Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-includes/feed-rss2.php on line 8
ಪೊಲೀಸ್ ನ್ಯೂಸ್ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Thu, 08 Jan 2026 09:21:19 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ಪೊಲೀಸ್ ನ್ಯೂಸ್ – Karnataka Kahale https://www.karnatakakahale.com 32 32 ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅಧಿಕಾರ ಸ್ವೀಕಾರ https://www.karnatakakahale.com/news/21905 Thu, 08 Jan 2026 09:21:19 +0000 https://www.karnatakakahale.com/?p=21905 ಬಳ್ಳಾರಿ,ಜ.8: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಗುಪ್ತವಾರ್ತೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಮನ್ ಡಿ.ಪೆನ್ನೇಕರ್ ಅವರು 2013 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ತಾತ್ಕಾಲಿಕವಾಗಿ ಬಳ್ಳಾರಿ ಎಸ್ಪಿಯಾಗಿ…

The post ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅಧಿಕಾರ ಸ್ವೀಕಾರ appeared first on Karnataka Kahale.

]]>

ಬಳ್ಳಾರಿ,ಜ.8: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಗುಪ್ತವಾರ್ತೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಮನ್ ಡಿ.ಪೆನ್ನೇಕರ್ ಅವರು 2013 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ತಾತ್ಕಾಲಿಕವಾಗಿ ಬಳ್ಳಾರಿ ಎಸ್ಪಿಯಾಗಿ ನಿಯೋಜನೆಗೊಂಡಿದ್ದ ಚಿತ್ರದುರ್ಗ ಎಸ್‌ಪಿ ರಂಜೀತ್ ಕುಮಾರ್ ಬಂಡಾರು ಅವರು ಅಧಿಕಾರ ಹಸ್ತಾಂತರಿಸಿದರು.
—–

The post ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅಧಿಕಾರ ಸ್ವೀಕಾರ appeared first on Karnataka Kahale.

]]>
ಬಳ್ಳಾರಿ ವಲಯ ನೂತನ ಐಜಿಪಿ ಯಾಗಿ ಡಾ.ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ https://www.karnatakakahale.com/news/21895 Wed, 07 Jan 2026 16:33:01 +0000 https://www.karnatakakahale.com/?p=21895 ಬಳ್ಳಾರಿ,ಜ. 7: ಬಳ್ಳಾರಿ ವಲಯ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ(ಐಜಿಪಿ) ಡಾ.ಪಿ.ಎಸ್ ಹರ್ಷ ಅವರನ್ನು ನೇಮಿಸಿ ಸರ್ಕಾರ ಅದೇಶಿಸಿದ್ದು, ಅವರು ಬುಧವಾರ  ಅಧಿಕಾರ ವಹಿಸಿಕೊಂಡರು. ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ಕಾನೂನು ಸುವ್ಯವಸ್ಥೆಯನ್ನು ಭದ್ರ-ಬುನಾದಿಯಾಗಿಸಲು ಸರ್ಕಾರ ಮತ್ತು ಹಿರಿಯ…

The post ಬಳ್ಳಾರಿ ವಲಯ ನೂತನ ಐಜಿಪಿ ಯಾಗಿ ಡಾ.ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ appeared first on Karnataka Kahale.

]]>
ಬಳ್ಳಾರಿ,ಜ. 7: ಬಳ್ಳಾರಿ ವಲಯ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ(ಐಜಿಪಿ) ಡಾ.ಪಿ.ಎಸ್ ಹರ್ಷ ಅವರನ್ನು ನೇಮಿಸಿ ಸರ್ಕಾರ ಅದೇಶಿಸಿದ್ದು, ಅವರು ಬುಧವಾರ  ಅಧಿಕಾರ ವಹಿಸಿಕೊಂಡರು.

ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ಕಾನೂನು ಸುವ್ಯವಸ್ಥೆಯನ್ನು ಭದ್ರ-ಬುನಾದಿಯಾಗಿಸಲು ಸರ್ಕಾರ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನ ನೀಡಿದೆ ಎಂದರು.

ಬಳ್ಳಾರಿ ವಲಯದ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಪ್ರಮುಖ ಮತ್ತು ಶಾಂತಿಪ್ರಿಯ ಜಿಲ್ಲೆಗಳಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಭದ್ರಗೊಳಿಸಲು ಹಾಗೂ ಜನಸ್ನೇಹಿ ಆಡಳಿತ ನೀಡಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಹೇಳಿದರು.
—–

The post ಬಳ್ಳಾರಿ ವಲಯ ನೂತನ ಐಜಿಪಿ ಯಾಗಿ ಡಾ.ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ appeared first on Karnataka Kahale.

]]>
ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ: ಚಾಂಪಿಯನ್‌ಶಿಪ್ ಬಳ್ಳಾರಿ ತಂಡಕ್ಕೆ ಟ್ರೋಫಿ ವಿತರಿಸಿದ ಎಡಿಜಿಪಿ‌ ಎಂ. ನಂಜುಂಡಸ್ವಾಮಿ(ಮನಂ) https://www.karnatakakahale.com/news/21396 Tue, 25 Nov 2025 13:34:42 +0000 https://www.karnatakakahale.com/?p=21396 ಬಳ್ಳಾರಿ,ನ.25: ಬೆಂಗಳೂರಿನ ಬನ್ನೇರುಘಟ್ಟದ ಮುಂಡ್ಕೂರ್ ತರಬೇತಿಯ ಅಕಾಡೆಮಿ ಮೈದಾನದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳ ತಂಡ ಚಾಂಪಿಯನ್‌ಶಿಪ್ ಕಪ್ ಮುಡಿಗೇರಿಸಿಕೊಂಡಿದೆ. ಅಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಡಿಜಿಪಿ ಹಾಗೂ…

The post ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ: ಚಾಂಪಿಯನ್‌ಶಿಪ್ ಬಳ್ಳಾರಿ ತಂಡಕ್ಕೆ ಟ್ರೋಫಿ ವಿತರಿಸಿದ ಎಡಿಜಿಪಿ‌ ಎಂ. ನಂಜುಂಡಸ್ವಾಮಿ(ಮನಂ) appeared first on Karnataka Kahale.

]]>

ಬಳ್ಳಾರಿ,ನ.25: ಬೆಂಗಳೂರಿನ ಬನ್ನೇರುಘಟ್ಟದ ಮುಂಡ್ಕೂರ್ ತರಬೇತಿಯ ಅಕಾಡೆಮಿ ಮೈದಾನದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳ ತಂಡ ಚಾಂಪಿಯನ್‌ಶಿಪ್ ಕಪ್ ಮುಡಿಗೇರಿಸಿಕೊಂಡಿದೆ.
ಅಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಡಿಜಿಪಿ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹೆಚ್ಚುವರಿ ಮಹಾ ನಿರ್ದೇಶಕರಾದ ಎಂ. ನಂಜುಂಡಸ್ವಾಮಿ(ಮನಂ) ಅವರು ಟ್ರೋಫಿ ವಿತರಿಸಿದರು.
ಈಶಾನ್ಯ ವಲಯದ ವೃತ್ತಿಪರ ಕ್ರೀಡೆಗಳಾದ ರೈಫಲ್ ಡ್ರಿಲ್, ರಕ್ಷಣೆಯಲ್ಲಿ ಪುರುಷರ ವಿಭಾಗವು ಪ್ರಥಮ ಸ್ಥಾನ ಮತ್ತು ಮಹಿಳಾ ವಿಭಾಗವು ಪ್ರಥಮ ಚಿಕಿತ್ಸೆಯಲ್ಲಿ ಪ್ರಥಮ ಸ್ಥಾನ ಮತ್ತು ರೈಫಲ್‌ಡ್ರಿಲ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ನ.16 ರಿಂದ 21 ರವರೆಗೆ ನಡೆದ ಕ್ರೀಡಾಕೂಟಗಳಲ್ಲಿ ಕ್ರೀಡೆಗಳಾದ 100 ಮೀ. ಓಟ, 400 ಮೀ. ಓಟ, 800 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ ಮತ್ತು ವೃತ್ತಿಪರ ಕ್ರೀಡೆಗಳಾದ ಪ್ರಥಮ ಚಿಕಿತ್ಸೆ, ಆಗ್ನಿಶಮನ, ರೈಫಲ್ ಡ್ರಿಲ್, ರಕ್ಷಣೆ ಮತ್ತು ರೈಫಲ್ ಸಹಿತ ಶೂಟಿಂಗ್ ಸ್ಪರ್ಧೆಗಳಲ್ಲಿ ಈಶಾನ್ಯ ವಲಯದ 65 ಜನ ಗೃಹರಕ್ಷಕರು ಭಾಗವಹಿಸಿದ್ದರು.
2025-26ನೇ ಸಾಲಿನ ಗೃಹರಕ್ಷಕ ವೃತ್ತಿಪರ ಹಾಗೂ ಕ್ರೀಡಾಕೂಟದಲ್ಲಿ ಬಳ್ಳಾರಿ ತಂಡವು ಚಾಂಪಿಯನ್‌ಶಿಪ್ ಕಪ್ ಗೆದ್ದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ಜಿಲ್ಲಾ ಸಮಾದೇಷ್ಟರಾದ ಯಮ್ಮಿಗನೂರು ಶೇಖ್ ಸಾಬು, ಭೋದಕ ಬಸವರಾಜ ಹಗಳಗಾರ, ಸೀನಿಯರ್ ಪ್ಲಟೂನ್ ಕಮಾಂಡರ್ ಬಿ.ಕೆ.ಬಸವಲಿಂಗ, ಪ್ಲಟೂನ್ ಕಮಾಂಡರ್ ಹೆಚ್.ಲಕ್ಷ್ಮಿನಾರಾಯಣ ಮತ್ತು ಗೃಹರಕ್ಷಕ-ಗೃಹರಕ್ಷಕಿಯರು, ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಗೃಹರಕ್ಷಕರು ಅಭಿನಂದನೆ ತಿಳಿಸಿದ್ದಾರೆ.
—–

The post ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ: ಚಾಂಪಿಯನ್‌ಶಿಪ್ ಬಳ್ಳಾರಿ ತಂಡಕ್ಕೆ ಟ್ರೋಫಿ ವಿತರಿಸಿದ ಎಡಿಜಿಪಿ‌ ಎಂ. ನಂಜುಂಡಸ್ವಾಮಿ(ಮನಂ) appeared first on Karnataka Kahale.

]]>
ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ: ಸಿ.ಎಂ ಅಪಾರ ಮೆಚ್ಚುಗೆ https://www.karnatakakahale.com/news/21085 Tue, 28 Oct 2025 18:18:16 +0000 https://www.karnatakakahale.com/?p=21085 ಬೆಂಗಳೂರು ಅ. 28: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ…

The post ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ: ಸಿ.ಎಂ ಅಪಾರ ಮೆಚ್ಚುಗೆ appeared first on Karnataka Kahale.

]]>

ಬೆಂಗಳೂರು ಅ. 28: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ತಿಳಿಸಿದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದರು.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ ಎಂದು ತಿಳಿಸಿದರು.

ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಹೇಳಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದರು.

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿ.ಎಂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ.‌ಜಿ ಪರಮೇಶ್ವರ್, ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ‌ ರಜನೀಶ್, ಡಿಜಿಪಿ ಡಾ. ಎ ಎಂ ಸಲೀಂ ಮತ್ತಿತರ ಗಣ್ಯರು ಇದ್ದರು.

The post ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ: ಸಿ.ಎಂ ಅಪಾರ ಮೆಚ್ಚುಗೆ appeared first on Karnataka Kahale.

]]>
ವಿಜಯನಗರ ಜಿಲ್ಲಾ ನೂತನ ಎಸ್ಪಿ ಜಾಹ್ನವಿ ಎಸ್ https://www.karnatakakahale.com/news/20176 Wed, 16 Jul 2025 00:27:55 +0000 https://www.karnatakakahale.com/?p=20176 ಹೊಸಪೇಟೆ(ವಿಜಯನಗರ), ಜು. 16: ವಿಜಯನಗರ ಜಿಲ್ಲಾ ನೂತನ ಎಸ್ಪಿ ಗಳಾಗಿ ಜಾಹ್ನವಿ ಎಸ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ಎಸ್ಪಿಯಾಗಿದ್ದ .ಎಲ್. ಶ್ರೀಹರಿಬಾಬು ಅವರು ಅಧಿಕಾರ ಹಸ್ತಾಂತರಿಸಿದರು.

The post ವಿಜಯನಗರ ಜಿಲ್ಲಾ ನೂತನ ಎಸ್ಪಿ ಜಾಹ್ನವಿ ಎಸ್ appeared first on Karnataka Kahale.

]]>
ಹೊಸಪೇಟೆ(ವಿಜಯನಗರ), ಜು. 16: ವಿಜಯನಗರ ಜಿಲ್ಲಾ ನೂತನ ಎಸ್ಪಿ ಗಳಾಗಿ ಜಾಹ್ನವಿ ಎಸ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಈವರೆಗೆ ಎಸ್ಪಿಯಾಗಿದ್ದ .ಎಲ್. ಶ್ರೀಹರಿಬಾಬು ಅವರು ಅಧಿಕಾರ ಹಸ್ತಾಂತರಿಸಿದರು.

The post ವಿಜಯನಗರ ಜಿಲ್ಲಾ ನೂತನ ಎಸ್ಪಿ ಜಾಹ್ನವಿ ಎಸ್ appeared first on Karnataka Kahale.

]]>
ಬಳ್ಳಾರಿ ಪೊಲೀಸರಿಂದ ಹೆಲ್ಮೆಟ್ ಜಾಗೃತಿ: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರನಿಗೆ ಗುಲಾಬಿ ನೀಡಿ ಅಭಿನಂದನೆ https://www.karnatakakahale.com/news/19679 Thu, 05 Jun 2025 14:00:29 +0000 https://www.karnatakakahale.com/?p=19679 ಬಳ್ಳಾರಿ, ಜೂ. 5:ಹೆಲ್ಮೆಟ್ ಹಾಕಿಕೊಂಡು ದ್ವಿಚಕ್ರ ವಾಹನ ಸವಾರಿ ಮಾಡಿದಲ್ಲಿ ಸಾವು ಸಂಭವಿಸುವ ಸಂದರ್ಭ ಅತಿ ಕಡಿಮೆ ಇರುತ್ತದೆ, ಕಾರಣ ಎಲ್ಲಾ ದ್ವಿಚಕ್ರ ವಾಹನ ಸವಾರರು ತಪ್ಪದೆ ಹೆಲ್ಮೆಟ್ ಧರಿಸಬೇಕೆಂದು ಸಂಚಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಅಯ್ಯನ್ ಗೌಡ ಪಾಟೀಲ್…

The post ಬಳ್ಳಾರಿ ಪೊಲೀಸರಿಂದ ಹೆಲ್ಮೆಟ್ ಜಾಗೃತಿ: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರನಿಗೆ ಗುಲಾಬಿ ನೀಡಿ ಅಭಿನಂದನೆ appeared first on Karnataka Kahale.

]]>

ಬಳ್ಳಾರಿ, ಜೂ. 5:ಹೆಲ್ಮೆಟ್ ಹಾಕಿಕೊಂಡು ದ್ವಿಚಕ್ರ ವಾಹನ ಸವಾರಿ ಮಾಡಿದಲ್ಲಿ ಸಾವು ಸಂಭವಿಸುವ ಸಂದರ್ಭ ಅತಿ ಕಡಿಮೆ ಇರುತ್ತದೆ, ಕಾರಣ ಎಲ್ಲಾ ದ್ವಿಚಕ್ರ ವಾಹನ ಸವಾರರು ತಪ್ಪದೆ ಹೆಲ್ಮೆಟ್ ಧರಿಸಬೇಕೆಂದು ಸಂಚಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಅಯ್ಯನ್ ಗೌಡ ಪಾಟೀಲ್ ತಿಳಿಸಿದರು.

ಅವರು ಗುರುವಾರ ನಗರದ ಸಂಗಮ್ ಸರ್ಕಲ್, ರಾಯಲ್ ಸರ್ಕಲ್ ಮತ್ತು ದುರ್ಗಮ್ಮ ಗುಡಿ ಸರ್ಕಲ್ ನಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು.                                    ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರಿಗೆ ತಲೆಗೆ ಪೆಟ್ಟಾಗಿ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಇದಕ್ಕೆ ಮೂಲ ಕಾರಣವೆಂದರೆ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ಓಡಿಸುವುದು, ಹೆಲ್ಮೆಟ್ ಹಾಕಿಕೊಂಡು ವಾಹನ ಸವಾರಿ ಮಾಡಿದಲ್ಲಿ ಸಾವು ಸಂಭವಿಸುವ ಸಂದರ್ಭ ಅಂತ ಕಡಿಮೆ ಇರುತ್ತದೆ ಎಂದು ಹೇಳಿದರು.

ಮನೆಯಲ್ಲಿ ನಿಮಗಾಗಿ ಪತಿ ಪತ್ನಿ ಮಕ್ಕಳು ಸೇರಿದಂತೆ ಇಡೀ
ನಿಮ್ಮ ಕುಟುಂಬ ಕಾಯುತ್ತಿರುತ್ತದೆ ನೀವು ಸುರಕ್ಷಿತವಾಗಿ ಆಗಿ ಮನೆಗೆ ಸೇರಬೇಕೆಂದಲ್ಲಿ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಬೇಕೆಂದು ದ್ವಿಚಕ್ರ ವಾಹನ ಸವಾರರಿಗೆ ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಅಯ್ಯನಗೌಡ ಅವರು ಹೆಲ್ಮೆಟ್ ಹಾಕಿಕೊಂಡು ಬಂದ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಗುಲಾಬಿ ಹೂವನ್ನು ನೀಡಿ ಅಭಿನಂದಿಸಿದರು.                ಈ ಸಂದರ್ಭದಲ್ಲಿ ಡಿವೈಎಸ್ಪಿ ಚಂದ್ರಕಾಂತ ರೆಡ್ಡಿ ಸೇರಿದಂತೆ ಹಲವು ಜನ ಪೊಲೀಸ್ ಅಧಿಕಾರಿಗಳು ಇದ್ದರು.

The post ಬಳ್ಳಾರಿ ಪೊಲೀಸರಿಂದ ಹೆಲ್ಮೆಟ್ ಜಾಗೃತಿ: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರನಿಗೆ ಗುಲಾಬಿ ನೀಡಿ ಅಭಿನಂದನೆ appeared first on Karnataka Kahale.

]]>
ಕರ್ತವ್ಯ ಪಾಲನೆಯಲ್ಲಿ ಮಡಿದ ಹುತಾತ್ಮರ ಪ್ರಾಣತ್ಯಾಗ ಸ್ಮರಿಸುವುದು ಆದ್ಯ ಕರ್ತವ್ಯ -ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್ https://www.karnatakakahale.com/news/14107 Sat, 21 Oct 2023 11:39:30 +0000 https://www.karnatakakahale.com/?p=14107 ಬಳ್ಳಾರಿ,ಅ.21: ಕರ್ತವ್ಯ ಮಾಡುತ್ತಲೇ ಪ್ರಾಣತ್ಯಾಗ ಮಾಡಿದ ಎಲ್ಲಾ ಸಮವಸ್ತ್ರಧಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು…

The post ಕರ್ತವ್ಯ ಪಾಲನೆಯಲ್ಲಿ ಮಡಿದ ಹುತಾತ್ಮರ ಪ್ರಾಣತ್ಯಾಗ ಸ್ಮರಿಸುವುದು ಆದ್ಯ ಕರ್ತವ್ಯ -ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್ appeared first on Karnataka Kahale.

]]>

ಬಳ್ಳಾರಿ,ಅ.21: ಕರ್ತವ್ಯ ಮಾಡುತ್ತಲೇ ಪ್ರಾಣತ್ಯಾಗ ಮಾಡಿದ ಎಲ್ಲಾ ಸಮವಸ್ತ್ರಧಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶ ಮತ್ತು ರಾಜ್ಯದ ಕರ್ತವ್ಯ ಪಾಲನೆಯಲ್ಲಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಡೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ನಿಸ್ವಾರ್ಥ ಸೇವೆಯಲ್ಲಿ ಕಳೆದು ಹೋದ ಜೀವಗಳನ್ನು ಸ್ಮರಿಸುತ್ತಾ, ನೋವು-ದುಃಖ ಅನುಭವಿಸಿದ ಅವರ ಕುಟುಂಬಗಳನ್ನು ಮರೆಯಬಾರದು ಎಂದರು.
ಪೊಲೀಸ್ ಪಡೆಗೆ ಬೆಂಬಲ ನೀಡುವ ಮೂಲಕ ಸಬಲೀಕರಣಗೊಳಿಸಬೇಕು. ಪೊಲೀಸ್ ಮತ್ತು ಸಮುದಾಯದ ನಡುವೆ ನಿಕಟ ಸಂಬಂಧ ಹೊಂದಿಕೊಂಡು, ಪರಸ್ಪರ ನಂಬಿಕೆಯ ಮೂಲಕ ಉತ್ತಮ ಮತ್ತು ಸುರಕ್ಷಿತ ನಾಳೆಗಾಗಿ ನಾವೆಲ್ಲರೂ ಸಹಕರಿಸೋಣ ಎಂದು ತಿಳಿಸಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಮಾತನಾಡಿ, 1959 ರ ಅ.21ರಂದು ಸಿಆರ್‍ಪಿಎಫ್ ನ ಡಿವೈಎಸ್‍ಪಿ ಕರಣ್ ಸಿಂಗ್ ಅವರ ನೇತೃತ್ವದಲ್ಲಿ ಒಂದು ಸಿಆರ್‍ಪಿಎಫ್ ತುಕಡಿ ಲಡಾಕ್ ಪ್ರದೇಶದಲ್ಲಿರುವ ಹಾಟ್ ಸ್ಟ್ರಿಂಗ್ ಹತ್ತಿರ ಗಸ್ತು ನಡೆಸುತ್ತಿರುವಾಗ, ಚೈನಾ ದೇಶದ ಸೈನಿಕರು ಸುಸಜ್ಜಿತ ಮದ್ದುಗುಂಡುಗಳು ಮತ್ತು ಆಯುಧಗಳನ್ನು ಹೊಂದಿ, ಹೆಚ್ಚಿನ ಸಂಖ್ಯೆಯಲ್ಲಿ ದಾಳಿ ಮಾಡಿದ್ದರು. ಭಾರತದ ಜವಾನರು ಧೈರ್ಯ ಮತ್ತು ಸಾಹಸದಿಂದ ಚೈನಾ ದೇಶದ ಸೈನಿಕರೊಂದಿಗೆ ಹೋರಾಡಿದರು. ಹೋರಾಟದಲ್ಲಿ 10 ಮಂದಿ ಸಿ.ಆರ್.ಪಿ.ಎಫ್ ಜವಾನರು ವೀರ ಮರಣ ಹೊಂದಿದರು ಹಾಗೂ 9 ಮಂದಿಯನ್ನು ಚೈನಾ ದೇಶದ ಸೈನಿಕರು ದಸ್ತಗಿರಿ ಮಾಡಿದ್ದರು ಎಂದು ಘಟನೆ ವಿವರಿಸಿದರು.
ಸಿಆರ್‍ಪಿಎಫ್ ಜವಾನರ ಧೈರ್ಯ, ಸಾಹಸ ಹಾಗೂ ಆತ್ಮ ಸಮರ್ಪಣೆಯನ್ನು ಭಾರತ ದೇಶದ ಎಲ್ಲಾ ಪ್ರಜೆಗಳು ಇಂದಿಗೂ ಸ್ಮರಿಸುತ್ತಾರೆ. ಅವರ ಸವಿನೆನಪಿಗಾಗಿ ಒಂದು ಸ್ಮಾರಕವನ್ನೂ ಸಹ ನಿರ್ಮಿಸಲಾಗಿದೆ. ವೀರ ಮರಣವನ್ನು ಅಪ್ಪಿದ ಎಲ್ಲಾ ಸಮವಸ್ತ್ರಧಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ನೆನಪು ಹಾಗೂ ಶಾಂತಿಗಾಗಿ ದೇಶಾದ್ಯಂತ ಅ.21ರಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
2022-23 ನೇ ಸಾಲಿನಲ್ಲಿ ಇಡೀ ಭಾರತ ದೇಶದಲ್ಲಿ ಮರಣ ಹೊಂದಿದ ಒಟ್ಟು 189 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಲ್ಲಿ ಕರ್ನಾಟಕ ರಾಜ್ಯದ 16 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರೂ ಸಹ ಕರ್ತವ್ಯ ಪಾಲನೆಯಲ್ಲಿ ಮರಣ ಹೊಂದಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರೆಲ್ಲರೂ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಗುಚ್ಛ ಅರ್ಪಿಸಿದರು. ಹುತಾತ್ಮರ ಗೌರವ ಸೂಚಕವಾಗಿ ಮೂರು ಸಾರಿ ಕುಶಾಲುತೋಪು ಹಾರಿಸುವ ಮೂಲಕ ಸಂತಾಪ ಸೂಚಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ಲೋಕಾಯುಕ್ತ ಪೊಲೀಸ್ ಸೂಪರಿಂಟೆಂಡೆಂಟ್ ಎಂ.ಎನ್.ಶಶಿಧರ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
——-

The post ಕರ್ತವ್ಯ ಪಾಲನೆಯಲ್ಲಿ ಮಡಿದ ಹುತಾತ್ಮರ ಪ್ರಾಣತ್ಯಾಗ ಸ್ಮರಿಸುವುದು ಆದ್ಯ ಕರ್ತವ್ಯ -ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್ appeared first on Karnataka Kahale.

]]>
ಸೋಶಿಯಲ್ ಡಾರ್ವಿನಜಂ(social darvinism)ನ್ನು ಸಂವಿಧಾನ ತಿರಸ್ಕರಿಸಿದೆ, ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು -ಮುಖ್ಯಮಂತ್ರಿ‌ ಸಿದ್ದರಾಮಯ್ಯ https://www.karnatakakahale.com/news/13668 Sun, 17 Sep 2023 04:01:51 +0000 https://www.karnatakakahale.com/?p=13668 ಬೆಂಗಳೂರು ಸೆ 17:ಸೋಶಿಯಲ್ ಡಾರ್ವಿನಜಂ (Social darvinism) ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ…

The post ಸೋಶಿಯಲ್ ಡಾರ್ವಿನಜಂ(social darvinism)ನ್ನು ಸಂವಿಧಾನ ತಿರಸ್ಕರಿಸಿದೆ, ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು -ಮುಖ್ಯಮಂತ್ರಿ‌ ಸಿದ್ದರಾಮಯ್ಯ appeared first on Karnataka Kahale.

]]>

ಬೆಂಗಳೂರು ಸೆ 17:ಸೋಶಿಯಲ್ ಡಾರ್ವಿನಜಂ (Social darvinism) ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ  ಅವರು ಮಾತನಾಡಿದರು.

ಬಲಾಢ್ಯರು ಮಾತ್ರ ಬದುಕಬೇಕು, ಶಕ್ತಿ ಇದ್ದವರಿಗೆ ಮಾತ್ರ ನ್ಯಾಯ ಸಿಗಬೇಕು ಎನ್ನುವ ಡಾರ್ವಿನ್‌ ಸಿದ್ಧಾಂತದ ಮನಸ್ಥಿತಿಗೆ ಪೊಲೀಸ್ ಇಲಾಖೆಯಲ್ಲಿ ಅವಕಾಶ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ಇಲಾಖೆಯ ಮೇಲಿದೆ ಎಂದರು.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ, ಎಲ್ಲಾ ದೇಶಗಳ ಜನ ನೆಲೆಸಿದ್ದಾರೆ. ಅವರೆಲ್ಲರೂ ನೆಮ್ಮದಿಯಿಂದ, ಖುಷಿಯಿಂದ ಇರಬೇಕು ಎಂದು ಸೂಚಿಸಿದರು.

ದೂರು ಬಂದರೆ ಮಾತ್ರ FIR ದಾಖಲಿಸಬೇಕು ಎನ್ನುವ ಮನಸ್ಥಿತಿ ಬಿಟ್ಟುಬಿಡಿ. ಸ್ವಯಂ ಪ್ರೇರಿತ FIR ದಾಖಲಿಸಿಕೊಂಡು ತನಿಖೆ ನಡೆಸಿದರೆ ಪೊಲೀಸ್ ವ್ಯವಸ್ಥೆಗೆ ಘನತೆ ಬರುತ್ತದೆ. ಅಪರಾಧ ಜಗತ್ತಿಗೆ ಭಯವೂ ಮೂಡುತ್ತದೆ ಎಂದು ಹೇಳಿದರು.

ಸಮಾಜಘಾತುಕ ಶಕ್ತಿಗಳ ಜತೆ ಸ್ನೇಹ ಇಟ್ಟುಕೊಂಡಿರುವ ಅಧಿಕಾರಿಗಳನ್ನೂ ನಾನು ಗಮನಿಸಿದ್ದೇನೆ. ಹೀಗಾದಾಗ ಜನ ಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಮೇಲೆ ನಂಬಿಕೆ ಬರಲು ಹೇಗೆ ಸಾಧ್ಯ? ಬೇಲಿಯೇ ಎದ್ದು ಹೊಲ ಮೇಯ್ದರೆ ಸಮಾಜದ ರಕ್ಷಣೆ ಹೇಗೆ ಸಾಧ್ಯ ಎಂದು ಜನ ಸಾಮಾನ್ಯರು ಪ್ರಶ್ನಿಸುತ್ತಾರೆ ಎಂದರು.

ಚಾಳಿಬಿದ್ದ ರೌಡಿಗಳನ್ನು ಗಡಿಪಾರು ಮಾಡುವುದು ಹೆಚ್ಚು ಕ್ರಿಯಾಶೀಲವಾಗಿ ನಡೆಯಬೇಕು. ಅವರಿಗೆ ಸಲೀಸಾಗಿ ಜಾಮೀನು ಸಿಗುವಂಥಾಗಬಾರದು ಎಂದು ತಿಳಿಸಿದರು.

ದೂರುದಾರರಿಗೆ ಧೈರ್ಯ ನೀಡುವ ಕೆಲಸ ಪೊಲೀಸ್ ಠಾಣೆಗಳಲ್ಲಿ ಆಗಬೇಕು. ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತಿರಬೇಕು. ಪೊಲೀಸ್ ಪಡೆ ಹೆಚ್ಚಿಸುವುದೇ ದೊಡ್ಡ ಸಾಧನೆ ಅಲ್ಲ. ಜನರಿಗೆ ಎಷ್ಟು ಸುರಕ್ಷತೆ, ಭದ್ರತೆ, ನ್ಯಾಯ ಸಿಕ್ಕಿದೆ ಎನ್ನುವುದು ಮುಖ್ಯ ಎಂದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ

 

ಇಡಿ ಸರ್ವೀಸ್ ನಲ್ಲಿ ಠಾಣೆಗಳಿಗೆ ಭೇಟಿಯನ್ನೇ ನೀಡದ ಹಿರಿಯ ಅಧಿಕಾರಿಗಳಿದ್ದಾರೆ. ಇದು shame ಅಲ್ಲವೇ?ಜನ ಬದಲಾವಣೆ ನಿರೀಕ್ಷಿಸಿ ನಮ್ಮನ್ನು ಅಧಿಕಾರಕ್ಕೆ ಬಂದಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಪೊಲೀಸ್ ಇಲಾಖೆ ವರ್ತಿಸಬೇಕು. ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳು ಬಂದ್ ಆಗಬೇಕು ಎಂದು ಹೇಳಿದರು.

SP, DG, IG ಗಳು ಹಾಗೂ ಪೊಲೀಸ್ ಆಯುಕ್ತರು ಮನಸ್ಸು ಪಟ್ಟರೆ ಯಾವುದೇ ಸಂಘಟಿತ ಕಾನೂನು ಬಾಹಿರ ಕೃತ್ಯಗಳು ನಡೆಯಲು ಸಾಧ್ಯವಿಲ್ಲ. ಡಿಸಿಪಿ, ಎಸ್.ಪಿ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ ಹೇಳಿ ಎಂದು ಸಿಎಂ ಪ್ರಶ್ನಿಸಿದರು.                                  ಸೈಬರ್ ಅಪರಾಧಗಳ ತಡೆ ಸವಾಲಿನದ್ದಾಗಿದ್ದು ತಂತ್ರಜ್ಞಾನ ಬಳಕೆ ಮತ್ತು ಕೌಶಲ್ಯವನ್ನು ವಿಶೇಷ ತರಬೇತಿಗಳ ಬಳಿಕ ಅಧಿಕಾರಿಗಳು ಹೆಚ್ಚಿಸಿಕೊಳ್ಳಬೇಕು. ಮಹಾತ್ಮಗಾಂಧಿ ಕನಸಿನಂತೆ ಹೆಣ್ಣು ಮಕ್ಕಳು ಮಧ್ಯರಾತ್ರಿಯಲ್ಲೂ ನಿರಾಂತಕವಾಗಿ ಓಡಾಡುವ ರೀತಿಯ ಸಮಾಜ ನಿರ್ಮಿಸೋಣ ಎಂದರು.

ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

—–

The post ಸೋಶಿಯಲ್ ಡಾರ್ವಿನಜಂ(social darvinism)ನ್ನು ಸಂವಿಧಾನ ತಿರಸ್ಕರಿಸಿದೆ, ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು -ಮುಖ್ಯಮಂತ್ರಿ‌ ಸಿದ್ದರಾಮಯ್ಯ appeared first on Karnataka Kahale.

]]>
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲಿ: ಸಂಡೂರಿನ ಚೋರನೂರಿನಲ್ಲಿ ಪ್ರಕರಣ ದಾಖಲು https://www.karnatakakahale.com/news/12966 Wed, 02 Aug 2023 08:50:54 +0000 https://www.karnatakakahale.com/?p=12966 ಬಳ್ಳಾರಿ,ಆ.2: ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ  ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವ ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದೆ. ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವರು ಗೃಹಲಕ್ಷ್ಮಿ…

The post ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲಿ: ಸಂಡೂರಿನ ಚೋರನೂರಿನಲ್ಲಿ ಪ್ರಕರಣ ದಾಖಲು appeared first on Karnataka Kahale.

]]>
ಬಳ್ಳಾರಿ,ಆ.2: ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ  ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವ ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದೆ.
ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪ್ರತಿ ಅರ್ಜಿದಾರರಿಂದ ರೂ.50  ಹಣ ಪಡೆಯುತ್ತಿರುವುದು ಕಂಡುಬಂದಿದೆ. ಸಂಡೂರು ತಾಲೂಕಿನ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ ರೂ.50  ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ  ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ  ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.
ಸಂಡೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳನಾಗಪ್ಪ, ಅಂಕಮನಾಳು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಬಿ.ಕೊಟ್ರಪ್ಪ, ಚೋರನೂರು ಪಟ್ಟಣದ ಕಂದಾಯ ನಿರೀಕ್ಷಕ ಬಿ.ವೀರೇಂದ್ರ ಕುಮಾರ ಅವರು ದಾಳಿ ನಡೆಸಿ ಅಕ್ರಮವನ್ನು ಪತ್ತೆ ಹಚ್ಚಿದ್ದಾರೆ.
——-

The post ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲಿ: ಸಂಡೂರಿನ ಚೋರನೂರಿನಲ್ಲಿ ಪ್ರಕರಣ ದಾಖಲು appeared first on Karnataka Kahale.

]]>
ನೀರ್ಭಿತರಾಗಿ ಮತ ಚಲಾಯಿಸಲು ಪೊಲೀಸ್ ಇಲಾಖೆಯಿಂದ ಬಳ್ಳಾರಿಯಲ್ಲಿ ಪಥ ಸಂಚಲನ https://www.karnatakakahale.com/news/11776 Thu, 06 Apr 2023 14:17:26 +0000 https://www.karnatakakahale.com/?p=11776 ಬಳ್ಳಾರಿ,ಏ.6: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಸಾರ್ವಜನಿಕರು ಆತ್ಮ ಸೈರ್ಯ, ನಿರ್ಭಯ ಮತ್ತು ನೀರ್ಭಿತಿಯಿಂದ ಮತ ಚಲಾಯಿಸಲು ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಭದ್ರತೆಗಾಗಿ ಬುಧವಾರ ನಗರದಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ನಗರದ ಕೋಟೆ ಪ್ರದೇಶದಲ್ಲಿನ ಸೆಂಟ್ ಜೋಸೇಫ್ ಕಾಲೇಜು ಮೈದಾನದಿಂದ ಆರಂಭವಾಗಿ…

The post ನೀರ್ಭಿತರಾಗಿ ಮತ ಚಲಾಯಿಸಲು ಪೊಲೀಸ್ ಇಲಾಖೆಯಿಂದ ಬಳ್ಳಾರಿಯಲ್ಲಿ ಪಥ ಸಂಚಲನ appeared first on Karnataka Kahale.

]]>

ಬಳ್ಳಾರಿ,ಏ.6: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಸಾರ್ವಜನಿಕರು ಆತ್ಮ ಸೈರ್ಯ, ನಿರ್ಭಯ ಮತ್ತು ನೀರ್ಭಿತಿಯಿಂದ ಮತ ಚಲಾಯಿಸಲು ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಭದ್ರತೆಗಾಗಿ ಬುಧವಾರ ನಗರದಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.
ನಗರದ ಕೋಟೆ ಪ್ರದೇಶದಲ್ಲಿನ ಸೆಂಟ್ ಜೋಸೇಫ್ ಕಾಲೇಜು ಮೈದಾನದಿಂದ ಆರಂಭವಾಗಿ ಕೌಲ್ ಬಜಾರ್ ರಸ್ತೆಯಿಂದ ಮೋತಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಾಯಲ್ ಸರ್ಕಲ್ ನಿಂದ ಬೆಂಗಳೂರು ರಸ್ತೆ ಮಾರ್ಗವಾಗಿ ಎಪಿಎಂಸಿ ಮಾರುಕಟ್ಟೆವರೆಗೆ ನಡೆಯಿತು.


ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜೀತ್ ಕುಮಾರ್ ಭಂಡಾರು ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಟರಾಜ, ಐಟಿಬಿಟಿ ಸೆಕೆಂಡ್ ಇನ್ ಕಮಾಂಡೆಂಟ್ ಅಧೋಲಿ ಚೆಸ್ಸಿ, ಐಟಿಬಿಟಿ ಡೆಪ್ಯೂಟಿ ಕಮಾಂಡೆಂಟ್ ಪ್ರವೀಣ್ ಸಿಂಗ್, ಅಸಿಸ್ಟೆಂಟ್ ಕಮಾಂಡೆಂಟ್ ಡಾ.ಪ್ರಕಾಶ್ ಕುಮಾರ, ಅಭಿಮನ್ಯು ಕುಮಾರ್, ಐಟಿಬಿಟಿ ಅಸಿಸ್ಟೆಂಟ್ ಕಮಾಂಡೆಂಟ್ ಗಜೇಂದ್ರ ಪಾಲ್ ಸಿಂಗ್ ಒಳಗೊಂಡಂತೆ ಜಿಲ್ಲೆಯ ನಾಲ್ಕು ಡಿಎಎಸ್ ಪಿ, 10 ಜನ ಇನ್ಸ್ಪೆಕ್ಟರ್, 25 ಜನ ಪಿಎಸ್ಐ, 200 ಜನ ಸಿಐಪಿಎಫ್ ಪೊಲೀಸ್ ಸಿಬ್ಬಂದಿ, ಯವರು 5 ಡಿಎಅರ್ ಪ್ಲೋಟೋನುಗಳು, 200 ಜನ ನಾಗರಿಕ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡಂತೆ ಜಾಥಾ ನಡೆಸಿದರು.


ಪಥ ಸಂಚಲನದಲ್ಲಿ ಬಳ್ಳಾರಿ ವಲಯದ ಐಜಿಪಿ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಭಾಗವಹಿಸಿದ್ದರು.
———

The post ನೀರ್ಭಿತರಾಗಿ ಮತ ಚಲಾಯಿಸಲು ಪೊಲೀಸ್ ಇಲಾಖೆಯಿಂದ ಬಳ್ಳಾರಿಯಲ್ಲಿ ಪಥ ಸಂಚಲನ appeared first on Karnataka Kahale.

]]>