The post ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಪ್ರಸ್ತಾವನೆ: ಬಸವರಾಜ ರಾಯರಡ್ಡಿ appeared first on Karnataka Kahale.
]]>ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ವಿಧಾನಸಭೆಯಲ್ಲಿ ಚರ್ಚೆ ನಡೆಯುವ ವೇಳೆ ಮಾತನಾಡಿದರು.
ಉತ್ತರ ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಮತ್ತು ಕೈಗಾರಿಕೆಗಳ ಬೇಡಿಕೆಯನುಸಾರವಾಗಿ ಉತ್ತಮ ತರಬೇತಿ ಹೊಂದಿರುವ ಮಾನವ ಸಂಪನ್ಮೂಲ ಒದಗಿಸಲು ಆದ್ಯತೆ ದೊರಕಿಸುವ ನಿಟ್ಟಿನಲ್ಲಿ ಹಾಗೂ ಈ ಭಾಗದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಸಿಗುವಂತೆ ಮಾಡಲು ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸುವ ಉದ್ದೇಶ ಹೊಂದಿದ್ದು, ಬರುವ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಇದನ್ನು ಘೋಷಿಸುವ ನಿರೀಕ್ಷೆ ಇದೆ.
ಉತ್ತರ ಕರ್ನಾಟಕದಲ್ಲಿ ಒಟ್ಟು 14 ಜಿಲ್ಲೆಗಳಿದ್ದು, ಈ ಪೈಕಿ ತಲಾ 07 ಜಿಲ್ಲೆಗಳು ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ವ್ಯಾಪ್ತಿಯಲ್ಲಿವೆ. ದಾವಣಗೆರೆಯಿಂದ ಚಾಮರಾಜನಗರದವರೆಗೆ ಮೈಸೂರು ಮಹಾರಾಜರು ಆಡಳಿತ ಕೊಟ್ಟಿದ್ದು, ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಅವರು ಕೊಟ್ಟ ಆದ್ಯತೆಯಿಂದಾಗಿ ಈ ಭಾಗಗಳು ಶಿಕ್ಷಣ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರದಲ್ಲಿ ಮುಂದಿವೆ. ಆದರೆ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಪ್ರದೇಶಗಳು ಮದ್ರಾಸ್ ಪ್ರೆಸಿಡೆನ್ಸಿ ಹಾಗೂ ನಿಜಾಮ್ ಆಡಳಿತವಿತ್ತು.
ಹೈದ್ರಾಬಾದ್-ಕರ್ನಾಟಕ ಪ್ರದೇಶದಲ್ಲಿ ನಿಜಾಮರು ಸುಮಾರು 250 ವರ್ಷ ಆಡಳಿತ ನಡೆಸಿದರು, ಇವರು ಶಿಕ್ಷಣ ಮತ್ತು ನೀರಾವರಿಗೆ ಯಾವುದೇ ಆದ್ಯತೆ ಕೊಡಲಿಲ್ಲ. ಈ ಭಾಗದಲ್ಲಿ ಶಾಲೆ, ಕಾಲೇಜುಗಳನ್ನು ಸ್ಥಾಪಿಸದ ಕಾರಣದಿಂದಾಗಿ ಈ ವ್ಯಾಪ್ತಿಯ ಜಿಲ್ಲೆಗಳು ಶಿಕ್ಷಣದಲ್ಲಿ ತೀವ್ರ ಹಿಂದುಳಿಯಲು ಕಾರಣವಾಯಿತು.
ರಾಜಸ್ಥಾನ ಬಿಟ್ಟರೆ, ಉತ್ತರ ಕರ್ನಾಟಕದ 14 ಜಿಲ್ಲೆಗಳು ಅತ್ಯಂತ ಒಣ ಪ್ರದೇಶ ಹೊಂದಿವೆ. ಇಲ್ಲಿ ಮಳೆ ಹೆಚ್ಚು ಆಗಲ್ಲ, ಹಾಗೂ ಅಂತರ್ಜಲವೂ ಕಡಿಮೆ ಇದೆ. ಸಾಕ್ಷರತೆಯಲ್ಲಿ ರಾಜ್ಯದ ಸರಾಸರಿ 75.36 ಇದ್ದರೆ, ಉತ್ತರ ಕರ್ನಾಟಕ ಜಿಲ್ಲೆಗಳ ಪ್ರಮಾಣ 65 ಕ್ಕಿಂತ ಕಡಿಮೆ ಇದೆ. ಹೀಗಾಗಿ ಉತ್ತರ ಕರ್ನಾಟಕದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ.
ಏಷ್ಯನ್ ಡೆವಲಪ್ ಮೆಂಟ್ ಬ್ಯಾಂಕ್ ನಿಂದ ಆರ್ಥಿಕ ನೆರವು ಪಡೆದು 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದ್ದು, ಈ ಭಾಗದ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಕಾರ್ಯವಾಗಿದೆ. ಇದರ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 400 ಹೊಸ ಕೆ.ಪಿ.ಎಸ್. ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಮಕ್ಕಳಿಗೆ ಇಂಗ್ಲೀಷ್ ಭಾಷೆಯ ಜ್ಞಾನ ದೊರಕುವಂತಾಗಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 35 ಎಲ್‌ಕೆಜಿ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ. ಹೀಗೆ ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ, ಈ ಭಾಗದಲ್ಲಿಯೂ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸುವ ಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ಐಐಟಿ ಯಲ್ಲಿ ರಾಜ್ಯದವರಿಗೆ ಶೇ. 50 ಮೀಸಲು ಕಲ್ಪಿಸಲು ಸಹಕಾರ ನೀಡುವಂತೆ ಬಸವರಾಜ ರಾಯರಡ್ಡಿ ಅವರು ಪ್ರತಿಪಕ್ಷದವರಿಗೆ ಮನವಿ ಮಾಡಿದರು. ಧಾರವಾಡದಲ್ಲಿ ಐಐಟಿ ಅನ್ನು ಪ್ರಾರಂಭಿಸಲು ನಮ್ಮ ರಾಜ್ಯದಿಂದ ಕೇಂದ್ರಕ್ಕೆ 2 ಸಾವಿರ ಕೋಟಿ ರೂಪಾಯಿಗಳೂ ಹೆಚ್ಚಿನ ಮೌಲ್ಯದ ಭೂಮಿಯನ್ನು ಉಚಿತವಾಗಿ ಕೊಟ್ಟಿದ್ದೇವೆ. ಬೇರೆ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಾಗಿ ಇಲ್ಲಿ ಪ್ರವೇಶ ಪಡೆಯುತ್ತಾರೆ. ಹೀಗಾಗಿ ಐಐಟಿ ಯಿಂದ ಕರ್ನಾಟಕಕ್ಕೆ ಯಾವುದೇ ಉಪಯೋಗ ಆಗುತ್ತಿಲ್ಲ. ರಾಜ್ಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಐಐಟಿ ಯಲ್ಲಿ ಶೇ. 50 ರಷ್ಟು ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲು ನೀಡುವಂತೆ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಒಪ್ಪಿಗೆ ದೊರೆಯಲಿಲ್ಲ. ಹೀಗಾಗಿ ಮುಖ್ಯಮಂತ್ರಿಗಳಿಂದ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲು ಸಿದ್ಧರಿದ್ದು, ಪ್ರತಿಪಕ್ಷದವರು ಕೇಂದ್ರ ಸರ್ಕಾರದ ಮನವೊಲಿಸಿ, ಒಪ್ಪಿಗೆ ದೊರಕಿಸಿದಲ್ಲಿ, ಕರ್ನಾಟಕದ ಹೆಚ್ಚಿನ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ಕಲ್ಯಾಣ ಕರ್ನಾಟಕದ ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ 970 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ನೂತನವಾಗಿ ರಚಿಸಲಾಗಿರುವ ತಾಲ್ಲೂಕುಗಳಿಗೆ 100 ಹಾಸಿಗೆ ಆಸ್ಪತ್ರೆಯನ್ನು ಮಂಜೂರು ಮಾಡಲಾಗಿದೆ. ಅಲ್ಲದೆ ಬಾಣಂತಿಯರಿಗೆ ಉತ್ತಮ ಪೌಷ್ಠಿಕ ಆಹಾರ ನೀಡುವ ವಿಶೇಷ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಿಂದ ಉತ್ತರ ಕರ್ನಾಟಕದಲ್ಲಿ ಶಿಶು ಮರಣ ಹಾಗೂ ತಾಯಿ ಮರಣ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಈ ಕ್ರಮ ಶ್ಲಾಘನೀಯವಾಗಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.
——
The post ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಪ್ರಸ್ತಾವನೆ: ಬಸವರಾಜ ರಾಯರಡ್ಡಿ appeared first on Karnataka Kahale.
]]>The post ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ನೇಮಕ: ಎಸ್.ಎಲ್.ಪಿ. ದಾಖಲಿಸಲು ಕ್ರಮ -ಸಚಿವ ಡಾ. ಎಂ ಸಿ ಸುಧಾಕರ್ appeared first on Karnataka Kahale.
]]>ಈ ಕುರಿತು ನುಡಿ ಕರ್ನಾಟಕ ವೆಬ್ ಸೈಟ್ ವರದಿ ಪ್ರಕಟಿಸಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆ ಗೆ ಉತ್ತರಿಸಿರುವ ಸಚಿವರು, 2025ರ ಅ. 8ರಂದು ಉಚ್ಚ ನ್ಯಾಯಾಲಯದ ಪೀಠವು ನೀಡಿರುವ ತೀರ್ಪಿನ ಕುರಿತು ಕಾನೂನು ಅಭಿಪ್ರಾಯ ಪಡೆದು ಕಾರ್ಯಕಾರಿ ಆದೇಶವನ್ನು ಹೊರಡಿಸಲಾಗಿದೆ ಎಂದು ಉತ್ತರಿಸಿದ್ದಾರೆ.

ಶಾಸಕ ಮಧು ಜಿ.ಮಾದೇಗೌಡ ಅವರು, ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡಿಮೆ ಗೌರವಧನ ಪಡೆದು ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಯುಜಿಸಿ ಮಾನದಂಡಗಳ ಅರ್ಹತೆ ಪಡೆಯದ ಅತಿಥಿ ಉಪನ್ಯಾಸಕರನ್ನು ಮಾನವೀಯ ನೆಲೆಗಟ್ಟಿನಲ್ಲಿ ಮುಂದುವರೆಸುವ ಹಾಗೂ ಹೈಕೋರ್ಟ್ ತೀರ್ಪಿನ ಅನ್ವಯ ಕಾನೂನು ತೊಡಕು ಎದುರಾಗದಂತೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಕ್ರಮ ಕುರಿತು ಪ್ರಶ್ನೆ ಕೇಳಿದ್ದರು.
ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ರಿಟ್ ಅಫೀಲು ಅರ್ಜಿ ಕುರಿತು ತೀರ್ಪು ನೀಡಿ ಅತಿಥಿ ಉಪನ್ಯಾಸಕರ ಆಯ್ಕೆಗೆ ಯುಜಿಸಿ ವಿದ್ಯಾರ್ಹತೆ (ಎನ್.ಇ.ಟಿ/ಎಸ್.ಎಲ್.ಇ.ಟಿ/ಪಿ.ಎಚ್.ಡಿ) ಮಾನದಂಡವನ್ನು ಅನುಸರಿಸುವಂತೆ ಆದೇಶಿಸಿತ್ತು. ಈ ತೀರ್ಪನ್ನು ವಿಭಾಗೀಯ ಪೀಠವು ಎತ್ತಿ ಹಿಡಿದು, 2025-26ನೇ ಸಾಲಿನಿಂದ ಯುಜಿಸಿ ನಿಯಮಗಳನ್ವಯ ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿತ್ತು.
(ಸುದ್ದಿ ಕೃಪೆ: ನುಡಿ ಕರ್ನಾಟಕ)
The post ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ನೇಮಕ: ಎಸ್.ಎಲ್.ಪಿ. ದಾಖಲಿಸಲು ಕ್ರಮ -ಸಚಿವ ಡಾ. ಎಂ ಸಿ ಸುಧಾಕರ್ appeared first on Karnataka Kahale.
]]>The post ಹಿಂದುಳಿದ ವರ್ಗಗಳ ಸಾಮಾಜಿಕ ಸಮೀಕ್ಷೆ: ಬಳ್ಳಾರಿ ಜಿಲ್ಲೆಯಲ್ಲಿ 1.45 ಲಕ್ಷ ಮನೆ ಪೂರ್ಣ, ಶೇ.38 ರಷ್ಟು ಪ್ರಗತಿ, ಸಮೀಕ್ಷೆ ಕಾರ್ಯಕ್ಕೆ ವೇಗ ನೀಡಿ -ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನ appeared first on Karnataka Kahale.
]]>
ಬಳ್ಳಾರಿ,ಸೆ.30: ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯದಲ್ಲಿ ಗುರುತಿಸಲಾದ 3.85 ಲಕ್ಷ ಮನೆಗಳ ಪೈಕಿ 1.45 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಈವರೆಗೆ ಶೇ.38 ರಷ್ಟು ಪ್ರಗತಿಯಾಗಿದ್ದು, ರಾಜ್ಯದ ಕ್ರಮಾಂಕದಲ್ಲಿ 15 ನೇ ಸ್ಥಾನದಲ್ಲಿದ್ದೇವೆ. ಇನ್ನೂ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಸಮೀಕ್ಷೆಯ ನೋಡಲ್ ಅಧಿಕಾರಿಗಳು, ವರ್ಚುವಲ್ ಮೂಲಕ ಸಂಡೂರು ತಾಲ್ಲೂಕು ತಹಶೀಲ್ದಾರರೊಂದಿಗೆ ಸಮೀಕ್ಷೆಯ ಪ್ರಗತಿ ಸಭೆ ನಡೆಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯ ಆರಂಭಗೊಂಡು 8 ದಿನಗಳಾಗಿವೆ. ಇನ್ನುಳಿದ ದಿನಗಳಲ್ಲಿ ನಿಗದಿತ ಗುರಿ ತಲುಪಲು ಮತ್ತು ಜಿಲ್ಲೆಯನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರಿಸಲು ಸೂಕ್ತ ತಾಂತ್ರಿಕ ಯೋಜನೆ ರೂಪಿಸಿ ಗಣತಿದಾರರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕಂಪ್ಲಿ, ಕುರುಗೋಡು, ಸಿರುಗುಪ್ಪ ತಾಲ್ಲೂಕುಗಳು ಸಮೀಕ್ಷಾ ಕಾರ್ಯ ಅಂತ್ಯಕ್ಕೆ ನಿಗದಿತ ಗುರಿ ತಲುಪಲಿವೆ. ಸಂಡೂರು ಮತ್ತು ಬಳ್ಳಾರಿ ತಾಲ್ಲೂಕುಗಳಿಂದ ನಿರೀಕ್ಷೆಗಿಂತ ಫಲಿತಾಂಶ ಲಭಿಸುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಜೊತೆಗೂಡಿ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಂಡೂರು ಭಾಗದಲ್ಲಿ 79 ಸಾವಿರ ಮನೆಗಳ ಪೈಕಿ ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ತಲಾ 10 ಸಾವಿರ ಮನೆಗಳಿದ್ದು, ಅದರಲ್ಲಿ ತೋರಣಗಲ್ಲಿನಲ್ಲಿ ಜಿಂದಾಲ್ ವ್ಯಾಪ್ತಿಯಲ್ಲಿ 6 ಟೌನ್ ಶಿಪ್‌ಗಳಿವೆ. ಇಲ್ಲಿ ಸಮೀಕ್ಷಾ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಹಾಗಾಗಿ ಟೌನ್ ಶಿಪ್ ಗಳಲ್ಲಿ ಶಿಬಿರ (ಕ್ಯಾಂಪ್) ಆಯೋಜಿಸುವ ಮೂಲಕ ಈಗಾಗಲೇ ಗುರುತಿಸಲಾದ ಮನೆಗಳನ್ನು ಸಮೀಕ್ಷಾ ಕಾರ್ಯಕ್ಕೆ ಒಳಪಡುವಂತೆ ತಿಳಿಸಬೇಕು ಎಂದರು. ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಪ್ರತಿ ಎರಡು ವಾರ್ಡ್ ಗಳಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಿದೆ. ಆದರೂ ಪ್ರಗತಿ ಕಾಣುತ್ತಿಲ್ಲ. ಎಂದು ಬೇಸರ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ನಿಲ್ಯಕ್ಷ ತೋರದೇ ಕಾಳಜಿ ವಹಿಸಿ ಕೆಲಸ ಮಾಡಬೇಕು. ಸ್ಪಂದಿಸದಿರುವ ಸೂಪರ್ ವೈಸರ್ ಗಳ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಸಂಡೂರಿನ ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ಹೊರ ರಾಜ್ಯದಿಂದ ಬಂದು ಒಂದು ಮನೆಯಲ್ಲಿ 10 ಕ್ಕೂ ಹೆಚ್ಚು ಜನ ವಾಸವಿರುತ್ತಾರೆ. ಅಲ್ಲಿ ಒಬ್ಬರ ಆಧಾರ್ ಕಾರ್ಡ್ ಮಾಹಿತಿ ಪಡೆದುಕೊಂಡು ಗಣತಿ ನಡೆಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಆಸ್ಪದ ನೀಡುವಂತಿಲ್ಲ ಎಂದು ಸಂಡೂರು ತಾಲ್ಲೂಕು ತಹಶೀಲ್ದಾರರಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಒಟ್ಟು 171 ಗಣತಿದಾರರಿದ್ದು, ಅದರಲ್ಲಿ ಕೇವಲ 36 ಗಣತಿದಾರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಉಳಿದವರು ಸ್ಪಂದಿಸುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಅಂತಹವರನ್ನು ಗುರುತಿಸಿ ಅಮಾನತ್ತಿಗೆ ಶಿಫಾರಸ್ಸು ಮಾಡಬೇಕು. ಇನ್ನಿತರೆ ಸಿಬ್ಬಂದಿ ಇದಲ್ಲಿ ಅವರನ್ನು ನಿಯೋಜನೆ ಮಾಡಿಕೊಳ್ಳಬೇಕು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರೊಂದಿಗೆ ಸಮನ್ವತೆ ಸಾಧಿಸಬೇಕು ಎಂದು ತಿಳಿಸಿದರು.
ತಾಲ್ಲೂಕುವಾರು ಪ್ರಗತಿ(: ಬಳ್ಳಾರಿ ತಾಲ್ಲೂಕು: 1.75 ಲಕ್ಷ ಮನೆಗಳ ಪೈಕಿ 53 ಸಾವಿರ ಮನೆ ಪೂರ್ಣ.
ಕಂಪ್ಲಿ: 33 ಸಾವಿರ ಮನೆಗಳ ಪೈಕಿ 16 ಸಾವಿರ ಮನೆ ಪೂರ್ಣ.
ಕುರುಗೋಡು: 27 ಸಾವಿರ ಮನೆಗಳ ಪೈಕಿ 15 ಸಾವಿರ ಮನೆ ಪೂರ್ಣ.
ಸಂಡೂರು: 79 ಸಾವಿರ ಮನೆಗಳ ಪೈಕಿ 27 ಸಾವಿರ ಮನೆ ಪೂರ್ಣ.
ಸಿರುಗುಪ್ಪ: 65 ಸಾವಿರ ಮನೆಗಳ ಪೈಕಿ 35 ಸಾವಿರ ಮನೆ ಪೂರ್ಣ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
—–
The post ಹಿಂದುಳಿದ ವರ್ಗಗಳ ಸಾಮಾಜಿಕ ಸಮೀಕ್ಷೆ: ಬಳ್ಳಾರಿ ಜಿಲ್ಲೆಯಲ್ಲಿ 1.45 ಲಕ್ಷ ಮನೆ ಪೂರ್ಣ, ಶೇ.38 ರಷ್ಟು ಪ್ರಗತಿ, ಸಮೀಕ್ಷೆ ಕಾರ್ಯಕ್ಕೆ ವೇಗ ನೀಡಿ -ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನ appeared first on Karnataka Kahale.
]]>The post ವಿಜಯನಗರ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್ ಮನ್ನಿಕೇರಿ ಅಧಿಕಾರ ಸ್ವೀಕಾರ appeared first on Karnataka Kahale.
]]>
ವಿಜಯನಗರ(ಹೊಸಪೇಟೆ), ಸೆ.10: ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಕವಿತಾ ಎಸ್ ಮನ್ನಿಕೇರಿ ಐಎಎಸ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ದಿವಾಕರ ಅವರು ಕವಿತಾ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
ಪರಿಚಯ: ಕೆಎಎಸ್ ಉತ್ತೀರ್ಣರಾದ ಬಳಿಕ 2007ರಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಮಂಡ್ಯದಲ್ಲಿ ಸೇವೆ ಆರಂಭಿಸಿದ ಕನ್ನಡತಿ ಕವಿತಾ ಮನ್ನಿಕೇರಿ ಅವರು ಬಳಿಕ ಸೇಡಂನ ಉಪವಿಭಾಗಾಧಿಕಾರಿಯಾದರು. ಯಾದಗಿರಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಅನುಭವ ಗಳಿಸಿ ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಕವಿತಾ ಅವರು 2012ರಲ್ಲಿ ಐಎಎಸ್ ಅಧಿಕಾರಿಯಾಗಿ ಬಡ್ತಿ ಪಡೆದರು. ವಿಜಯಪುರ ಎಡಿಸಿಗಳಾಗಿ ಬಳಿಕ ಮಹಿಳಾ ಆಯೋಗದ ಕಾರ್ಯದರ್ಶಿಯಾಗಿ, ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಕೆಎಸ್‌ಆರ್‌ಟಿಸಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ 2 ವರ್ಷ ಕರ್ತವ್ಯ ನಿರ್ವಹಿಸಿ ನಂತರ ಕೆಎಚ್‌ಬಿ ಆಯುಕ್ತರಾಗಿ ಆಡಳಿತದಲ್ಲಿ ಅಪಾರ ಅನುಭವಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೂ ಕವಿತಾ ಅವರು ಪಾತ್ರರಾಗಿದ್ದಾರೆ.
The post ವಿಜಯನಗರ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್ ಮನ್ನಿಕೇರಿ ಅಧಿಕಾರ ಸ್ವೀಕಾರ appeared first on Karnataka Kahale.
]]>The post ಬಳ್ಳಾರಿ ನಗರದ ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ಒಂದು ಲಕ್ಷ ಸಹಿ ಸಂಗ್ರಹ -ಬಿ ಎನ್ ಎಚ್ ಎಸ್ ಸೋಮಶೇಖರ್ appeared first on Karnataka Kahale.
]]>ನಗರದ ಕುಡಿಯುವ ನೀರಿನ ನಳಗಳಲ್ಲಿ ಚರಂಡಿ ನೀರು ಮಿಶ್ರಣವಾಗುವುದನ್ನು ತಡೆಯಬೇಕು. ನಗರಕ್ಕೆ ರಿಂಗ್ ರಸ್ತೆ ನಿರ್ಮಾಣ, ಮೋತಿ ಬ್ರಿಡ್ಜ್ ಅಗಲೀಕರಣ, ಸುಧಾ ಕ್ರಾಸ್ ಮೇಲ್ ಸೇತುವೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು. ನಗರದ ಪ್ರಮುಖ ಸ್ಥಳಗಳಲ್ಲಿ ಕಾಮಗಾರಿಗಳನ್ನು ಮುಗಿಸಿದ ಮೇಲೆ ಮತ್ತೊಂದನ್ನು ಕೈಗೊಳ್ಳುವುದು ವೈಜ್ಞಾನಿಕ ಆದರೆ ಅನಾವಶ್ಯಕ ಕಾಮಗಾರಿಗಳನ್ನು ಆರಂಭಿಸುತ್ತಿದ್ದಾರೆ. ಇದರಿಂದ ಬಳ್ಳಾರಿ ನಗರದ ಸಾರ್ವಜನಿಕರಿಗೆ ಬಹಳ ತೊಂದರೆ ಆಗುತ್ತಿದೆ ಎಂದು ದೂರಿದರು. ನಗರದ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಹೋರಾಟ ಸಮಿತಿ ನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿಗಳು ಸೇರಿದಂತೆ ಹಲವರಿಗೆ ಮನವಿ ಮಾಡಿದೆ. ಆದರೆ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದರು.
ಈ ಹಿನ್ನಲೆಯಲ್ಲಿ ಜು. 27ರಂದು ಬೃಹತ್ ಸಮಾವೇಶವನ್ನು ನಗರದಲ್ಲಿ ಸಂಘಟಿಸಲು ನಿರ್ಧರಿಸಲಾಗಿದೆ, ಈ ಹೋರಾಟಕ್ಕೆ ಬಳ್ಳಾರಿಯ ನಾಗರಿಕರು ಎಲ್ಲ ರೀತಿಯಿಂದ ಬೆಂಬಲಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಉಪನ್ಯಾಸಕ ಯು ನರಸಣ್ಣ, ಮುರ್ಚಾಜ್ ಸಾಬ್, ಡಾ. ಪ್ರಮೋದ್, ಎಸ್ ಯು ಸಿ ಐ ನ ಗೋವಿಂದ, ವಿದ್ಯಾ ಮತ್ತಿತರರು ಇದ್ದರು.
The post ಬಳ್ಳಾರಿ ನಗರದ ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ಒಂದು ಲಕ್ಷ ಸಹಿ ಸಂಗ್ರಹ -ಬಿ ಎನ್ ಎಚ್ ಎಸ್ ಸೋಮಶೇಖರ್ appeared first on Karnataka Kahale.
]]>The post ಯಶಸ್ವೀಭವ, ವಿಜಯೀಭವ” ಯಶಸ್ವಿ ಜೈಸ್ವಾಲ್..! ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! -ಸುದರ್ಶನ್ ಗೌಡ, ಬೆಂಗಳೂರು appeared first on Karnataka Kahale.
]]>What a story..!
An amazing journey of Yashaswi Jaiswal..!

ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ ಅಂಗಡಿ. ಆ ಅಂಗಡಿ ಮಾಲೀಕನಿಗೊಬ್ಬ ಮಗ.. ಕ್ರಿಕೆಟ್ ಹುಚ್ಚು ಹಿಡಿಸಿಕೊಂಡಿದ್ದವನಿಗೆ ಯಾರೋ ಹೇಳಿದ್ದಂತೆ, “ನೀನು ಇಲ್ಲಿಯೇ ಇದ್ದರೆ ಕ್ರಿಕೆಟರ್ ಆಗಲು ಸಾಧ್ಯವಿಲ್ಲ, ಮುಂಬೈಗೆ ಹೋಗು” ಎಂದು. 10ನೇ ವಯಸ್ಸಿನಲ್ಲಿ ತಂದೆಯ ಜೊತೆ ಮುಂಬೈಗೆ ಬಂದಿಳಿದಿದ್ದ ಆ ಹುಡುಗ.
ಮುಂಬೈ ಎಂದರೆ ಅದೊಂದು ಮಹಾಸಾಗರ. ಆ ಸಾಗರದಲ್ಲಿ ಅಪ್ಪಳಿಸಿ ಬರುವ ಅಲೆಗಳ ಮುಂದೆ ಈಜಲು ನಿಂತವನ ಹೆಸರು ಯಶಸ್ವಿ ಭೂಪೇಂದ್ರ ಕುಮಾರ್ ಜೈಸ್ವಾಲ್.
ಮಗನನ್ನು ಮುಂಬೈಗೆ ಕರೆ ತಂದ ತಂದೆಗೆ ಇದ್ದ ಚಿಂತೆ ‘ಈ ಮಹಾನಗರದಲ್ಲಿ ಮಗ ಹೇಗೆ ಇರಬಲ್ಲ’ ಎಂದು.
‘’ನಾನು ಇಲ್ಲಿ ಅಂಕಲ್ ಜೊತೆ ಇರುತ್ತೇನೆ” ಅಂದಿದ್ದ ಜೈಸ್ವಾಲ್. ಆ ಅಂಕಲ್ ಏನೂ ಮುಂಬೈನಲ್ಲಿ ಕೋಟೆ ಕಟ್ಟಿಕೊಂಡವನಲ್ಲ. ಒಬ್ಬ ಬಡ ವ್ಯಾಪಾರಿ.
10 ವರ್ಷದ ಹುಡುಗನನ್ನು ಹಾಲಿನ ಡೈರಿ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿಸುತ್ತಾನೆ. ಅಲ್ಲೇ ಪುಟ್ಟ ಕೋಣೆಯೊಂದರಲ್ಲಿ ವಾಸ. ಬೆಳಗ್ಗೆ 5 ಗಂಟೆಗೆ ಎದ್ದು ಅಂಗಡಿಯನ್ನು ಶುಚಿಗೊಳಿಸಿ ಕ್ರಿಕೆಟ್ ಅಭ್ಯಾಸಕ್ಕೆ ಹೊರಟು ಬಿಡುತ್ತಿದ್ದ ಯಶಸ್ವಿ ಜೈಸ್ವಾಲ್. ಅಭ್ಯಾಸ ಮುಗಿಸಿ ಬಂದವನು ರಾತ್ರಿಯವರೆಗೆ ಅಂಗಡಿಯಲ್ಲಿ ಕೆಲಸ ಮಾಡಬೇಕಿತ್ತು.
ಬೆಳಗ್ಗೆಯಿಂದ ಕ್ರಿಕೆಟ್ ಆಡಿ ದಣಿದು ಬರುತ್ತಿದ್ದ ಪುಟ್ಟ ಬಾಲಕ ಇದನ್ನೆಲ್ಲಾ ಹೇಗೆ ತಾನೇ ಸಹಿಸಿಕೊಳ್ಳಬಲ್ಲ..?
ಒಂದು ದಿನ ಡೈರಿಯ ಮಾಲೀಕ, ‘ಇವನು ಕೆಲಸಕ್ಕೆ ಬರುವವನಲ್ಲ’ ಎಂದು ಜೈಸ್ವಾಲ್’ನನ್ನು ಓಡಿಸಿ ಬಿಟ್ಟ.
ದೊಡ್ಡ ನಗರದಲ್ಲಿ ಸಣ್ಣ ಹುಡುಗ ಏಕಾಂಗಿಯಾಗಿ ನಿಂತಿದ್ದ. ಗುರುತು ಪರಿಚಯವಿಲ್ಲದ ಜನ. ಗೊತ್ತು ಗುರಿಯಿಲ್ಲದ ಬದುಕು.
ಬಟ್ಟೆಗಳನ್ನು ಪ್ಯಾಕ್ ಮಾಡಿಕೊಂಡವನೇ ಮುಂಬೈನ ಆಜಾದ್ ಮೈದಾನಕ್ಕೆ ಬಂದ. ಅಲ್ಲಿ ಮುಸ್ಲಿಂ ಯುನೈಟೆಡ್ ಎಂಬ ಕ್ರಿಕೆಟ್ ಕ್ಲಬ್ ಇದೆ. ‘’ನಾನು ಕ್ರಿಕೆಟ್ ಆಡಬೇಕು, ದಯವಿಟ್ಟು ಸಹಾಯ ಮಾಡಿ’’ ಎಂದು ಯಶಸ್ವಿ ಅಂಗಲಾಚುತ್ತಾನೆ.
‘’ನಮ್ಮ ಕ್ಲಬ್ ಪರ ಒಂದು ಮ್ಯಾಚ್ ಆಡುವೆಯಂತೆ.
ಚೆನ್ನಾಗಿ ಆಡಿದರೆ ಇಲ್ಲೇ ವಾಸಕ್ಕೆ ವ್ಯವಸ್ಥೆ ಮಾಡುತ್ತೇವೆ’’ ಎಂಬ ಭರವಸೆ ಆ ಕ್ರಿಕೆಟ್ ಕ್ಲಬ್’ನಿಂದ ಸಿಕ್ಕಿತು.
ಒಂದೇ ಒಂದು ಅವಕಾಶಕ್ಕಾಗಿ ಕಾದಿದ್ದ ಹುಡುಗ, ಸಿಕ್ಕ ಅವಕಾಶದಲ್ಲಿ ಹಿಗ್ಗಾಮುಗ್ಗ ಬಾರಿಸಿ ಬಿಟ್ಟ.
ಯಶಸ್ವಿ ಜೈಸ್ವಾಲ್’ನ ಆಟ ನೋಡಿ ಮೆಚ್ಚಿದ ಮುಸ್ಲಿಂ ಯುನೈಟೆಡ್ ಕ್ಲಬ್’ನ ಕೋಚ್ ಇಮ್ರಾನ್, ಹುಡುಗನನ್ನು ಒಂದು ಟೆಂಟ್ ಬಳಿ ಕರೆ ತರುತ್ತಾರೆ. ‘ಇಲ್ಲೇಕೆ ಕರೆ ತಂದರು’ ಎಂದು ಯೋಚಿಸುತ್ತಿದ್ದ ಹುಡುಗನಿಗೆ ಆಮೇಲೆ ಗೊತ್ತಾಗಿದ್ದು, “ನನ್ನ ಮುಂದಿನ ವಾಸ ಇಲ್ಲೇ” ಎಂದು.
ಕಬ್ಬಿಣದ ತಗಡಿನಿಂದ ಮಾಡಿದ ಟೆಂಟ್. ಬಿಸಿಲ ಧಗೆ. ನಿದ್ದೆಯಾದರೂ ಹೇಗೆ ಬಂದೀತು..? ಹಾಗೆಂದು ಹುಡುಗನಿಗೆ ಬೇರೆ ದಾರಿಯಾದರೂ ಏನಿತ್ತು..? 3 ವರ್ಷ ಅಲ್ಲೇ ಮಲಗುತ್ತಾನೆ. ಕರೆಂಟ್ ಇಲ್ಲ, ಶೌಚಾಲಯವಿಲ್ಲ. 10-14ನೇ ವಯಸ್ಸಿನಲ್ಲಿ ಪಡಬಾರದ ಯಾತನೆ ಪಟ್ಟು ಬಿಟ್ಟ ಯಶಸ್ವಿ.
ಮಳೆಗಾಲ ಬಂತೆಂದರೆ ಟೆಂಟ್ ಒಳಗೆ ನೀರು ನುಗ್ಗುತ್ತಿತ್ತು. ಯಶಸ್ವಿ ಜೈಸ್ವಾಲ್ ಹೇಳಿಕೊಂಡಂತೆ ಟೆಂಟ್’ನಲ್ಲಿ ವಾಸಿಸುತ್ತಿದ್ದ ಕೆಲ ಹುಡುಗರು ಆತನಿಗೆ ಹೊಡೆಯುತ್ತಿದ್ದರಂತೆ. ‘’ನಮಗೆಲ್ಲಾ ಅಡುಗೆ ಮಾಡಿ ಹಾಕು’’ ಎಂದು ಹಿಂಸಿಸುತ್ತಿದ್ದರಂತೆ.
ಕ್ರಿಕೆಟ್ ಆಡಲು ಹೇಗೋ ಒಂದು ಕ್ಲಬ್ ಸಿಕ್ಕಿತ್ತು. ಜೀವನ ನಡೆಯಬೇಕು, ಕೈಯಲ್ಲಿ ದುಡ್ಡಿಲ್ಲ. ಹುಡುಗ ಏನು ಮಾಡಿದ ಗೊತ್ತೇ..? ಕ್ರಿಕೆಟ್ ಮುಗಿಸಿ ಸಂಜೆ 7 ಗಂಟೆಗೆ ಟೆಂಟ್’ಗೆ ಬಂದವನೇ ಪಕ್ಕದ ಬೀದಿಯಲ್ಲಿ ಪಾನಿಪೂರಿ ವ್ಯಾಪಾರಿಯೊಬ್ಬನ ಜೊತೆ ಪಾನಿಪೂರಿ ಮಾರಲು ಶುರು ಮಾಡುತ್ತಾನೆ. ತನ್ನ ಜೊತೆ ಆಡುತ್ತಿದ್ದ ಹುಡುಗರು ಪಾನಿಪೂರಿ ತಿನ್ನಲು ಬಂದರೆ ಎಲ್ಲಿ ಹಂಗಿಸುತ್ತಾರೋ ಎಂಬ ಆತಂಕದಲ್ಲಿ ತಲೆ ತಪ್ಪಿಸಿಕೊಳ್ಳುತ್ತಿದ್ದನಂತೆ ಜೈಸ್ವಾಲ್.
ಹೀಗೇ ಸಮಯ ಉರುಳುತ್ತಿತ್ತು.. ಕಾಲಚಕ್ರ ತಿರುಗುತ್ತಲೇ ಇತ್ತು. ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಕ್ರಿಕೆಟ್ ಕಲಿಯುತ್ತಿದ್ದ ಯಶಸ್ವಿ ಜೈಸ್ವಾಲ್. ಉತ್ತರ ಪ್ರದೇಶದಿಂದ ಉರುಳಿದ್ದ ಶಿಲೆಗೆ ಉಳಿ ಪೆಟ್ಟುಗಳು ಬೀಳುತ್ತಿದ್ದಂತೆ ಶಿಲೆ ಕಲೆಯಾಗಿ ಅರಳುತ್ತಿತ್ತು. ಕಷ್ಟಗಳು ಅವನನ್ನು ಮಾನಸಿಕವಾಗಿ ಗಟ್ಟಿಯಾಗಿಸಿದವು.
ಆಟಕ್ಕೆ ನಿಂತು ಬಿಟ್ಟನೆಂದರೆ ಯಶಸ್ವಿ ಜೈಸ್ವಾಲ್ ಬಾಲ ರಾಕ್ಷಸ.. ಓರಗೆಯ ಬೌಲರ್’ಗಳನ್ನು ಹುರಿದು ಮುಕ್ಕಿ ಬಿಡುತ್ತಿದ್ದ. ಅವನ ಆಟವನ್ನು ನೋಡಿದ ಕೆಲ ಹುಡುಗರು ಬೇರೆ ಬೇರೆ ಮ್ಯಾಚ್’ಗಳಿಗೆ ಕರೆದೊಯ್ಯುತ್ತಾರೆ. ಕ್ರಿಕೆಟ್ ಆಡಲು ದಿನಕ್ಕೆ 100 ರೂಪಾಯಿ ಸಂಬಳ. ಬೇರೆಯವರ ಬಳಿ ಬ್ಯಾಟ್’ಗಳನ್ನು ಕಾಡಿ ಬೇಡಿ ಆಡಬೇಕಿತ್ತು. ಜೀವನ ಕಷ್ಟವಾಗಿ ಬಿಟ್ಟಿತ್ತು. ಕ್ರಿಕೆಟ್ ಆಸೆ ಬಿಟ್ಟು ಮರಳಿ ಉತ್ತರ ಪ್ರದೇಶಕ್ಕೆ ಹೋಗೋಣ ಎಂದು ನಿರ್ಧಾರ ಮಾಡಿ ಬಿಡುತ್ತಾನೆ ಯಶಸ್ವಿ ಜೈಸ್ವಾಲ್.
ಕೆಲವೊಮ್ಮೆ ದೇವರೇ ಮನುಷ್ಯ ರೂಪದಲ್ಲಿ ಬಂದು ಬಿಡುತ್ತಾನೆ. ಸೋತು ಕೈಚೆಲ್ಲಿ ಕೂತಿದ್ದ ಯಶಸ್ವಿ ಜೈಸ್ವಾಲ್ ಪಾಲಿಗೆ ಆ ದಿನ ದೇವರಾಗಿ ಬಂದವರು
ಜ್ವಾಲಾ ಸಿಂಗ್. ಮುಂಬೈನ ಫೇಮಸ್ ಕ್ರಿಕೆಟ್ ಕೋಚ್.
2013, ಡಿಸೆಂಬರ್ ತಿಂಗಳು. ಒಳ್ಳೆಯ ಆಟಗಾರರಿಗಾಗಿ ಹುಡುಕುತ್ತಿದ್ದ ಜ್ವಾಲಾ ಸಿಂಗ್ ಕಣ್ಣಿಗೆ ಬಿದ್ದವನು ಯಶಸ್ವಿ ಜೈಸ್ವಾಲ್. ‘ಎ’ ಡಿವಿಜನ್ ಬೌಲರ್”ಗಳ ವಿರುದ್ಧ ಬೀಡು ಬೀಸಾಗಿ ಬ್ಯಾಟ್ ಬೀಸುತ್ತಿದ್ದ ಹುಡುಗನ್ನು ನೋಡಿ ಜ್ವಾಲಾ ಸಿಂಗ್ ಬೆಕ್ಕಸ ಬೆರಗಾಗಿ ಬಿಡುತ್ತಾರೆ. ಅಷ್ಟೇ.. ಅವತ್ತೇ ನಿರ್ಧಾರ ಮಾಡಿ ಬಿಡುತ್ತಾರೆ “ನನ್ನ ಪಾಲಿನ ಅರ್ಜುನ ಇವನೇ” ಎಂದು.
ಹುಡುಗನನ್ನು ಹತ್ತಿರಕ್ಕೆ ಕರೆದ ಜ್ವಾಲಾ ಸಿಂಗ್ “ಎಲ್ಲಿ ನಿನ್ನ ಮನೆ” ಎಂದು ಕೇಳುತ್ತಾರೆ. ‘’ಪಕ್ಕದಲ್ಲೇ ಒಂದು ಟೆಂಟ್’ನಲ್ಲಿದ್ದೇನೆ ಸರ್” ಎನ್ನುತ್ತಾನೆ ಯಶಸ್ವಿ.
ಇಂಥದ್ದೇ ಹಿನ್ನೆಲೆಯಿಂದ ಬಂದವರು ಜ್ವಾಲಾ ಸಿಂಗ್. ಹುಡುಗನಿಗೆ ಹೇಳಿದ ಮಾತು, “ನಿನ್ನ ಕ್ರಿಕೆಟ್ ಆಸಕ್ತಿ ಹೇಗಿದೆ ಎಂದು ನಾನು ಪರೀಕ್ಷೆ ಮಾಡಬೇಕು. ನನ್ನ ಬಳಿ ಪ್ರಾಕ್ಟೀಸ್’ಗೆ ಬಾ” ಎಂದು.
ಅಲ್ಲಿಂದ ಶುರುವಾಗಿತ್ತು ಯಶಸ್ವಿ ಜೈಸ್ವಾಲ್”ನ ಜೀವನದ ಮತ್ತೊಂದು ಅಧ್ಯಾಯ. ಮುಂಬೈ ಕ್ರಿಕೆಟ್ ಸಂಸ್ಥೆಯ ಡಿವಿಜನ್ ಮ್ಯಾಚ್’ಗಳಲ್ಲಿ ಶತಕಗಳ ಮೇಲೆ ಶತಕಗಳನ್ನು ಬಾರಿಸಿದ ಜೈಸ್ವಾಲ್, 16ನೇ ವಯಸ್ಸಿನಲ್ಲಿ ಇಂಡಿಯಾ ಅಂಡರ್-19 ತಂಡಕ್ಕೆ ಆಯ್ಕೆಯಾಗುತ್ತಾನೆ. 2020ರಲ್ಲಿ ಅಂಡರ್-19 ವಿಶ್ವಕಪ್’ನಲ್ಲೂ ಆಡುತ್ತಾನೆ. ಟೂರ್ನಿಯಲ್ಲೇ ಅತೀ ಹೆಚ್ಚು 400 ರನ್ ಗಳಿಸಿದವನ ಮುಂದಿನ ಪ್ರಯಾಣ ಮುಂಬೈ ಸೀನಿಯರ್ ಕ್ರಿಕೆಟ್ ತಂಡದ ಜೊತೆ.
2019ರಲ್ಲಿ ಬೆಂಗಳೂರಿನ ಆಲೂರು ಕ್ರಿಕೆಟ್ ಮೈದಾನದಲ್ಲಿ ವಿಜಯ್ ಹಜಾರೆ ಟೂರ್ನಿಯಲ್ಲಿ ದ್ವಿಶತಕ ಬಾರಿಸಿದ್ದಾಗ, ಈಗಿನ ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ “Next Superstar” ಎಂದು ಟ್ವೀಟ್ ಮಾಡಿದ್ದರು.
ರೋಹಿತ್ ಮಾತು ನಿಜವಾಗಿತ್ತು. ಮುಂಬೈನ ಟೆಂಟ್’ನಲ್ಲಿ ಮಲಗುತ್ತಿದ್ದ ಹುಡುಗ, ಆಜಾದ್ ಮೈದಾನದಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ, ಆಡಿದ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಬಾರಿಸುತ್ತಾನೆ. ಅಲ್ಲಿಂದ ಆರೇ ತಿಂಗಳಲ್ಲಿ ಟೆಸ್ಟ್ ದ್ವಿಶತಕ. ಆಸ್ಟ್ರೇಲಿಯಾದಲ್ಲಿ ಆಡಿದ ಪ್ರಪ್ರಥಮ ಟೆಸ್ಟ್’ನಲ್ಲೇ ಶತಕ.., ಈಗ ಇಂಗ್ಲೆಂಡ್’ನಲ್ಲಿ ಆಡಿದ ಮೊದಲ ಟೆಸ್ಟ್’ನಲ್ಲೂ ಶತಕ..
ಇವತ್ತಿಗೆ 23 ವರ್ಷದ ಯಶಸ್ವಿ ಜೈಸ್ವಾಲ್”ನ ಹೆಸರಲ್ಲಿರುವ ದಾಖಲೆಗಳ ಬಗ್ಗೆ ಗೊತ್ತಾ..?
* ಅಂಡರ್-19 ವಿಶ್ವಕಪ್’ನಲ್ಲಿ ಶತಕ
* ರಣಜಿ ಟ್ರೋಫಿಯಲ್ಲಿ ಶತಕ
* ಇರಾನಿ ಕಪ್”ನಲ್ಲಿ ಶತಕ
* ದುಲೀಪ್ ಟ್ರೋಫಿಯಲ್ಲಿ ಶತಕ
* ವಿಜಯ್ ಹಜಾರೆ ಟ್ರೋಫಿಯಲ್ಲಿ ಶತಕ
* ಭಾರತ ‘ಎ’ ತಂಡದ ಪರ ಶತಕ
* ಐಪಿಎಲ್’ನಲ್ಲಿ ಶತಕ
* ಅಂತರಾಷ್ಟ್ರೀಯ ಟಿ20ಯಲ್ಲಿ ಶತಕ
* ಟೆಸ್ಟ್ ಪದಾರ್ಪಣೆಯಲ್ಲಿ ಶತಕ
* ಪ್ರಥಮದರ್ಜೆ ಕ್ರಿಕೆಟ್’ನಲ್ಲಿ ದ್ವಿಶತಕ
* ಲಿಸ್ಟ್ ‘ಎ’ ಕ್ರಿಕೆಟ್’ನಲ್ಲಿ ದ್ವಿಶತಕ
* ಟೆಸ್ಟ್ ಕ್ರಿಕೆಟ್’ನಲ್ಲಿ ದ್ವಿಶತಕ
* ವೆಸ್ಟ್ ಇಂಡೀಸ್’ನಲ್ಲಿ ಟೆಸ್ಟ್ ಶತಕ
* ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಶತಕ
* ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ
ಮುಂಬೈನ ಆಜಾದ್ ಮೈದಾನದ ಬಳಿ 10-12 ವರ್ಷಗಳ ಹಿಂದೆ ಪಾನಿಪೂರಿ ಮಾರುತ್ತಿದ್ದ ಹುಡುಗ ತುಂಬಾ ದೂರ ಸಾಗಿ ಬಂದಿದ್ದಾನೆ.
“ಯಶಸ್ವೀಭವ, ವಿಜಯೀಭವ” ಯಶಸ್ವಿ ಜೈಸ್ವಾಲ್..!

-ಸುದರ್ಶನ್ ಗೌಡ, ಬೆಂಗಳೂರು
—–
The post ಯಶಸ್ವೀಭವ, ವಿಜಯೀಭವ” ಯಶಸ್ವಿ ಜೈಸ್ವಾಲ್..! ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! -ಸುದರ್ಶನ್ ಗೌಡ, ಬೆಂಗಳೂರು appeared first on Karnataka Kahale.
]]>The post 111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಣೆ: ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ -ಸಿ.ಎಂ ಸಿದ್ದರಾಮಯ್ಯ appeared first on Karnataka Kahale.
]]>
ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ:
ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು. ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.
ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ:
ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ: ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.
1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

ಚಿನ್ನದ ಬೆಲೆ ಈಗ ಎಷ್ಟಿದೆ?: 2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು.
ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.
ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯಸಭೆಯ ಪ್ರತಿಪಕ್ಷದನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಬಳ್ಳಾರಿ-ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂಸದ ಈ. ತುಕಾರಾಂ ಅವರು ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು, ಹಿರಿಯ ನಾಯಕರು, ಗಣ್ಯರು ಉಪಸ್ಥಿತರಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
The post 111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಣೆ: ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ -ಸಿ.ಎಂ ಸಿದ್ದರಾಮಯ್ಯ appeared first on Karnataka Kahale.
]]>The post ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ appeared first on Karnataka Kahale.
]]>
ನವದೆಹಲಿ, ಡಿ.26: ದೇಶದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ನಾಳೆ ಶುಕ್ರವಾರ ರಾಜ್ಯಾದ್ಯಂತ ಸಾರ್ವಜನಿಕ ಸರಕಾರಿಕಚೇರಿಗಳು, ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಒಂದು ವಾರಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.
ಗಣ್ಯರ ಸಂತಾಪ: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಮಾಜಕಲ್ಯಾಣ ಸಚಿವ ಡಾ. ಎಚ್. ಸಿ ಮಹೇದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾನೂನು ಸಚಿವ ಎಚ್.ಕೆ ಪಾಟೀಲ್ ಮತ್ತಿತರ ಗಣ್ಯರು ಕಂಬನಿ ಮಿಡಿದಿದ್ದಾರೆ.
The post ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ appeared first on Karnataka Kahale.
]]>The post ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ appeared first on Karnataka Kahale.
]]>
ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು. ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.
The post ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ appeared first on Karnataka Kahale.
]]>The post ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ appeared first on Karnataka Kahale.
]]>
ಬೆಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರ್ರವಾರ ಸಂಜೆ ಉದ್ಘಾಟಿಸಿದರು. ವಿಧಾನಸೌಧದ ಭವ್ಯ ಮೆಟ್ಡಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವ ಡಾ. ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
The post ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ appeared first on Karnataka Kahale.
]]>