Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-includes/feed-rss2.php on line 8
VSKUB – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Fri, 30 Jan 2026 13:38:13 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg VSKUB – Karnataka Kahale https://www.karnatakakahale.com 32 32 ವಿಎಸ್ ಕೆ ವಿವಿಯಲ್ಲಿ ಮೂರು ದಿನಗಳ ಕಾರ್ಯಾಗಾರಕ್ಕೆ ಚಾಲನೆ: ಭಾರತೀಯರಲ್ಲಿ ಭ್ರಾತೃತ್ವತೆ ಮುಖ್ಯ -ಮೋಹನ್ ಕುಮಾರ್ https://www.karnatakakahale.com/news/22178 Fri, 30 Jan 2026 13:38:13 +0000 https://www.karnatakakahale.com/?p=22178 ಬಳ್ಳಾರಿ,ಜ.30: ಭಾರತೀಯರಲ್ಲಿ ಪರಸ್ಪರ ಭ್ರಾತೃತ್ವ ಸಂಬಂಧವಿರದಿದ್ದರೆ ದೇಶವು ಪ್ರಜಾಸತ್ತಾತ್ಮಕವಾಗಿ ಉಳಿಯುವುದಿಲ್ಲ ಎಂಬುದು ಬಾಬಾ ಸಾಹೇಬ ಅಂಬೇಡ್ಕರ್ ಅವರ ನಿಲುವಾಗಿತ್ತು ಎಂದು ಹೈಕೋರ್ಟ್ ವಕೀಲರಾದ ಎಚ್.ಮೋಹನ್ ಕುಮಾರ್ ಹೇಳಿದರು. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಡಾ.ಬಿ.ಆರ್…

The post ವಿಎಸ್ ಕೆ ವಿವಿಯಲ್ಲಿ ಮೂರು ದಿನಗಳ ಕಾರ್ಯಾಗಾರಕ್ಕೆ ಚಾಲನೆ: ಭಾರತೀಯರಲ್ಲಿ ಭ್ರಾತೃತ್ವತೆ ಮುಖ್ಯ -ಮೋಹನ್ ಕುಮಾರ್ appeared first on Karnataka Kahale.

]]>

ಬಳ್ಳಾರಿ,ಜ.30: ಭಾರತೀಯರಲ್ಲಿ ಪರಸ್ಪರ ಭ್ರಾತೃತ್ವ ಸಂಬಂಧವಿರದಿದ್ದರೆ ದೇಶವು ಪ್ರಜಾಸತ್ತಾತ್ಮಕವಾಗಿ ಉಳಿಯುವುದಿಲ್ಲ ಎಂಬುದು ಬಾಬಾ ಸಾಹೇಬ ಅಂಬೇಡ್ಕರ್ ಅವರ ನಿಲುವಾಗಿತ್ತು ಎಂದು ಹೈಕೋರ್ಟ್ ವಕೀಲರಾದ ಎಚ್.ಮೋಹನ್ ಕುಮಾರ್ ಹೇಳಿದರು.
ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಮೈಸೂರಿನ ಸಮಾಜ ಕಾರ್ಯಕರ್ತರ ಕ್ರಿಯಾ ಸಂಶೋಧನೆ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಂಬೇಡ್ಕರ ಅವರ ಬರಹಗಳು ಮತ್ತು ಭಾಷಣಗಳ ಮೂಲಕ ಭಾರತೀಯರನ್ನು ಅರ್ಥಮಾಡಿಕೊಳ್ಳುವಿಕೆ’ ಎಂಬುದರ ಕುರಿತಾದ ಮೂರು ದಿನಗಳ ಕಾರ್ಯಾಗಾರವನ್ನು ಅಂಬೇಡ್ಕರ್ ಹಾಗೂ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಪ್ರಸ್ತುತವಾಗಿ ಅಂಬೇಡ್ಕರ ಅವರ ಕುರಿತು ಚಿಂತನೆಗಳು ಬಹಳ ಕ್ರಿಯಾಶೀಲವಾಗಿವೆ. ಮನುಷ್ಯನು ಇನ್ನೊಬ್ಬರ ಘನತೆಯನ್ನು ಅಳೆಯುವುದರಲ್ಲಿ ತಲ್ಲೀನನಾಗಿದ್ದಾನೆ. ಪ್ರಜಾಪ್ರಭುತ್ವ ಕೇವಲ ಹೊಗಳಿಕೆಯಾಗಿ ಉಳಿದಿದೆ. ಇವತ್ತು ಪ್ರಾಣಿಗಳ ಮೇಲೆ ಕಾಣುವ ಪ್ರೀತಿ, ಸಹೋದರತೆ, ವಿಶ್ವಾಸವನ್ನು ಮನುಷ್ಯರಲ್ಲಿ ಕಾಣಲಾರೆವು ಎಂದು ಅಭಿಪ್ರಾಯಪಟ್ಟರು.
ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಶ್ರೀನಿವಾಸ ಡಿ.ಮನಗಳ್ಳಿ ಅವರು ಮಾತನಾಡಿ, ಅಂಬೇಡ್ಕರ ಅವರ ಅಧ್ಯಯನ ಕೇಂದ್ರಗಳು ತರಬೇತಿ ಕೇಂದ್ರಗಳಾಗಬೇಕಾಗಿದೆ. ಸಮಾಜದಲ್ಲಿನ ಜಾತಿ ವ್ಯವಸ್ಥೆ ಭಾರತದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಂಯೋಜಕರು ಮತ್ತು ಡಾ.ಬಿ.ಆರ್ ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬರ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಎಸ್ಸಿ-ಎಸ್ಟಿ ಕೋಶ ಹಾಗೂ ಅಂಬೇಡ್ಕರ ತರಬೇತಿ ಕೇಂದ್ರ ಸಹಭಾಗಿತ್ವದಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಲಂಡನ್‌ನ ಸಾಮಾಜಿಕ ಮತ್ತು ಸಾಂಸ್ಕೃತಿಕ ಮನೋವಿಜ್ಞಾನ ಚಿಂತಕರಾದ ಚಾರುಮತಿ.ಎಂ ವೇದಿಕೆಯಲ್ಲಿದ್ದರು. ಎಸ್ಸಿ-ಎಸ್ಟಿ ಕೋಶದ ನಿರ್ದೇಶಕ ಡಾ.ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅನಿಲ ವಂದಿಸಿದರು.
ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಇದ್ದರು.
—–

The post ವಿಎಸ್ ಕೆ ವಿವಿಯಲ್ಲಿ ಮೂರು ದಿನಗಳ ಕಾರ್ಯಾಗಾರಕ್ಕೆ ಚಾಲನೆ: ಭಾರತೀಯರಲ್ಲಿ ಭ್ರಾತೃತ್ವತೆ ಮುಖ್ಯ -ಮೋಹನ್ ಕುಮಾರ್ appeared first on Karnataka Kahale.

]]>
ಹಿರಿಯ ಸಾಹಿತಿ ಬಿ ಎಲ್ ವೇಣುರವರ “ದುರ್ಗದ ಬೇಡರ್ದಂಗೆ” ಕಾದಂಬರಿ ಬಳ್ಳಾರಿ ವಿಎಸ್ಕೆ ವಿವಿ ಎಂಎ ತರಗತಿಗೆ ಪಠ್ಯವಾಗಿ ಆಯ್ಕೆ: ಅಭಿನಂದನೆ https://www.karnatakakahale.com/news/22035 Thu, 15 Jan 2026 08:17:43 +0000 https://www.karnatakakahale.com/?p=22035 ಬಳ್ಳಾರಿ, ಜ.15: ಹಿರಿಯ ಸಾಹಿತಿ ಬಿ ಎಲ್ ವೇಣು ಅವರ “ದುರ್ಗದ ಬೇಡರ್ದಂಗೆ” ಕಾದಂಬರಿ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಎಂ.ಎ.ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಆಯ್ಕೆ ಮಾಡಲಾಗಿದೆ. 1849ರಲ್ಲಿ ದುರ್ಗದಲ್ಲಿ ಬೇಡ ಹುಡುಗರು ದಂಡು ಕಟ್ಟಿ ನಡೆಸಿದ ದಂಗೆಯ ಕುರಿತು ಸಂಶೋಧಕರಾದ ಬಿ.ನಂಜುಂಡಸ್ವಾಮಿ…

The post ಹಿರಿಯ ಸಾಹಿತಿ ಬಿ ಎಲ್ ವೇಣುರವರ “ದುರ್ಗದ ಬೇಡರ್ದಂಗೆ” ಕಾದಂಬರಿ ಬಳ್ಳಾರಿ ವಿಎಸ್ಕೆ ವಿವಿ ಎಂಎ ತರಗತಿಗೆ ಪಠ್ಯವಾಗಿ ಆಯ್ಕೆ: ಅಭಿನಂದನೆ appeared first on Karnataka Kahale.

]]>

ಬಳ್ಳಾರಿ, ಜ.15: ಹಿರಿಯ ಸಾಹಿತಿ ಬಿ ಎಲ್ ವೇಣು ಅವರ “ದುರ್ಗದ ಬೇಡರ್ದಂಗೆ” ಕಾದಂಬರಿ
ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಎಂ.ಎ.ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಆಯ್ಕೆ ಮಾಡಲಾಗಿದೆ.
1849ರಲ್ಲಿ ದುರ್ಗದಲ್ಲಿ ಬೇಡ ಹುಡುಗರು ದಂಡು ಕಟ್ಟಿ ನಡೆಸಿದ ದಂಗೆಯ ಕುರಿತು ಸಂಶೋಧಕರಾದ ಬಿ.ನಂಜುಂಡಸ್ವಾಮಿ ಅವರು ನೀಡಿದ ಉಪನ್ಯಾಸವೊಂದರಿಂದ ಪ್ರೇರಿತರಾಗಿ, ಇತಿಹಾಸದ ಈ ಘಟನೆಯನ್ನು ಆಧರಿಸಿ ಕಲ್ಪನೆಯ ಪಾಕ ಬೆರೆಸಿ ‘ದುರ್ಗದ ಬೇಡರ್ದಂಗೆ’ ಶೀರ್ಷಿಕೆಯಡಿ ಬಿ. ಎಲ್ ವೇಣು ಅವರು ಕಾದಂಬರಿ ರೂಪದಲ್ಲಿ ರಚಿಸಿದ್ದಾರೆ.
ಉಪನ್ಯಾಸ ಕೇಳುತ್ತಿರುವಾಗಲೇ ಅಲ್ಲಿನ ಅಧಿಕಾರಿ ವರ್ಗ, ಘಟನೆಗಳು ಕ್ರಮವಾಗಿ ಪಾತ್ರಗಳಾಗಿ ಸನ್ನಿವೇಶ
ಗಳಾಗಿ ಅಚ್ಚೊತ್ತಿದ್ದವು ಎಂದು ಮುನ್ನುಡಿಯಲ್ಲಿ ವೇಣು ಉಲ್ಲೇಖಿಸುತ್ತಾರೆ. ಬೆಳೆದ ಭೂಮಿಗೆ ಸುಂಕದ ಜೊತೆಗೆ,
ಪಾಳುಭೂಮಿಗೂ ಸುಂಕ ಕೇಳಿದ ಬ್ರಿಟಿಷರ ವಿರುದ್ಧ ರೈತರು, ಪಾಳೆಪಟ್ಟಿನವರು, ಜಮೀನ್ದಾರರು ಸಿಡಿದೆದ್ದ ಘಟನೆಯೊಂದಿಗೆ ‘ದುರ್ಗದ ಬೇಡರ್ದಂಗೆ’ ಆರಂಭವಾಗುತ್ತದೆ. ನಾಯಕನಹಟ್ಟಿ ಪಾಳೇಗಾರ ಕೆಂಚಮಲ್ಲಪ್ಪ ನಾಯಕನ ಮೊಮ್ಮಗ ವಾಲ್ಮೀಕಿ ನಾಯಕನ ಆರ್ಭಟದೊಂದಿಗೆ ಪುಟಗಳು ತಿರುವುತ್ತಲೇ ಚಾರಿತ್ರಿಕವಾದ ಘಟನೆಗಳು ಕಲ್ಪನೆಯ ಸನ್ನಿವೇಶದೊಂದಿಗೆ ಸಾಗುತ್ತವೆ. ಇತಿಹಾಸದಲ್ಲಿನ ಘಟನೆಗಳ ಸುತ್ತ ಕಲ್ಪನೆಯ ಕಥೆ ಕಟ್ಟುವುದು ಕಠಿಣ. ಆದರೆ ದಂಗೆಯ ಎಳೆಯನ್ನಿಟ್ಟುಕೊಂಡು ಬೇಡ ಯುವಕರ ಸಾಹಸಗಾಥೆಯನ್ನು ವಿವರಿಸುತ್ತಾ ವೇಣು ಅವರು ಕಾದಂಬರಿಗೆ ಅಗತ್ಯವಾದ ರೋಚಕತೆಯನ್ನು ಸೃಷ್ಟಿಸಿದ್ದಾರೆ.

ಈ ಕಾದಂಬರಿಯನ್ನು ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಎಂಎ ತರಗತಿಗೆ ಪಠ್ಯವಾಗಿರುವುದನ್ನು ಹರ್ಷಿಸಿರುವ ಕವಿ, ಗಾಯಕ ಗಾನಾ ಸುಮಾ ಪಟ್ಡನಹಳ್ಳಿ
ಹಾಗೂ‌ ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಬಳ್ಳಾರಿಯ ಸಿ. ಮಂಜುನಾಥ ಅಭಿನಂದಿಸಿದ್ದಾರೆ.

 

The post ಹಿರಿಯ ಸಾಹಿತಿ ಬಿ ಎಲ್ ವೇಣುರವರ “ದುರ್ಗದ ಬೇಡರ್ದಂಗೆ” ಕಾದಂಬರಿ ಬಳ್ಳಾರಿ ವಿಎಸ್ಕೆ ವಿವಿ ಎಂಎ ತರಗತಿಗೆ ಪಠ್ಯವಾಗಿ ಆಯ್ಕೆ: ಅಭಿನಂದನೆ appeared first on Karnataka Kahale.

]]>
ವಿಎಸ್ ಕೆ ವಿವಿಯಲ್ಲಿ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟಕ್ಕೆ ಚಾಲನೆ: ಮುದ್ರಣ ತಂತ್ರಜ್ಞಾನಕ್ಕೆ ಕೊನೆಯಿಲ್ಲ  -ಸಾಹಿತಿ ಡಾ.ವಸುಂಧರಾ ಭೂಪತಿ https://www.karnatakakahale.com/news/21635 Wed, 17 Dec 2025 15:42:14 +0000 https://www.karnatakakahale.com/?p=21635 ಬಳ್ಳಾರಿ,ಡಿ.17:ಮುದ್ರಣಗೊಳ್ಳುವ ಪುಸ್ತಕಗಳಿಗೂ ಹಾಗೂ ಮುದ್ರಣ ತಂತ್ರಜ್ಞಾನಕ್ಕೂ ಜೀವ ಸಂಕುಲ ಇರುವವರೆಗೂ ಸಾವಿಲ್ಲ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಹೇಳಿದರು. ಇಲ್ಲಿಯ ವಿಎಸ್ ಕೆ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಪ್ರಕಾಶಕರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಪುಸ್ತಕ…

The post ವಿಎಸ್ ಕೆ ವಿವಿಯಲ್ಲಿ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟಕ್ಕೆ ಚಾಲನೆ: ಮುದ್ರಣ ತಂತ್ರಜ್ಞಾನಕ್ಕೆ ಕೊನೆಯಿಲ್ಲ  -ಸಾಹಿತಿ ಡಾ.ವಸುಂಧರಾ ಭೂಪತಿ appeared first on Karnataka Kahale.

]]>

ಬಳ್ಳಾರಿ,ಡಿ.17:ಮುದ್ರಣಗೊಳ್ಳುವ ಪುಸ್ತಕಗಳಿಗೂ ಹಾಗೂ ಮುದ್ರಣ ತಂತ್ರಜ್ಞಾನಕ್ಕೂ ಜೀವ ಸಂಕುಲ ಇರುವವರೆಗೂ ಸಾವಿಲ್ಲ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಹೇಳಿದರು.
ಇಲ್ಲಿಯ ವಿಎಸ್ ಕೆ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಪ್ರಕಾಶಕರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎಐ, ಇ-ಪುಸ್ತಕಗಳು, ಪ್ರಿಂಟ್ ಆನ್ ಡಿಮಾಂಡ್(ಪಿಓಡಿ) ಮುಂತಾದ ತಂತ್ರಜ್ಞಾನದ ಯುಗದಲ್ಲಿ ಕೇವಲ ಗಂಟೆಯಲ್ಲಿಯೇ ಪುಸ್ತಕವನ್ನು ಹೊರತರಬಹುದು. ಆದರೆ ಮುದ್ರಣವಾಗುವ ಪುಸ್ತಕಗಳು, ದಿನನಿತ್ಯ ಬಳಸುವ (ಕರೆನ್ಸಿ) ನೋಟುಗಳು ಮುದ್ರಣದ ಅವಿಭಾಜ್ಯ ಅಂಗವಾಗಿದ್ದು, ಅವುಗಳು ಎಂದಿಗೂ ನಿಲ್ಲುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕ್ರಿ.ಶ. 400ರಲ್ಲಿ ಚೀನಾದಲ್ಲಿ ಉಗಮವಾಗ ಹಿರಾಕಸೂತ್ರ ಎಂಬ ಮುದ್ರಣವು ಮುಂದೆ ಜಪಾನ್, ಜರ್ಮನಿ ದೇಶಗಳಲ್ಲಿ ಅಚ್ಚುಮೊಳೆಗಳ ಮೂಲಕ ಮುಂದುವರೆದು ಗುಟೆನ್‌ಬರ್ಗ್ ಪ್ರೆಸ್ ವಿಕಸನಕ್ಕೆ ನಾಂದಿ ಹಾಡಿದವು ಎಂದರು.

ಕ್ರಿ.ಶ.1556ರಲ್ಲಿ ಭಾರತದಲ್ಲಿ ಪ್ರಥಮ ಮುದ್ರಣ ಯಂತ್ರವು ಗೋವಾದಲ್ಲಿ ಬಂದಿಳಿಯಿತು. 1578ರಲ್ಲಿ ಭಾರತದ ಪ್ರಥಮ ಭಾಷಾ ಪುಸ್ತಕವಾದ ತಮಿಳಿನ ಥಂಬಿರನ್ ಒನಕ್ಕಮ್ ಪ್ರಕಟವಾಯಿತು ಎಂದು ನೆನೆದರು.
ಕ್ರಿ.ಶ. 1826ರಲ್ಲಿ ಕರ್ನಾಟಕದಲ್ಲಿ ಪ್ರಥಮ ಮುದ್ರಣ ಯಂತ್ರವನ್ನು ಬಳ್ಳಾರಿಗೆ ಜಾನ್ ಹ್ಯಾಂಡ್ಸ್ ಎಂಬ ಬ್ರಿಟೀಷ್ ಅಧಿಕಾರಿಯು ಧರ್ಮ ಪ್ರಚಾರಕ್ಕಾಗಿ ತರಿಸಿಕೊಂಡಿದ್ದನು ಎಂದು ತಿಳಿಸಿದರು.


ಕಾರ್ಯಕ್ರಮ ಉದ್ಘಾಟಿಸಿದ ವಿವಿಯ ಸಿಂಡಿಕೇಟ್ ಸದಸ್ಯ, ಸಾಹಿತಿ ಡಾ. ಅಮರೇಶ್ ನುಗಡೋಣಿ ಅವರು ಮಾತನಾಡಿ, ಲೇಖಕ, ಪ್ರಕಾಶಕ, ಓದುಗ ಮತ್ತು ಪುಸ್ತಕಗಳು ಎಂಬ ನಾಲ್ಕು ದಿಸೆಯ ಅನನ್ಯವಾದ ಸಮಾಗಮ ನೆಲೆಗೊಂಡಿದೆ. 10ನೇ ಶತಮಾನದಲ್ಲಿ ಶಿಕ್ಷಿತರ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿದ್ದರಿಂದ ವಚನಕಾರರು, ಸಂತಕವಿಗಳು ತಮ್ಮ ಅನುಭವ, ಸಂವಾದ, ಚರ್ಚೆಗಳು ಎಂಬ ಮೌಖಿಕ ಸಂವಹನದ ಮೂಲಕ ಜನಪದ ಕಾವ್ಯಗಳನ್ನು ಎಲ್ಲೆಡೆ ಹರಡಿದರು ಎಂದರು.
ಅಕ್ಷರ ಸಂಸ್ಕೃತಿ ಬ್ರಿಟೀಷರಿಂದ ಬಂದ ಬಳುವಳಿಯಾಗಿದೆ. ಅವರು ಭಾರತದ ಹಸ್ತಪ್ರತಿಗಳನ್ನು ಶೋಧ ಮಾಡಿ ಪ್ರಚುರಪಡಿಸಿದರು.                                          ಶಿಕ್ಷಣದ ಮಹತ್ವ ಅರಿತಿದ್ದ ಅಂದಿನ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸುರವರು ಹಿಂದುಳಿದ ಮತ್ತು ಶೋಷಿತರ ಧ್ವನಿಯಾಗಿದ್ದ ಅಂಬೇಡ್ಕರ್ ಅವರ ಆಶಯವನ್ನು ಪೂರೈಸಲು ಸರ್ಕಾರದ ವತಿಯಿಂದ ರಾಜ್ಯದಾದ್ಯಂತ ಗ್ರಂಥಾಲಯಗಳನ್ನು ನಿರ್ಮಾಣ ಮಾಡಿದರು. ಇಂದು ರಾಜ್ಯದಾದ್ಯಂತ 500ಕ್ಕೂ ಹೆಚ್ಚು ಗ್ರಂಥಾಲಯಗಳು ನೆಲೆಗೊಂಡಿವೆ ಎಂದು ತಿಳಿಸಿದರು.
ಕಳೆದ 7 ವರ್ಷಗಳಿಂದ ಸರ್ಕಾರದಿಂದ ಪುಸ್ತಕ ಖರೀದಿಸಿ ಗ್ರಂಥಾಲಯಗಳಿಗೆ ಪೂರೈಸುವ ಕಾರ್ಯ ಸ್ಥಗಿತಗೊಂಡಿದೆ. ಪುಸ್ತಕ ಸೇವಾ ಸಂಸ್ಕೃತಿ ಇಂದಿನ ದಿನಮಾನದಲ್ಲಿ ಪುಸ್ತಕೋದ್ಯಮವಾಗಿ ಬದಲಾಗಿದೆ. ಅಭಿನವ ಪ್ರಕಾಶನ, ಲೋಹಿಯಾ ಪ್ರಕಾಶನದಂತಹ ದಿಟ್ಟ ಪ್ರಕಾಶಕರು ಪುಸ್ತಕ ಮುದ್ರಣವನ್ನು ಶಿಕ್ಷಣ ಸೇವೆ ಎಂದು ಪರಿಗಣಿಸಿದ್ದಾರೆ ಎಂದು ಶ್ಲಾಘಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ ಎಂ ಮುನಿರಾಜು ಮಾತನಾಡಿ, ಕಲೆ, ಸಾಹಿತ್ಯದ ಆಸಕ್ತಿ ಎಲ್ಲರಲ್ಲಿಯೂ ಕ್ಷೀಣಿಸುತ್ತಿದೆ. ಓದುವ, ಬರೆಯುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.                                                      ವಿವಿಯ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ವಿವಿಧ ತಾಂತ್ರಿಕ ಕೋರ್ಸ್ ಗಳನ್ನು ಶೀಘ್ರದಲ್ಲೆ ಆರಂಭಿಸುವುದಾಗಿ ಕುಲಪತಿಗಳು  ಪ್ರಕಟಿಸಿದರು.
ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ ಎನ್ ಎಂ ಸಾಲಿ ಎರಡು ದಿನಗಳ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ವಿವಿಯ ಸಿಂಡಿಕೇಟ್ ಸದಸ್ಯರಾದ ಬಿ ಪೀರ್‌ಬಾಷಾ, ಶಿವಕುಮಾರ್ ಕೆ ಮತ್ತು ಕರ್ನಾಟಕ ಪ್ರಕಾಶಕರ ಸಂಘದ ಪ್ರಧಾನ ಕಾರ್ಯದರ್ಶಿ ನ. ರವಿಕುಮಾರ್ ವೇದಕೆಯಲ್ಲಿದ್ದರು.                                  ಕಾರ್ಯಕ್ರಮದ ಸಂಯೋಜಕ, ವಿವಿಯ ಪ್ರಸಾರಾಂಗದ ಪ್ರಭಾರ ನಿರ್ದೇಶಕರಾದ ಪ್ರೊ ತಿಪ್ಪೇರುದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.                                           ರಸಾಯನ ಶಾಸ್ತ್ರ  ವಿಭಾಗದ ಪ್ರೊ ಅರುಣ್‌ಕುಮಾರ್ ಲಗಶೆಟ್ಟಿ ಸ್ವಾಗತಿಸಿದರು. ಡಾ. ಶಶಿಧರ್ ಕೆಲ್ಲೂರ್ ನಿರೂಪಿಸಿದರು.
ಎರಡು ದಿನಗಳ ಕಮ್ಮಟದಲ್ಲಿ ಒಟ್ಟು 5 ಚರ್ಚಾಗೋಷ್ಠಿಗಳಲ್ಲಿ ಬುಧವಾರ ಮೂರು ಗೋಷ್ಠಿಗಳು ನಡೆದವು. ರಾಜ್ಯದ ವಿವಿಧ ಪ್ರಕಾಶಕರು, ಚಿಂತಕರು, ಉಪನ್ಯಾಸಕರುಗಳು, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ವಿವಿಯ ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರುಗಳು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.
—————

The post ವಿಎಸ್ ಕೆ ವಿವಿಯಲ್ಲಿ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟಕ್ಕೆ ಚಾಲನೆ: ಮುದ್ರಣ ತಂತ್ರಜ್ಞಾನಕ್ಕೆ ಕೊನೆಯಿಲ್ಲ  -ಸಾಹಿತಿ ಡಾ.ವಸುಂಧರಾ ಭೂಪತಿ appeared first on Karnataka Kahale.

]]>
ವಿಎಸ್ ಕೆ ವಿವಿಯಲ್ಲಿ ಶಿಕ್ಷಕರ‌ ದಿನಾಚರಣೆ: ರಾಜಕೀಯ, ಧಾರ್ಮಿಕ ಹಾಗೂ ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅನನ್ಯ -ಡಾ. ಮಲ್ಲಿಕಾ ಘಂಟಿ https://www.karnatakakahale.com/news/20684 Wed, 17 Sep 2025 09:12:24 +0000 https://www.karnatakakahale.com/?p=20684 ಬಳ್ಳಾರಿ,ಸೆ.17: ಜಾತಿ, ಧರ್ಮ ಎಂಬ ಎಲ್ಲೆ ಇರದ ಆದರ್ಶಪ್ರಾಯ ಶಿಕ್ಷಕನು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆ ಮಾಡುತ್ತಾನೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊಮಲ್ಲಿಕಾ ಘಂಟಿ ಅವರು ಹೇಳಿದರು. ಬುಧವಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ…

The post ವಿಎಸ್ ಕೆ ವಿವಿಯಲ್ಲಿ ಶಿಕ್ಷಕರ‌ ದಿನಾಚರಣೆ: ರಾಜಕೀಯ, ಧಾರ್ಮಿಕ ಹಾಗೂ ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅನನ್ಯ -ಡಾ. ಮಲ್ಲಿಕಾ ಘಂಟಿ appeared first on Karnataka Kahale.

]]>

ಬಳ್ಳಾರಿ,ಸೆ.17: ಜಾತಿ, ಧರ್ಮ ಎಂಬ ಎಲ್ಲೆ ಇರದ ಆದರ್ಶಪ್ರಾಯ ಶಿಕ್ಷಕನು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆ ಮಾಡುತ್ತಾನೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊಮಲ್ಲಿಕಾ ಘಂಟಿ ಅವರು ಹೇಳಿದರು.
ಬುಧವಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಶಿಕ್ಷಕ ವರ್ಗದಲ್ಲಿ ದ್ರೋಣಾಚಾರ್ಯರ ಪೌರಾಣಿಕ ಹಿನ್ನೆಲೆಯ ಗುರು ಪರಂಪರೆ ಹಾಗೂ ಗುರು ಗೋವಿಂದ ಭಟ್ಟರ ತಾತ್ವಿಕ ಮೂಲದ ಗುರು ಪರಂಪರೆ ಎಂಬ ಎರಡು ವಿಧಗಳಿವೆ. ಗುರುದಕ್ಷಿಣೆ ಕೇಳುವ ಪರಂಪರೆಗೆ ತದ್ವಿರುದ್ಧವಾದವನೇ ನಿಜವಾದ ಶಿಕ್ಷಕ. ಸಮಾಜಮುಖಿ ಹಾಗೂ ಅಧ್ಯಯನಶೀಲ ಶಿಕ್ಷಕರುಗಳಿಂದ ವಿದ್ಯಾರ್ಥಿಗಳ, ಸಮುದಾಯದ ಮನ ಮುಟ್ಟುವಂತೆ ವಿಷಯಗಳ ಜ್ಞಾನ ಬಿತ್ತಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.


ರಾಜಕೀಯ, ಧಾರ್ಮಿಕ ಹಾಗೂ ಸಮಾಜ ಸುಧಾರಣೆಯಲ್ಲಿ ಸಮಾನತೆ ಮತ್ತು ಏಕತೆ ಸ್ವರೂಪವಾಗಿರುವ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಅದೇರೀತಿಯಾಗಿ ಕಲ್ಯಾಣ-ಕರ್ನಾಟಕ ಭಾಗದ ವಿಮೋಚನೆಗೆ ಶ್ರಮಿಸಿದ ಅನೇಕ ಪುರಷ-ಮಹಿಳಾ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನ ರೂಪಿಸುವುದು ಶಿಕ್ಷಕರ ಪ್ರಥಮ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶಪ್ರಾಯ ಜೀವನ ನಡೆಸಬೇಕು ಎಂದು ಹೇಳಿದರು.
ವಿವಿಯ ಕುಲಸಚಿವ ಸಿ.ನಾಗರಾಜು ಅವರು ಮಾತನಾಡಿ, ಶಿಕ್ಷಕರು ನಿರಂತರ ಅಧ್ಯಯನಗಳ ಮೂಲಕ ನಿತ್ಯವೂ ವಿದ್ಯಾರ್ಥಿಯಾಗಬೇಕು. ಇದರಿಂದ ತಮ್ಮ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಜವಾಬ್ದಾರಿಯುತ ಪ್ರಜೆಯನ್ನಾಗಿಸುವ ಮಹತ್ತರ ಕಾರ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಸಂಯೋಜಕ ಪ್ರೊ.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವರು (ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯರಾದ ಡಾ.ರಾಜೇಂದ್ರ ಪ್ರಸಾದ್ ಎನ್.ಎಲ್ ವೇದಿಕೆಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್, ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಡಾ.ಶಶಿಧರ್ ಕೆಲ್ಲೂರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವಿವಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮತ್ತು ಘಟಕಗಳ ಮುಖ್ಯಸ್ಥರು, ಸಂಯೋಜಕರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
——

The post ವಿಎಸ್ ಕೆ ವಿವಿಯಲ್ಲಿ ಶಿಕ್ಷಕರ‌ ದಿನಾಚರಣೆ: ರಾಜಕೀಯ, ಧಾರ್ಮಿಕ ಹಾಗೂ ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅನನ್ಯ -ಡಾ. ಮಲ್ಲಿಕಾ ಘಂಟಿ appeared first on Karnataka Kahale.

]]>
ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ,ಬ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು -ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ https://www.karnatakakahale.com/news/20582 Thu, 04 Sep 2025 17:59:27 +0000 https://www.karnatakakahale.com/?p=20582 ಬಳ್ಳಾರಿ, ಸೆ. 4: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವುದರ ಜೊತೆಗೆ ಪರಿಸರ ಪ್ರಚಾರ ಮತ್ತು ಸಂರಕ್ಷಣೆಯ ಕಡೆಗೆ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು  ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಹೇಳಿದರು. ವಿಜಯನಗರ ಶ್ರೀ ಕೃಷ್ಣದೇವರಾಯ…

The post ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ,ಬ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು -ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ appeared first on Karnataka Kahale.

]]>

ಬಳ್ಳಾರಿ, ಸೆ. 4: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವುದರ ಜೊತೆಗೆ ಪರಿಸರ ಪ್ರಚಾರ ಮತ್ತು ಸಂರಕ್ಷಣೆಯ ಕಡೆಗೆ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು  ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಹೇಳಿದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.                                  ವಿಶ್ವವಿದ್ಯಾಲಯದ ಆವರಣವನ್ನು ಸ್ವಚ್ಛವಾಗಿಡಲು ಒಂದು ಅಥವಾ ಎರಡು ತಿಂಗಳಿಗೊಮ್ಮೆ ಸ್ವಚ್ಛತಾ ಅಭಿಯಾನ ನಡೆಸಬೇಕು ಎಂದು ತಿಳಿಸಿದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಹೇಳಿರುವಂತೆ “ರಾಷ್ಟ್ರಗಳು ಶಿಕ್ಷಣ ಸಂಸ್ಥೆಗಳಲ್ಲಿ ನಿರ್ಮಿಸಲ್ಪಟ್ಟಿವೆ” ಎಂಬ ಈ ಚಿಂತನೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ವಿಶ್ವವಿದ್ಯಾಲಯಗಳನ್ನು ಶ್ರೇಷ್ಠತೆಯ ಸಂಸ್ಥೆಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿರಬೇಕು ಎಂದರು.          ವಿಶ್ವವಿದ್ಯಾಲಯಗಳನ್ನು ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಕೇಂದ್ರವನ್ನಾಗಿ ಮಾಡುವ ಮತ್ತು ಅಂತರ-ಶಿಸ್ತಿನ ಹಾಗೂ ಅಂತರ-ವಿಶ್ವವಿದ್ಯಾಲಯ ಸಹಯೋಗವನ್ನು ಉತ್ತೇಜಿಸುವ ಕಡೆಗೆ ಕೆಲಸ ಮಾಡುವ ಅವಶ್ಯಕತೆಯಿದೆ ಎಂದರು.
21 ನೇ ಶತಮಾನದ ಅಗತ್ಯವೆಂದರೆ ಡಿಜಿಟಲ್ ಸಾಕ್ಷರತೆ, ನವೀನ ಚಿಂತನೆ, ಜಾಗತಿಕ ದೃಷ್ಟಿಕೋನ ಮತ್ತು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಜ್ಞಾನ ಬೆಳೆಸಿಕೊಳ್ಳಬೇಕು. ಇದಕ್ಕಾಗಿ, ಜೀವನಪರ್ಯಂತ ವಿದ್ಯಾರ್ಥಿಯಾಗುವ ಮೂಲಕ ಕಲಿಯುತ್ತಲೇ ಇರಬೇಕಾಗುತ್ತದೆ. ಆತ್ಮನಿರ್ಭರ ಭಾರತದ ಮೂಲಕ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವಾಗಲು ಯುವಕರು ತಮ್ಮ ಪ್ರತಿಭೆ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ನೀಡಬೇಕು. ಯುವಪೀಳಿಗೆ ಉದ್ಯೋಗಾಕಾಂಕ್ಷಿಯಾಗಿ ಬದಲಾಗಿ ಉದ್ಯೋಗ ಒದಗಿಸುವವರ ಪಾತ್ರವನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ನಮ್ಮ ದೇಶ ಸಾವಿರಾರು ವರ್ಷಗಳಿಂದ ಜ್ಞಾನದ ದೀಪವನ್ನು ಬೆಳಗಿಸುತ್ತಿದೆ, ವೇದಗಳು, ಉಪನಿಷತ್ತುಗಳು, ಆಯುರ್ವೇದ, ಯೋಗ, ವಾಸ್ತು, ತತ್ವಶಾಸ್ತ್ರ,   ನ್ಯಾಯಶಾಸ್ತ್ರ, ಇವು ನಮ್ಮ ಅಮೂಲ್ಯ ಪರಂಪರೆ. ಹೊಸ ಶಿಕ್ಷಣ ನೀತಿಯು ಶಿಕ್ಷಣ ವ್ಯವಸ್ಥೆಯಲ್ಲಿ ಅವುಗಳಿಗೆ ಮತ್ತೆ ಸ್ಥಾನ ನೀಡಿದೆ. ಯುವಕರು ಈ ಜ್ಞಾನದ ಹರಿವುಗಳನ್ನು ಆಧುನಿಕ ಸಂದರ್ಭದಲ್ಲಿ ಅರ್ಥಮಾಡಿಕೊಳ್ಳಬೇಕು, ಸಂಶೋಧನೆ ಮಾಡಬೇಕು ಮತ್ತು ಜಾಗತಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಬೇಕು ಎಂದು ರಾಜ್ಯಪಾಲರು ಕಿವಿಮಾತು ಹೇಳಿದರು.
ಭಾರತ ‘ವಿಶ್ವ ಗುರು’ ಆಗುವತ್ತ ಪಯಣದಲ್ಲಿದೆ. ಇಂದು, ದೇಶವು 100 ಕ್ಕೂ ಹೆಚ್ಚು ಯುನಿಕಾರ್ನ್ ಸ್ಟಾರ್ಟ್ಅಪ್ ಗಳನ್ನು ಹೊಂದಿದೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯು ವಿಶ್ವದ ಅತ್ಯಂತ ಶಕ್ತಿಶಾಲಿ ವ್ಯವಸ್ಥೆಯಾಗಿದೆ ಮತ್ತು ಚಂದ್ರಯಾನದಿAದ ಎಐ ವರೆಗಿನ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಪ್ರಮುಖ ಪಾತ್ರ ವಹಿಸುತ್ತಿದ್ದೇವೆ. ಈ ಪ್ರಯಾಣದಲ್ಲಿ ಪ್ರಮುಖ ಶಕ್ತಿ ನಿಮ್ಮಂತಹ ಯುವಕರು ಎಂದು ಹೇಳಿದರು.
“ಎದ್ದೇಳಿ, ಎಚ್ಚರಗೊಳ್ಳಿ ಮತ್ತು ಗುರಿ ಸಾಧಿಸುವವರೆಗೆ ನಿಲ್ಲಬೇಡಿ” ಸ್ವಾಮಿ ವಿವೇಕಾನಂದರ ಈ ವಾಕ್ಯದಿಂದ ಸ್ಫೂರ್ತಿ ಪಡೆದು, ನಮ್ಮ ಜ್ಞಾನವನ್ನು ಕಾರ್ಯರೂಪಕ್ಕೆ ತರಬೇಕು ಮತ್ತು ರಾಷ್ಟçವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ವನ್ನಾಗಿ ಮಾಡಲು ನಮ್ಮ ಕೌಶಲ್ಯಗಳನ್ನು ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬಳ್ಳಾರಿಯು ಪ್ರಾಚೀನ ಕಾಲದಿಂದಲೂ ಬಹಳ ಭವ್ಯವಾದ ಇತಿಹಾಸವನ್ನು ಹೊಂದಿದೆ. ಈ ವಿಶ್ವವಿದ್ಯಾಲಯವು ಕಲೆ, ಸಾಹಿತ್ಯ ಮತ್ತು ಶಿಕ್ಷಣದ ಭೂಮಿಯಾಗಿದೆ. ರಾಜ ಶ್ರೀ ಕೃಷ್ಣದೇವರಾಯನು ತನ್ನ ಪ್ರಜೆಗಳ ಕಡೆಗೆ ತೋರಿಸಿದ ಔದಾರ್ಯ ಮತ್ತು ದಯೆಗಾಗಿ ಪ್ರಸಿದ್ಧವಾಗಿದ್ದ ಐತಿಹಾಸಿಕ ಭೂಮಿಯಲ್ಲಿ ನೆಲೆಗೊಂಡಿದೆ. ಈ ಘಟಿಕೋತ್ಸವದಲ್ಲಿ ಡಾ.ವಸುಂಧರಾ ಭೂಪತಿ, ಬಿ.ನಾಗನಗೌಡ ಮತ್ತು ಇರ್ಫಾನ್ ರಜಾಕ್ ಅವರಿಗೆ ಶಿಕ್ಷಣ, ಸಾಹಿತ್ಯ, ಆರೋಗ್ಯ ಮತ್ತು ಸಾಮಾಜಿಕ ಕಾರ್ಯ ಕ್ಷೇತ್ರದಲ್ಲಿ ತಮ್ಮ ಅತ್ಯುತ್ತಮ ಕೆಲಸಕ್ಕಾಗಿ ಗೌರವ ಪದವಿಗಳನ್ನು ನೀಡಿ ಗೌರವಿಸಲಾಗಿದೆ. ಅವರು ಸಮಾಜ, ಜನರು ಮತ್ತು ರಾಷ್ಟ್ರದ ಹಿತದೃಷ್ಟಿಯಿಂದ ಕೆಲಸ ಮಾಡುವುದನ್ನು ಮುಂದವರಿಸಲಿ ಎಂದು ಆಶಿಸಿದರು.


ನವದೆಹಲಿಯ ಇಂಟರ್ ಯುನಿವರ್ಸಿಟಿ ಎಕ್ಸಲರೇಟರ್ ನ ನಿರ್ದೇಶಕರಾದ ಪ್ರೊ.ಅವಿನಾಶ್ ಚಂದ್ರ ಪಾಂಡೆ ಅವರು ಘಟಿಕೋತ್ಸವ ಭಾಷಣದಲ್ಲಿ ಮಾತನಾಡಿ, ಘಟಿಕೋತ್ಸವವು ಕೇವಲ ಒಂದು ಸಮಾರಂಭವಲ್ಲ;ಇದು ಪ್ರತಿ ವಿದ್ಯಾರ್ಥಿಯ ಪರಿಶ್ರಮ, ಶಿಸ್ತಿನ ಜೀವನ ಮತ್ತು ನಿಶ್ಚಯ ಹಾದಿಯ ಫಲಶ್ರುತಿಯಾಗಿದೆ. ವಿದ್ಯಾರ್ಥಿಗಳ ಸಾಧನೆಗಳು ಭವಿಷ್ಯದ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಆಶಿಸಿದರು.
ಪೋಷಕರ ತ್ಯಾಗ ಮತ್ತು ಅಚಲ ಬೆಂಬಲವು ಮಕ್ಕಳ ಯಶಸ್ಸಿನ ಆಧಾರವಾಗಿದೆ. ಶಿಕ್ಷಕರ ಬೋಧನೆ, ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಇಂದಿನ ಯುವಕರು ತಮ್ಮ ಕನಸುಗಳನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಅಭಿಮತ ವ್ಯಕ್ತಪಡಿಸಿದರು.
ಪದವಿಯೊಂದೇ ಅಂತಿಮ ಗುರಿಯಲ್ಲ, ಅದು ಜೀವನಪರ್ಯಂತ ಕಲಿಕೆಯ ಪಯಣದ ಹಂತ ಮಾತ್ರ. ವಿನಯವಂತಿಕೆ, ಹೊಂದಿಕೊಳ್ಳುವಿಕೆ ಮತ್ತು ನಿರಂತರ ಜ್ಞಾನಾರ್ಜನೆಯು ಸಮಾಜದಲ್ಲಿ ವಿಶಿಷ್ಟರನ್ನಾಗಿ ಮಾಡುತ್ತದೆ. ನಿಜವಾದ ಯಶಸ್ಸು ಸಂಪತ್ತಿನಲ್ಲಿಯಾಗಲಿ ಅಥವಾ ಹುದ್ದೆಗಳಲ್ಲಿ ಆಗಲಿ ಅಳೆಯಲು ಬರುವುದಿಲ್ಲ. ಅದು ನೀವು ನೀಡುವ ಕೊಡುಗೆಯ ಸಮಾಜದ ಮೇಲೆ ಬೀರಿದ ಸಕಾರಾತ್ಮಕ ಪ್ರಭಾವದಲ್ಲಿ ಅಳೆಯಲ್ಪಡುತ್ತದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜ.ಸಿ., ಕುಲಸಚಿವ (ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು, ಮುಖ್ಯಸ್ಥರುಗಳು, ಸಂಯೋಜಕರುಗಳು, ವಿವಿಧ ಮಹಾವಿದ್ಯಾಲಯಗಳ ಪಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮುಂತಾದ ಗಣ್ಯರು ಹಾಜರಿದ್ದರು.
3 ಜನರಿಗೆ ಗೌರವ ಡಾಕ್ಟರೇಟ್ ಪ್ರದಾನ:
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಇರ್ಫಾನ್ ರಜಾಕ್, ಡಾ.ವಸುಂಧರಾ ಭೂಪತಿ, ಬಾವಿಹಳ್ಳಿ ನಾಗನಗೌಡ ಅವರಿಗೆ  ಗೌರವ ಡಾಕ್ಟರೇಟ್ ನೀಡಿ ರಾಜ್ಯಪಾಲರು ಗೌರವಿಸಿದರು.
ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 51 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ವಿವಿಧ ವಿಭಾಗಗಳ ಒಟ್ಟು 59 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆದುಕೊಂಡರು.
ಎಲ್ಲ ವಿಭಾಗಗಳ ಸ್ನಾತಕ ಪದವಿಯ 80 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 75 ವಿದ್ಯಾರ್ಥಿಗಳು ಸೇರಿ ಒಟ್ಟು 155 ವಿದ್ಯಾರ್ಥಿಗಳು ರ‍್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆದುಕೊಂಡರು.
4 ಚಿನ್ನದ ಪದಕ ಪಡೆದ ವಿದ್ಯಾರ್ಥಿ:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಹಂಸ.ಎನ್ ಅವರು 4 ಚಿನ್ನದ ಪದಕಗಳನ್ನು ಪಡೆದುಕೊಂಡರು.
3 ಚಿನ್ನದ ಪದಕ ಪಡೆದ ವಿದ್ಯಾರ್ಥಿ:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿ ರಾಜೇಶ್ವರಿ ಅವರು 3 ಚಿನ್ನದ ಪದಕಗಳನ್ನು ಪಡೆದುಕೊಂಡರು.
2 ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮನೋಜ್, ರಸಾಯನಶಾಸ್ತ್ರ ವಿಭಾಗದ ಸುಹಾನ ತಸ್ಲೀಮ್, ನಂದಿಹಳ್ಳಿಯ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಶಿಲ್ಪ, ಬಿಬಿಸಿ ಕಾಲೇಜ್ ನ ಬಿಕಾಂ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಮತ್ತು ವೀರಶೈವ ಮಹಾವಿದ್ಯಾಲಯದ ಬಿಎಸ್ಸಿ ವಿದ್ಯಾರ್ಥಿ ಮಹಮ್ಮದ್ ನಕೀಬಲಿ ಇವರುಗಳು ಪಡೆದುಕೊಂಡರು.
—–

The post ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ,ಬ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು -ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ appeared first on Karnataka Kahale.

]]>
ನಾಳೆ(ಸೆ.4) ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ಸಾಹಿತಿ ಡಾ.‌ವಸುಂಧರ‌ ಭೂಪತಿ, ಗಣಿ ಉದ್ಯಮಿ ಬಾವಿಹಳ್ಳಿ ನಾಗನಗೌಡ, ಉದ್ಯಮಿ ಇರ್ಫಾನ್ ರಜಾಕ್ ರಿಗೆ ಗೌರವ ಡಾಕ್ಟರೇಟ್ -ಕುಲಪತಿ ಪ್ರೊ.ಎಂ.ಮುನಿರಾಜು  https://www.karnatakakahale.com/news/20552 Wed, 03 Sep 2025 09:14:22 +0000 https://www.karnatakakahale.com/?p=20552 ಬಳ್ಳಾರಿ,ಸೆ.3:ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2023-24 ನೇ ಸಾಲಿನ 13 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಸೆ.4 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್…

The post ನಾಳೆ(ಸೆ.4) ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ಸಾಹಿತಿ ಡಾ.‌ವಸುಂಧರ‌ ಭೂಪತಿ, ಗಣಿ ಉದ್ಯಮಿ ಬಾವಿಹಳ್ಳಿ ನಾಗನಗೌಡ, ಉದ್ಯಮಿ ಇರ್ಫಾನ್ ರಜಾಕ್ ರಿಗೆ ಗೌರವ ಡಾಕ್ಟರೇಟ್ -ಕುಲಪತಿ ಪ್ರೊ.ಎಂ.ಮುನಿರಾಜು  appeared first on Karnataka Kahale.

]]>

ಬಳ್ಳಾರಿ,ಸೆ.3:ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2023-24 ನೇ ಸಾಲಿನ 13 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಸೆ.4 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎಂ.ಮುನಿರಾಜು ಅವರು ಹೇಳಿದರು.
ನಗರದ ಹೊರವಲಯದ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಪರೀಕ್ಷಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.                                                      ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಇರ್ಫಾನ್ ರಜಾಕ್, ಡಾ.ವಸುಂಧರಾ ಭೂಪತಿ, ಬಾವಿಹಳ್ಳಿ ನಾಗನಗೌಡ ಅವರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು  ತಿಳಿಸಿದರು.


ಘಟಿಕೋತ್ಸವದಲ್ಲಿ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ನವದೆಹಲಿಯ ಇಂಟರ್ ಯುನಿವರ್ಸಿಟಿ ಎಕ್ಸಲರೇಟರ್ ನ ನಿರ್ದೇಶಕರಾದ ಪ್ರೊ.ಅವಿನಾಶ್ ಚಂದ್ರ ಪಾಂಡೆ ಅವರು ಮಾಡಲಿದ್ದಾರೆ ಎಂದು ಎಂದು ಹೇಳಿದರು.
ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ-ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ವಾರ್ಷಿಕ ಘಟಿಕೋತ್ಸವದ ನೇತೃತ್ವವನ್ನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರುಗಳು, ಕುಲಸಚಿವ ನಾಗರಾಜು.ಸಿ ಹಾಗೂ ಕುಲಸಚಿವ (ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ ಅವರುಗಳು ಕುಲಪತಿಗಳಿಗೆ ಸಾಥ್ ನೀಡಲಿದ್ದಾರೆ ಎಂದರು.

ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 51 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 59 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 80 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 75 ವಿದ್ಯಾರ್ಥಿಗಳು ಸೇರಿ ಒಟ್ಟು 155 ವಿದ್ಯಾರ್ಥಿಗಳು ರ‍್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
4 ಚಿನ್ನದ ಪದಕ ಪಡೆದ ವಿದ್ಯಾರ್ಥಿ: ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಹಂಸ.ಎನ್ ಅವರು 4 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.
3 ಚಿನ್ನದ ಪದಕ ಪಡೆದ ವಿದ್ಯಾರ್ಥಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ರಾಜೇಶ್ವರಿ ಅವರು 3 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.
2 ಚಿನ್ನದ ಪದಕಗಳನ್ನು ಪಡೆದ ವಿದ್ಯಾರ್ಥಿಗಳ ಪಟ್ಟಿ:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮನೋಜ್, ರಸಾಯನಶಾಸ್ತ್ರ ವಿಭಾಗದ ಸುಹಾನ ತಸ್ಲೀಮ್, ನಂದಿಹಳ್ಳಿಯ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಶಿಲ್ಪ, ಬಿಬಿಸಿ ಕಾಲೇಜ್ ನ ಬಿಕಾಂ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಮತ್ತು ವೀರಶೈವ ಮಹಾವಿದ್ಯಾಲಯದ ಬಿಎಸ್ಸಿ ವಿದ್ಯಾರ್ಥಿ ಮಹಮ್ಮದ್ ನಕೀಬಲಿ ಅವರು ಪಡೆದುಕೊಂಡಿದ್ದಾರೆ.
ಪರೀಕ್ಷಾ ಫಲಿತಾಂಶ: ವಿಶ್ವವಿದ್ಯಾಲಯದ ಸ್ನಾತಕ ಪದವಿಯಲ್ಲಿ ಒಟ್ಟು 19,179 ಸ್ನಾತಕ ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು ತಮ್ಮ ಪದವಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 1,845 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ.
ಗೌರವ ಡಾಕ್ಟರೆಟ್ ಪಡೆದ ಸಾಧಕರ ಪರಿಚಯ:

ಇರ್ಫಾನ್ ರಜಾಕ್

ಇರ್ಫಾನ್ ರಜಾಕ್ ಅವರು ಮೂಲತಃ ಬೆಂಗಳೂರಿನವರು. ಪ್ರತಿಷ್ಠಿತ ಪ್ರೆಸ್ಟೀಜ್ ಗ್ರೂಪ್‌ನ ಗೌರವಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ತಮ್ಮ ಉದ್ಯಮಶೀಲತೆ ಹಾಗೂ ಸಮಾಜಮುಖಿ ಸೇವೆಗಾಗಿ ಖ್ಯಾತಿ ಪಡೆದಿದ್ದಾರೆ. ನಾಲ್ಕು ದಶಕಗಳ ವಾಣಿಜ್ಯ, ವ್ಯಾಪಾರ ಹಾಗೂ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಹೂಡಿಕೆ ನಡೆಸಿ ನಾಡಿನ ಖ್ಯಾತ ಉದ್ಯಮಿಗಳಾಗಿ ಮುನ್ನಡೆದಿದ್ದಾರೆ.
ಸತತವಾದ ಅಭಿವೃದ್ಧಿ, ಸಾಮಾಜಿಕ ಹೊಣೆಗಾರಿಕೆ, ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ಅನೇಕ ಜನೋಪಕಾರಿ ಕಾರ್ಯಕ್ರಮಗಳನ್ನು ತಮ್ಮ ಸಂಸ್ಥೆಯ ಮೂಲಕ ಕೈಗೊಂಡಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎನ್‌ಡಿಟಿವಿ ಹಾಲ್ ಆಫ್ ಫೇಮ್, ಸಿಆರ್‌ಇಡಿಎಐ ಗೌರವ ಪ್ರಶಸ್ತಿ ಹಾಗೂ ಎಂಟ್ರಪ್ರುನರ್ ಆಫ್ ದಿ ಇಯರ್ ಸೇರಿದಂತೆ ಅನೇಕ ರಾಷ್ಟ್ರೀಯ ಹಾಗೂಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ರಾಯಲ್ ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟAಟ್ ಸರ್ವೇಯರ್ (ಎಫ್‌ಆರ್‌ಐಸಿಎಸ್) ನ ಫೆಲೊ ಆಗಿ 2013ರಿಂದ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿದ್ದಾರೆ.

ಡಾ.ವಸಂಧರಾ ಭೂಪತಿ

ಸಾಹಿತಿ ಡಾ.ವಸಂಧರಾ ಭೂಪತಿ ಅವರು ರಾಯಚೂರಿನಲ್ಲಿ ಜನಿಸಿದ್ದಾರೆ. ತಮ್ಮ ವಿಶಿಷ್ಟ ವೈದ್ಯಕೀಯ ಸೇವೆ, ಸಾಹಿತ್ಯ, ಸಮಾಜಸೇವೆ ಮತ್ತು ಪತ್ರಿಕಾ ಅಂಕಣಕಾರರಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರ, ವೈದ್ಯಕೀಯ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಪಾರ ಸಾಧನೆಗೈದಿದ್ದಾರೆ. ಆರೋಗ್ಯ ಸಂಗತಿ, ಮನೆಯಂಗಳದಲ್ಲಿ ಔಷಧಿವನ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. 65ಕ್ಕೂ ಹೆಚ್ಚು ಆರೋಗ್ಯ ಕೃತಿಗಳು ಇಂಗ್ಲೀಷ್ ಮತ್ತು ಹಿಂದಿ ಭಾಷೆಗೆ ಅನುವಾದಗೊಂಡಿವೆ. ಸಾರ್ವಜನಿಕ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸುವ ಮೂಲಕ  ಅಂತರಾಷ್ಟ್ರೀಯ ಮಟ್ಟದಲ್ಲಿ ನಾಡಿನ ಹೆಸರನ್ನು ಪಸರಿಸಿದ್ದಾರೆ. ಇವರ ಸೇವೆಗೆ ಅನೇಕ ರಾಷ್ಟೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅವರ ಮುಡಿಗೇರಿವೆ. ವೈದ್ಯಕೀಯ, ಸಾಹಿತ್ಯ, ಮಹಿಳಾ ಸಬಲೀಕರಣ, ಮತ್ತು ಸಾಮಾಜಿಕ ಸೇವೆಗಳಿಗೆ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ.

ಬಾವಿಹಳ್ಳಿ ನಾಗನಗೌಡ

ಗಣಿನಾಡಿನ ಪ್ರಸಿದ್ದ ಉದ್ಯಮಿಯಾಗಿರುವ ಇವರು, ಬಿಕೆಜಿ ಫೌಂಡೇಶನ್ ಮೂಲಕ ಶಿಕ್ಷಣ ಅಭಿವೃದ್ಧಿ, ಸಾಮಾಜಿಕ ಸೇವೆ ಮತ್ತು ಸಾಹಿತ್ಯ-ಸಾಂಸ್ಕೃತಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರಗಳ ಮೂಲಕ ಕ್ಷಯರೋಗಿಗಳ ಚಿಕಿತ್ಸೆಗೆ ಶ್ರಮಿಸಿದ್ದಾರೆ. ಸಮಾಜಮುಖಿ ಕೆಲಸಗಳ ಮೂಲಕ ಸಮುದಾಯಕ್ಕೆ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ, ಮೂಲಭೂತ ಸೌಕರ್ಯಗಳ ಕಲ್ಪಿಸಲು ಕೊಡುಗೆ ನೀಡಿದ್ದಾರೆ. ಇವರ ಕಾರ್ಯಗಳಿಗೆ ಕನ್ನಡ ಶ್ರೀ ಮತ್ತು ಸೇವಾರತ್ನ ಪ್ರಶಸ್ತಿಗಳು ಒಲಿದು ಬಂದಿವೆ. ತಾಲ್ಲೂಕು ಕನ್ನಡ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಘಟಿಕೋತ್ಸವದಲ್ಲಿ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು, ಮುಖ್ಯಸ್ಥರುಗಳು, ಸಂಯೋಜಕರುಗಳು, ವಿವಿಧ ಮಹಾವಿದ್ಯಾಲಯಗಳ ಪಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವಿ ಕುಲಸಚಿವ ನಾಗರಾಜು.ಸಿ ಹಾಗೂ ಕುಲಸಚಿವ (ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ ಉಪಸ್ಥಿತರಿದ್ದರು.
———-

The post ನಾಳೆ(ಸೆ.4) ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ಸಾಹಿತಿ ಡಾ.‌ವಸುಂಧರ‌ ಭೂಪತಿ, ಗಣಿ ಉದ್ಯಮಿ ಬಾವಿಹಳ್ಳಿ ನಾಗನಗೌಡ, ಉದ್ಯಮಿ ಇರ್ಫಾನ್ ರಜಾಕ್ ರಿಗೆ ಗೌರವ ಡಾಕ್ಟರೇಟ್ -ಕುಲಪತಿ ಪ್ರೊ.ಎಂ.ಮುನಿರಾಜು  appeared first on Karnataka Kahale.

]]>
ಬಳ್ಳಾರಿ: ವಿ ಎಸ್ ಕೆ ವಿವಿ ಆಡಳಿತ ಕುಲಸಚಿವರಾಗಿ ನಾಗರಾಜು ಸಿ ಅಧಿಕಾರ‌ ಸ್ವೀಕಾರ https://www.karnatakakahale.com/news/20153 Mon, 14 Jul 2025 14:34:44 +0000 https://www.karnatakakahale.com/?p=20153 ಬಳ್ಳಾರಿ, ಜು.14: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ನಾಗರಾಜು ಸಿ ಅವರು ಅಧಿಕಾರ ಸ್ವೀಕರಿಸಿದರು.      ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಜಿ. ಪಿ. ದಿನೇಶ್ ಅವರು ಅಧಿಕಾರ…

The post ಬಳ್ಳಾರಿ: ವಿ ಎಸ್ ಕೆ ವಿವಿ ಆಡಳಿತ ಕುಲಸಚಿವರಾಗಿ ನಾಗರಾಜು ಸಿ ಅಧಿಕಾರ‌ ಸ್ವೀಕಾರ appeared first on Karnataka Kahale.

]]>
ಬಳ್ಳಾರಿ ವಿಎಸ್ ಕೆ  ವಿವಿ ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ) ರಾಗಿ  ನಾಗರಾಜು ಸಿ ಅವರು  ಪ್ರಭಾರ ಕುಲ ಸಚಿವರಾಗಿದ್ದ ಪ್ರೊ. ಜಿ. ಪಿ. ದಿನೇಶ್ ಅವರಿಂದ ಅಧಿಕಾರ ಹಸ್ತಾಂತರಿಸಿದರು.

ಬಳ್ಳಾರಿ, ಜು.14: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ನಾಗರಾಜು ಸಿ ಅವರು ಅಧಿಕಾರ ಸ್ವೀಕರಿಸಿದರು.      ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಜಿ. ಪಿ. ದಿನೇಶ್ ಅವರು ಅಧಿಕಾರ ಹಸ್ತಾಂತರಿಸಿದರು.           ಈ ಸಂದರ್ಭದಲ್ಲಿ  ವಿವಿ‌ ಕುಲಪತಿ ಪ್ರೊ. ಮುನಿರಾಜು ಉಪಸ್ಥಿತರಿದ್ದರು.

*****

The post ಬಳ್ಳಾರಿ: ವಿ ಎಸ್ ಕೆ ವಿವಿ ಆಡಳಿತ ಕುಲಸಚಿವರಾಗಿ ನಾಗರಾಜು ಸಿ ಅಧಿಕಾರ‌ ಸ್ವೀಕಾರ appeared first on Karnataka Kahale.

]]>
ವಿಎಸ್ ಕೆ ವಿವಿಯ ‘ಪತ್ರಿಕೋದ್ಯಮ’ ವಿಭಾಗದಲ್ಲಿ ವಿಶೇಷ ಉಪನ್ಯಾಸ: ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು -ಪ್ರೊ.ಎಂ.ಮುನಿರಾಜು https://www.karnatakakahale.com/news/18919 Fri, 21 Mar 2025 14:11:21 +0000 https://www.karnatakakahale.com/?p=18919 ಶುಕ್ರವಾರ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು ಎಂದರು.…

The post ವಿಎಸ್ ಕೆ ವಿವಿಯ ‘ಪತ್ರಿಕೋದ್ಯಮ’ ವಿಭಾಗದಲ್ಲಿ ವಿಶೇಷ ಉಪನ್ಯಾಸ: ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು -ಪ್ರೊ.ಎಂ.ಮುನಿರಾಜು appeared first on Karnataka Kahale.

]]>
ಬಳ್ಳಾರಿ,ಮಾ.21: ಪತ್ರಿಕೋದ್ಯಮ ಪ್ರಸ್ತುತ ಜನರ ಜೀವನಾಡಿಯಂತಿದ್ದು, ಬದಲಾಗುತ್ತಿರುವ ಶಿಕ್ಷಣ ಕ್ರಮದಲ್ಲಿ ಕೌಶಲ್ಯ ಆಧಾರಿತ ತಾಂತ್ರಿಕ ಕಲಿಕೆಗೆ ಒತ್ತು ನೀಡಬೇಕು. ದಿನವೂ ಪತ್ರಿಕೆಗಳನ್ನು ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಹೇಳಿದರು.

ಶುಕ್ರವಾರ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು ಎಂದರು.
ಪತ್ರಿಕೋದ್ಯಮ ಶಿಕ್ಷಣ ಗಟ್ಟಿಗೊಳಿಸಲು ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಸುಸಜ್ಜಿತ ಸ್ಟುಡಿಯೋ ಹಾಗೂ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಮುಖ್ಯ ಅತಿಥಿ ವಿವಿ ಕುಲಸಚಿವ ರುದ್ರೇಶ್ ಎಸ್.ಎನ್ ಅವರು ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಬರೆಯಬೇಕು. ಬರೆಯುವುದರಿಂದ ಬರವಣಿಗೆಯಲ್ಲಿನ ಲೋಪದೋಷಗಳು ಮನವರಿಕೆಯಾಗುತ್ತವೆ. ಇದರಿಂದ ಬರವಣಿಗೆಯ ಕೌಶಲ್ಯ ವೃದ್ಧಿಸುತ್ತದೆ. ಇದರ ಜೊತೆಗೆ ಮಾತನಾಡುವ ಕೌಶಲ್ಯವನ್ನು ಸಹ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಜಾವಾಣಿ ಜಿಲ್ಲಾ ವರದಿಗಾರ ಹರಿಶಂಕರ್ ಜಿ.ಪಾಳ್ಯ ಅವರು ಮಾತನಾಡಿ, ತನಿಖಾ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಳ್ಳುವವರು ನಿರ್ಭೀತಿ ಮತ್ತು ಆಮೀಷಕ್ಕೆ ತುತ್ತಾಗದಂತೆ ಕೆಲಸ ಮಾಡುವುದು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಪತ್ರಿಕೋದ್ಯಮ ಎಂಬುದು ಹುಲಿಯ ಮೇಲಿನ ಸವಾರಿ ಇದ್ದಂತೆ. ಅಡ್ಡದಾರಿ ಹಿಡಿಯದೆ ನೈತಿಕ ಪತ್ರಿಕೋದ್ಯಮವನ್ನು ಅಂತರಾಳ ಮಾಡಿಕೊಂಡು ಕೆಲಸ ನಿರ್ವಹಿಸಿದಲ್ಲಿ ಯಾರ ಹಂಗಿಲ್ಲದೆ ಈ ಕ್ಷೇತ್ರದಲ್ಲಿ ಮುಂದುವರೆಯಬಹುದು ಎಂದು ತಿಳಿಸಿದರು.
ಬಳಿಕ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ರಾಕೇಶ್ ವಿ.ತಾಳಿಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬ್ಬಂದಿ ಧನುಂಜಯ ಭಟ್ ಸ್ವಾಗತಿಸಿದರು. ಡಾ.ಜಯರಾಜ.ಹೆಚ್ ನಿರೂಪಿಸಿ ವಂದಿಸಿದರು. ಪತ್ರಿಕೋದ್ಯಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
—-

The post ವಿಎಸ್ ಕೆ ವಿವಿಯ ‘ಪತ್ರಿಕೋದ್ಯಮ’ ವಿಭಾಗದಲ್ಲಿ ವಿಶೇಷ ಉಪನ್ಯಾಸ: ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು -ಪ್ರೊ.ಎಂ.ಮುನಿರಾಜು appeared first on Karnataka Kahale.

]]>
ವಿಎಸ್ ಕೆಯು: ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಡಾ. ಎನ್. ಎಂ. ಸಾಲಿ ಅಧಿಕಾರ ಸ್ವೀಕಾರ https://www.karnatakakahale.com/news/18804 Fri, 28 Feb 2025 08:05:06 +0000 https://www.karnatakakahale.com/?p=18804 ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವ(ಮೌಲ್ಯಮಾಪನ) ರಾಗಿ ಡಾ. ಎನ್. ಎಂ. ಸಾಲಿ ಅವರು ಶುಕ್ರವಾರ ಅಧಿಕಾರವನ್ನು ವಹಿಸಿಕೊಂಡರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ. ಎನ್. ಎಂ. ಸಾಲಿ ಅವರನ್ನು ಸರ್ಕಾರ…

The post ವಿಎಸ್ ಕೆಯು: ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಡಾ. ಎನ್. ಎಂ. ಸಾಲಿ ಅಧಿಕಾರ ಸ್ವೀಕಾರ appeared first on Karnataka Kahale.

]]>
ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವ(ಮೌಲ್ಯಮಾಪನ) ರಾಗಿ ಡಾ. ಎನ್. ಎಂ. ಸಾಲಿ ಅವರು ಶುಕ್ರವಾರ ಅಧಿಕಾರವನ್ನು ವಹಿಸಿಕೊಂಡರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ. ಎನ್. ಎಂ. ಸಾಲಿ ಅವರನ್ನು ಸರ್ಕಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಕುಲಸಚಿವ (ಮೌಲ್ಯಮಾಪನ)ರನ್ನಾಗಿ ನೇಮಿಸಿದೆ. ಈ ಹಿಂದೆ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ರಮೇಶ್ ಓ ಓಲೇಕಾರ ಅವರಿಂದ ಅಧಿಕಾರ ವಹಿಸಿಕೊಂಡಿದ್ದಾರೆ.                                     ಈ ಸಂದರ್ಭದಲ್ಲಿ ವಿವಿ ಕುಲಪತಿ ಪ್ರೊ. ಮುನಿರಾಜು, ಕುಲಸಚಿವ ರುದ್ರೇಶ ಎಸ್. ಎನ್ ಉಪಸ್ಥಿತರಿದ್ದರು.

The post ವಿಎಸ್ ಕೆಯು: ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಡಾ. ಎನ್. ಎಂ. ಸಾಲಿ ಅಧಿಕಾರ ಸ್ವೀಕಾರ appeared first on Karnataka Kahale.

]]>
ವಿ ಎಸ್ ಕೆ ಯು:ವಿನಾಯಕಗೆ ಪಿಎಚ್‌ಡಿ ಪದವಿ https://www.karnatakakahale.com/news/18750 Mon, 24 Feb 2025 08:35:49 +0000 https://www.karnatakakahale.com/?p=18750 ಬಳ್ಳಾರಿ,ಫೆ.24: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ವಿನಾಯಕ.ಎ ಅವರಿಗೆ ಸಮಾಜ ಕಾರ್ಯದಲ್ಲಿ ಪಿಎಚ್‌ಡಿ ಪದವಿ ಪ್ರಕಟಿಸಿದೆ. ವಿನಾಯಕ.ಎ ಅವರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅನಾಲಿಸಿಸ್ ಆಫ್ ಕಮ್ಯೂನಿಟಿ…

The post ವಿ ಎಸ್ ಕೆ ಯು:ವಿನಾಯಕಗೆ ಪಿಎಚ್‌ಡಿ ಪದವಿ appeared first on Karnataka Kahale.

]]>

ಬಳ್ಳಾರಿ,ಫೆ.24: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ವಿನಾಯಕ.ಎ ಅವರಿಗೆ ಸಮಾಜ ಕಾರ್ಯದಲ್ಲಿ ಪಿಎಚ್‌ಡಿ ಪದವಿ ಪ್ರಕಟಿಸಿದೆ.
ವಿನಾಯಕ.ಎ ಅವರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅನಾಲಿಸಿಸ್ ಆಫ್ ಕಮ್ಯೂನಿಟಿ ಆರ್ಗನೈಸೇಷನ್ ಪ್ರಾಕ್ಟೀಸ್ ಇನ್ ಕರ್ನಾಟಕ: ಎ ಸೋಷಿಯಲ್ ವರ್ಕ್ ಪರ್ಸ್ಪೆಕ್ಟೀವ್ಸ್’ ಎಂಬ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
———-

The post ವಿ ಎಸ್ ಕೆ ಯು:ವಿನಾಯಕಗೆ ಪಿಎಚ್‌ಡಿ ಪದವಿ appeared first on Karnataka Kahale.

]]>