ಮಂಜುಳಾ ಗುರುರಾಜ್ ಹಾಗು ಕಸ್ತೂರಿ ಶಂಕರ್ ಜೊತೆಗೆ ಹಾಡಿದ್ದಾರೆ. ಈ ಧ್ವನಿಸುರಳಿಗಳಲ್ಲಿ ‘ಬಣ್ಣದ ಬಳೆಗಾರ’ ವಿಶೇಷವಾಗಿ ಜನಪ್ರಿಯವಾಗಿದೆ. ಕೆಂಪಯ್ಯನವರು ಜನಪ್ರಿಯಗೊಳಿಸಿದ ಮತ್ತೊಂದು ಜನಪದ ಗೀತೆಯೆಂದರೆ ‘ಬಿದಿರು ನಾನಾರಿಗಲ್ಲದವಳು’.
ಸಿನಿಮಾ‌ ನಂಟು: ಡಾ. ಕೆಂಪಯ್ಯನವರು ಗುರುರಾಜ ಕಾಟೆ ನಿರ್ದೇಶನದ ‘ಬಂಗಾರದ ಗೂಳಿ’ ಚಲನಚಿತ್ರಕ್ಕೆ ಗುಣಸಿಂಗ ಅವರ ಜತೆ ಸಂಗೀತ ನಿರ್ದೇಶಿಸಿದ್ದಾರೆ. ಅಲ್ಲದೆ “ಜಿಪ್ಸಿಗಳು” ಎನ್ನುವ ರಶಿಯನ್ ನಾಟಕಕ್ಕೂ ಸಂಗೀತ ನೀಡಿದ ಹೆಗ್ಗಳಿಕೆ ಇವರದು.
ಅಕಾಡೆಮಿ ಅಧ್ಯಕ್ಷ ಸ್ಥಾನ: ಮೂರು ಬಾರಿ ಕರ್ನಾಟಕ‌ ಜಾನಪದ ಅಕಾಡೆಮಿ ಸದಸ್ಯರಾಗಿ ಒಂದು ಬಾರಿ ಅಧ್ಯಕ್ಷರಾಗಿ, ಕರ್ನಾಟಕ‌ ಜಾನಪದ ಪರಿಷತ್ತಿನ ಆಡಳಿತ ಮಂಡಳಿ ಸದಸ್ಯರಾಗಿಯೂ ಜಾನಪದ ಕ್ಷೇತ್ರಕ್ಕೆ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.
ಪ್ರಶಸ್ತಿಗಳು: ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಬೆಂಗಳೂರು ಕೆಂಪೇಗೌಡ ಪ್ರಶಸ್ತಿ, ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಕರವೇ ‘ಜಾನಪದ ಗಾಯನ ಸಾರ್ವಭೌಮ’ ಪ್ರಶಸ್ತಿ, ‘ಅರೋಹಣ ಕಲಾರೂಪ ಪ್ರಶಸ್ತಿ, ನೆಲದ ನುಡಿಕಾರ ಸೇರಿದಂತೆ ನೂರಾರು ಸಂಘ ಸಂಸ್ಥೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.
75ರ  ಹರೆಯದಲ್ಲೂ  ಡಾ. ಬಾನಂದೂರು ಕೆಂಪಯ್ಯ ಅವರು ಗಾಯನ, ಕಾವ್ಯ- ಕತೆ ರಚನೆಯಲ್ಲಿ ಖುಷಿ ನೆಮ್ಮದಿ ಕಾಣುತ್ತಿದ್ದಾರೆ.

-ಸಿ.ಮಂಜುನಾಥ, ಸಂಪಾದಕರು: ಕರ್ನಾಟಕ ಕಹಳೆ ಡಾಟ್ ಕಾಮ್, ಬಳ್ಳಾರಿ

 

The post ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ appeared first on Karnataka Kahale.

]]>
ದೆಹಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ https://www.karnatakakahale.com/news/22597 Sun, 22 Mar 2026 09:38:05 +0000 https://www.karnatakakahale.com/?p=22597 ಬೆಂಗಳೂರು: ದೆಹಲಿಯಲ್ಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ಪೊಲೀಸರು ನಡೆಸಿರುವ ದಾಳಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.                                    ಈ ಕ್ರಮವು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತದ್ದಾಗಿದ್ದು, ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೂ ವಿರುದ್ಧವಾಗಿದೆ. ಪತ್ರಕರ್ತರ ಖಾಸಗಿ ವಸ್ತುಗಳನ್ನು ತೆಗೆದುಕೊಳ್ಳಲು ಅವಕಾಶ…

The post ದೆಹಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ appeared first on Karnataka Kahale.

]]>
ಬೆಂಗಳೂರು: ದೆಹಲಿಯಲ್ಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ಪೊಲೀಸರು ನಡೆಸಿರುವ ದಾಳಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.                                    ಈ ಕ್ರಮವು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತದ್ದಾಗಿದ್ದು, ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೂ ವಿರುದ್ಧವಾಗಿದೆ.
ಪತ್ರಕರ್ತರ ಖಾಸಗಿ ವಸ್ತುಗಳನ್ನು ತೆಗೆದುಕೊಳ್ಳಲು ಅವಕಾಶ ನೀಡದೆ, ಮಹಿಳೆ ಎನ್ನುವುದನ್ನೂ ಲೆಕ್ಕಿಸದೇ ನಡೆಸಿದ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ.

ಶಿವಾನಂದ ತಗಡೂರು

ಈ ಘಟನೆ ಮಾಧ್ಯಮಗಳ ಮೇಲೆ ಅನಗತ್ಯ ಒತ್ತಡ ಹೇರಲು ಪ್ರಯತ್ನಿಸಿರುವುದನ್ನು ಸ್ಪಷ್ಟಪಡಿಸುತ್ತದೆ.
ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ

The post ದೆಹಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ appeared first on Karnataka Kahale.

]]>
2022 ರ ಮೀಸಲಾತಿ ಕಾಯ್ದೆ ಶೆಡ್ಯೂಲ್ 9 ಗೆ ಸೇರಿಸದಿದ್ದರೆ ಉಗ್ರ ಹೋರಾಟ! ಸಿಎಂ, ಪ್ರಧಾನಿಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ https://www.karnatakakahale.com/news/22118 Sun, 25 Jan 2026 12:16:38 +0000 https://www.karnatakakahale.com/?p=22118 ಬೆಂಗಳೂರು, ಜ.25: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದಮತ್ತಿತರರುಸಲಾತಿ ಪ್ರಮಾಣವನ್ನು ಶೇ. 56ಕ್ಕೆ ಹೆಚ್ಚಳ ಮಾಡಿರುವ 2022 ರ ಕಾಯ್ದೆಯನ್ನು ಶೆಡ್ಯೂಲ್ 9 ಗೆ ಸೇರಿಸಿ ಈ ವರ್ಗಕ್ಕೆ ಆಗುತ್ತಿರುವ ಅನ್ಯಾಯ ತಡೆಯದೆ ಹೋದರೆ ಯಾವುದೇ ಸ್ವರೂಪದ…

The post 2022 ರ ಮೀಸಲಾತಿ ಕಾಯ್ದೆ ಶೆಡ್ಯೂಲ್ 9 ಗೆ ಸೇರಿಸದಿದ್ದರೆ ಉಗ್ರ ಹೋರಾಟ! ಸಿಎಂ, ಪ್ರಧಾನಿಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ appeared first on Karnataka Kahale.

]]>

ಬೆಂಗಳೂರು, ಜ.25: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದಮತ್ತಿತರರುಸಲಾತಿ ಪ್ರಮಾಣವನ್ನು ಶೇ. 56ಕ್ಕೆ ಹೆಚ್ಚಳ ಮಾಡಿರುವ 2022 ರ ಕಾಯ್ದೆಯನ್ನು ಶೆಡ್ಯೂಲ್ 9 ಗೆ ಸೇರಿಸಿ ಈ ವರ್ಗಕ್ಕೆ ಆಗುತ್ತಿರುವ ಅನ್ಯಾಯ ತಡೆಯದೆ ಹೋದರೆ ಯಾವುದೇ ಸ್ವರೂಪದ ಹೋರಾಟಕ್ಕೂ ವಾಲ್ಮೀಕಿ ನಾಯಕ ಸಮಾಜ ಸಿದ್ಧ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 2022 ರ ಕಾಯ್ದೆಯನ್ನು ಭಾರತದ ಸಂವಿಧಾನದ 9 ನೇ ಶೆಡ್ಯೂಲ್ ಗೆ ಸೇರಿಸಲು ಮತ್ತು ಅನುಚ್ಛೇದ 15 ಮತ್ತು 16ಕ್ಕೆ ಮೀಸಲಾತಿ ಹೆಚ್ಚಿಸಲು ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾಗಿ ಹೇಳಿದರು. ಹಾಗೇ ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಬಂದಾಗೆಲ್ಲ ಕೆಲ ಜಾತಿಗಳನ್ನು ಎಸ್ಟಿಗೆ ಸೇರಿಸುವ ಭರವಸೆ ನೀಡಿ ಜನರನ್ನು ದಿಕ್ಕು ತಪ್ಪಿಸಿದರು. ಇದರಿಂದ ಇಂದು ಸಾಕಷ್ಟು ಜನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ತ ಪಡೆಯುತ್ತಿದ್ದಾರೆ. ಇದ್ದಕ್ಕೆ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ನಾಯಕರೇ ಕಾರಣ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕಾಂಗ್ರೆಸ್ ನಾಯಕರ ಮೇಲೂ ವಾಗ್ದಾಳಿ ನಡೆಸಿದ ಉಗ್ರಪ್ಪನವರು, ಮುಂದಿನ ಬಾರಿ ಸುಮಾರು 4 ಲಕ್ಷ ಕೋಟಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಆದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿರುವ ಹಣವನ್ನು ಬೇರೆ ಕಾರ್ಯಗಳಿಗೆ ಬಳಸಬಾರದು ಎಂಬ ಕಾನೂನು ಇದ್ದರೂ ಬಳಕೆಯಾಗುತ್ತಿದೆ. ಇದನ್ನು ತಪ್ಪಿಸಬೇಕು. ಜೊತೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಈ 2022ರ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತಂದಿರುವ ಬಿಜೆಪಿ ನಾಯಕರು ಕೇಂದ್ರದಲ್ಲಿ ಒತ್ತಡ ತಂದು ಶೆಡ್ಯೂಲ್ 9 ಗೆ ಸೇರಿಸಬೇಕು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಎಚ್.ಡಿ. ಕುಮಾರಸ್ವಾಮಿ, ಹಾಗೂ ಆಗ ಮುಖ್ಯಮಂತ್ರಿ ಆಗಿದ್ದ ಬಸವರಾಜ್ ಬೊಮ್ಮಾಯಿ ಮತ್ತಿತರರು ಕೇಂದ್ರದ ಮೇಲೆ ಒತ್ತಡ ತಂದು ಕರ್ನಾಟಕದ ತಳ ಸಮುದಾಯಗಳ ಹಿತ ಕಾಯಬೇಕು ಎಂದು ಒತ್ತಾಯಿಸಿದರು.

ನಾವು ಮೊದಲಿನಿಂದಲೂ ಬದುಕಿನಲ್ಲಿ ಸಂಘರ್ಷ ಮಾಡಿಕೊಂಡೇ ಬಂದವರು. ನಾಯಕರು ಕೇವಲ ಸುದ್ದಿಗೋಷ್ಠಿ ನಡೆಸಿ ಸುಮ್ಮನಾಗುತ್ತಾರೆ ಎಂದು ಭಾವಿಸಬೇಡಿ. ಕೇಂದ್ರ ಸರ್ಕಾರ ಹೀಗೆ ನಿರ್ಲಕ್ಷ್ಯ ಧೋರಣೆ ತಾಳಿದರೆ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ ಉಗ್ರಪ್ಪ, ನಮ್ಮ ಸಮುದಾಯದ ಇತರ ನಾಯಕರು ಕೂಡ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್ ನಲ್ಲಿ ಇದ್ದಾರೆ. ನೀವು ಗೆದ್ದಿರುವುದು ಮೀಸಲಾತಿಯಿಂದ ಅದನ್ನು ನೆನಪಿನಲ್ಲಿ ಇಟ್ಟುಕೊಂಡು ಸಮುದಾಯದ ಹಿತದೃಷ್ಠಿಯಿಂದ ನಿಮ್ಮನ್ನು ಬೆಳೆಸಿದ ಸಮುದಾಯದ ಪರ ಧ್ವನಿ ಎತ್ತಿ ಎಂದು ಆಗ್ರಹಿಸಿದರು.

ಪಕ್ಕದ ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಸಂವಿಧಾನದಲ್ಲಿ ಎಲ್ಲೂ ಆರ್ಥಿಕ ಮೀಸಲಾತಿಯ ಬಗ್ಗೆ ಡಾ.ಬಿ.ಆರ್. ಅಂಬೇಡ್ಕರ್ ಉಲ್ಲೇಖಿಸಿಲ್ಲ. ಆದರೆ ಇಷ್ಟು ವರ್ಷಗಳಾದರೂ ಸಂವಿಧಾನವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರ ಹೆಸರಿನಲ್ಲಿ ಮೇಲ್ವರ್ಗದವರಿಗೆ ಮೀಸಲಾತಿ ಘೋಷಣೆ ಮಾಡಿದೆ. ಆರ್ಥಿಕವಾಗಿ ಹಿಂದುಳಿದವರ ಮೇಲ್ವರ್ಗದ ಸಮುದಾಯದ ಮಕ್ಕಳು ಸ್ಕಾಲರ್ ಶಿಪ್ ಪಡೆಯಲು 8.5 ಲಕ್ಷ ರೂ. ಆದಾಯ ಮಿತಿ ಇದೆ. ಆದರೆ ತಲ ತಕಾಂತರದಿಂದ ಶೋಷಣೆ ಅನುಭವಿಸುತ್ತ ಬಂದಿರುವ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳು ಸ್ಕಾಲರ್ ಶಿಪ್ ಪಡೆಯಲು ಆದಾಯ ಮಿತಿ 2.5 ಲಕ್ಷ ರೂ. ನಿಗಧಿಪಡಿಸಲಾಗಿದೆ.‌ ಇದು ಯಾವ ಸೀಮೆ ನ್ಯಾಯ? ಬೇರೆ ಎಲ್ಲ ರೀತಿಯಲ್ಲೂ ಮೀಸಲಾತಿ ಘೋಷಣೆಯಾಗಿದ್ದರೂ ಜನಸಾಮಾನ್ಯರಿಗೆ ಮೀಸಲಾತಿ ಕೊಡುವಲ್ಲಿ ಭೇದ ಯಾಕೆ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ನಾವು ಹೋರಾಟ ನಡೆಸಿದ ಫಲವಾಗಿ ಪರಿಶಿಷ್ಟ ಪಂಗಡಕ್ಕೆ ಶೇ.3 ರ ಬದಲು ಶೇ.7 ಮೀಸಲಾತಿ ಹಾಗೂ ಪರಿಶಿಷ್ಟ ಜಾತಿಗೆ ಶೇ.15, ಇತರೆ ಹಿಂದುಳಿದ ವರ್ಗಗಳಿಗೆ ಶೇ.32 ಮೀಸಲಾತಿ ಜಾರಿಗೊಳಿಸಲಾಗಿತ್ತು. ಆದರೆ ಅದನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದವು. ಇದರಿಂದಾಗಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆ ಕಾಯ್ದೆಯನ್ನು ಅನೂರ್ಜಿತಗೊಳಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ಕೂಡ ಈ ಕಾಯ್ದೆಗೆ ತಡೆಯಾಜ್ಞೆ ನೀಡಿದೆ. ಇದರ ಪರಿಣಾಮ ಬಿಜೆಪಿ ಸರ್ಕಾರ ಜಾರಿಗೆ ತಂದ ಮೀಸಲಾತಿ ಹೆಚ್ಚಳ ರದ್ಧಾಗಿದೆ. ಇದನ್ನು ಅರಿತು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಕಾಯ್ದೆ 2022 ಅನ್ನು ಶೆಡ್ಯೂಲ್ 9 ಗೆ ಸೇರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ನಾವು ನಮ್ಮ ಸಮುದಾಯ ಸ್ವಾಗತಿಸುತ್ತದೆ. ಆದರೆ ಒಂದು ತಿಂಗಳಾದರೂ ಕೇಂದ್ರ ಸರ್ಕಾರ ಅದನ್ನು ಶೆಡ್ಯೂಲ್ 9 ಗೆ ಸೇರಿಸದಿರುವುದು ವಿಪರ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆದ್ದರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವುದಾಗಿ ಹೇಳಿದ ವಿ.ಎಸ್. ಉಗ್ರಪ್ಪ, ತಕ್ಷಣ ಸರ್ವಪಕ್ಷದ ನಿಯೋಗ ಕೊಂಡೊಯ್ದು, ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗಿ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಶೇ. 56 ಮೀಸಲಾತಿ ನೀಡಿದ 2022 ರ ಈ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ ಅನುಚ್ಛೇದ 9 ಕ್ಕೆ ಸೇರಿಸಲು ಹಾಗೂ ಇಂದಿರಾ ಸಹಾನಿ ಮತ್ತು ಇನ್ನಿತರೆ ಕೇಸುಗಳಲ್ಲಿ ಮೀಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ತಟಸ್ಥಗೊಳಿಸಿ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚು ಮಾಡಲು ಅನುಚ್ಛೇದ 15 ಮತ್ತು 16 ಕ್ಕೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿದ್ದಾಗಿ ಹೇಳಿದರು.

ಜೊತೆಗೆ ರಾಜ್ಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಇದರಿಂದ ತಳ ಸಮುದಾಯದ ಬಡ ಜನರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ. ಈಗಾಗಿ ಸುಳ್ಳು ಪ್ರಮಾಣ ಪತ್ರ ಪಡೆದವರು ಹಾಗೂ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳಿಗೆ ಕೂಡ ಸೂಕ್ತ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂದು ರಾಜ್ಯ ಸರ್ಕಾರವನ್ನು ಉಗ್ರಪ್ಪ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಕಾರ್ಯಾಧ್ಯಕ್ಷರಾದ ಎಂ.ನರಸಿಂಹಯ್ಯ, ಖಜಾಂಚಿ ಈ. ರಾಜಪ್ಪ, ಉಪಾಧ್ಯಕ್ಷರಾದ ರಾಜಣ್ಣ ಟಿ. ಚಿತ್ರದುರ್ಗ, ರೇವತಿ ಭೀಮಪುತ್ರಿ, ಪ್ರಧಾನ ಕಾರ್ಯದರ್ಶಿಗಳಾದ ಸಣ್ಣ ನಾಯಕ್, ರಮೇಶ್ ಹಿರೇಜಂಬೂರು, ನಾಗರಾಜ ಗಾಣದ ಹುಣಸೆ, ನಿವೃತ್ತ ಅಧಿಕಾರಿ ಕೆಂಪರಾಮಯ್ಯ, ಕೆಪಿಸಿಸಿ ಎಸ್ಟಿ ಸೆಲ್ ರಾಜ್ಯ ಅಧ್ಯಕ್ಷರಾದ ವಿಜಯ ನಾಯಕ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮಹಿಳಾಅಧ್ಯಕ್ಷೆ ಜಯಶ್ರೀ ಗುಡ್ಡೆಕಾಯಿ, ಗುಲ್ಬರ್ಗಾ ವಿವಿ ನಿವೃತ್ತ ಉಪಕುಲಪತಿ ಶ್ರೀರಾಮುಲು, ಚಿತ್ರದುರ್ಗ ಜಿಲ್ಲಾಧ್ಯಕ್ಷ ಬಸವರಾಜ್ ನಾಯಕ್, ಕಾರ್ಯದರ್ಶಿ ತುಳಸಿರಾಮ್ ಟಿ.ಆರ್., ಸಂಘಟನಾ ಕಾರ್ಯದರ್ಶಿ ಕೆ.ವಿ. ನಾಗೇಂದ್ರ, ರವಿಚಂದ್ರ ಮತ್ತಿತರರು ಉಪಸ್ಥಿತರಿದ್ದರು.

The post 2022 ರ ಮೀಸಲಾತಿ ಕಾಯ್ದೆ ಶೆಡ್ಯೂಲ್ 9 ಗೆ ಸೇರಿಸದಿದ್ದರೆ ಉಗ್ರ ಹೋರಾಟ! ಸಿಎಂ, ಪ್ರಧಾನಿಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ appeared first on Karnataka Kahale.

]]>
ಕರೆದರೂ ಕೇಳದೇ….! ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾಖಾನ್ ರವರ ನೆನಪಿನಲ್ಲಿ….! ಬರಹ:✍ಸಿದ್ದರಾಮ ತಳವಾರ, ದಾಸ್ತಿಕೊಪ್ಪ https://www.karnatakakahale.com/news/20459 Thu, 21 Aug 2025 04:18:11 +0000 https://www.karnatakakahale.com/?p=20459 ‘ಸನಾದಿ ಅಪ್ಪಣ್ಣ’ ಚಿತ್ರದಲ್ಲಿನ ಡಾ.ರಾಜ್ ನಟನೆಗೆ ಫಿದಾ ಆಗದೇ ಇರೋರು ಯಾರಾದ್ರೂ ಇದ್ದೀರಾ? ಊಹೂಂ… ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಚಿತ್ರರಸಿಕರ ಮನಸ್ಸಲ್ಲಿ ಅಚ್ಚಳಿಯದೇ ಉಳಿದಿರುವ ಆ ‘ಕರೆದರೂ ಕೇಳದೇ….’ ಹಾಡು ಮತ್ತದರ ರಾಗಸಂಯೋಜನೆ ನಿಜಕ್ಕೂ ಕಲ್ಲಿಗೂ ಕೂಡ ಸಂಗೀತದ ರುಚಿ ಹಚ್ಚುವಂತದು.…

The post ಕರೆದರೂ ಕೇಳದೇ….! ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾಖಾನ್ ರವರ ನೆನಪಿನಲ್ಲಿ….! ಬರಹ:✍ಸಿದ್ದರಾಮ ತಳವಾರ, ದಾಸ್ತಿಕೊಪ್ಪ appeared first on Karnataka Kahale.

]]>

‘ಸನಾದಿ ಅಪ್ಪಣ್ಣ’ ಚಿತ್ರದಲ್ಲಿನ ಡಾ.ರಾಜ್ ನಟನೆಗೆ ಫಿದಾ ಆಗದೇ ಇರೋರು ಯಾರಾದ್ರೂ ಇದ್ದೀರಾ? ಊಹೂಂ…
ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಚಿತ್ರರಸಿಕರ ಮನಸ್ಸಲ್ಲಿ ಅಚ್ಚಳಿಯದೇ ಉಳಿದಿರುವ ಆ ‘ಕರೆದರೂ ಕೇಳದೇ….’ ಹಾಡು ಮತ್ತದರ ರಾಗಸಂಯೋಜನೆ ನಿಜಕ್ಕೂ ಕಲ್ಲಿಗೂ ಕೂಡ ಸಂಗೀತದ ರುಚಿ ಹಚ್ಚುವಂತದು. ಸ್ವರ ಸಾಮ್ರಾಟ್ ಜಿ.ಕೆ.ವೆಂಕಟೇಶ ಅವರ ರಾಗಸಂಯೋಜನೆಯಲ್ಲಿ ಮೂಡಿ ಬಂದ ಈ ಹಾಡು ಕೇಳಿದವರೆಲ್ಲ ಸಂಗೀತ ಲೋಕದ ದಂತಕಥೆಯಾದ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರನ್ನು ನೆನಪಿಗೆ ತರದೇ ಇರಲಾರದು.
ಹೌದು! ಈ ಚಿತ್ರದ ಹಾಡಿನಲ್ಲಿ ಬಳಕೆಯಾದ ಶಹನಾಯಿ ವಾದ್ಯಕ್ಕೆ ಸ್ವತಃ ‘ಬಿಸ್ಮಿಲ್ಲಾ ಖಾನ್’ ರೇ ಉಸಿರು ನೀಡಿದ್ದು ಸ್ಮರಣೀಯ.
ಬಿಹಾರದ ಪೈಗಂಬರಖಾನ್ ಹಾಗೂ ಮಿತ್ತನ್ ದಂಪತಿಗಳ ಉದರದಲ್ಲಿ ಸಂಗೀತದ ಕುಟುಂಬದಲ್ಲಿ 1916 ರ ಮಾರ್ಚ್ 22ರಂದು ಜನಿಸಿದ ಬಿಸ್ಮಿಲ್ಲಾಖಾನ್ ರವರು ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದರೂ ಕಾಶಿ ವಿಶ್ವನಾಥನ ಮಂದಿರದ ನಿಕಟ ಸಂಪರ್ಕದಿಂದಾಗಿ ಹಿಂದೂಗಳೊಂದಿಗೆ ಬೆರೆತು ಬಾಳಿದವರು.
ಶಹನಾಯಿಯನ್ನು ಶಾಸ್ತ್ರೀಯ ಸಂಗೀತದ ವಾದ್ಯವನ್ನಾಗಿಸಿದ ಕೀರ್ತಿ ಖಾನ್ ರಿಗೆ ಸಲ್ಲತಕ್ಕದ್ದು.

ಒಂದು ಸಲ ಕುಂಭ ಮೇಳದ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಲು ರೈಲಿನಲ್ಲಿ ಹೊರಟ ಬಿಸ್ಮಿಲ್ಲಾ ಖಾನ್ ರವರು ಇದ್ದ ರೈಲಿನ ಭೋಗಿಯೊಂದರಲ್ಲಿ ಗೋಪಾಲಕನೊಬ್ಬ ಅತ್ಯಂತ ಸೊಗಸಾಗಿ ಕೊಳಲು ನುಡಿಸುವುದನ್ನು ಆಲಿಸುತ್ತ ಪುನಃ ಪುನಃ ತನ್ನಲ್ಲಿರುವ ಎಲ್ಲ ನಾಣ್ಯಗಳನ್ನು ಆತನ ಕೈಗೆ ಒಂದೊಂದಾಗಿ ನೀಡುತ್ತ ಆತನ ಕೊಳಲ ನಾದಕ್ಕೆ ಪ್ರೀತ್ಯರ್ಥನಾಗಿ ಕಾರ್ಯಕ್ರಮದಲ್ಲಿ ಆ ರಾಗವನ್ನೇ ಸೊಗಸಾಗಿ ನುಡಿಸಿದ್ದು ಪ್ರೇಕ್ಷಕರಿಗೆ ಬಹಳ ಮೆಚ್ಚುಗೆಯಾಯಿತು. ಪುನಃ ಪ್ರೇಕ್ಷಕರು ಆ ರಾಗವನ್ನೇ ನುಡಿಸುವಂತೆ ಕೇಳಿಕೊಂಡಿದ್ದು ಆ ರಾಗಕ್ಕೆ ಕನ್ಹೇರ ರಾಗ ಅಂತ ಅವರೇ ಹೆಸರು ಕೊಟ್ಟಿದ್ದು ಮಾರನೇಯ ದಿನ ಹೊಸದೊಂದು ರಾಗದ ಸೃಷ್ಟಿಗೆ ಕಾರಣರಾದ ಖಾನ್ ಎಂಬ ಖ್ಯಾತಿಗೆ ಆ ಗೋಪಾಲಕ ಹುಡುಗನ ನೆನಪಿಸಿಕೊಂಡು ಕೃತಜ್ಞತೆಯನ್ನು ಸಲ್ಲಿಸಿದ್ದು ಇಡೀ ದೇಶದಲ್ಲೇ ದೊಡ್ಡ ಸುದ್ದಿಯಾಗಿತ್ತು.

ಉಸ್ತಾದ್ ಸಂಗೀತ ಲೋಕದ ದಂತ ಕಥೆಯಾಗಿದ್ದು ‘ಭಾರತರತ್ನ’ ಪ್ರಶಸ್ತಿಗೆ ಭಾಜನರಾದ ಮೂರನೇ ಸಂಗೀತಗಾರರಾಗಿದ್ದಾರೆ. ಪದ್ಮಶ್ರೀ ಸೇರಿದಂತೆ ದೇಶದ ಅತ್ಯುನ್ನತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಮೇರು ದಿಗ್ಗಜ ಸಂಗೀತ ಮಾಂತ್ರಿಕ ಬಿಸ್ಮಿಲ್ಲಾ ಖಾನ್ ರಿಗೆ ಹಲವಾರು ವಿಶ್ವವಿದ್ಯಾಲಯಗಳು ಗೌರವ ಡಿ.ಲಿಟ್ ನೀಡಿ ಗೌರವಿಸಿವೆ.

ಇಂತಹ ಧೀಮಂತ ಸಂಗೀತ ಮಾಂತ್ರಿಕ 2006ರ ಆಗಸ್ಟ್ 21 ರಂದು ತಮ್ಮ ಕೂನೆಯುಸಿರು ಎಳೆದರು. ಅವರ ಆ ಮಾಂತ್ರಿಕ ಶಹನಾಯಿ ಧ್ವನಿ ಈಗಲೂ ಯಾವಾಗಲೂ ಸಂಗೀತಾಸಕ್ತ ಕಿವಿಗಳಲ್ಲಿ ಗುಂಯ್ಯಗುಡುತ್ತಲೇ ಇರುತ್ತದೆ.

ಹಾಡು ಸಂಗೀತ ಅಂತ ಆಗಾಗ್ಗೆ ಗುಣುಗುಣಿಸುತ್ತಲೇ ಇರುವ ನನಗೆ ಅವರ ಶಹನಾಯಿ ನಾದವೂ ಒಂದು ಗುರುವಂತೆಯೇ ಸರಿ ಸೋ ನನ್ನಿಷ್ಟದ ಶಹನಾಯಿ ಮಾಂತ್ರಿಕ
🙏ಉಸ್ತಾದ್ ಬಿಸ್ಮಿಲ್ಲಾಖಾನ್ ರವರ ಸ್ಮರಣೀಯ ದಿನದ ಇಂದು ಅವರಿಗೆ  ಭಕ್ತಿಪೂರ್ವಕ ನಮನಗಳು….🙏

-✍ಸಿದ್ದರಾಮ ತಳವಾರ, ದಾಸ್ತಿಕೊಪ್ಪ

The post ಕರೆದರೂ ಕೇಳದೇ….! ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾಖಾನ್ ರವರ ನೆನಪಿನಲ್ಲಿ….! ಬರಹ:✍ಸಿದ್ದರಾಮ ತಳವಾರ, ದಾಸ್ತಿಕೊಪ್ಪ appeared first on Karnataka Kahale.

]]>
ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ -ನಾಡೋಜ ಡಾ ಮಹೇಶ ಜೋಶಿ https://www.karnatakakahale.com/news/19909 Sun, 29 Jun 2025 17:52:35 +0000 https://www.karnatakakahale.com/?p=19909 ಬಳ್ಳಾರಿ, ಜೂ. 29: ನಗರದಲ್ಲಿ ಇದೇ ಡಿಸೆಂಬರ್ ನಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.‌ಮಹೇಶ್ ಜೋಷಿ ಅವರು…

The post ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ -ನಾಡೋಜ ಡಾ ಮಹೇಶ ಜೋಶಿ appeared first on Karnataka Kahale.

]]>

ಬಳ್ಳಾರಿ, ಜೂ. 29: ನಗರದಲ್ಲಿ ಇದೇ ಡಿಸೆಂಬರ್ ನಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.‌ಮಹೇಶ್ ಜೋಷಿ ಅವರು ಹೇಳಿದರು.
ನಗರದಲ್ಲಿ ಭಾನುವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಸಾಪ ಕಾರ್ಯಕಾರಿ ಸಮಿತಿ ‌ಸಭೆಯಲ್ಲಿ ಸದಸ್ಯರು ಭಾನು‌ಮುಷ್ತಾಕ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರು ಎಂದು ತಿಳಿಸಿದರು.
ಹಿರಿಯ ಸಾಹಿತಿಗಳಾದ ಮಾಲತಿ ಪಟ್ಟಣಶೆಟ್ಟಿ ಹಾಗೂ ವೀಣಾ ಶಾಂತೇಶ್ವರ ಅವರ ಹೆಸರುಗಳು ಚರ್ಚೆಗೆ ಬಂದವು ಎಂದರು.
ಪ್ರತಿಷ್ಠಿತ ‘ಬುಕರ್ ಅಂತರಾಷ್ಟ್ರೀಯ ಪ್ರಶಸ್ತಿ’ಯನ್ನು ಮೊಟ್ಟ ಮೊದಲನೇ ಬಾರಿಗೆ ಕನ್ನಡಕ್ಕೆ ತಂದು ‘ಕನ್ನಡದ ಬಾನಿನಲ್ಲಿ ಎದೆಯ ಹಣತೆಯ ಮೂಲಕ ದೀಪ ಬೆಳಗಿದವರು, ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಎಂದು‌ ಶ್ಲಾಘಿಸಿದರು.
ಕನ್ನಡ ನಾಡು-ನುಡಿಯ ಹಿರಿಮೆಯನ್ನು ಗರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು ಕನ್ನಡ ಭಾಷೆಯ ಸಾಮರ್ಥ್ಯ, ಶಕ್ತಿಯನ್ನು ಹಾಗೂ ಮಹಿಮೆಯನ್ನು ಜಗತ್ತಿಗೆ ತೋರಿಸಿ ಕನ್ನಡಿಗರಲ್ಲಿ ಹೊಸ ಅಭಿಮಾನವನ್ನು ಮೂಡಿಸಿ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್ ಅವರ ಆಯ್ಕೆ ತಮಗೆ ಸಂತಸ ತಂದಿದೆ.
ಸಮ್ಮೇಳನದ ಸರ್ವಾಧ್ಯಕ್ಷೆ ವಹಿಸಲು ಬಾನು ಮುಷ್ತಾಕ್ ಅವರು ಒಪ್ಪಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಡಾ. ಜೋಷಿ ಉತ್ತರಿಸಿದರು.
ವ್ಯಾಟ್ಸಪ್ ಮೂಲಕ ಆಯ್ಕೆಯನ್ನು ಬಾನು ಮುಸ್ತಾಕ್ ಅವರು ಸಂತೋಷದಿಂದ ಒಪ್ಪಿ,ಕನ್ನಡದ ಕೆಲಸ ನನ್ನ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ ಎಂದರು.


ಕನ್ನಡ ಸಾಹಿತ್ಯ ಜಗತ್ತಿಗೆ ಗೊತ್ತಾಗುವಲ್ಲಿ ಪ್ರಧಾನ ಪಾತ್ರವಹಿಸಿದ ಅನುವಾದಕಿ ದೀಪಾ ಭಾಸ್ತಿ ಅವರನ್ನು ಸಮ್ಮೇಳನದಲ್ಲಿ ವಿಶೇಷವಾಗಿ ಗೌರವಿಸಲು ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ನಿರ್ಣಯಿಸಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಕಸಾಪ ಬಳ್ಳಾರಿ ಜಿಲ್ಲಾಧ್ಯಕ್ಷ ನಿಷ್ಟಿರುದ್ರಪ್ಪ ಮತ್ತಿತರರು ಇದ್ದರು.
—–

The post ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ -ನಾಡೋಜ ಡಾ ಮಹೇಶ ಜೋಶಿ appeared first on Karnataka Kahale.

]]>
ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ https://www.karnatakakahale.com/news/18220 Thu, 26 Dec 2024 17:48:14 +0000 https://www.karnatakakahale.com/?p=18220 ನವದೆಹಲಿ, ಡಿ.26: ದೇಶದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ.    ತೀವ್ರ ಉಸಿರಾಟ ಸಮಸ್ಯೆಯಿಂದ‌ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು.‌…

The post ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ appeared first on Karnataka Kahale.

]]>

ನವದೆಹಲಿ, ಡಿ.26: ದೇಶದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ.    ತೀವ್ರ ಉಸಿರಾಟ ಸಮಸ್ಯೆಯಿಂದ‌ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.    ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ ನಿಧನದ ಹಿನ್ನಲೆಯಲ್ಲಿ ನಾಳೆ ಶುಕ್ರವಾರ ರಾಜ್ಯಾದ್ಯಂತ ಸಾರ್ವಜನಿಕ‌ ಸರಕಾರಿ‌ಕಚೇರಿಗಳು,  ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಒಂದು ವಾರಗಳ ಕಾಲ‌ ಶೋಕಾಚರಣೆ ಘೋಷಿಸಲಾಗಿದೆ.

ಗಣ್ಯರ ಸಂತಾಪ: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಡಾ.‌ಮಲ್ಲಿಕಾರ್ಜುನ‌ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ,  ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ.‌ಪರಮೇಶ್ವರ್, ಸಮಾಜಕಲ್ಯಾಣ ಸಚಿವ ಡಾ. ಎಚ್. ಸಿ ಮಹೇದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾನೂನು ಸಚಿವ ಎಚ್.ಕೆ ಪಾಟೀಲ್ ಮತ್ತಿತರ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

The post ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ appeared first on Karnataka Kahale.

]]>
ಬೌದ್ಧಧರ್ಮದ ಪುನರುತ್ಥಾನಕ್ಕೆ ಮುನ್ನುಡಿ ಬರೆದ ಅಂಬೇಡ್ಕರ್ -ರಘೋತ್ತಮ‌ಹೊ.ಬ., ಮೈಸೂರು https://www.karnatakakahale.com/news/18094 Thu, 12 Dec 2024 05:23:21 +0000 https://www.karnatakakahale.com/?p=18094 1881 ರಲ್ಲೆ ವಿಲಿಯಂ ಹಂಟರ್ ಎಂಬುವವರು ಭಾರತದಲ್ಲಿ ಬೌದ್ಧಧರ್ಮ ಪುನರುತ್ಥಾನವಾಗುವುದೆಂದು ಸೂಚಿಸಿದ್ದರು. ವಿಶ್ವಕವಿ ರವೀಂದ್ರನಾಥ ಠಾಗೋರ್ ಕೂಡ ತಮ್ಮ “ಬುದ್ಧದೇವೋ” ಎಂಬ ಪದ್ಯದಲ್ಲಿ ಬೌದ್ಧಧರ್ಮ ಪುನಾರುತ್ಥಾನವಾಗುವುದೆಂದು ನಿರೀಕ್ಷಿಸಿದ್ದರು. ಅದರೆ? ನಿಜಕ್ಕೂ ಅದರ ಪುನರುತ್ಥಾನಕ್ಕೆ ಶ್ರಮಿಸಿದ್ದು? ಭಾರತದಲ್ಲಿ ಮತ್ತೆ ಬುದ್ಧ ಮಂತ್ರ ಪಠಣದ…

The post ಬೌದ್ಧಧರ್ಮದ ಪುನರುತ್ಥಾನಕ್ಕೆ ಮುನ್ನುಡಿ ಬರೆದ ಅಂಬೇಡ್ಕರ್ -ರಘೋತ್ತಮ‌ಹೊ.ಬ., ಮೈಸೂರು appeared first on Karnataka Kahale.

]]>

1881 ರಲ್ಲೆ ವಿಲಿಯಂ ಹಂಟರ್ ಎಂಬುವವರು ಭಾರತದಲ್ಲಿ ಬೌದ್ಧಧರ್ಮ ಪುನರುತ್ಥಾನವಾಗುವುದೆಂದು ಸೂಚಿಸಿದ್ದರು. ವಿಶ್ವಕವಿ ರವೀಂದ್ರನಾಥ ಠಾಗೋರ್ ಕೂಡ ತಮ್ಮ “ಬುದ್ಧದೇವೋ” ಎಂಬ ಪದ್ಯದಲ್ಲಿ ಬೌದ್ಧಧರ್ಮ ಪುನಾರುತ್ಥಾನವಾಗುವುದೆಂದು ನಿರೀಕ್ಷಿಸಿದ್ದರು. ಅದರೆ? ನಿಜಕ್ಕೂ ಅದರ ಪುನರುತ್ಥಾನಕ್ಕೆ ಶ್ರಮಿಸಿದ್ದು? ಭಾರತದಲ್ಲಿ ಮತ್ತೆ ಬುದ್ಧ ಮಂತ್ರ ಪಠಣದ ಕ್ರಿಯೆಗೆ ಮುನ್ನುಡಿ ಬರೆದದ್ದು? ನಿಸ್ಸಂಶಯವಾಗಿ ಅದು ಅಂಬೇಡ್ಕರ್. ಅಂಬೇಡ್ಕರ್ 1956 ಅಕ್ಟೋಬರ್ 14 ರಂದು ನಾಗಪುರದ ದೀಕ್ಷಾಭೂಮಿಯಲ್ಲಿ ತಮ್ಮ 10 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧಧರ್ಮ ಸ್ವೀಕರಿಸಿದ್ದು ಇಡೀ ವಿಶ್ವದ ಇತಿಹಾಸದಲ್ಲಿ ಚಿರನೆನಪಿನಲ್ಲಿ ಉಳಿದುಕೊಳ್ಳುವಂತಹ ಘಟನೆ. ಯಾಕೆಂದರೆ ಎಲ್ಲರೂ ಮತಾಂತರ ಮತಾಂತರ ಎನ್ನುತ್ತಾರೆ ಆದರೆ ಒಂದೇ ದಿನ ಅಷ್ಟೊಂದು ಬೃಹತ್ ಜನ ಒಂದೇ ವೇದಿಕೆಯಲ್ಲಿ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಂಡಿದ್ದು? ಹಿಂದೆ ಎಂದೂ ನಡೆದಿರಲಿಲ್ಲ! ಆದರೆ ಅಂಬೇಡ್ಕರ್ ಮೂಲಕ ಅದು ನಡೆಸಲ್ಪಟ್ಟಿತ್ತು. ಯಾವ ಬೌದ್ಧಧರ್ಮ ಭಾರತದಿಂದ ಕಣ್ಮರೆಯಾಗಿತ್ತೋ ಅದು ಅಂಬೇಡ್ಕರ್ ಮೂಲಕ ಭಾರತದಲ್ಲಿ ಮತ್ತೆ ಜೀವ ಪಡೆದಿತ್ತು. ಈ ನಿಟ್ಟಿನಲಿ ಭಾರತದಲ್ಲಿ ಬೌದ್ಧ ಧರ್ಮದ ಪುನರುತ್ಥಾನಕ್ಕೆ ಅಂಬೇಡ್ಕರ್ ಮುನ್ನುಡಿ ಬರೆದಿದ್ದರು.

ಹಾಗಿದ್ದರೆ ಬೌದ್ಧಧರ್ಮಕ್ಕೆ ಮತಾಂತರ ಹೊಂದುವ ಅಂಬೇಡ್ಕರರ ನಿರ್ಧಾರ ದಿಢೀರನೆ ತೆಗೆದುಕೊಂಡದ್ದೆ? ಅಥವಾ ಯಾವುದಾದರೂ ಆಮಿಷಕ್ಕೊಳಗಾಗಿ ಅವರು ಮತಾಂತರ ಹೊಂದಿದರೆ? ಖಂಡಿತ ಇಲ್ಲ. ಬೌದ್ಧಧರ್ಮ ಸ್ವೀಕಾರದ ಅವರ ನಿರ್ಧಾರ ಅವರ ಜೀವನದ ಅಂತಿಮಗಳಿಗೆಯದ್ದಲ್ಲ ಅಥವಾ ಯಾವುದೇ ಆಸೆ ಆಮಿಷದ್ದೂ ಅಲ್ಲ. ಯಾಕೆಂದರೆ ತಮ್ಮ ಜೀವಿತದ ಬಹಳ ಹಿಂದೆಯೇ ಅಂದರೆ 1936, ಮೇ13 ರ ಬುದ್ಧ ಜಯಂತಿಯಂದೆ ಮುಂಬೈನಲ್ಲಿ ತಮ್ಮ ಸುಪ್ರಸಿದ್ಧ “ಮುಕ್ತಿಯ ಮಾರ್ಗ ಯಾವುದು?” ಎಂಬ ಭಾಷಣದಲ್ಲಿ ಅವರು ತಮ್ಮ ಸ್ಪಷ್ಟ ಗುರಿ ಬೌದ್ಧಧರ್ಮ ಎಂಬುದನ್ನು ಬಹಳ ನಿಖರವಾಗಿಯೇ, ನಿಶ್ಚಿತವಾಗಿಯೇ ಹೇಳಿದ್ದರು.

ಯಾಕೆಂದರೆ ಅಂಬೇಡ್ಕರ್ ಹಿಂದೂಧರ್ಮ ಟೀಕಿಸುತ್ತಿದ್ದರು ಎಂದರೆ ಅದಕ್ಕೆ ಪರ್ಯಾಯವನ್ನು ಹುಡುಕಿಕೊಂಡಿದ್ದರೆಂದೇ ಅಲ್ಲವೆ? ಹೌದು, ಜೀವನದುದ್ದಕ್ಕೂ ಹಿಂದೂಧರ್ಮವನ್ನು, ಮತ್ತದರ ಜಾತಿ ವ್ಯವಸ್ಥೆಯನ್ನು ಟೀಕಿಸುತ್ತಿದ್ದ ಅವರು ಹಾಗೆ ಟೀಕಿಸುತ್ತಾ, ಟೀಕಿಸುತ್ತಾ ಬುದ್ಧನನ್ನು ತನ್ನೆಡೆಗೆ ಎಳೆದುಕೊಂಡಿದ್ದರು. ಅಂದಹಾಗೆ 1936 ರ ಸಮಯದಲ್ಲಿ ಅವರು ಬೌದ್ಧಧರ್ಮದಲ್ಲಿ ತನ್ನ ಭವಿಷ್ಯ ಎಂದಾಗ ಮೂಂಜೆ ಎಂಬ ಹಿಂದೂ ಮಹಾಸಭಾದ ಮುಖಂಡರು ಅಂಬೇಡ್ಕರರಿಗೆ ಸಲಹೆ ನೀಡಿದ್ದು “ಮುಸ್ಲಿಂ ಧರ್ಮವನ್ನು ಪರ್ಯಾಯವಾಗಿ ಎದುರಿಸಲು ದಲಿತರು ಸಿಖ್ ಧರ್ಮಕ್ಕೆ ಮತಾಂತರಗೊಳ್ಳಲಿ” ಎಂದು. ಆದರೆ ಅಂಬೇಡ್ಕರರು ಹಿಂದೂ ಧರ್ಮದ ನಾಯಕರುಗಳ ಆ ಸಲಹೆಗಳಿಗೆ ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ತಮ್ಮಷ್ಟಕ್ಕೆ ತಾವು ಬುದ್ಧನತ್ತ ಚಲಿಸತೊಡಗಿದ್ದರು. 1950ರಲ್ಲಿ “ಷೆಡ್ಯೂಲ್ಡ್ ಕ್ಯಾಸ್ಟ್ ಫಡರೇಷನ್” ಎಂಬ ತಮ್ಮ ನೇತೃತ್ವದ ರಾಜಕೀಯ ಪಕ್ಷದ ಕಾರ್ಯಕರ್ತರಿಗೆ ಅಂಬೇಡ್ಕರರು ಬುದ್ಧ ಜಯಂತಿಯನ್ನು ಆಚರಿಸುವಂತೆ ಕೂಡ ಕರೆನೀಡಿದ್ದರು. ಕೋಲ್ಕತ್ತಾದ ಮಹಾಬೋಧಿ ಸೊಸೈಟಿಯವರು ಹೊರತಂದಿದ್ದ ವಿಶೇಷ ಸಂಚಿಕೆಯೊಂದರಲ್ಲಿ ಅವರು 1950ರಲ್ಲೇ “ಭಗವಾನ್ ಬುದ್ಧ ಮತ್ತು ಆತನ ಧಮ್ಮದ ಭವಿಷ್ಯ”ಎಂಬ ಲೇಖನ ಬರೆದಿದ್ದರು. ಆ ಮೂಲಕ ಬೌದ್ಧದರ್ಮಕ್ಕೆ ‘ಉಜ್ವಲ ಭವಿಷ್ಯ’ವಿದೆ ಎಂಬುದನ್ನು ಅವರು ಸೂಚ್ಯವಾಗಿ ತಿಳಿಸಿದ್ದರು . ಈ ನಡುವೆ 1954ರಲ್ಲಿ ಬರ್ಮಾದಲ್ಲಿ ನಡೆದ ಅಂತರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿಯೂ ಕೂಡ ಅಂಬೇಡ್ಕರ್ ರವರು ಭಾಗವಹಿಸಿದ್ದರು. ಒಟ್ಟಾರೆ ತಮ್ಮ ಅವಿರತ ಸಾಮಾಜಿಕ, ರಾಜಕೀಯ ಹೋರಾಟದ ನಡುವೆ ಅಂಬೇಡ್ಕರರು ನಿಧಾನವಾಗಿ ಚಲಿಸುತ್ತಿದ್ದದ್ದು ಬೌದ್ಧದರ್ಮದ ಕಡೆಗೆ .                         ‌‌      ಯಾಕೆಂದರೆ ಅವರಿಗೆ ತಿಳಿದಿತ್ತು , ಒಂದು ಸಮುದಾಯಕ್ಕೆ ಸಾಮಾಜಿಕ ರಾಜಕೀಯ ಜಾಗೃತಿ ಮೂಡಿಸಿ ಅದಕ್ಕೆ ಧಾರ್ಮಿಕ ದಿಕ್ಕನ್ನು ತೋರಿಸದಿದ್ದರೆ ಅದಕ್ಕೆ ಅರ್ಥವಿರುವುದಿಲ್ಲ ಎಂದು. ಈ ಕಾರಣಕ್ಕಾಗಿಯೇ ಅವರು ತಮ್ಮ ಹದಗೆಡುತ್ತಿದ್ದ ಆರೋಗ್ಯದ ಮಧ್ಯೆ ಸ್ವೀಕರಿಸಿದ್ದು ಬೌದ್ಧಧರ್ಮ ಮತ್ತು ಅಂಥ ಮುನ್ಸೂಚನೆ ಸಿಕ್ಕಿದ್ದರಿಂದಲೇ ಅಂದರೆ ತಮ್ಮ ಸಾವಿನ ಮುನ್ಸೂಚನೆ ಸಿಕ್ಕಿದ್ದರಿಂದಲೆ ಅವರು ತಾವು ಪುನರುತ್ಥಾನಗೊಳಿಸಿದ ಅಂತಹ ಧರ್ಮದ ನೆಲೆಗಟ್ಟಾಗಿ ಬುದ್ಧಧರ್ಮವನ್ನು ಕುರಿತು “ ಬುದ್ಧ ಅಂಡ್ ಹಿಸ್ ಧಮ್ಮ” ಎಂಬ ಕೃತಿ ಬರೆದದ್ದು. ಯಾಕೆಂದರೆ ಅದಾಗಲೆ ಮಹಾಬೋಧಿ ಸೊಸೈಟಿ ಮತ್ತು ಮತ್ತಿತರ ಬೌದ್ಧ ಸೊಸೈಟಿಗಳು ಭಾರತದಲ್ಲಿ ಇದ್ದವಾದರು ಅವ್ಯಾವುದಕ್ಕೂ ಭಾರತದಲ್ಲಿ ಬೌದ್ಧಧರ್ಮದ ಪುನರುತ್ಥಾನಕ್ಕೆ ಸ್ಪಷ್ಟ ರೂಪುರೇಷೆ ಅಥವಾ ಟಾರ್ಗೆಟ್ ಗ್ರೂಪ್ ಇರಲಿಲ್ಲ. ಆದರೆ ಬಾಬಾಸಾಹೇಬ್ ಅಂಬೇಡ್ಕರರಿಗೆ ಬೌದ್ಧಧರ್ಮವನ್ನು ಈ ರಾಷ್ಟ್ರದ ಜನಮಾನಸದ ಧರ್ಮವಾಗಿ ಬೆಳೆಸುವ ಆಲೋಚನೆ ಇತ್ತು. ಬರೀ ದಲಿತರಿಗೆ ಮಾತ್ರ ಆ ಧರ್ಮ ಎಂಬಂತೆಯಲ್ಲ. ಸಮಸ್ತ ಭಾರತೀಯರಿಗೂ ಆ ಧರ್ಮದ ಆಶಯಗಳನ್ನು ತಲುಪಿಸಬೇಕೆಂಬ ಆಶಯವಿತ್ತು ಅಂಬೇಡ್ಕರರಿಗೆ . ಹಾಗಂತ ಅಂಬೇಡ್ಕರರು ತಮ್ಮ ಆಪ್ತ ಅನುಯಾಯಿಗಳಲ್ಲಿ ಹೇಳಿಕೊಂಡಿದ್ದರು. ಅವರ ಈ ಆಶಯಗಳನ್ನು ಉಲ್ಲೇಖಿಸುತ್ತ ಅವರ ಸಹಪಾಠಿಯಾಗಿದ್ದ ಭಗವಾನ್‍ದಾಸ್‍ರವರು ತಮ್ಮ “ಇನ್ ಪಸ್ರ್ಯೂಟ್ ಆಫ್ ಅಂಬೇಡ್ಕರ್” ಕೃತಿಯಲ್ಲಿ ಹೀಗೆ ಹೇಳುತ್ತಾರೆ “ಅವರು( ಅಂಬೇಡ್ಕರ್) ಬೌದ್ಧಧರ್ಮ ಅಸ್ಪೃಶ್ಯರ ಏಕಾಧಿಪತ್ಯಕ್ಕೆ ಒಳಪಡುವುದರ ಪರ ಇರಲಿಲ್ಲ. ಬದಲಿಗೆ ಅದು ಇಡೀ ಪ್ರಪಂಚದಲ್ಲೇ ಮಾನವತೆ ಮತ್ತು ಸಹೋದರತೆಯನ್ನು ಪ್ರಚುರಪಡಿಸುವ ಸಾಧನವಾಗಬೇಕು” ಎಂದು ಆಶಿಸಿದ್ದರು ಎನ್ನುತ್ತಾರೆ ಭಗವಾನ್ ದಾಸ್ ರವರು. ಈ ನಿಟ್ಟಿನಲ್ಲಿ ಅಂಬೇಡ್ಕರರ ಇನ್ನಷ್ಟೂ ಆಶಯಗಳನ್ನು ಅವರು ಉಲ್ಲೇಖಿಸುತ್ತಾರೆ ಅವುಗಳೆಂದರೆ

1. ಪ್ರತಿಯೊಬ್ಬ ಬೌದ್ಧನು ತನ್ನ ಬಳಿ ಬೌದ್ಧಧರ್ಮದ ಧರ್ಮ ಗ್ರಂಥವೊಂದನ್ನು ಇಟ್ಟುಕೊಳ್ಳಬೇಕು ಮತ್ತು ಆ ಗ್ರಂಥ ಬುದ್ಧನ ಸಾಮಾಜಿಕ, ನೈತಿಕ ಮೌಲ್ಯಗಳನ್ನು ಬಿಂಬಿಸಬೇಕು.

2. ಹೇಗೆ ಕ್ರಿಶ್ಚಿಯನ್ನರು ಒಂದು ಅಧಿಕಾರಯುತ ಮತಾಂತರ ಪದ್ಧತಿಯನ್ನು ಇಟ್ಟುಕೊಂಡಿದ್ದಾರೋ ಅಂತಹದ್ದೆ ಮಾದರಿಯ ಮತಾಂತರ ಪದ್ಧತಿಯನ್ನು ಬೌದ್ಧರು ಕೂಡ ಹೊಂದಬೇಕು. ಅಂದಹಾಗೆ ಅಂತಹ ಮತಾಂತರದಲ್ಲಿ ಬರೀ ಬೌದ್ಧ ಪಂಚಶೀಲಗಳಷ್ಟೆ ಅಲ್ಲ ಬದಲಿಗೆ ಭಾರತದಲ್ಲಿ ಬೌದ್ಧಧರ್ಮ ಸ್ವೀಕರಿಸಿದ ವ್ಯಕ್ತಿಯೊಬ್ಬ “ಇನ್ನುಮುಂದೆ ನಾನು ಹಿಂದೂ ಅಲ್ಲ, ನಾನೊಬ್ಬ ಹೊಸ ಮನುಷ್ಯ” ಎಂಬ ಭಾವನೆ ಮೂಡಬೇಕು ಎನ್ನುತ್ತಾರೆ ಅಂಬೇಡ್ಕರ್‍ರವರು . ಈ ಕಾರಣಕ್ಕೆ ತಮ್ಮದೇ 22 ದೀಕ್ಷಾ ವಿಧಿಗಳನ್ನು ಸಹ ಅಂಬೇಡ್ಕರರು ಪ್ರತಿಷ್ಠಾಪಿಸುತ್ತಾರೆ. ಅವುಗಳಲ್ಲಿ ನಾನು ಹಿಂದೂ ದೇವರುಗಳನ್ನು ನಂಬುವುದಿಲ್ಲ, ಬ್ರಹ್ಮ, ವಿಷ್ಣು, ಶಿವ ಇವರುಗಳನ್ನು ನಂಬುವುದಿಲ್ಲ, ಬುದ್ಧ ವಿಷ್ಣುವಿನ ಅವತಾರ ಎಂದು ನಂಬುವುದಿಲ್ಲ ಎಂಬಿತ್ಯಾದಿ ಅಂಶಗಳಿವೆ.

3. ಬೌದ್ಧ ಧರ್ಮದ ಪ್ರಚಾರಕ್ಕಾಗಿ ಉಪಾಸಕರನ್ನು ನೇಮಿಸಿಕೊಳ್ಳಬೇಕು ಮತ್ತು ಅವರು ವಿವಾಹಿತರಾಗಿರಬೇಕು. ಅಲ್ಲದೆ ಧರ್ಮ ಪ್ರಚಾರ ಮಾಡುವ ಅವರಿಗೆ ಸೂಕ್ತ ವೇತನ ನೀಡಬೇಕು ಮತ್ತು ಅವರು ಬೌದ್ಧ ಧರ್ಮ ಪ್ರಚಾರ ಕಾರ್ಯವನ್ನು ಪಾರ್ಟ್ ಟೈಮ್ ವೃತ್ತಿಯಾಗಿ ಸ್ವೀಕರಿಸಬೇಕು.

4. ಬೌದ್ಧ ಧರ್ಮ ಪ್ರಚಾರಕ್ಕಾಗಿ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಬೇಕು. ಅಂತಹ ಕೇಂದ್ರಗಳಲ್ಲಿ ಉಪಾಸಕರಿಗೆ ತರಬೇತಿ ನೀಡುವ, ಬೇರೆ ಧರ್ಮಗಳ ಬಗ್ಗೆ ತಿಳಿದು ಕೊಳ್ಳುವ ವ್ಯವಸ್ಥೆಯಾಗಬೇಕು.

5. ಪ್ರತಿ ಭಾನುವಾರ ಜನರು ಬೌದ್ಧ ವಿಹಾರವೊಂದರಲ್ಲಿ ಸೇರಬೇಕು ಮತ್ತು ಅಲ್ಲಿ ಅವರು ಬುದ್ಧನ್ನು ಪೂಜಿಸಬೇಕು ಹಾಗೆಯೇ ಅಲ್ಲಿ ಬುದ್ಧನ ಕುರಿತು ಉಪನ್ಯಾಸವಿರಬೇಕು.

ಹೀಗೆ ಅಂಬೇಡ್ಕರರ ಆಶಯಗಳನ್ನು ಹೇಳುತ್ತಾ ಹೋಗುತ್ತಾರೆ ಭಗವಾನ್‍ ದಾಸ್ ರವರು. ಒಂದಂತು ನಿಜ, ಬೌದ್ಧ ಧರ್ಮದ ಪ್ರಚಾರಕ್ಕಾಗಿ ಅಂಬೇಡ್ಕರರು ತುಂಬಾ ಸೀರಿಯಸ್ ಆಗಿದ್ದರು. ಧರ್ಮ ಸ್ವೀಕಾರ ಮತ್ತು ಪ್ರಚಾರವನ್ನು ಅವರು ಹಗುರವಾಗಿ ತೆಗೆದುಕೊಂಡಿರಲಿಲ್ಲ. ಏನಾದರೂ ಅವರು ಇನ್ನೊಂದಿಷ್ಟು ವರುಷ ಬದುಕಿದ್ದೇ ಆದರೆ ಇಡೀ ಭಾರತವನ್ನು ಬೌದ್ಧ ಭಾರತ ಮಾಡಿ ಬಿಡುತ್ತಿದ್ದರು. ಆದರೆ ಜೀವನದ ಅಂತ್ಯ ಅವರಿಗೆ ಅಂತಹ ಅವಕಾಶ ಕೊಡಲಿಲ್ಲ. ಅದೇನೆ ಇರಲಿ, ಬಾಬಾಸಾಹೇಬ್ ಅಂಬೇಡ್ಕರ್ ಭಾರತದಲ್ಲಿ ಬೌದ್ಧ ಧರ್ಮದ ಪುನರುತ್ಥಾರಕರೆಂಬುದು ಚರಿತ್ರೆಯಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿ ಹೋಗಿದೆ. ಈ ನಿಟ್ಟಿನಲಿ ಅವರ ಆ ಧರ್ಮ ಪುನರುತ್ಥಾನದ ಧಾರ್ಮಿಕ ಪ್ರಕ್ರಿಯೆಯ ನಿರಂತರತೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಷ್ಟೆ.

-ರಘೋತ್ತಮ ಹೊ.ಬ., ಮೈಸೂರು
—–

The post ಬೌದ್ಧಧರ್ಮದ ಪುನರುತ್ಥಾನಕ್ಕೆ ಮುನ್ನುಡಿ ಬರೆದ ಅಂಬೇಡ್ಕರ್ -ರಘೋತ್ತಮ‌ಹೊ.ಬ., ಮೈಸೂರು appeared first on Karnataka Kahale.

]]>
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ https://www.karnatakakahale.com/news/17954 Fri, 29 Nov 2024 07:46:09 +0000 https://www.karnatakakahale.com/?p=17954 ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ…

The post ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ appeared first on Karnataka Kahale.

]]>
ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ

ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.  ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು.                ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.

The post ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ appeared first on Karnataka Kahale.

]]>
ಭಾರತದ ಸಂವಿಧಾನ ಸೃಷ್ಟಿಯ ಕತೆ -ರಘೋತ್ತಮ ಹೊ.ಬ, ಮೈಸೂರು https://www.karnatakakahale.com/news/17896 Mon, 25 Nov 2024 16:26:03 +0000 https://www.karnatakakahale.com/?p=17896 Constituent Assembly ಅಥವಾ ಸಂವಿಧಾನ ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿದರು.…

The post ಭಾರತದ ಸಂವಿಧಾನ ಸೃಷ್ಟಿಯ ಕತೆ -ರಘೋತ್ತಮ ಹೊ.ಬ, ಮೈಸೂರು appeared first on Karnataka Kahale.

]]>

Constituent Assembly ಅಥವಾ ಸಂವಿಧಾನ ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿದರು. ಆ ಸಮಿತಿಯ ಹೆಸರು ‘ಕ್ಯಾಬಿನೆಟ್ ಮಿಷನ್ ಆಯೋಗ’. ಸದರಿ ಆಯೋಗವು 1946 ಮಾರ್ಚ್ 16 ರಂದು ‘ಭವಿಷ್ಯದ ಭಾರತದ ಸರ್ಕಾರಕ್ಕಾಗಿ ಒಂದು ಸಂವಿಧಾನ ರಚಿಸಲು ಸಂವಿಧಾನ ಸಭೆಯೊಂದನ್ನು ರಚಿಸುವ ಅಗತ್ಯವಿದೆ’ ಎಂದು ಘೋಷಿಸಿತು. ಅಂತೆಯೇ ಆ ಸಭೆ ಪ್ರಜಾಸತ್ತಾತ್ಮಕವಾಗಿರಬೇಕೆಂಬ ನಿಟ್ಟಿನಲ್ಲಿ ವಿವಿಧ ಪ್ರಾಂತ್ಯಗಳ ಅಸೆಂಬ್ಲಿಗಳ ಮೂಲಕ ಸದಸ್ಯರನ್ನು ಆರಿಸಲಾಯಿತು. ಆ ಸಭೆಗೆ ಭಾರತದ ಪಶ್ಚಿಮದ ತುದಿ ಬಾಂಬೆ ಪ್ರಾಂತ್ಯದಿಂದ ಸ್ಪರ್ಧಿಸಿದ್ದ ಅಂಬೇಡ್ಕರರು ಅಂದಿನ ರಾಜಕೀಯ ಪಕ್ಷಗಳ ಅವಿಚ್ಛಿನ್ನ ವಿರೋಧದಿಂದ ಸೋಲಬೇಕಾಯಿತು. ಆದರೂ, ಎದೆಗುಂದದೆ ಪೂರ್ವದ ದೂರದ ಬಂಗಾಳದಿಂದ ಅಲ್ಲಿಯ ಪರಿಶಿಷ್ಟ ಜಾತಿಯ ನಾಯಕ ಜೋಗೇಂದ್ರನಾಥ ಮಂಡಲ್‍ರ ಬೆಂಬಲದ ಮೂಲಕ ಅವರು ಸಂವಿಧಾನ ಸಭೆಗೆ ಆರಿಸಿ ಬರುವಲ್ಲಿ ಸಫಲರಾರದು. ಒಟ್ಟಾರೆ 296 ಸದಸ್ಯ ಬಲದ ಮೂಲಕ ಸಂವಿಧಾನ ಸಭೆ ತನ್ನ ಪ್ರಥಮ ಸಭೆಯನ್ನು 1946 ಡಿಸೆಂಬರ್ 6ರ ಬೆಳಿಗ್ಗೆ 11ಗಂಟೆಗೆ ನವದೆಹಲಿಯ ಕಾನ್‍ಸ್ಟಿಟ್ಯೂಶನ್ ಹಾಲ್‍ನಲ್ಲಿ ಆರಂಭಿಸಿತು.

ಸಭೆ ಆರಂಭವಾದಾಗ ಒಟ್ಟು 296 ಸದಸ್ಯರಲ್ಲಿ ಭಾಗವಹಿಸಿದ್ದು 207 ಮಂದಿಯಷ್ಟೆ. ಇನ್ನುಳಿದ ಮಂದಿ ಅಂದಿನ ಮುಸ್ಲಿಂಲೀಗ್‍ಗೆ ಸೇರಿದವರಾಗಿದ್ದು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿ ಅವರೆಲ್ಲ ಗೈರುಹಾಜರಾಗಿದ್ದರು. ಹೀಗಿದ್ದರೂ ಪಂಡಿತ್ ಜವಹರಲಾಲ್ ನೆಹರೂ “ಭಾರತ ಸಾರ್ವಭೌಮ ಸ್ವತಂತ್ರ ಗಣರಾಜ್ಯವಾಗಲು ತನ್ನ ಭವಿಷ್ಯದ ಸರ್ಕಾರಕ್ಕಾಗಿ ಅದು ತನ್ನದೇ ಆದಂತಹ ಸಂವಿಧಾನವೊಂದನ್ನು ಹೊಂದುವುದನ್ನು ಬಯಸುತ್ತದೆ” ಎಂದು ಗೊತ್ತುವಳಿಯೊಂದನ್ನು ಮಂಡಿಸಿದರು. ಆದರೆ ಸದಸ್ಯರಾದ ಎಂ.ಆರ್.ಜಯಕರ್ “ಸಭೆಗೆ ಮುಸ್ಲಿಂ ಲೀಗ್ ಮತ್ತು ಇತರೆ ರಾಜ ಸಂಸ್ಥಾನಗಳ ಸದಸ್ಯರು ಗೈರುಹಾಜರಾಗಿರುವುದರಿಂದ ಅವರೆಲ್ಲ ಭಾಗವಹಿಸುವಂತಾಗಲು ಈ ಸಭೆಯನ್ನು ಮುಂದೂಡಬೇಕು” ಎಂದು ತಮ್ಮ ಆಕ್ಷೇಪವ್ಯಕ್ತಪಡಿಸಿದರು ಮತ್ತು ನೆಹರೂರವರು ಮಂಡಿಸಿದ್ದ ಆ ಗೊತ್ತುವಳಿಯ ಚರ್ಚೆಯನ್ನು ಮುಂದೂಡಲು ಸಭೆಯ ಕಲಾಪಕ್ಕೆ ತಿದ್ದುಪಡಿಯೊಂದನ್ನು ಮಂಡಿಸಿದರು. ಗೌರವಾನ್ವಿತ ಸದಸ್ಯರ ಇಂತಹ ಆಕ್ಷೇಪ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಆಶ್ಚರ್ಯವೆಂದರೆ ಈ ಸಮಯದಲ್ಲಿ ಇಂತಹ ಅನಿರೀಕ್ಷಿತ ಕೋಲಾಹಲದ ನಡುವೆ ಮುಂದುವರಿದ ಸಭೆಯಲ್ಲಿ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದ್‍ರವರು ಡಿಸೆಂಬರ್ 17 ರಂದು ಡಾ.ಅಂಬೇಡ್ಕರರನ್ನು ಸಭೆಯನ್ನುದೇಶಿಸಿ ಮಾತನಾಡಲು ಆಹ್ವಾನಿಸಿದರು. ಸತ್ಯ ಹೇಳಬೇಕೆಂದರೆ ಯಾವ ಸಂವಿಧಾನ ಸಭೆ ನಿಂತುಹೋಗಬೇಕಿತ್ತೋ, ಅನಿರ್ದಿಷ್ಟ ಅವಧಿಗೆ ಮುಂದೂಡಬೇಕಾಗಿತ್ತೋ ಅದು ಮುಂದುವರಿಯಿತು! ಹೋಲಿಕೆ ಮಾಡುವುದಾದರೆ ಭಾರತದ ಸಂವಿಧಾನದ ಚಕ್ರ ಅಂಬೇಡ್ಕರರ ಮೂಲಕ ಉರುಳಲಾರಂಭಿಸಿತು! ಯಾಕೆಂದರೆ ತಮ್ಮ ಭಾಷಣದಲ್ಲಿ ಅಂಬೇಡ್ಕರರು ನೆಹರೂರವರು ಮಂಡಿಸಿದ್ದ ಗೊತ್ತುವಳಿಯ 8 ಅಂಶಗಳನ್ನು ಪದ ಪದವಾಗಿ, ಪದರು ಪದರಾಗಿ ಬಿಡಿಸಿ ಸಂವಿಧಾನ ಎತ್ತ ಸಾಗಬೇಕು, ಹೇಗಿರಬೇಕು ಎಂದು ವಿವಿಧ ರಾಷ್ಟ್ರಗಳ ಸಂವಿಧಾನಗಳನ್ನು ಉಲ್ಲೇಖಿಸುತ್ತಾ ಮಾರ್ಗ ತೋರಿಸಲಾಂಭಿಸಿ ಸಭೆಯನ್ನು ಗಂಭೀರತೆಯೆಡೆಗೆ ತಂದರು. ಮುಸ್ಲಿಂಲೀಗ್ ಸದಸ್ಯರು ಗೈರಾಗಿದ್ದಕ್ಕೆ ಮುಂದಿನ ಸಭೆಯಲ್ಲಿ ಅವರು ಭಾಗವಹಿಸುತ್ತಾರೆ ಎಂಬ ಏಕತೆಯ ಆಶಾಭಾವ ವ್ಯಕ್ತಪಡಿಸುತ್ತಾ ಅಂಬೇಡ್ಕರರು “ವಿವಿಧ ಜಾತಿ-ಜನಾಂಗಗಳಾಗಿದ್ದಾಗ್ಯೂ ನಾವೆಲ್ಲಾ ಸದಾ ಒಂದಾಗಿರುವುದರಲ್ಲಿ ನನಗೆ ಯಾವ ಸಂಶಯವೂ ಇಲ್ಲ” ಎಂದರು.

ಹೀಗೆ ತನ್ನ ಆರಂಭಿಕ ದಿನಗಳನ್ನು ಪ್ರಾರಂಭಿಸಿದ ಸಂವಿಧಾನಸಭೆ ಸರ್ದಾರ್ ವಲ್ಲಭಭಾಯಿ ಪಟೇಲರ ನೇತೃತ್ವದಲ್ಲಿ 1947 ಜನವರಿ 24 ರಂದು ಅಂಬೇಡ್ಕರರನ್ನು ಒಳಗೊಂಡಂತೆ 50 ಜನ ಸದಸ್ಯರ ಸಲಹಾ ಸಮಿತಿಯೊಂದನ್ನು ನೇಮಿಸಿತು. ಆ ಸಮಿತಿ ಇತರೆ 4 ಪ್ರಮುಖ ಉಪಸಮಿತಿಗಳನ್ನು ನಿಯುಕ್ತಿಗೊಳಿಸಿತು. ಅವುಗಳಲ್ಲಿ ಬಹುಮುಖ್ಯದ್ದೆಂದರೆ ಮೂಲಭೂತ ಹಕ್ಕುಗಳ ಉಪಸಮಿತಿ ಮತ್ತು ಅಲ್ಪಸಂಖ್ಯಾತರ ಉಪಸಮಿತಿ. ಅಂಬೇಡ್ಕರರು ಈ ಎರಡೂ ಪ್ರಮುಖ ಸಮಿತಿಗಳ ಸದಸ್ಯರಾದರು. ಮುಂದುವರಿದು ಸಭೆ ಇನ್ನೂ 3 ಕಾರ್ಯಾಚರಣಾ ಸಮಿತಿಗಳನ್ನು ರಚಿಸಿತು. ಅವುಗಳೆಂದರೆ 1.ಕೇಂದ್ರ ಅಧಿಕಾರ ಸಮಿತಿ 2.ಕೇಂದ್ರ ಸಂವಿಧಾನ ಸಮಿತಿ 3.ಪ್ರಾಂತ್ಯಗಳ ಸಂವಿಧಾನ ಸಮಿತಿ. ಇಲ್ಲಿಯೂ ಅಷ್ಟೆ ಅಂಬೇಡ್ಕರ್ ಕೇಂದ್ರ ಸಂವಿಧಾನ ಸಮಿತಿಯ ಸದಸ್ಯರಾದರು. ಹೀಗೆ ಅವರು ಪ್ರಮುಖ ಸಮಿತಿಗಳ ಸದಸ್ಯರಾಗುವುದಕ್ಕೆ ಕಾರಣವೂ ಇತ್ತು. ಯಾಕೆಂದರೆ ಮುಂದೆ ಸಂವಿಧಾನ ಅರ್ಪಿಸುವ ಸಮಯದಲ್ಲಿ ಅವರೇ ಹೇಳಿಕೊಂಡಿರುವಂತೆ “ಪರಿಶಿಷ್ಟ ಜಾತಿಗಳ ಹಿತ ಕಾಯುವ ಮಹದಾಸೆ ಹೊತ್ತಷ್ಟೆ ತಾನು ಸಂವಿಧಾನ ಸಭೆಗೆ ಬಂದೆ…”. ಹೌದು, ಡಾ.ಅಂಬೇಡ್ಕರರು ಪರಿಶಿಷ್ಟರ ಹಿತ ಕಾಯುವ ನೆಪ ಮಾತ್ರಕ್ಕೆ ಬಂದರೂ ತಮಗರಿವಿಲ್ಲದಂತೆ ಅವರು ಇಡೀ ದೇಶದ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು! ಯಾವ ಪರಿ ಎಂದರೆ ಇಡೀ ಸಂವಿಧಾನ ರಚನಾ ಪ್ರಕ್ರಿಯೆಯಲ್ಲಿ ಸಕ್ರಿಯರಾಗುವ ಮಟ್ಟಿಗೆ. ಅದೂ ಅದೆಂತಹ ಸಕ್ರಿಯತೆಯೆಂದರೆ ಶತೃಗಳೂ ಮೆಚ್ಚಿ ಅಹುದಹುದು ಎನ್ನುವ ಮಟ್ಟಿಗೆ! ಏಕೆಂದರೆ ಸಂವಿಧಾನ ರಚನೆಯ ಇಂತಹ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂಡು ಸ್ವಾತಂತ್ರ್ಯದ ಸಮಯದಲ್ಲಿ ದೇಶ ವಿಭಜನೆಯ ಸಂದರ್ಭ ಬಂದಾಗ ಅಂಬೇಡ್ಕರರು ಗೆದ್ದಿದ್ದ ಬಂಗಾಳದ ಕ್ಷೇತ್ರ ಕಾಂಗ್ರೆಸ್ಸಿಗರ ತಂತ್ರದಿಂದಾಗಿ ಪೂರ್ವ ಪಾಕಿಸ್ತಾನಕ್ಕೆ ಸೇರಲ್ಪಟ್ಟು ಅವರ ಸದಸ್ಯತ್ವ ರದ್ದಾಯಿತು. ಸೋಜಿಗವೆಂದರೆ ಈ ಸಮಯದಲ್ಲಿ ಅಂಬೇಡ್ಕರರ ಸಂವಿಧಾನ ರಚನಾ ಚಾಕಚಕ್ಯತೆ ಕೆಲಸ ಮಾಡಿತು. ಹೇಗೆಂದರೆ ಸ್ವತಃ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದರು 1947 ಜೂನ್ 30 ರಂದು ಬಾಂಬೆ ಪ್ರಾಂತ್ಯದ ಅಂದಿನ ಪ್ರಧಾನಿ ಡಾ.ಬಿ.ಜಿ.ಖೇರ್ ರವರಿಗೆ ಪತ್ರ ಬರೆದು “ಬೇರೆ ವಿಷಯಗಳೇನೆ ಇರಲಿ, ಸಂವಿಧಾನ ಸಭೆ ಮತ್ತದರ ವಿವಿಧ ಉಪಸಮಿತಿಗಳಲ್ಲಿ ಅಂಬೇಡ್ಕರರ ಕಾರ್ಯ ಎಂತಹ ಮಟ್ಟದ್ದೆಂದರೆ, ಖಂಡಿತ ಅವರ ಸೇವೆಯನ್ನು ನಾವು ಕಳೆದುಕೊಳ್ಳಬಾರದು. ಅದಕ್ಕಾಗಿ ಜುಲೈ 14ರ ಮುಂದಿನ ಸಭೆಯೊಳಗೆ he should be relected”ಎಂದರು! (Dr.Ambedkar: The Principal Architect of The Constitution of India, Published by Government of India. Pp.26)

ಹೌದು, ಬಾಬಾಸಾಹೇಬರು ತಕ್ಷಣ ಮರು ಆಯ್ಕೆಯಾದರು. ಹಾಗೇ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ಕೂಡ ಸಿಕ್ಕಿತು ಮತ್ತು ಅವರು ಸ್ವತಂತ್ರ ಭಾರತದಲ್ಲಿ ನೆಹರೂ ಸಂಪುಟದಲ್ಲಿ ಕಾನೂನು ಸಚಿವರಾಗಿ ಕೂಡ ನೇಮಕಗೊಂಡರು. ಅಂದಹಾಗೆ ಆಗಸ್ಟ್ 29ರಂದು ಮರುಸಮಾವೇಶಗೊಂಡ ಸಂವಿಧಾನಸಭೆ ಸಹಜವಾಗಿ ಕಾನೂನು ಸಚಿವರಾದ ಡಾ.ಅಂಬೇಡ್ಕರರನ್ನು “ಸಂವಿಧಾನ ಪ್ರತಿ ರಚಿಸುವ ಸಮಿತಿ (drafting committee)”ಯ ಅಧ್ಯಕ್ಷರನ್ನಾಗಿ ಆರಿಸಿತು‌. ಜೊತೆಗೆ ಆರು ಮಂದಿ ಸದಸ್ಯರ ತಂಡ. ಒಟ್ಟಾರೆ ಸಂವಿಧಾನ ಸಭೆಯ ಇಂತಹ ನಡಾವಳಿಗಳ ಮೂಲಕ ಭಾರತದ ಭವಿಷ್ಯ ಬರೆವ ಕೆಲಸ ಬಾಬಾಸಾಹೇಬರ ಮುಡಿಗೇರಿತು.

ಸಂವಿಧಾನ ರಚನೆಯ ಜವಾಬ್ದಾರಿಯೇನೋ ಅಂಬೇಡ್ಕರರ ಮುಡಿಗೇರಿತು. ಆದರೆ ಆ ಜವಾಬ್ದಾರಿಯನ್ನು ಅವರು ನಿರ್ವಹಿಸಿದ ಪರಿ? ಖಂಡಿತ, ಅಂಬೇಡ್ಕರರು ಮತ್ತವರ ಸಂವಿಧಾನ ಕಾರ್ಯಕ್ಷಮತೆಯ ಬಗ್ಗೆ ಸ್ವತಃ ಅವರು ಮತ್ತು ಇತರರು ಸಂವಿಧಾನ ಸಭೆಗಳಲ್ಲಿ ಮಾಡಿದ ಭಾಷಣಗಳಲ್ಲಿ ನಮಗೆ ಉಲ್ಲೇಖ ಸಿಗುತ್ತದೆ. 1949 ನವೆಂಬರ್ 25 ರಂದು ಡಾ.ಅಂಬೇಡ್ಕರರು ಸಂವಿಧಾನ ಸಮರ್ಪಿಸುತ್ತಾ ಮಾಡಿದ ಅಂತಿಮ ಭಾಷಣವನ್ನು ಉಲ್ಲೇಖಿಸುವುದಾದರೆ “ಮಾನ್ಯರೆ, ಸಂವಿಧಾನ ಸಭೆಯ ಕಾರ್ಯಕಲಾಪದ ಬಗ್ಗೆ ಹಿನ್ನೋಟ ನೋಡುವುದಾದರೆ 1946 ಡಿಸೆಂಬರ್ 9ರಿಂದ ಇಲ್ಲಿಯವರೆಗೆ ಸಂವಿಧಾನ ಸಭೆ ಸಮಾವೇಶಗೊಂಡು 2 ವರ್ಷ, 11 ತಿಂಗಳು, 17ದಿನಗಳು ಕಳೆಯುತ್ತಿವೆ. ಇದುವರೆಗೆ ಸಭೆ 11 ಸಮಾವೇಶಗಳನ್ನು ನಡೆಸಿದೆ. ಈ 11 ಸಮಾವೇಶಗಳು 165 ದಿನಗಳನ್ನು ಬಳಸಿಕೊಂಡಿದೆ. ಈ 165 ದಿನಗಳಲ್ಲಿ 114 ದಿನಗಳನ್ನು ಸಭೆ ಕರಡು ಸಂವಿಧಾನವನ್ನು ಪರಿಗಣಿಸಲು ತೆಗೆದುಕೊಂಡಿದೆ. ಇನ್ನು ಕರಡು ಸಮಿತಿ ಅಥವಾ ಸಂವಿಧಾನ ರಚನಾ ಸಮಿತಿಯ ಬಗ್ಗೆ ಹೇಳುವುದಾದರೆ 1947 ಆಗಸ್ಟ್ 29 ರಂದು ಅದನ್ನು ಆಯ್ಕೆಮಾಡಲಾಯಿತು ಮತ್ತು ಅದು ತನ್ನ ಪ್ರಥಮ ಸಭೆಯನ್ನು 30ನೇ ಆಗಸ್ಟ್ ರಂದು ನಡೆಸಿತು. ಆಗಸ್ಟ್ 30 (1947) ರಿಂದ ಇಲ್ಲಿಯವರೆಗೆ ಸಮಿತಿ 141 ದಿನಗಳು ಸಭೆ ನಡೆಸಿ ಒಟ್ಟು ಈ ಅವಧಿಯನ್ನು ಕರಡು ಸಂವಿಧಾನವನ್ನು ತಯಾರಿಸಲು ಬಳಸಿಕೊಂಡಿದೆ” ಹೀಗೆ ವಿವರಿಸುತ್ತಾ ಹೋಗುತ್ತಾರೆ.

ಅಂದಹಾಗೆ ಬಾಬಾಸಾಹೇಬರ ನೇತೃತ್ವದ ಸಮಿತಿ ಸಿದ್ಧಪಡಿಸಿದ ಈ ಸಂವಿಧಾನ 1948 ಫೆಬ್ರವರಿ 26ರಂದು ಭಾರತ ಸರ್ಕಾರದ ಗೆಜೆಟ್‍ನಲ್ಲಿ ಪ್ರಕಟಗೊಂಡಿತು ಮತ್ತು ಹಾಗೆ ಗೆಜೆಟ್‍ನಲ್ಲಿ ಪ್ರಕಟಗೊಂಡ ಸಂವಿಧಾನದ ಆ ಪ್ರತಿ ತನ್ನ ಆರಂಭದ ಪುಟದಲ್ಲಿ ರಚನಾ ಸಮಿತಿಯ ಅಧ್ಯಕ್ಷರಾದ ಅಂಬೇಡ್ಕರರು ಸಭೆಯ ಅಧ್ಯಕ್ಷರಿಗೆ ಬರೆದ ಪತ್ರವೊಂದನ್ನೂ ಕೂಡ ಒಳಗೊಂಡಿತ್ತು. ಆ ಪತ್ರದ ಪ್ರಾರಂಭದ ಒಕ್ಕಣೆಯನ್ನು ಉಲ್ಲೇಖಿಸುವುದಾದರೆ “Dear Sir, On behalf of the Drafting Committee… I submit herewith the Draft of the new Constitution of India… I have been authorized to sign the Draft… Yours truly, B.R.AMBEDKAR”.

ಖಂಡಿತ, ಹೀಗೆ ಪ್ರತಿ ಅಕ್ಷರವನ್ನೂ ಉಲ್ಲೇಖಿಸುವ ಅಗತ್ಯವಿಲ್ಲ. ಆದರೂ ಕೆಲವು ಕೋಮುವಾದಿ ಕಿತಾಪತಿಗಳಿಸ್ಕೋರ ಇದನ್ನು ಉಲ್ಲೆಖಿಸಬೇಕಿದೆ. ಅಲ್ಲದೆ ಮತ್ತೊಂದು ಅಂಶವನ್ನು ಇಲ್ಲಿ ದಾಖಲಿಸಬೇಕಿದೆ. ಅದೆಂದರೆ ಫೆಬ್ರವರಿ 26, 1948 ರಂದು ಗೆಜೆಟ್‍ನಲ್ಲಿ ಪ್ರಕಟಗೊಂಡ ಭಾರತ ಸಂವಿಧಾನದ ಕರಡು ಪ್ರತಿ ಅಂಬೇಡ್ಕರರು ವಯಕ್ತಿಕವಾಗಿ ಸಂವಿಧಾನ ಸಭೆಯ ಮೂಲಭೂತ ಹಕ್ಕುಗಳ ಸಮಿತಿಗೆ ತಮ್ಮ ಪಕ್ಷ ‘ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಪರವಾಗಿ ಮಾರ್ಚ್ 15, 1947 ರಂದು ಸಲ್ಲಿಸಿದ ಮನವಿಯ ಡಿಟೋ ಕಾಪಿಯಂತೇ ಇದೆ ಎಂಬುದು! ಈ ನಿಟ್ಟಿನಲ್ಲಿ ಆಸಕ್ತರು ಅಂಬೇಡ್ಕರರ ಆ ಮನವಿಯನ್ನು ಅವರ ಬರಹಗಳು ಭಾಷಣಗಳ ಸಂಪುಟ 1ರಲ್ಲಿ ‘ರಾಜ್ಯಗಳು ಮತ್ತು ಅಲ್ಪಸಂಖ್ಯಾತರು’ ಎಂಬ ಶೀರ್ಷಿಕೆಯಲ್ಲಿ ಪ್ರಕಟಗೊಂಡಿರುವುದನ್ನು ನಾವು ಗಮನಿಸಬಹುದು. ಈ ಹಿನ್ನೆಲೆಯಲ್ಲಿ ಸ್ಪಷ್ಟವಾಗಿ ಹೇಳಬಹುದು “ಭಾರತದ ಸಂವಿಧಾನ ಅಂಬೇಡ್ಕರರ ಮೆದುಳಿನ ಕೂಸು” ಎಂದು.

ಪ್ರಶ್ನೆಯೇನೆಂದರೆ ಗೆಜೆಟ್‍ನಲ್ಲಿ ಪ್ರಕಟಗೊಂಡ ಸಂವಿಧಾನ ಫೆಬ್ರವರಿ 26, 1948 ರಂದೇ ಜಾರಿಯಾಯಿತೇ? ಖಂಡಿತ ಇಲ್ಲ. ಯಾಕೆಂದರೆ ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಈ ದಿಸೆಯಲ್ಲಿ ಪ್ರಜೆಗಳ ಪ್ರತಿನಿಧಿಗಳ ನಡುವೆ ಅದು ಅಂದರೆ ಸಂವಿಧಾನ ಚರ್ಚೆಗೆ ಬರುವುದು ಬೇಡವೆ? ಹೌದು, 15 ನವೆಂಬರ್ 1948ರಲ್ಲಿ ಅನುಚ್ಛೇದ 1ರಿಂದ ಪ್ರಾರಂಭಿಸಿ 17 ಅಕ್ಟೋಬರ್ 1949ರವರೆಗೆ ಕೊನೆಯ ಅನುಚ್ಛೇದ ಅಂದರೆ ಅನುಚ್ಛೇದ 395ರವರೆಗೆ ಸಂವಿಧಾನ ಸಭೆ ಇಡೀ ಕರಡು ಸಂವಿಧಾನದ ಬಗ್ಗೆ ಭರಪೂರ ಚರ್ಚೆ ನಡೆಸಿತು. ಆಶ್ಚರ್ಯ ಬೇಡ, ಈ ಇಷ್ಟೂ ದಿನಗಳಲ್ಲಿ ಪ್ರತಿಯೊಂದೂ ಅನುಚ್ಛೇದದ ಚರ್ಚೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಅಂಬೇಡ್ಕರರು ಗೌರವಾನ್ವಿತ ಸದಸ್ಯರ ಪ್ರತಿಯೊಂದು ಸಲಹೆಗೂ ಕಿವಿಯಾದರು ಮತ್ತು ಸಂಬಂಧಪಟ್ಟ ಅನುಚ್ಛೇದದ ಪದಪದದ ವಿವರಣೆ ನೀಡಿ ಸದಸ್ಯರ ಸಲಹೆಗಳನ್ನು ಗೌರವಯುತವಾಗಿ ಸ್ವೀಕರಿಸಿ ಅಗತ್ಯ ತಿದ್ದುಪಡಿಗಳನ್ನು ಅಂಗೀಕರಿಸಿದರು. ಈ ಸಂಬಂಧ ಅಂಬೇಡ್ಕರರು ನೀಡಿರುವ ಮಾಹಿತಿಯನ್ನೇ ದಾಖಲಿಸುವುದಾದರೆ “ಕರಡು ಸಂವಿಧಾನಕ್ಕೆ ಸೂಚಿಸಲಾದ ಒಟ್ಟು ತಿದ್ದುಪಡಿಗಳು 7635. ಅವುಗಳಲ್ಲಿ ಅಂಗೀಕಾರಗೊಂಡಂತಹವು 2473”. ಒಟ್ಟಾರೆ ಇಂತೆಲ್ಲ ತಿದ್ದುಪಡಿಗಳ ನಂತರ 1949 ನವೆಂಬರ್ 17ರಂದು ಅಂತಿಮವಾಗಿ ಸಮಾವೇಶಗೊಂಡ ಸಂವಿಧಾನ ಸಭೆಯಲ್ಲಿ ಡಾ.ಅಂಬೇಡ್ಕರರು “ಅಧ್ಯಕ್ಷ ಮಹೋದಯರೇ, ಈ ಸಭೆ ಸ್ಥಿರೀಕರಿಸಿರುವ ಈ ಸಂವಿಧಾನವನ್ನು ಅಂಗೀಕರಿಸಬೇಕೆಂಬ ನಿರ್ಣಯವನ್ನು ನಾನು ಮಂಡಿಸುತ್ತೇನೆ” ಎನ್ನುತ್ತಿದ್ದಂತೆ ಇಡೀ ಸಭೆ ಹರ್ಷದ ಹೊನಲು ಹರಿಸಿ ಕರತಾಡನದೊಂದಿಗೆ ತನ್ನ ಒಪ್ಪಿಗೆ ಸೂಚಿಸಿತು. ಹಾಗೆಯೇ ಅಂಬೇಡ್ಕರರಿಗೆ ಅಭಿನಂದನೆಯ ಸುರಿಮಳೆಗಳು.

ಅವುಗಳಲ್ಲಿ ಒಂದಷ್ಟನ್ನು ದಾಖಲಿಸುವುದಾದರೆ ಮದ್ರಾಸಿನ ಮುನಿಸ್ವಾಮಿ ಪಿಳ್ಳೈ ಎಂಬುವವರು “ಪರಿಶಿಷ್ಟ ಜಾತಿಯು ನಂದನಾರ್, ತಿರುಪಳನಾಳ್ವರ್, ತಿರುವಳ್ಳುವರ್ ಹೀಗೆ ಶ್ರೇಷ್ಠ ಸಂತರನ್ನು, ಜ್ಞಾನಿಗಳನ್ನು ನೀಡಿದೆ. ನಿಸ್ಸಂಶಯವಾಗಿ ಡಾ.ಅಂಬೇಡ್ಕರರು ಅಂತಹವರ ಸಾಲಿಗೆ ಸೇರ್ಪಡೆಯಾಗುತ್ತಾರೆ. ಯಾಕೆಂದರೆ ಅವಕಾಶ ಸಿಕ್ಕರೆ ಪರಿಶಿಷ್ಟರು ಎಷ್ಟು ಎತ್ತರಕ್ಕೆ ಏರಬಲ್ಲರು ಎಂಬುದನ್ನು ಅಂಬೇಡ್ಕರರು (ತಮ್ಮ ಈ ಸಾಧನೆಯ ಮೂಲಕ) ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟಿದ್ದಾರೆ”. ಇನ್ನು ಸೇಠ್ ಗೋವಿಂದದಾಸ್ ಎನ್ನುವವರು “ಡಾ.ಅಂಬೇಡ್ಕರರನ್ನು ‘ವರ್ತಮಾನ ಕಾಲದ ಮನು’ ಎನ್ನಬಹುದು” ಎನ್ನುತ್ತಾರೆ! ಎಂ.ಅನಂತಶಯನಂ ಅಯ್ಯಂಗಾರ್ ಎನ್ನುವವರಂತೂ “ಯಾವ ವ್ಯಕ್ತಿ ನಮ್ಮನ್ನು ಟೀಕಿಸುವ ಮತ್ತು ಅನುಮಾನದಿಂದ ನೋಡುವ ಉದ್ದೇಶದಿಂದ ಸಭೆಗೆ ಬಂದರೋ, ಕಡೆಗೆ ಅವರೇ ಸಂವಿಧಾನದ ಹೊಣೆಹೊತ್ತುಕೊಂಡರು ಮತ್ತು ಅದನ್ನು ರಚಿಸಿದರು” ಎಂದರು! ಹಾಗೆ ಪಂಡಿತ್ ಠಾಕೂರ್ ದಾಸ್ ಭಾರ್ಗವ ಎಂಬುವವರು ಮಾತನಾಡುತ್ತಾ “ಡಾ.ಅಂಬೇಡ್ಕರರು ನಮ್ಮ ಹೃದಯಗಳಲ್ಲಿ ಇಂದು ಉನ್ನತ ಸ್ಥಾನ ಅಲಂಕರಿಸಿದ್ದಾರೆ” ಎನ್ನುವ ಮೂಲಕ ತಮ್ಮ ಅಭೂತಪೂರ್ವ ಪ್ರೀತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದುವರಿದು ಮತ್ತೋರ್ವ ಸದಸ್ಯರಾದ ಟಿ.ಪ್ರಕಾಶಂ‘”ತಮ್ಮ ಈ ಕಾರ್ಯದ ಮೂಲಕ ಡಾ.ಅಂಬೇಡ್ಕರರು ತಾವು ಗ್ರೇಟ್ ಬ್ರಿಟನ್ನಿನ ರಾಜನ ಸಲಹೆಗಾರನಾಗಿ ಅಲ್ಲಿಯ ಆಸ್ಥಾನ ವೂಲ್‍ಸ್ಯಾಕ್‍ನಲ್ಲಿ ಕುಳಿತುಕೊಳ್ಳುವಷ್ಟು ಸಮರ್ಥರು” ಎಂದು ತೋರಿಸಿಕೊಟ್ಟಿದ್ದಾರೆ ಎನ್ನುತ್ತಾರೆ. ಕಡೆಯದಾಗಿ ಶ್ರೀ ಹೆಚ್.ಜೆ.ಖಾಂಡೇಕರ್ ಎಂಬುವವರ ಹೇಳಿಕೆಯನ್ನು ದಾಖಲಿಸುವುದಾದರೆ “ಮಾನ್ಯರೆ, ನಾವು ಅಂಬೇಡ್ಕರರಂತಹ ಪ್ರತಿಭಾಶಾಲಿಯಿಂದ ರೂಪಿತಗೊಂಡ ಕಾನೂನನ್ನು ಸ್ವತಂತ್ರ ಭಾರತದಲ್ಲಿ ಇಂದು ಕಾರ್ಯಾಚರಣೆಗಿಳಿಸುತ್ತಿದ್ದೇವೆ. ಹಾಗೆ ಈ ಕಾನೂನನ್ನು ನಾನು ಮಹಾರ್ ಕಾನೂನು ಎನ್ನಲಿಚ್ಚಿಸುತ್ತೇನೆ ಯಾಕೆಂದರೆ ಡಾ.ಅಂಬೇಡ್ಕರರು ಮಹಾರ್ ಸಮುದಾಯದವರು ಮತ್ತು ಮುಂದೆ 1950 ಜನವರಿ 26ರಂದು ಈ ಕಾನೂನು ಉದ್ಘಾಟನೆಗೊಂಡಾಗ ನಾವು ಮನುವಿನ ಕಾನೂನಿನ ಬದಲು ಮಹಾರರ ಕಾನೂನನ್ನು ಹೊಂದುತ್ತೇವೆ. ಮನುವಿನ ಕಾನೂನಿನ ಅಡಿಯಲ್ಲಿ ಈ ದೇಶದಲ್ಲಿ ಸುಖ ನೆಮ್ಮದಿಯೇ ಇರಲಿಲ್ಲ, ಆದರೆ ಮಹಾರರ ಕಾನೂನು, ಖಂಡಿತ ಈ ದೇಶವನ್ನು ಸ್ವರ್ಗವನ್ನಾಗಿ ಮಾಡುತ್ತದೆ… ನನಗೆ ಭರವಸೆ ಆ ಇದೆ”.

ಖಂಡಿತ, ಸಂವಿಧಾನ ದಿನಾಚರಣೆಯ ಈ ಶುಭ ದಿನದಂದು ಡಾ.ಖಾಂಡೇಕರರ ಭರವಸೆ ಎಲ್ಲರದ್ದಾಗಲಿ.


-ರಘೋತ್ತಮ‌ ಹೊ ಬ, ಮೈಸೂರು

The post ಭಾರತದ ಸಂವಿಧಾನ ಸೃಷ್ಟಿಯ ಕತೆ -ರಘೋತ್ತಮ ಹೊ.ಬ, ಮೈಸೂರು appeared first on Karnataka Kahale.

]]>
ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………., ಚಿಂತನಾ ಬರಹ:ವಿವೇಕಾನಂದ. ಎಚ್. ಕೆ, ಬೆಂಗಳೂರು https://www.karnatakakahale.com/news/17311 Thu, 19 Sep 2024 09:13:53 +0000 https://www.karnatakakahale.com/?p=17311 ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………. ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ.…

The post ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………., ಚಿಂತನಾ ಬರಹ:ವಿವೇಕಾನಂದ. ಎಚ್. ಕೆ, ಬೆಂಗಳೂರು appeared first on Karnataka Kahale.

]]>
ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ……….

ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ. ಆ ಉಳಿದ ಸಮಯವನ್ನು ತೀವ್ರವಾಗಿ ಬದುಕಬೇಕೆಂಬ ಉತ್ಕಟ, ಅದಮ್ಯ ಭಾವನೆ ಜಾಗೃತವಾದಾಗ ಈ ರೀತಿಯ ಮಾತುಗಳು ಹೊರಡುತ್ತವೆ……

ಕೊಲ್ಕತ್ತಾದ ರವೀಂದ್ರನಾಥ್ ಟ್ಯಾಗೋರ್ ಅವರ ಸಮಾಧಿ ಬಳಿ ಹೋಗುವ ದಾರಿಯಲ್ಲಿ ರೈಲು ಕಂಬಿಗಳ ಪಕ್ಕದಲ್ಲಿ ವಾಸಿಸುತ್ತಿದ್ದ ಸಾವಿರಾರು ಕುಟುಂಬಗಳ ಬದುಕನ್ನು ನೋಡಿದಾಗ ಯಾರಿಗಾದರೂ ಹೀಗೆ ಅನಿಸುತ್ತದೆ. ಆ ದೃಶ್ಯಗಳು ಒಂದು ರೀತಿಯಲ್ಲಿ ಮನಕಲಕುವಂತಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಸಹ ಈ ರೀತಿಯ ದೃಶ್ಯಗಳು ಕೆಲವು ಕಡೆ ಇದೆ. ಮೋರಿ, ಚರಂಡಿ, ಕೊಳಚೆ ನೀರು ಹರಿಯುವ ಜಾಗದ ಪಕ್ಕ, ಕೆಲವು ಸಿಮೆಂಟ್ ಪೈಪುಗಳ ಒಳಗಡೆ, ಅಲ್ಲೇ ಹುಟ್ಟಿ ಅಲ್ಲೇ ಬೆಳೆದ ಲಕ್ಷಾಂತರ ಜನ ಬದುಕುತ್ತಿದ್ದಾರೆ…..

ಮುಂಬೈಯ ಅಂಧೇರಿಯ ಕೊಳಗೇರಿ ಭಾರತದಲ್ಲಿ ಅತ್ಯಂತ ಕುಖ್ಯಾತ ಬೃಹತ್ ಕೊಳಗೇರಿ ಎಂದು ಹೆಸರುವಾಸಿಯಾಗಿದೆ. ಬಹುತೇಕ ದೇಶದ ದೊಡ್ಡ ಪಟ್ಟಣಗಳಲ್ಲಿ ಈ ರೀತಿಯ ಕೊಳಗೇರಿಗಳು ಸಾಕಷ್ಟು ಅಸ್ತಿತ್ವದಲ್ಲಿದೆ……

ಅಲ್ಲಿ ವಾಸಿಸುತ್ತಿರುವವರು ಬೇರೆ ಯಾರು ಅಲ್ಲ. ನಮ್ಮದೇ ದೇಶದ ಪ್ರಜೆಗಳು, ನಮ್ಮದೇ ಸಂಬಂಧಿಗಳು, ನಮ್ಮದೇ ಸಮಾಜದ ಸಹೋದರ ಸಹೋದರಿಯರು. ಅಲ್ಲಿ ಒಂದು ಸರಿಯಾದ ಸ್ನಾನಗೃಹ, ಶೌಚಗೃಹ, ಮಲಗುವ ಕೋಣೆ ಇರಲಿ ಕಾಲು ಸಂಪೂರ್ಣ ಚಾಚಿ ಮಲಗುವುದು ಸಹ ಸಾಧ್ಯವಿಲ್ಲದಷ್ಟು ಚಿಕ್ಕ ಪ್ಲಾಸ್ಟಿಕ್ ಗುಡಿಸಲುಗಳು. ಕುಡಿಯುವುದು ಅತ್ಯಂತ ಕಲುಷಿತವಾದ ನೀರು, ಉಸಿರಾಡುವುದು ಅತ್ಯಂತ ಮಲಿನವಾದ ಗಾಳಿ, ಆಹಾರ ಅತ್ಯಂತ ಅನಾರೋಗ್ಯಕರ ಗುಣಮಟ್ಟವನ್ನು ಹೊಂದಿರುತ್ತದೆ. ಆ ಮೂಲಭೂತ ಅವಶ್ಯಕತೆಗಳ ವಿಷಯದಲ್ಲಿ ಅವರಿಗೆ ಆಯ್ಕೆಗಳೇ ಇಲ್ಲ…..

ಇನ್ನು ಬಟ್ಟೆ ಯಾರೋ ದಾನ ನೀಡಿದ್ದು ಆಗಿರಬೇಕು, ಶಾಲೆ ಕಾಲೇಜು ದೂರದ ಮಾತು, ಆರೋಗ್ಯ ತಪಾಸಣಾ ಶಿಬಿರಗಳು ಅಥವಾ ಆಗಾಗ ಒಂದಷ್ಟು ದಾನಿಗಳು ನೀಡುವ ಹಣ್ಣು ಹಂಪಲುಗಳು ಮತ್ತು ಉಳಿದ ಆಹಾರವೇ ಅವರಿಗೆ ಮೃಷ್ಠಾನ್ನ ಭೋಜನ. ಇಂತಹ ಪರಿಸ್ಥಿತಿಯಲ್ಲಿ ಕೋಟ್ಯಂತರ ಜನ ವಾಸಿಸುತ್ತಿದ್ದಾರೆ. ಮಳೆ, ಗಾಳಿ, ಬಿಸಿಲು, ಚಳಿ ಈ ಎಲ್ಲವನ್ನು ಅದು ಹೇಗೋ ಸಹಿಸಿಕೊಂಡು ಎದುರಿಸಿ ಇನ್ನೂ ಜೀವಂತ ಇದ್ದಾರೆ…..

ಬಹುಶಃ ಕರೋನಗಿಂತ ಭೀಕರ ವೈರಸ್ ಗಳು ಸಹ ಇವರ ಆ ಪರಿಸ್ಥಿತಿಯನ್ನು ನೋಡಿ ಸ್ವತಃ ಆ ವೈರಸ್ ಗಳೇ ಆತ್ಮಹತ್ಯೆ ಮಾಡಿಕೊಳ್ಳುತ್ತವೋ ಏನೋ, ಅಷ್ಟೊಂದು ಮಲಿನ ಪರಿಸ್ಥಿತಿಯ ವಾತಾವರಣವಿದೆ……

ಅಲ್ಲಿ ವಾಸಿಸುವ ಜನ ಮೂಲ ನಿವಾಸಿಗಳೋ, ಅಕ್ರಮ ವಲಸಿಗರೋ, ದಾಖಲೆಗಳಿಲ್ಲದ ಮತ್ಯಾರೋ ಏನೇ ಆಗಿರಲಿ ಆದರೆ ಅವರೆಲ್ಲರೂ ಮನುಷ್ಯರೆಂಬುದು ಮಾತ್ರ ಸತ್ಯ ಮತ್ತು ಬದುಕು ಅವರಿಗೆ ಅನಿವಾರ್ಯವಾಗಿದೆ ಎಂಬುದು ಅಷ್ಟೇ ವಾಸ್ತವ. ಯಾರೇ ಆಗಿರಲಿ ಅಲ್ಲಿನ ವಾಸ ಅವರ ಆಯ್ಕೆಯಾಗಿರುವುದು ಸಾಧ್ಯವೇ ಇಲ್ಲ. ಏಕೆಂದರೆ ಆ ಅವಕಾಶವೇ ಅವರಿಗೆ ಇಲ್ಲ……..

ಆದ್ದರಿಂದ ಆ ಬಗ್ಗೆ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ. ಶ್ರೀಮಂತರ ಸರಳತೆಯ ಬಗ್ಗೆ ಸಾಕಷ್ಟು ಮಾತನಾಡುವ ಮಾಧ್ಯಮ, ಸಾಮಾಜಿಕ ಜಾಲತಾಣಗಳು ಮೂಲಭೂತ ಸೌಕರ್ಯಗಳಿಂದಲೇ ವಂಚಿತವಾಗಿರುವ ಇವರ ಬಗ್ಗೆ ದಿವ್ಯ ನಿರ್ಲಕ್ಷ ಅಥವಾ ತಿರಸ್ಕಾರವನ್ನು ಹೊಂದಿದ್ದಾರೆ. ಹಾಗೆಯೇ ಎಲ್ಲಾ ಧರ್ಮದ ಧಾರ್ಮಿಕ ನಾಯಕರುಗಳು ಕರ್ಮ ಸಿದ್ದಾಂತಕ್ಕೆ ಶರಣಾಗಿ ಅದು ಅವರವರ ಕರ್ಮಫಲ ಎಂದು ಇದನ್ನು ಮರೆಮಾಚಲು ಪ್ರಯತ್ನಿಸುತ್ತಾರೆ. ರಾಜಕಾರಣಿಗಳು ಇವರನ್ನು ಚುನಾವಣಾ ರಾಜಕೀಯದ ಭಾಗವಾಗಿ ವೋಟಿನ ಗುಲಾಮರಾಗಿ ಬಳಸಿಕೊಳ್ಳುತ್ತಾರೆ. ಅಧಿಕಾರಿಗಳು ಇವರನ್ನು ತಮ್ಮ ಭ್ರಷ್ಟ ಹಣ ಸಂಪಾದನೆಯ ಮಾರ್ಗಗಳ ರೂಪದಲ್ಲಿ ನೋಡುತ್ತಾರೆ. ಇನ್ನು ಕೆಲವು ಹೋರಾಟಗಾರರು ಒಂದಷ್ಟು ಇವರ ಪರವಾಗಿ ಹೋರಾಡಿ ಹೆಸರು ಗಳಿಸುತ್ತಾರೆ. ಬರಹಗಾರರು ನನ್ನಂತೆ ಬರೆದು ತಮ್ಮ ತೆವಲು ತೀರಿಸಿಕೊಳ್ಳುತ್ತಾರೆ. ಆದರೆ ಅವರ ಬದುಕು ಮಾತ್ರ ಎಷ್ಟೋ ವರ್ಷಗಳಿಂದ ಹೀಗೆಯೇ ಮುಂದುವರಿಯುತ್ತಲೇ ಇದೆ…….

ಈ ನೆಲದ, ಈ ದೇಶದ, ಈ ಸಮಾಜದ ಪ್ರಾಕೃತಿಕ ಸಂಪನ್ಮೂಲಗಳನ್ನು ಸರಿಯಾಗಿ ಹಂಚಿಕೆ ಮಾಡಿದ್ದೇ ಆದರೆ ಈ ಜನರು ಇದಕ್ಕಿಂತ ಉತ್ತಮ ಜೀವನವನ್ನು ನಡೆಸುವಂತ ವಾತಾವರಣ ಸೃಷ್ಟಿಸಬಹುದು. ಕೇವಲ ಒಂದು ಬೃಹತ್ ಸಂಕಲ್ಪ ಮಾತ್ರ ಇದಕ್ಕೆ ಸಾಕಾಗುತ್ತದೆ. ಅಷ್ಟನ್ನೂ ಮಾಡುವ ಸ್ಥಿತಿಯಲ್ಲಿ ನಾವುಗಳು ಇಲ್ಲ………

ನಾವು ಬದುಕುತ್ತಿರುವ ಮಧ್ಯಮ ವರ್ಗದ ಜೀವನಶೈಲಿಯನ್ನು ಈ ಕೊಳಗೇರಿ ನಿವಾಸದ ಜೀವನ ಶೈಲಿಗೆ ಹೋಲಿಕೆ ಮಾಡಿದಾಗ ಬದುಕಿ
ಬಿಡಬೇಕು ತೀವ್ರವಾಗಿ ಸಾಯುವ ಮುನ್ನ ಎಂಬುದು ಅಕ್ಷರಶಃ ಕಾಡುತ್ತದೆ. ಆ ಪುಟ್ಟ ಪುಟ್ಟ ಮಕ್ಕಳು, ತಾಯಂದಿರು ಭವಿಷ್ಯದ ಯಾವುದೇ ಆಸೆ, ಕನಸು, ಭರವಸೆಗಳಿಲ್ಲದೆ ನಿರ್ಜೀವವಾಗಿ ಜೀವನವನ್ನು ಕಳೆಯುವ ಪರಿಸ್ಥಿತಿ ಊಹಿಸಲಸಾಧ್ಯ……

ಅನಾದಿಕಾಲದಲ್ಲಿ ಕನಿಷ್ಠ ಕಾಡು ಮೇಡುಗಳಲ್ಲಿ, ಬೆಟ್ಟ ಗುಡ್ಡ ಕಣಿವೆಗಳಲ್ಲಿ, ಹೇಗೋ ಹಣ್ಣು, ತರಕಾರಿ, ಸೊಪ್ಪನ್ನು ತಿನ್ನುತ್ತಾ ಬದುಕಬಹುದಾಗಿತ್ತು. ಈಗ ಆ ಅವಕಾಶವೂ ಇಲ್ಲ, ಛೇ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ,


-ವಿವೇಕಾನಂದ. ಎಚ್. ಕೆ, ಬೆಂಗಳೂರು

The post ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………., ಚಿಂತನಾ ಬರಹ:ವಿವೇಕಾನಂದ. ಎಚ್. ಕೆ, ಬೆಂಗಳೂರು appeared first on Karnataka Kahale.

]]>